Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 9:9 - ಪರಿಶುದ್ದ ಬೈಬಲ್‌

9 ‘ಇದು ಏಕೆ ಸಂಭವಿಸಿತೆಂದರೆ, ಅವರು ತಮ್ಮ ದೇವರಾದ ಯೆಹೋವನನ್ನು ತ್ಯಜಿಸಿದರು. ಆತನು ಅವರ ಪೂರ್ವಿಕರನ್ನು ಈಜಿಪ್ಟಿನಿಂದ ಬರಮಾಡಿದನು. ಆದರೆ ಅವರು ಅನ್ಯದೇವರುಗಳನ್ನು ಅನುಸರಿಸಲು ತೀರ್ಮಾನಿಸಿದರು. ಅವರು ಆ ದೇವರುಗಳ ಪೂಜೆಯನ್ನೂ ಸೇವೆಯನ್ನೂ ಮಾಡಲಾರಂಭಿಸಿದರು. ಆದಕಾರಣವೇ ಈ ಕೆಟ್ಟಕಾರ್ಯಗಳೆಲ್ಲಾ ಅವರಿಗೆ ಸಂಭವಿಸುವಂತೆ ಯೆಹೋವನು ಮಾಡಿದನು’ ಎಂದು ಅನ್ಯಜನರು ಉತ್ತರಿಸುವರು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಆಗ ಈ ದೇಶದವರು ಅವರಿಗೆ, ‘ನಮ್ಮ ಪೂರ್ವಿಕರನ್ನು ಐಗುಪ್ತದಿಂದ ಬರಮಾಡಿದ ದೇವರಾದ ಯೆಹೋವನನ್ನು ಬಿಟ್ಟು, ಅನ್ಯದೇವತೆಗಳನ್ನು ಅವಲಂಬಿಸಿ, ಅವುಗಳಿಗೆ ಅಡ್ಡಬಿದ್ದು ಸೇವಿಸಿದ್ದರಿಂದಲೇ ಯೆಹೋವನು ಈ ಎಲ್ಲಾ ಆಪತ್ತನ್ನು ಬರಮಾಡಿದ್ದಾನೆ’ ಎಂಬ ಉತ್ತರ ಹೇಳುವರು” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಆಗ ಅವರಿಗೆ, ‘ಈ ನಾಡಿನವರು ತಮ್ಮ ಪೂರ್ವಜರನ್ನು ಈಜಿಪ್ಟಿನಿಂದ ಬರಮಾಡಿದ ದೇವರಾದ ಸರ್ವೇಶ್ವರನನ್ನು ಬಿಟ್ಟು ಅನ್ಯದೇವತೆಗಳನ್ನು ಅವಲಂಬಿಸಿ ಅವುಗಳಿಗೆ ಅಡ್ಡಬಿದ್ದು ಆರಾಧಿಸಿದ್ದರಿಂದಲೇ ಸರ್ವೇಶ್ವರ ಈ ಎಲ್ಲಾ ಆಪತ್ತು-ವಿಪತ್ತುಗಳನ್ನು ಬರಮಾಡಿದ್ದಾರೆ’ ಎಂಬ ಉತ್ತರಸಿಕ್ಕುವುದು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಆಗ ಅವರಿಗೆ - ಈ ದೇಶದವರು ತಮ್ಮ ಪಿತೃಗಳನ್ನು ಐಗುಪ್ತದಿಂದ ಬರಮಾಡಿದ ದೇವರಾದ ಯೆಹೋವನನ್ನು ಬಿಟ್ಟು ಅನ್ಯದೇವತೆಗಳನ್ನು ಅವಲಂಬಿಸಿ ಅವುಗಳಿಗೆ ಅಡ್ಡಬಿದ್ದು ಸೇವಿಸಿದದರಿಂದಲೇ ಯೆಹೋವನು ಈ ಎಲ್ಲಾ ಆಪತ್ತನ್ನು ಬರಮಾಡಿದ್ದಾನೆ ಎಂಬ ಉತ್ತರವು ಸಿಕ್ಕುವದು ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಅದಕ್ಕೆ ಜನರು, ‘ತಮ್ಮ ತಂದೆಗಳನ್ನು ಈಜಿಪ್ಟ್ ದೇಶದೊಳಗಿಂದ ಬರಮಾಡಿದ ತಮ್ಮ ದೇವರಾದ ಯೆಹೋವ ದೇವರನ್ನು ಬಿಟ್ಟು ಅನ್ಯದೇವರುಗಳನ್ನು ಹಿಂಬಾಲಿಸಿ, ಅವುಗಳಿಗೆ ಅಡ್ಡಬಿದ್ದು ಸೇವಿಸಿದ್ದರಿಂದ ಯೆಹೋವ ದೇವರು ಈ ಕೇಡನ್ನೆಲ್ಲಾ ಅವರ ಮೇಲೆ ಬರಮಾಡಿದ್ದಾರೆಂದು ಹೇಳುವರು,’ ” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 9:9
19 ತಿಳಿವುಗಳ ಹೋಲಿಕೆ  

ನೀವು ಕೆಟ್ಟದ್ದನ್ನು ಮಾಡಿದರೆ ಆ ಕೆಟ್ಟತನ ನಿಮಗೆ ಶಿಕ್ಷೆಯಾಗುವಂತೆ ಮಾತ್ರ ಮಾಡುತ್ತದೆ. ನಿಮಗೆ ವಿಪತ್ತು ಬರುತ್ತದೆ. ಆ ವಿಪತ್ತು ನಿಮಗೊಂದು ಪಾಠವನ್ನು ಕಲಿಸುತ್ತದೆ. ಅದರ ಬಗ್ಗೆ ಯೋಚಿಸಿರಿ. ಆಗ ನಿಮ್ಮ ದೇವರಿಗೆ ವಿಮುಖರಾಗುವುದು ಎಷ್ಟು ಕೆಟ್ಟದ್ದೆಂದು ನಿಮಗೆ ಗೊತ್ತಾಗುತ್ತದೆ. ನನಗೆ ಭಯಭಕ್ತಿ ತೋರದೆ ಇರುವದು ತಪ್ಪು.” ಈ ಸಂದೇಶವು ನನ್ನ ಒಡೆಯನೂ ಸರ್ವಶಕ್ತನೂ ಆಗಿರುವ ಯೆಹೋವನಿಂದ ಬಂದಿತು.


ಯೆಹೂದದ ಜನರು ನಿನ್ನನ್ನು, ‘ಯೆರೆಮೀಯನೇ, ನಮ್ಮ ದೇವರಾದ ಯೆಹೋವನು ನಮಗೆ ಇಂಥಾ ಕೇಡನ್ನು ಏಕೆ ಮಾಡಿದನು’ ಎಂದು ಕೇಳಬಹುದು. ಆಗ ಅವರಿಗೆ ಹೀಗೆ ಉತ್ತರಕೊಡು: ‘ಯೆಹೂದದ ಜನರಾದ ನೀವು ಯೆಹೋವನನ್ನು ತೊರೆದಿದ್ದೀರಿ, ನಿಮ್ಮ ದೇಶದಲ್ಲಿ ನೀವು ಅನ್ಯರ ವಿಗ್ರಹಗಳ ಸೇವೆ ಮಾಡುತ್ತಿದ್ದೀರಿ. ಆದ್ದರಿಂದಲೇ ನೀವು ಪರದೇಶದಲ್ಲಿ ಪರದೇಶಿಯರ ಸೇವೆಯನ್ನು ಮಾಡುವಿರಿ.’”


ಆಗ ಜನರು, ‘ಯಾಕೆಂದರೆ ಇಸ್ರೇಲರು ತಮ್ಮ ಪೂರ್ವಿಕರ ದೇವರಾದ ಯೆಹೋವನ ಆಜ್ಞೆಗಳಿಗೆ ವಿಧೇಯರಾಗಲಿಲ್ಲ. ಆತನು ಅವರನ್ನು ಈಜಿಪ್ಟಿನಿಂದ ಬಿಡಿಸಿ ಹೊರತಂದನು. ಆದರೆ ಅವರು ಬೇರೆ ದೇವರುಗಳನ್ನು ಪೂಜಿಸಿ ಅವುಗಳ ಸೇವೆಮಾಡಿದರು. ಆದ್ದರಿಂದಲೇ ಭಯಂಕರವಾದ ಈ ಸಂಕಟಗಳನ್ನೆಲ್ಲ ದೇವರು ಇಸ್ರೇಲರಿಗೆ ಬರಮಾಡಿದನು’ ಎಂದು ಹೇಳುವರು” ಅಂದನು.


ನನ್ನ ಜನರನ್ನು ಕಂಡವರೆಲ್ಲ ಅವರನ್ನು ನೋಯಿಸಿದ್ದಾರೆ. ಆ ಶತ್ರುಗಳು, ‘ನಾವು ಮಾಡಿದ್ದು ತಪ್ಪಲ್ಲ. ಅವರು ಯೆಹೋವನ ವಿರುದ್ಧ ಪಾಪ ಮಾಡಿದ್ದಾರೆ. ಯೆಹೋವನು ಅವರ ನಿಜವಾದ ನಿವಾಸವಾಗಿದ್ದನು. ಯೆಹೋವನು ಅವರ ಪೂರ್ವಿಕರು ನಂಬಿದ್ದ ದೇವರಾಗಿದ್ದನು’ ಎಂದರು.


ಎಲೀಯನು, “ಇಸ್ರೇಲಿನ ತೊಂದರೆಗೆ ನಾನು ಕಾರಣನಲ್ಲ. ನೀನು ಮತ್ತು ನಿನ್ನ ತಂದೆಯ ಕುಟುಂಬವು ಈ ತೊಂದರೆಗಳಿಗೆಲ್ಲ ಕಾರಣ. ಯೆಹೋವನ ಆಜ್ಞೆಗಳಿಗೆ ವಿಧೇಯನಾಗದೆ ಸುಳ್ಳುದೇವರುಗಳನ್ನು ಅನುಸರಿಸತೊಡಗಿದ್ದರಿಂದ ಆ ತೊಂದರೆಗಳಿಗೆಲ್ಲಾ ನೀನೇ ಕಾರಣನಾಗಿರುವೆ.


“ಅನೇಕ ಜನಾಂಗಗಳ ಜನರು ಈ ನಗರದಿಂದ ಹಾದುಹೋಗುವರು. ಅವರು, ‘ಜೆರುಸಲೇಮ್ ಒಂದು ಮಹಾನಗರವಾಗಿತ್ತು. ಯೆಹೋವನು ಜೆರುಸಲೇಮಿಗೆ ಇಂಥ ಭಯಂಕರ ಸ್ಥಿತಿಯನ್ನು ಏಕೆ ತಂದನು?’ ಎಂದು ಒಬ್ಬರನ್ನೊಬ್ಬರು ಕೇಳುವರು.


ನೀವು ಬೇರೆ ದೇವರುಗಳಿಗೆ ನೈವೇದ್ಯವನ್ನು ಅರ್ಪಿಸಿದ್ದಕ್ಕಾಗಿ ಆ ಕೇಡುಗಳೆಲ್ಲಾ ಸಂಭವಿಸಿದವು. ನೀವು ಯೆಹೋವನ ವಿರುದ್ಧ ಪಾಪಮಾಡಿದಿರಿ. ನೀವು ಯೆಹೋವನ ಆಜ್ಞಾಪಾಲನೆ ಮಾಡಲಿಲ್ಲ. ನೀವು ಆತನ ಉಪದೇಶಗಳನ್ನಾಗಲಿ ಅಥವಾ ಆತನು ಬೋಧಿಸಿದ ಧರ್ಮೋಪದೇಶಗಳನ್ನಾಗಲಿ ಅನುಸರಿಸಲಿಲ್ಲ. ನೀವು ಮಾಡಿಕೊಂಡ ಒಡಂಬಡಿಕೆಯಂತೆ ನಡೆಯಲಿಲ್ಲ.”


ನಿಮ್ಮ ದೇಶವೆಲ್ಲಾ ನಿಷ್ಪ್ರಯೋಜಕವಾಗಿರುವುದು. ಅದರ ಮೇಲೆ ಉಪ್ಪೂ ಗಂಧಕವೂ ತುಂಬಿರುವುದು. ಅದರ ಮೇಲೆ ಯಾವ ಸಸಿಯೂ ಬೆಳೆಯಲಾರದು; ಕೂಳೆಯೂ ಬೆಳೆಯುವುದಿಲ್ಲ. ಸೊದೋಮ್, ಗೊಮೋರ, ಅದ್ಮಾ ಮತ್ತು ಚೆಬೋಯೀಮ್ ಎಂಬ ಪಟ್ಟಣಗಳು ಯೆಹೋವನ ಕೋಪದ ನಿಮಿತ್ತ ನಾಶವಾದಂತೆ ನಿಮ್ಮ ದೇಶವೂ ನಾಶವಾಗುವುದು.


ಯೆಹೂದದ ರಾಜರು ನನ್ನನ್ನು ತ್ಯಜಿಸಿದರು ಮತ್ತು ಇತರ ದೇವರುಗಳಿಗೆ ಧೂಪವನ್ನು ಸುಟ್ಟರು. ಅವರು ನನ್ನಲ್ಲಿ ಹೆಚ್ಚು ಕೋಪವನ್ನು ಉಂಟುಮಾಡಿದರು. ಅವರು ಅನೇಕ ವಿಗ್ರಹಗಳನ್ನು ನಿರ್ಮಿಸಿದರು. ಆದಕಾರಣವೇ ನಾನು ನನ್ನ ಕೋಪವನ್ನು ಈ ಸ್ಥಳದ ವಿರುದ್ಧ ತೋರ್ಪಡಿಸುತ್ತೇನೆ. ನನ್ನ ಕೋಪವು ಆರಿಹೋಗದ ಬೆಂಕಿಯಂತಿರುತ್ತದೆ!’


ಆದ್ದರಿಂದ ಯೆಹೋವನು ಯೆಹೂದದ ಮತ್ತು ಜೆರುಸಲೇಮಿನ ಜನರ ಮೇಲೆ ಬಹು ಕೋಪಗೊಂಡು ಅವರನ್ನು ಶಿಕ್ಷಿಸಿದನು. ಯೆಹೋವನು ಯೆಹೂದ ಮತ್ತು ಜೆರುಸಲೇಮಿನ ಜನರಿಗೆ ಮಾಡಿದ್ದ ಸಂಗತಿಗಳನ್ನು ನೋಡಿದ ಅನ್ಯರು ಗೇಲಿ ಮಾಡುತ್ತ ವೈರತ್ವದಿಂದ ತಲೆಯಾಡಿಸಿದರು. ಇವೆಲ್ಲಾ ಸತ್ಯವೆಂದು ನಿಮಗೆ ತಿಳಿದದೆ. ಇದನ್ನು ನಿಮ್ಮ ಸ್ವಂತ ಕಣ್ಣುಗಳಿಂದ ನೋಡಿದ್ದೀರಿ.


ಪಕ್ಕದಲ್ಲಿ ದಾರಿ ಹಿಡಿದುಹೋಗುವ ಜನರು ನಿನ್ನನ್ನು ನೋಡಿ ಅಪಹಾಸ್ಯದಿಂದ ಚಪ್ಪಾಳೆ ತಟ್ಟುತ್ತಾರೆ. ಜೆರುಸಲೇಮಿನ ಮಗಳ ಸ್ಥಿತಿಯನ್ನು ನೋಡಿ ಅವರು ಸಿಳ್ಳುಹಾಕುತ್ತಾರೆ ಮತ್ತು ತಲೆಯಾಡಿಸುತ್ತಾರೆ. “ಜನರಿಂದ ‘ಪರಿಪೂರ್ಣ ಸುಂದರ ನಗರ’ ‘ಸಮಸ್ತಲೋಕದ ಸಂತೋಷ’ ಎಂದು ಕರೆಸಿಕೊಂಡದ್ದು ಇದೇ ನಗರವೇ?” ಎಂದು ಅವರು ಕೇಳುತ್ತಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು