Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 9:19 - ಪರಿಶುದ್ದ ಬೈಬಲ್‌

19 ಧಾನ್ಯಗಳನ್ನು ಮತ್ತು ಇತರ ವಸ್ತುಗಳನ್ನು ಸಂಗ್ರಹಿಸುವ ಉಗ್ರಾಣನಗರಗಳನ್ನು ಸಹ ಕಟ್ಟಿಸಿದನು; ತನ್ನ ರಥಗಳಿಗೆ ಮತ್ತು ಕುದುರೆಗಳಿಗೆ ತಾಣವಾದ ಸ್ಥಳಗಳನ್ನೂ ಕಟ್ಟಿಸಿದನು; ತಾನು ಆಳುತ್ತಿದ್ದ ಜೆರುಸಲೇಮಿನಲ್ಲಿ, ಲೆಬನೋನಿನಲ್ಲಿ, ಮತ್ತಿತರ ಎಲ್ಲಾ ಸ್ಥಳಗಳಲ್ಲಿ ತಾನು ಅಪೇಕ್ಷಿಸಿದ ಕಟ್ಟಡಗಳನ್ನೆಲ್ಲ ಕಟ್ಟಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ತನ್ನ ಎಲ್ಲಾ ಉಗ್ರಾಣ ಪಟ್ಟಣಗಳು, ಯುದ್ಧ ರಥಗಳನ್ನಿರಿಸುವ ಪಟ್ಟಣಗಳು, ರಾಹುತರ ಪಟ್ಟಣಗಳು ಇವುಗಳನ್ನೂ ಕಟ್ಟಿಸಿದನು. ಇದಲ್ಲದೆ ಯೆರೂಸಲೇಮಿನಲ್ಲಿಯೂ ಲೆಬನೋನಿನಲ್ಲಿಯೂ ತನ್ನ ರಾಜ್ಯದ ಎಲ್ಲಾ ಪ್ರಾಂತ್ಯಗಳಲ್ಲಿಯೂ ತನ್ನ ಮನಸ್ಸಿಗೆ ಬಂದವುಗಳನ್ನೆಲ್ಲಾ ಕಟ್ಟಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಉಗ್ರಾಣ ಪಟ್ಟಣಗಳು, ಯುದ್ಧರಥಗಳನ್ನಿರಿಸುವ ಪಟ್ಟಣಗಳು ಹಾಗು ರಾಹುತರ ಪಟ್ಟಣಗಳು ಇವುಗಳನ್ನೆಲ್ಲಾ ಕಟ್ಟಿಸಿದವನು ಸೊಲೊಮೋನನೇ. ಜೆರುಸಲೇಮಿನಲ್ಲೂ ಲೆಬನೋನಿನಲ್ಲೂ ತನ್ನ ರಾಜ್ಯದ ಎಲ್ಲಾ ಪ್ರಾಂತ್ಯಗಳಲ್ಲೂ ತನಗೆ ಇಷ್ಟವಾದುವುಗಳನ್ನೆಲ್ಲಾ ಅವನು ಕಟ್ಟಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಯುದ್ಧರಥಗಳನ್ನಿರಿಸುವ ಪಟ್ಟಣಗಳು, ರಾಹುತರ ಪಟ್ಟಣಗಳು, ಇವುಗಳನ್ನೂ ಕಟ್ಟಿಸಿದನು. ಇದಲ್ಲದೆ ಯೆರೂಸಲೇವಿುನಲ್ಲಿಯೂ ಲೆಬನೋನಿನಲ್ಲಿಯೂ ತನ್ನ ರಾಜ್ಯದ ಎಲ್ಲಾ ಪ್ರಾಂತಗಳಲ್ಲಿಯೂ ಮನಸ್ಸಿಗೆ ಬಂದವುಗಳನ್ನೆಲ್ಲಾ ಕಟ್ಟಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಇದಲ್ಲದೆ ಸೊಲೊಮೋನನು ಉಗ್ರಾಣದ ಪಟ್ಟಣಗಳನ್ನೂ, ತನ್ನ ರಾಹುತರಿಗೋಸ್ಕರ ಮತ್ತು ರಥಗಳಿಗೋಸ್ಕರ ಪಟ್ಟಣಗಳನ್ನೂ ಕಟ್ಟಿಸಿದನು. ಯೆರೂಸಲೇಮಿನಲ್ಲಿಯೂ, ಲೆಬನೋನಿನಲ್ಲಿಯೂ ತನ್ನ ರಾಜ್ಯದ ಎಲ್ಲಾ ಪ್ರಾಂತಗಳಲ್ಲಿಯೂ ತನಗೆ ಇಷ್ಟವಾದವುಗಳನ್ನೆಲ್ಲಾ ಕಟ್ಟಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 9:19
9 ತಿಳಿವುಗಳ ಹೋಲಿಕೆ  

ಸೊಲೊಮೋನನು ಯೆಹೋವನ ಆಲಯವನ್ನು ಮತ್ತು ತನ್ನ ಅರಮನೆಯನ್ನು ಕಟ್ಟಿ ಮುಗಿಸಿದನು. ಸೊಲೊಮೋನನು ತಾನು ಕಟ್ಟಬೇಕೆಂದು ಅಪೇಕ್ಷಿಸಿದ ಎಲ್ಲವನ್ನು ಕಟ್ಟಿ ಮುಗಿಸಿದನು.


ದುರಾಶೆಪಡುವುದಕ್ಕಿಂತ ಇರುವುದರಲ್ಲಿ ಸಂತೋಷಪಡುವುದೇ ಉತ್ತಮ. ದುರಾಶೆಯಿಂದ ಪ್ರಯೋಜನವಿಲ್ಲ. ಅದು ಸಹ ಗಾಳಿಯನ್ನು ಹಿಂದಟ್ಟಿದಂತಿದೆ.


ನನ್ನ ಕಣ್ಣುಗಳು ಬಯಸಿದ್ದನ್ನೆಲ್ಲ ನನಗೋಸ್ಕರ ಪಡೆದುಕೊಂಡೆನು. ಯಾವುದೇ ಸುಖದಿಂದಾಗಲಿ ನನ್ನ ಹೃದಯವನ್ನು ನಾನು ತಡೆಹಿಡಿಯಲಿಲ್ಲ; ಯಾಕೆಂದರೆ ನನ್ನ ಕಾರ್ಯಗಳಲ್ಲಿ ನನ್ನ ಹೃದಯವು ಸಂತೋಷಗೊಂಡಿತ್ತು. ನನ್ನ ಪ್ರಯಾಸದ ಫಲವು ಅದೊಂದೇ.


ಸೊಲೊಮೋನನು ಕುದುರೆಗಳನ್ನೂ ರಥಗಳನ್ನೂ ಸಂಗ್ರಹಿಸಲು ಪ್ರಾರಂಭಿಸಿ ಒಂದು ಸಾವಿರದ ನಾನೂರು ರಥಗಳನ್ನೂ ಹನ್ನೆರಡು ಸಾವಿರ ರಾಹುತರನ್ನೂ ತನ್ನ ಸೈನ್ಯಕ್ಕೆ ಕೂಡಿಸಿಕೊಂಡನು. ಅವುಗಳನ್ನು ರಥಗಳನ್ನಿಡುವ ನಗರಗಳಲ್ಲಿ ಇರಿಸಿದನು. ಅದರಲ್ಲಿ ಕೆಲವನ್ನು ತನ್ನ ಅರಮನೆಯಿರುವ ಜೆರುಸಲೇಮಿನಲ್ಲಿ ಇರಿಸಿದನು.


ಆದ್ದರಿಂದ ಅಸಂಖ್ಯವಾದ ರಥಗಳೂ ಕುದುರೆಗಳೂ ಸೊಲೊಮೋನನಲ್ಲಿದ್ದವು. ಅವನಲ್ಲಿ ಒಂದು ಸಾವಿರದ ನಾನೂರು ರಥಗಳು ಮತ್ತು ಹನ್ನೆರಡು ಸಾವಿರ ಕುದುರೆಗಳಿದ್ದವು. ಸೊಲೊಮೋನನು ಈ ರಥಗಳಿಗಾಗಿ ವಿಶೇಷವಾದ ನಗರಗಳನ್ನು ಕಟ್ಟಿಸಿದನು. ಆ ನಗರಗಳಲ್ಲಿ ರಥಗಳನ್ನು ಇರಿಸಿದನು. ರಾಜನಾದ ಸೊಲೊಮೋನನು ಕೆಲವು ರಥಗಳನ್ನು ಜೆರುಸಲೇಮಿನಲ್ಲಿ ತನ್ನ ಹತ್ತಿರ ಇಟ್ಟುಕೊಂಡನು.


ಆದ್ದರಿಂದ ಅವರು ಇಸ್ರೇಲರನ್ನು ಹಿಂಸಿಸಲು ತೀರ್ಮಾನಿಸಿದರು. ಇಸ್ರೇಲರಿಂದ ಬಿಟ್ಟೀಕೆಲಸ ಮಾಡಿಸುವುದಕ್ಕಾಗಿ ಅಧಿಕಾರಿಗಳನ್ನು ನೇಮಿಸಿದರು. ಈ ಅಧಿಕಾರಿಗಳು ರಾಜನಿಗಾಗಿ ಪಿತೋಮ್ ಮತ್ತು ರಾಮ್ಸೇಸ್ ಪಟ್ಟಣಗಳನ್ನು ಇಸ್ರೇಲರಿಂದ ಬಲವಂತವಾಗಿ ಕಟ್ಟಿಸಿದರು; ಧಾನ್ಯಗಳನ್ನು ಮತ್ತು ಇನ್ನಿತರ ವಸ್ತುಗಳನ್ನು ಶೇಖರಿಸುವುದಕ್ಕೆ ರಾಜನು ಈ ಪಟ್ಟಣಗಳನ್ನು ಉಪಯೋಗಿಸಿದನು.


ಆ ದೇಶದಲ್ಲಿ ಇಸ್ರೇಲರಲ್ಲದ ಅನ್ಯಜನರೂ ಇದ್ದರು. ಆ ಜನರೆಂದರೆ: ಅಮೋರಿಯರು, ಹಿತ್ತಿಯರು, ಪೆರಿಜ್ಜೀಯರು, ಹಿವ್ವೀಯರು ಮತ್ತು ಯೆಬೂಸಿಯರು.


ಆದ್ದರಿಂದ ನಿನ್ನ ಸಹಾಯವು ನನಗೆ ಬೇಕಾಗಿದೆ. ನಿನ್ನ ಜನರನ್ನು ಲೆಬನೋನಿಗೆ ಕಳುಹಿಸು. ಅಲ್ಲಿ ಅವರು ನನಗಾಗಿ ದೇವದಾರುಮರಗಳನ್ನು ಕಡಿದು ಬೀಳಿಸಲಿ. ನನ್ನ ಸೇವಕರೂ ನಿನ್ನವರೊಂದಿಗೆ ಕೆಲಸಮಾಡುತ್ತಾರೆ. ನಿನ್ನ ಸೇವಕರಿಗೆ ಗೊತ್ತುಪಡಿಸಿದ ವೇತನವನ್ನು ನಾನು ಕೊಡುತ್ತೇನೆ. ಆದರೆ ನಿನ್ನ ಸಹಾಯ ನನಗೆ ಬೇಕು. ನಮ್ಮ ಬಡಗಿಗಳು ಚೀದೋನ್ಯರ ಬಡಗಿಗಳಂತೆ ಕುಶಲಕರ್ಮಿಗಳಲ್ಲ” ಎಂದು ಹೇಳಿ ಕಳುಹಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು