1 ಅರಸುಗಳು 9:27 - ಪರಿಶುದ್ದ ಬೈಬಲ್27 ಸಮುದ್ರದ ಬಗ್ಗೆ ಹೆಚ್ಚಿಗೆ ತಿಳಿದಿರುವ ಕೆಲವು ಜನರು ರಾಜನಾದ ಹೀರಾಮನ ಹತ್ತಿರ ಇದ್ದರು. ಅವರು ಅನುಭವಸ್ಥ ನಾವಿಕರಾಗಿದ್ದರು. ಸೊಲೊಮೋನನ ಹಡಗುಗಳಲ್ಲಿ ಅವನ ಜನರೊಡನೆ ಕೆಲಸಮಾಡಲು, ರಾಜನಾದ ಹೀರಾಮನು ತನ್ನ ನಿಪುಣರಾದ ಜನರನ್ನು ಕಳುಹಿಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201927 ಹೀರಾಮನು ಸಮುದ್ರ ಪ್ರಯಾಣದಲ್ಲಿ ನಿಪುಣರಾದ ತನ್ನ ನಾವಿಕರನ್ನು ಸೊಲೊಮೋನನ ಸೇವಕರೊಡನೆ ಆ ಹಡಗುಗಳಲ್ಲಿ ಕಳುಹಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)27 ಹೀರಾಮನು ಸಮುದ್ರಪ್ರಯಾಣದಲ್ಲಿ ನಿಪುಣರಾದ ತನ್ನ ನಾವಿಕರನ್ನು ಸೊಲೊಮೋನನ ಸೇವಕರೊಡನೆ ಆ ಹಡಗುಗಳಲ್ಲಿ ಕಳುಹಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)27 ಹೀರಾಮನು ಸಮುದ್ರ ಪ್ರಯಾಣದಲ್ಲಿ ನಿಪುಣರಾದ ತನ್ನ ನಾವಿಕರನ್ನು ಸೊಲೊಮೋನನ ಸೇವಕರೊಡನೆ ಆ ಹಡಗುಗಳಲ್ಲಿ ಕಳುಹಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ27 ಹೀರಾಮನು ಸಮುದ್ರ ಪ್ರಯಾಣದಲ್ಲಿ ನಿಪುಣರಾದ ತನ್ನ ನಾವಿಕರನ್ನು ಸೊಲೊಮೋನನ ಸೇವಕರ ಸಂಗಡ ಆ ಹಡಗುಗಳಲ್ಲಿ ಕಳುಹಿಸಿದನು. ಅಧ್ಯಾಯವನ್ನು ನೋಡಿ |
ನನ್ನ ಸೇವಕರು ಅವುಗಳನ್ನು ಲೆಬನೋನಿನಿಂದ ಸಮುದ್ರತೀರಕ್ಕೆ ತರುತ್ತಾರೆ. ನಂತರ ನಾನು ಅವುಗಳನ್ನು ಒಟ್ಟಾಗಿ ಕಟ್ಟಿ, ನೀನು ತಿಳಿಸಿದ ಸ್ಥಳಕ್ಕೆ ತೇಲಿಬಿಡುತ್ತೇನೆ. ಗೊತ್ತುಪಡಿಸಿದ ಸ್ಥಳದಲ್ಲಿ ದಿಮ್ಮಿಗಳನ್ನು ಬೇರ್ಪಡಿಸುತ್ತೇನೆ; ನೀನು ಅವುಗಳನ್ನು ತೆಗೆದುಕೊಳ್ಳಬಹುದು. ಅವುಗಳಿಗೆ ಬದಲಾಗಿ ನೀನು ನನ್ನ ಮನೆಯವರಿಗೆ ಆಹಾರಸಾಮಾಗ್ರಿಗಳನ್ನು ಕೊಡಬೇಕೆಂಬುದೇ ನನ್ನ ಅಪೇಕ್ಷೆಯಾಗಿದೆ.”
ಆದ್ದರಿಂದ ನಿನ್ನ ಸಹಾಯವು ನನಗೆ ಬೇಕಾಗಿದೆ. ನಿನ್ನ ಜನರನ್ನು ಲೆಬನೋನಿಗೆ ಕಳುಹಿಸು. ಅಲ್ಲಿ ಅವರು ನನಗಾಗಿ ದೇವದಾರುಮರಗಳನ್ನು ಕಡಿದು ಬೀಳಿಸಲಿ. ನನ್ನ ಸೇವಕರೂ ನಿನ್ನವರೊಂದಿಗೆ ಕೆಲಸಮಾಡುತ್ತಾರೆ. ನಿನ್ನ ಸೇವಕರಿಗೆ ಗೊತ್ತುಪಡಿಸಿದ ವೇತನವನ್ನು ನಾನು ಕೊಡುತ್ತೇನೆ. ಆದರೆ ನಿನ್ನ ಸಹಾಯ ನನಗೆ ಬೇಕು. ನಮ್ಮ ಬಡಗಿಗಳು ಚೀದೋನ್ಯರ ಬಡಗಿಗಳಂತೆ ಕುಶಲಕರ್ಮಿಗಳಲ್ಲ” ಎಂದು ಹೇಳಿ ಕಳುಹಿಸಿದನು.