1 ಕೊರಿಂಥದವರಿಗೆ 1:18 - ಪರಿಶುದ್ದ ಬೈಬಲ್18 ನಾಶನ ಮಾರ್ಗದಲ್ಲಿರುವ ಜನರಿಗೆ ಶಿಲುಬೆಯ ಉಪದೇಶವು ಮೂರ್ಖತನವಾಗಿದೆ. ಆದರೆ ರಕ್ಷಣೆಯ ಮಾರ್ಗದಲ್ಲಿರುವ ನಮಗಾದರೋ ಅದು ದೇವರ ಶಕ್ತಿಯಾಗಿದೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ಶಿಲುಬೆಯ ಸಂದೇಶವು ನಾಶನದ ಮಾರ್ಗದಲ್ಲಿರುವವರಿಗೆ ಹುಚ್ಚುತನವಾಗಿದೆ, ಆದರೆ ರಕ್ಷಣೆಯ ಮಾರ್ಗದಲ್ಲಿರುವ ನಮಗೆ ಇದು ದೇವರ ಶಕ್ತಿಯಾಗಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 ವಿನಾಶಮಾರ್ಗದಲ್ಲಿರುವವರಿಗೆ ಶಿಲುಬೆಯ ಸಂದೇಶ ಹುಚ್ಚು ಸಂಗತಿಯಾಗಿದೆ. ಮುಕ್ತಿಮಾರ್ಗದಲ್ಲಿರುವ ನಮಗಾದರೋ ಅದು ದೈವಶಕ್ತಿಯಾಗಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 ಶಿಲುಬೆಯ ವಿಷಯವಾದ ಮಾತು ನಾಶನದ ಮಾರ್ಗದಲ್ಲಿರುವವರಿಗೆ ಹುಚ್ಚುಮಾತಾಗಿದೆ, ರಕ್ಷಣೆಯ ಮಾರ್ಗದಲ್ಲಿರುವ ನಮಗಾದರೋ ದೇವರ ಶಕ್ತಿಯಾಗಿದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18 ಶಿಲುಬೆಯ ಸಂದೇಶವು ವಿನಾಶದ ಮಾರ್ಗದಲ್ಲಿರುವವರಿಗೆ ಬುದ್ದಿಹೀನವಾಗಿದೆ. ರಕ್ಷಣೆ ಹೊಂದುತ್ತಿರುವ ನಮಗಾದರೋ, ಅದು ದೇವರ ಶಕ್ತಿಯಾಗಿದೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್18 ನಾಸಾಕ್ ಘೆವ್ನ್ ಜಾತಲ್ಯಾ ವಾಟೆನ್ ಚಲ್ತಲ್ಯಾಕ್ನಿ ಕುರ್ಸಾಚಿ ಖಬರ್ ಎಕ್ ಪಿಶೆಪಾನ್ ಸಾರ್ಕೆ ದಿಸ್ತಾ, ಖರೆ ರಾಕನ್ ಹೊಲ್ಲ್ಯಾ ಅಮ್ಕಾ ತಿ ಖಬರ್ ದೆವಾಚೆ ಬಳ್ ಹೊವ್ನ್ ಹಾಯ್. ಅಧ್ಯಾಯವನ್ನು ನೋಡಿ |
ಎಪಿಕೊರಿಯಾ ಮತ್ತು ಸ್ತೋಯಿಕ ತತ್ವಶಾಸ್ತ್ರಜ್ಞರಲ್ಲಿ ಕೆಲವರು ಅವನೊಂದಿಗೆ ವಾದಿಸಿದರು. ಅವರಲ್ಲಿ ಕೆಲವರು, “ಈ ಮನುಷ್ಯನಿಗೆ ತಾನು ಯಾವುದರ ಬಗ್ಗೆ ಮಾತಾಡುತ್ತಿದ್ದೇನೆ ಎಂಬುದೇ ನಿಜವಾಗಿಯೂ ತಿಳಿದಿಲ್ಲ. ಅವನು ಏನು ಹೇಳಲು ಪ್ರಯತ್ನಿಸುತ್ತಿದ್ದಾನೆ?” ಎಂದರು. ಯೇಸುವು ಸತ್ತವರೊಳಗಿಂದ ಜೀವಂತನಾಗಿ ಎದ್ದುಬಂದಿದ್ದಾನೆ ಎಂಬ ಸುವಾರ್ತೆಯನ್ನು ಪೌಲನು ಅವರಿಗೆ ಹೇಳುತ್ತಿದ್ದನು. ಆದ್ದರಿಂದ ಅವರು, “ಕೆಲವು ಬೇರೆ ದೇವರುಗಳ ಬಗ್ಗೆ ಅವನು ನಮಗೆ ಹೇಳುತ್ತಿರುವಂತೆ ತೋರುತ್ತಿದೆ” ಎಂದರು.