Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 9:12 - ಪರಿಶುದ್ದ ಬೈಬಲ್‌

12 ಸೊಲೊಮೋನನು ಬಿಟ್ಟುಕೊಟ್ಟ ಪಟ್ಟಣಗಳನ್ನು ನೋಡುವುದಕ್ಕಾಗಿ ಹೀರಾಮನು ತೂರಿನಿಂದ ಬಂದನು. ಹೀರಾಮನು ಆ ಪಟ್ಟಣಗಳನ್ನು ನೋಡಿದಾಗ ಅವನಿಗೆ ತೃಪ್ತಿಯಾಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಹೀರಾಮನು ತೂರಿನಿಂದ ಬಂದು ಆ ಪಟ್ಟಣಗಳನ್ನು ನೋಡಲು ಅವು ಅವನಿಗೆ ಮೆಚ್ಚಿಗೆಯಾಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಹೀರಾಮನು ಟೈರಿನಿಂದ ಬಂದು ಆ ಪಟ್ಟಣಗಳನ್ನು ನೋಡಿದನು. ಅವು ಅವನ ಮನಸ್ಸಿಗೆ ಹಿಡಿಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಹೀರಾಮನು ತೂರಿನಿಂದ ಬಂದು ಆ ಪಟ್ಟಣಗಳನ್ನು ನೋಡಲು ಅವು ಅವನ ಮನಸ್ಸಿಗೆ ಬರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಆಗ ಹೀರಾಮನು ಟೈರಿನಿಂದ ಸೊಲೊಮೋನನು ತನಗೆ ಕೊಟ್ಟ ಪಟ್ಟಣಗಳನ್ನು ನೋಡಲು ಬಂದನು. ಆದರೆ ಅವು ಅವನಿಗೆ ಮೆಚ್ಚಿಕೆಯಾಗಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 9:12
4 ತಿಳಿವುಗಳ ಹೋಲಿಕೆ  

ಅವನ ತಂದೆತಾಯಿಗಳು, “ಇಸ್ರೇಲರಲ್ಲಿಯೇ ಒಬ್ಬ ಸ್ತ್ರೀ ಇದ್ದಾಳೆ. ನೀನು ಅವಳನ್ನು ಮದುವೆಯಾಗು. ನೀನು ಫಿಲಿಷ್ಟಯರ ಹೆಣ್ಣನ್ನು ಮದುವೆಯಾಗುವುದೇಕೆ? ಅವರು ಸುನ್ನತಿಯನ್ನು ಮಾಡಿಸಿಕೊಂಡವರಲ್ಲ” ಎಂದರು. ಆದರೆ ಸಂಸೋನನು, “ನನಗೆ ಆಕೆಯೊಡನೇ ಮದುವೆಮಾಡಿಸಿ. ನಾನು ಆಕೆಯನ್ನೇ ಮೆಚ್ಚಿಕೊಂಡಿದ್ದೇನೆ” ಎಂದನು.


ಆಗ ಬಿಳಾಮನು ಯೆಹೋವನ ದೂತನಿಗೆ, “ನಾನು ಪಾಪ ಮಾಡಿದ್ದೇನೆ. ನೀನು ದಾರಿಯಲ್ಲಿ ನಿಂತುಕೊಂಡಿರುವುದು ನನಗೆ ಗೊತ್ತಾಗಲಿಲ್ಲ. ನನ್ನ ಪ್ರಯಾಣವು ನಿನಗೆ ಮೆಚ್ಚಿಕೆಯಾಗಿಲ್ಲದಿದ್ದರೆ, ನಾನು ಮನೆಗೆ ಹಿಂತಿರುಗುವೆನು” ಎಂದು ಹೇಳಿದನು.


ರಾಜನಾದ ಸೊಲೊಮೋನನು ಇಪ್ಪತ್ತು ವರ್ಷಗಳ ತರುವಾಯ ಗಲಿಲಾಯದ ಇಪ್ಪತ್ತು ಪಟ್ಟಣಗಳನ್ನು ತೂರಿನ ರಾಜನಾದ ಹೀರಾಮನಿಗೆ ಬಿಟ್ಟುಕೊಟ್ಟನು. ಆಲಯವನ್ನು ಮತ್ತು ಅರಮನೆಯನ್ನು ನಿರ್ಮಿಸಲು ಹೀರಾಮನು ಸಹಾಯ ಮಾಡಿದ್ದರಿಂದ ಸೊಲೊಮೋನನು ಹೀರಾಮನಿಗೆ ಈ ಪಟ್ಟಣಗಳನ್ನು ಕೊಟ್ಟನು. ಸೊಲೊಮೋನನು ಅಪೇಕ್ಷಿಸಿದ ದೇವದಾರು ಮರಗಳನ್ನು, ತುರಾಯಿ ಮರಗಳನ್ನು ಮತ್ತು ಬಂಗಾರವನ್ನು ಹೀರಾಮನು ಕೊಟ್ಟಿದ್ದನು.


ರಾಜನಾದ ಹೀರಾಮನು, “ಸಹೋದರನೇ, ನೀನು ನನಗೆ ಕೊಟ್ಟಿರುವ ಪಟ್ಟಣಗಳು ಏಕೆ ಹೀಗಿವೆ?” ಎಂದು ಕೇಳಿದನು. ರಾಜನಾದ ಹೀರಾಮನು ಆ ದೇಶಕ್ಕೆ ಕಾಬೂಲ್ ದೇಶವೆಂದು ಹೆಸರಿಟ್ಟನು. ಆ ಪ್ರದೇಶವನ್ನು ಇಂದಿಗೂ ಕಾಬೂಲ್ ಎಂದೇ ಕರೆಯುತ್ತಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು