Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 9:5 - ಪರಿಶುದ್ದ ಬೈಬಲ್‌

5 ನೀನು ಅವುಗಳನ್ನೆಲ್ಲಾ ಕೈಕೊಂಡು ನಡೆದರೆ ಯಾವಾಗಲೂ ನಿನ್ನ ಕುಟುಂಬದ ಯಾವನಾದರೊಬ್ಬನು ಇಸ್ರೇಲಿನ ರಾಜನಾಗಿರುತ್ತಾನೆಂದು ನಾನು ನಿನಗೆ ವಾಗ್ದಾನ ಮಾಡುತ್ತೇನೆ. ನಿನ್ನ ತಂದೆಯಾದ ದಾವೀದನಿಗೆ ನಾನು ಈ ವಾಗ್ದಾನವನ್ನು ಮಾಡಿದ್ದೆನು. ಯಾವಾಗಲೂ ಅವನ ಸಂತತಿಯವರಲ್ಲಿ ಯಾವನಾದರೊಬ್ಬನು ಇಸ್ರೇಲನ್ನು ಆಳುತ್ತಾನೆಂದು ನಾನು ಅವನಿಗೆ ಹೇಳಿದ್ದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಇಸ್ರಾಯೇಲರಲ್ಲಿ ನಿನ್ನ ಸಿಂಹಾಸನವನ್ನು ಸದಾ ಸ್ಥಿರಪಡಿಸುವೆನು. ‘ಇಸ್ರಾಯೇಲ್ ಸಿಂಹಾಸನದ ಮೇಲೆ ನಿನ್ನ ಸಂತಾನದವರು ತಪ್ಪದೆ ಕುಳಿತುಕೊಳ್ಳುವರು’ ಎಂಬುದಾಗಿ ನಿನ್ನ ತಂದೆಯಾದ ದಾವೀದನಿಗೆ ನಾನು ಮಾಡಿದ ವಾಗ್ದಾನವನ್ನು ನೆರವೇರಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಇಸ್ರಯೇಲ್ ಸಿಂಹಾಸನದ ಮೇಲೆ ನಿನ್ನ ಸಂತಾನದವರು ತಪ್ಪದೆ ಕುಳಿತುಕೊಳ್ಳುವರು ಎಂಬುದಾಗಿ ನಿನ್ನ ತಂದೆ ದಾವೀದನಿಗೆ ನಾನು ಮಾಡಿದ ವಾಗ್ದಾನವನ್ನು ನೆರವೇರಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಇಸ್ರಾಯೇಲ್ಯರಲ್ಲಿ ನಿನ್ನ ಸಿಂಹಾಸನವನ್ನು ಸದಾ ಸ್ಥಿರಪಡಿಸುವೆನು; ಇಸ್ರಾಯೇಲ್‍ಸಿಂಹಾಸನದ ಮೇಲೆ ನಿನ್ನ ಸಂತಾನದವರು ತಪ್ಪದೆ ಕೂತುಕೊಳ್ಳುವರು ಎಂಬದಾಗಿ ನಿನ್ನ ತಂದೆಯಾದ ದಾವೀದನಿಗೆ ನಾನು ಮಾಡಿದ ವಾಗ್ದಾನವನ್ನು ನೆರವೇರಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಇಸ್ರಾಯೇಲಿನ ಸಿಂಹಾಸನದ ಮೇಲೆ ಕುಳಿತುಕೊಳ್ಳಲು ನಿನಗೆ ಉತ್ತರಾಧಿಕಾರಿಯ ಕೊರತೆಯಾಗುವುದಿಲ್ಲವೆಂದು ನಾನು ನಿನ್ನ ತಂದೆ ದಾವೀದನಿಗೆ ಮಾತುಕೊಟ್ಟ ಪ್ರಕಾರ, ‘ಇಸ್ರಾಯೇಲಿನಲ್ಲಿ ನಿನ್ನ ರಾಜ್ಯದ ಸಿಂಹಾಸನವನ್ನು ನಿರಂತರವಾಗಿ ಸ್ಥಿರಪಡಿಸುವೆನು.’

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 9:5
9 ತಿಳಿವುಗಳ ಹೋಲಿಕೆ  

ನೀನು ಯೆಹೋವನಿಗೆ ವಿಧೇಯನಾದರೆ, ಆಗ ಯೆಹೋವನು ನನಗೆ ಮಾಡಿದ ವಾಗ್ದಾನವನ್ನು ಈಡೇರಿಸುವನು. ಯೆಹೋವನು ನನಗೆ ಈ ರೀತಿ ವಾಗ್ದಾನ ಮಾಡಿರುವನು: ‘ನಿನ್ನ ಮಕ್ಕಳು ನಂಬಿಗಸ್ತರಾಗಿ ಪೂರ್ಣಮನಸ್ಸಿನಿಂದಲೂ ಪೂರ್ಣಪ್ರಾಣದಿಂದಲೂ ನನ್ನ ಆಜ್ಞೆಗಳಿಗೆ ವಿಧೇಯರಾಗಿ ಜೀವಿಸುವುದಾಗಿದ್ದರೆ, ನಿನ್ನ ವಂಶದವರಲ್ಲಿ ಒಬ್ಬನು ಯಾವಾಗಲೂ ಇಸ್ರೇಲಿನ ಜನರನ್ನು ಆಳುವವನಾಗಿರುತ್ತಾನೆ.’”


ನಿನ್ನ ಕುಟುಂಬ ಮತ್ತು ರಾಜ್ಯ ಎಂದೆಂದಿಗೂ ಸ್ಥಿರವಾಗಿರುವುದು. ನಿನ್ನ ಸಿಂಹಾಸನವು ಶಾಶ್ವತವಾಗಿರುವುದು.’”


“‘ನಿನ್ನ ದಿನಗಳು ಮುಗಿದುಹೋಗುತ್ತವೆ; ನೀನು ನಿನ್ನ ಪೂರ್ವಿಕರ ಜೊತೆಯಲ್ಲಿ ಸೇರುತ್ತಿ. ಆ ಸಮಯದಲ್ಲಿ, ನಿನ್ನ ಮಕ್ಕಳಲ್ಲಿ ಒಬ್ಬನನ್ನು ರಾಜನನ್ನಾಗಿ ಮಾಡಿ ಅವನ ರಾಜ್ಯವನ್ನು ಭದ್ರಗೊಳಿಸುತ್ತೇನೆ.


“ಯೆಹೋವನು ತಾನು ಮಾಡಿದ್ದ ವಾಗ್ದಾನವನ್ನು ಈಡೇರಿಸಿದನು. ನನ್ನ ತಂದೆಯಾದ ದಾವೀದನ ಸ್ಥಾನದಲ್ಲಿ ನಾನೀಗ ರಾಜನಾಗಿದ್ದೇನೆ. ಯೆಹೋವನ ವಾಗ್ದಾನದಂತೆ ಈಗ ನಾನು ಇಸ್ರೇಲಿನ ಜನರನ್ನು ಆಳುತ್ತಿದ್ದೇನೆ. ಇಸ್ರೇಲಿನ ದೇವರಾದ ಯೆಹೋವನಿಗೆ ನಾನು ಆಲಯವನ್ನು ನಿರ್ಮಿಸಿದೆನು.


ನಂತರ ರಾಜನಾದ ಸೊಲೊಮೋನನು ಯೆಹೋವನಿಗೆ ದೀರ್ಘ ಪ್ರಾರ್ಥನೆಯನ್ನು ಮಾಡಿದನು. ಅವನ ಪ್ರಾರ್ಥನೆ ಇಂತಿದೆ: “ಇಸ್ರೇಲಿನ ದೇವರಾದ ಯೆಹೋವನು ಮಹತ್ವ ಪೂರ್ಣನಾಗಿದ್ದಾನೆ. ಯೆಹೋವನು ನನ್ನ ತಂದೆಯಾದ ದಾವೀದನಿಗೆ ತಾನು ಮಾಡಿದ್ದ ವಾಗ್ದಾನಗಳನ್ನು ಸ್ವತಃ ತಾನೇ ನೆರವೇರಿಸಿದ್ದಾನೆ. ಯೆಹೋವನು ನನ್ನ ತಂದೆಗೆ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು