1 ಕೊರಿಂಥದವರಿಗೆ 1:17 - ಪರಿಶುದ್ದ ಬೈಬಲ್17 ಕ್ರಿಸ್ತನು ನನ್ನನ್ನು ಕಳುಹಿಸಿರುವುದು ದೀಕ್ಷಾಸ್ನಾನವನ್ನು ಕೊಡುವುದಕ್ಕಲ್ಲ, ಸುವಾರ್ತೆಯನ್ನು ತಿಳಿಸುವುದಕ್ಕಾಗಿಯಷ್ಟೆ. ಆದರೆ ವಾಕ್ಚಾತುರ್ಯದಿಂದ ಸಾರುವುದಕ್ಕಾಗಿ ಕಳುಹಿಸಲಿಲ್ಲ. ನಾನೇನಾದರೂ ಲೋಕಜ್ಞಾನದಿಂದ ಸುವಾರ್ತೆ ಸಾರಿದ್ದೇಯಾದರೆ, ಕ್ರಿಸ್ತನ ಶಿಲುಬೆಯೇ ನಿರರ್ಥಕವಾಗುವುದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ಕ್ರಿಸ್ತನು ನನ್ನನ್ನು ಕಳುಹಿಸಿದ್ದು ದೀಕ್ಷಾಸ್ನಾನಮಾಡಿಸುವುದಕ್ಕಲ್ಲ ಆದರೆ ಸುವಾರ್ತೆಯನ್ನು ಸಾರುವುದಕ್ಕಾಗಿಯೇ. ಅದನ್ನು ಮನುಷ್ಯಜ್ಞಾನದ ಮಾತುಗಳಿಂದ ಸಾರಬೇಕೆಂದು ಕಳುಹಿಸಲಿಲ್ಲ; ಹಾಗೆ ಸಾರಿದರೆ ಕ್ರಿಸ್ತನ ಶಿಲುಬೆಯ ಶಕ್ತಿಯು ಮಾತಿನ ಚತುರತೆಯಿಂದ ನಿರರ್ಥಕವಾಗಿ ಹೋಗುತ್ತದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ಯೇಸುಕ್ರಿಸ್ತರು ನನ್ನನ್ನು ಕಳುಹಿಸಿರುವುದು ದೀಕ್ಷಾಸ್ನಾನವನ್ನು ಕೊಡುವುದಕ್ಕಲ್ಲ. ಶುಭಸಂದೇಶವನ್ನು ಸಾರುವುದಕ್ಕೆ ಅದೂ ವಾಕ್‍ಚಾತುರ್ಯದಿಂದಲ್ಲ. ಹಾಗೆ ಸಾರಿದ್ದೇ ಆದರೆ, ಕ್ರಿಸ್ತಯೇಸುವಿನ ಶಿಲುಬೆಯೇ ನಿರರ್ಥಕವಾದೀತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ದೀಕ್ಷಾಸ್ನಾನ ಮಾಡಿಸುವದಕ್ಕಲ್ಲ, ಸುವಾರ್ತೆಯನ್ನು ಸಾರುವದಕ್ಕೇ ಕ್ರಿಸ್ತನು ನನ್ನನ್ನು ಕಳುಹಿಸಿದನು. ಆದರೆ ವಾಕ್ಚಾತುರ್ಯದಿಂದ ಸಾರಬೇಕೆಂದು ಕಳುಹಿಸಲಿಲ್ಲ; ಹಾಗೆ ಸಾರಿದರೆ ಕ್ರಿಸ್ತನ ಶಿಲುಬೆಯು ನಿರರ್ಥಕವಾಗುವದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 ದೀಕ್ಷಾಸ್ನಾನ ಕೊಡುವುದಕ್ಕಾಗಿ ಕ್ರಿಸ್ತ ಯೇಸು ನನ್ನನ್ನು ಕಳುಹಿಸದೆ ಸುವಾರ್ತೆಯನ್ನು ಸಾರುವುದಕ್ಕಾಗಿ ನನ್ನನ್ನು ಕಳುಹಿಸಿದ್ದಾರೆ. ಸುವಾರ್ತೆ ಸಾರುವಂಥದ್ದು ವಾಕ್ಚಾತುರ್ಯದಿಂದಲ್ಲ. ಹಾಗೆ ಸಾರುತ್ತಿದ್ದರೆ ಕ್ರಿಸ್ತ ಯೇಸುವಿನ ಶಿಲುಬೆಯ ಶಕ್ತಿಯು ಬರಿದಾಗಿಬಿಡುತಿತ್ತು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್17 ಮಾಕಾ ಕಾಯ್ ಕ್ರಿಸ್ತಾನ್ ಬಾಲ್ತಿಮ್ ದಿವ್ಕ್ ಮನುನ್ ಧಾಡುನ್ ದಿವ್ಕ್ ನಾ, ಜೆಜುಚಿ ಬರಿ ಖಬರ್ ಪ್ರಚಾರ್ ಕರುಕ್ ಮಾಕಾ ಧಾಡಲ್ಲೆ ಹೊತ್ತೆ, ತೆಬಿ ಕ್ರಿಸ್ತಾಚ್ಯಾ ಕುರ್ಸಾಚೆ ಬಳ್ ಕಳ್ದುನ್ ಜಾಯ್ನಸಿ ಸಾರ್ಕೆ ಮಾನ್ಸಾಂಚ್ಯಾ ಶಾನ್‍ಪಾನಾಚ್ಯಾ ಗೊಸ್ಟಿಯಾ ವಾಪ್ರಿನಸ್ತಾನಾ; ಕಶೆ ಹಾಯ್ ತೆಸೆಚ್ ಪ್ರಚಾರ್ ಕರುಕ್ ಧಾಡುನ್ ದಿಲ್ಲೆ ಹಾಯ್. ಅಧ್ಯಾಯವನ್ನು ನೋಡಿ |
ರಹಸ್ಯವಾದ ಮತ್ತು ನಾಚಿಕೆಕರವಾದ ಮಾರ್ಗಗಳಿಗೆ ನಾವು ವಿಮುಖರಾಗಿದ್ದೇವೆ. ನಾವು ಕುತಂತ್ರವನ್ನು ಉಪಯೋಗಿಸುವುದೂ ಇಲ್ಲ, ದೇವರ ಉಪದೇಶವನ್ನು ಬದಲಾಯಿಸುವುದೂ ಇಲ್ಲ. ನಾವು ಸತ್ಯವನ್ನು ಸ್ಪಷ್ಟವಾಗಿ ಬೋಧಿಸುತ್ತೇವೆ. ನಾವು ಯಾರೆಂಬುದನ್ನು ಜನರಿಗೆ ಈ ರೀತಿ ತೋರಿಸಿಕೊಡುತ್ತೇವೆ. ಹೀಗೆ ನಾವು ದೇವರ ಸಮ್ಮುಖದಲ್ಲಿ ಎಂಥಾ ಜನರಾಗಿದ್ದೇವೆ ಎಂಬುದನ್ನು ಅವರು ತಮ್ಮ ಹೃದಯಗಳಲ್ಲಿ ತಿಳಿದುಕೊಳ್ಳಬಲ್ಲರು.
ನಾವು ಈ ವಿಷಯದಲ್ಲಿ ಹೆಮ್ಮೆಪಡುತ್ತೇವೆ ಮತ್ತು ಇದು ಸತ್ಯವೆಂದು ನಾನು ಹೃದಯಪೂರ್ವಕವಾಗಿ ಹೇಳಬಲ್ಲೆನು. ಅದೇನೆಂದರೆ ಈ ಲೋಕದಲ್ಲಿ ಮಾಡಿದ ಎಲ್ಲಾ ಕಾರ್ಯಗಳನ್ನು ದೇವರಿಂದ ಕೊಡಲ್ಪಟ್ಟ ಯಥಾರ್ಥವಾದ ಮತ್ತು ಪರಿಶುದ್ಧವಾದ ಹೃದಯದಿಂದ ಮಾಡಿದೆವು. ನಾವು ನಿಮ್ಮ ಮಧ್ಯದಲ್ಲಿ ಮಾಡಿದ ಕಾರ್ಯಗಳಲ್ಲಂತೂ ಇದು ಮತ್ತಷ್ಟು ಸತ್ಯವಾಗಿದೆ. ನಾವು ಇದನ್ನು ಮಾಡಿದ್ದು ದೇವರ ಕೃಪೆಯಿಂದಲೇ ಹೊರತು ಲೋಕದ ಜ್ಞಾನದಿಂದಲ್ಲ.