1 ಅರಸುಗಳು 9:21 - ಪರಿಶುದ್ದ ಬೈಬಲ್21 ಇಸ್ರೇಲರು ಈ ಜನರನ್ನು ನಾಶಪಡಿಸಲು ಸಮರ್ಥರಾಗಿರಲಿಲ್ಲ. ಆದರೆ ಸೊಲೊಮೋನನು ಅವರನ್ನು ತನ್ನ ಕೆಲಸ ಮಾಡಲು ಗುಲಾಮರನ್ನಾಗಿ ಇಟ್ಟುಕೊಂಡನು; ಅವರು ಇಂದಿಗೂ ಗುಲಾಮರಾಗಿದ್ದಾರೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ಮೊದಲಾದ ಅನ್ಯಜನಾಂಗಗಳ ಸಂತಾನದವರೆಲ್ಲರನ್ನು ತನ್ನ ಕೆಲಸಕ್ಕಾಗಿ ಬಿಟ್ಟೀಹಿಡಿದನು. ಇಂದಿನ ವರೆಗೂ ಅವರು ಬಿಟ್ಟೀಕೆಲಸದವರಾಗಿರುತ್ತಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)21 ಯೆಬೂಸಿಯ ಮೊದಲಾದ ಇತರ ಜನಾಂಗಗಳ ಸಂತಾನದವರೆಲ್ಲರನ್ನು ಬಿಟ್ಟೀ ಕೆಲಸಕ್ಕಾಗಿ ಇಟ್ಟಿದ್ದನು. ಇಂದಿನವರೆಗೂ ಅವರು ಬಿಟ್ಟೀ ಕೆಲಸದವರಾಗಿಯೇ ಇರುತ್ತಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)21 ಪೆರಿಜ್ಜೀಯ, ಹಿವ್ವೀಯ, ಯೆಬೂಸಿಯ ಮೊದಲಾದ ಅನ್ಯಜನಾಂಗಗಳ ಸಂತಾನದವರೆಲ್ಲರನ್ನು ತನ್ನ ಕೆಲಸಕ್ಕಾಗಿ ಬಿಟ್ಟಿಹಿಡಿದನು. ಇಂದಿನವರೆಗೂ ಅವರು ಬಿಟ್ಟೀ ಕೆಲಸದವರಾಗಿರುತ್ತಾರೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ21 ಇಸ್ರಾಯೇಲರು ಸಂಹರಿಸದೆ ಉಳಿಸಿದ್ದ ಅವರ ಮಕ್ಕಳನ್ನೂ ಸೊಲೊಮೋನನು ಇಂದಿನವರೆಗೂ ದಾಸತ್ವಕ್ಕಾಗಿ ನೇಮಿಸಿದನು. ಅಧ್ಯಾಯವನ್ನು ನೋಡಿ |
ರಾಜನಾದ ಸೊಲೊಮೋನನು ತಾನು ನಿರ್ಮಿಸಿದ್ದ ಆಲಯದ ಮತ್ತು ಅರಮನೆಯ ಕೆಲಸಗಳನ್ನು ಮಾಡಲು ಗುಲಾಮರನ್ನು ಬಲಾತ್ಕರಿಸಿದನು. ರಾಜನಾದ ಸೊಲೊಮೋನನು ಇತರ ಅನೇಕ ಕಟ್ಟಡಗಳ ನಿರ್ಮಾಣಕ್ಕೆ ಬಿಟ್ಟಿಕೆಲಸದವರನ್ನು ಉಪಯೋಗಿಸಿಕೊಂಡನು. ಅವನು ಮಿಲ್ಲೋ ಕೋಟೆಯನ್ನು ನಿರ್ಮಿಸಿದನು; ಜೆರುಸಲೇಮಿನ ಸುತ್ತಲೂ ನಗರದ ಗೋಡೆಯನ್ನು ಕಟ್ಟಿಸಿದನು; ಅಲ್ಲದೆ ಅವನು ಹಾಚೋರ್, ಮೆಗಿದ್ದೋ ಮತ್ತು ಗೆಜೆರ್ ನಗರಗಳನ್ನು ಕಟ್ಟಿಸಿದನು.
ಇಸ್ರೇಲರ ಪ್ರದೇಶವನ್ನು ಬಿಟ್ಟುಹೋಗುವಂತೆ ಯೆಹೋವನು ಉಳಿದೆಲ್ಲ ಜನಾಂಗದವರನ್ನು ಒತ್ತಾಯಪಡಿಸಲಿಲ್ಲ. ಯೆಹೋವನು ಇಸ್ರೇಲರನ್ನು ಪರೀಕ್ಷಿಸಬೇಕೆಂದಿದ್ದನು. ಈಗ ಬದುಕಿದ್ದ ಇಸ್ರೇಲರಲ್ಲಿ ಯಾರೂ ಕಾನಾನ್ಯರ ಭೂಮಿಯನ್ನು ತೆಗೆದುಕೊಳ್ಳುವುದಕ್ಕಾಗಿ ಯುದ್ಧ ಮಾಡಿರಲಿಲ್ಲ. ಅದಕ್ಕಾಗಿ ಯೆಹೋವನು ಆ ಬೇರೆ ಜನಾಂಗದವರನ್ನು ಅವರ ದೇಶದಲ್ಲಿ ವಾಸಿಸಲು ಬಿಟ್ಟನು. (ಆ ಯುದ್ಧಗಳಲ್ಲಿ ಭಾಗವಹಿಸದ ಈ ಇಸ್ರೇಲರಿಗೆ ಯುದ್ಧ ಮಾಡುವುದನ್ನು ಕಲಿತುಕೊಳ್ಳಲು ಒಂದು ಅವಕಾಶ ದೊರೆಯುವಂತೆ ಯೆಹೋವನು ಹೀಗೆ ಮಾಡಿದ್ದನು.) ಯೆಹೋವನು ಆ ಭೂಮಿಯಲ್ಲಿ ವಾಸಿಸಲು ಬಿಟ್ಟ ಜನಾಂಗಗಳ ಹೆಸರುಗಳು ಇಂತಿವೆ: