1 ಅರಸುಗಳು 9:22 - ಪರಿಶುದ್ದ ಬೈಬಲ್22 ಸೊಲೊಮೋನನು ಇಸ್ರೇಲರಾದ ಯಾರನ್ನೂ ತನ್ನ ಗುಲಾಮರಾಗಲು ಬಲಾತ್ಕರಿಸಲಿಲ್ಲ. ಇಸ್ರೇಲಿನ ಜನರು ಸೈನಿಕರಾಗಿದ್ದರು; ಸರ್ಕಾರದ ನೌಕರರಾಗಿದ್ದರು; ಅಧಿಕಾರಿಗಳಾಗಿದ್ದರು; ಸೇನಾಪತಿಗಳಾಗಿದ್ದರು; ರಥಾಶ್ವಗಳಿಗೂ ಅಶ್ವಪೇದೆಗೂ ಮಹಾ ಸೇನಾಧಿಪತಿಗಳಾಗಿದ್ದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 ಆದರೆ ಅವನು ಇಸ್ರಾಯೇಲರನ್ನು ಬಿಟ್ಟೀಹಿಡಿಯಲಿಲ್ಲ. ಅವರನ್ನು ಸೈನಿಕರನ್ನಾಗಿಯೂ, ಪರಿವಾರದವರನ್ನಾಗಿಯೂ ಅಧಿಪತಿಗಳನ್ನಾಗಿಯೂ, ಸರದಾರರನ್ನಾಗಿಯೂ, ರಥಾಶ್ವಬಲಗಳ ನಾಯಕರನ್ನಾಗಿಯೂ ನೇಮಿಸಿಕೊಂಡನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)22 ಆದರೆ ಅವನು ಇಸ್ರಯೇಲರನ್ನು ಬಿಟ್ಟಿಹಿಡಿಯಲಿಲ್ಲ; ಅವರನ್ನು ಸೈನಿಕರನ್ನಾಗಿ, ಪರಿವಾರದವರನ್ನಾಗಿ, ಅಧಿಪತಿಗಳನ್ನಾಗಿ, ಸರದಾರರನ್ನಾಗಿ, ಹಾಗೂ ರಥಾಶ್ವಬಲಗಳ ನಾಯಕರನ್ನಾಗಿ ನೇಮಿಸಿಕೊಂಡನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)22 ಆದರೆ ಅವನು ಇಸ್ರಾಯೇಲ್ಯರನ್ನು ಬಿಟ್ಟಿಹಿಡಿಯಲಿಲ್ಲ; ಅವರನ್ನು ಸೈನಿಕರನ್ನಾಗಿಯೂ ಪರಿವಾರದವರನ್ನಾಗಿಯೂ ಅಧಿಪತಿಗಳನ್ನಾಗಿಯೂ ಸರದಾರರನ್ನಾಗಿಯೂ ರಥಾಶ್ವಬಲಗಳ ನಾಯಕರನ್ನಾಗಿಯೂ ನೇವಿುಸಿಕೊಂಡನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ22 ಆದರೆ ಸೊಲೊಮೋನನು ಇಸ್ರಾಯೇಲರನ್ನು ದಾಸರಾಗಿ ಮಾಡಲಿಲ್ಲ. ಅವರು ಯುದ್ಧಭಟರಾಗಿಯೂ, ಅವನ ಅಧಿಪತಿಯಾಗಿಯೂ, ತನ್ನ ಕೈಕೆಳಗಿರುವ ಅವನ ಪ್ರಧಾನರಾಗಿಯೂ, ಅಧಿಕಾರಿಗಳಾಗಿಯೂ, ತನ್ನ ರಥಗಳ ಮೇಲೆಯೂ, ರಾಹುತರ ಮೇಲೆಯೂ ಅಧಿಪತಿಗಳಾಗಿಯೂ ಇದ್ದರು. ಅಧ್ಯಾಯವನ್ನು ನೋಡಿ |
ನಾನು ನಿಮ್ಮ ಪೂರ್ವಿಕರಿಗೆ ‘ಪ್ರತಿ ಏಳು ವರ್ಷದ ಕೊನೆಯಲ್ಲಿ ಪ್ರತಿಯೊಬ್ಬ ವ್ಯಕ್ತಿಯು ತನ್ನ ಇಬ್ರಿಯ ಗುಲಾಮರನ್ನು ಬಿಡುಗಡೆ ಮಾಡಬೇಕು. ತನ್ನನ್ನು ನಿಮಗೆ ಮಾರಿಕೊಂಡ ಇಬ್ರಿಯ ಸಹೋದರ ನಿಮ್ಮಲ್ಲಿದ್ದರೆ ಅವನು ಆರು ವರ್ಷ ಸೇವೆಮಾಡಿದ ನಂತರ ಅವನನ್ನು ಬಿಡುಗಡೆ ಮಾಡಬೇಕು’ ಎಂದು ಹೇಳಿದ್ದೆ. ಆದರೆ ನಿಮ್ಮ ಪೂರ್ವಿಕರು ನನ್ನ ಮಾತುಗಳನ್ನು ಕಿವಿಗೆ ಹಾಕಿಕೊಳ್ಳಲಿಲ್ಲ; ನನ್ನ ಕಡೆಗೆ ಗಮನ ಕೊಡಲಿಲ್ಲ.