Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 1:2 - ಪರಿಶುದ್ದ ಬೈಬಲ್‌

2 ಕ್ರಿಸ್ತ ಯೇಸುವಿನಲ್ಲಿ ಪವಿತ್ರರಾಗಿ ಮಾಡಲ್ಪಟ್ಟಿರುವ ಕೊರಿಂಥದ ದೇವರ ಸಭೆಯವರಿಗೆ ಈ ಪತ್ರವನ್ನು ಬರೆಯುತ್ತಿದ್ದೇನೆ. ನೀವು ದೇವರ ಪವಿತ್ರ ಜನರಾಗುವುದಕ್ಕೆ ಕರೆಯಲ್ಪಟ್ಟಿದ್ದೀರಿ. ಪ್ರಭುವಾದ ಯೇಸು ಕ್ರಿಸ್ತನ ಹೆಸರಿನಲ್ಲಿ ನಂಬಿಕೆ ಇಡುವ ಎಲ್ಲಾ ಜನರೊಂದಿಗೆ ನೀವು ಕರೆಯಲ್ಪಟ್ಟಿದ್ದೀರಿ. ಯೇಸು ಕ್ರಿಸ್ತನು ಅವರಿಗೂ ನಮಗೂ ಪ್ರಭುವಾಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಕೊರಿಂಥದಲ್ಲಿನ ದೇವರ ಸಭೆಗೆ ಅಂದರೆ ಕ್ರಿಸ್ತ ಯೇಸುವಿನಲ್ಲಿ ಪ್ರತಿಷ್ಠಿತರಾದವರಿಗೂ, ಪರಿಶುದ್ಧರಾಗಿರಲು ಕರೆಯಲ್ಪಟ್ಟವರಿಗೂ, ನಮ್ಮ ಮತ್ತು ಅವರ ಕರ್ತನಾಗಿರುವ ಯೇಸು ಕ್ರಿಸ್ತನ ನಾಮಸ್ಮರಣೆಯನ್ನು ಮಾಡುವವರೆಲ್ಲಿದ್ದರೂ ಅವರೆಲ್ಲರಿಗೂ ಬರೆಯುವುದು ಏನೆಂದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಯೇಸುಕ್ರಿಸ್ತರು ನಮಗೂ ಸಮಸ್ತ ದೇವಜನರಿಗೂ ಪ್ರಭುವಾಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಸೊಸ್ಥೆನನೂ ಕೊರಿಂಥದಲ್ಲಿನ ದೇವರ ಸಭೆಗೆ ಅಂದರೆ ಕ್ರಿಸ್ತೇಸುವಿನಲ್ಲಿ ಪ್ರತಿಷ್ಠಿತರೂ ದೇವಜನರಾಗುವದಕ್ಕೆ ಕರೆಯಲ್ಪಟ್ಟವರೂ ಆಗಿರುವವರಿಗೆ ಮತ್ತು ನಮಗೂ ಸಮಸ್ತ ದೇವಜನರಿಗೂ ಕರ್ತನಾಗಿರುವ ಯೇಸು ಕ್ರಿಸ್ತನ ನಾಮಸ್ಮರಣೆಯನ್ನು ಮಾಡುವವರು ಎಲ್ಲಿದ್ದರೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಕ್ರಿಸ್ತ ಯೇಸುವಿನಲ್ಲಿ ಪ್ರತ್ಯೇಕವಾಗಿ, ಪವಿತ್ರರಾಗುವುದಕ್ಕೆ ಕರೆಹೊಂದಿದ ಕೊರಿಂಥದಲ್ಲಿರುವ ದೇವರ ಸಭೆಗೆ ನಮಗೆ ಕರ್ತ ಆಗಿರುವ ಯೇಸುಕ್ರಿಸ್ತರ ನಾಮದಲ್ಲಿ ವಿಶ್ವಾಸವಿಟ್ಟ ಸಕಲ ಜನರಿಗೂ ಬರೆಯುವ ಪತ್ರ:

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

2 ಕೊರಿಂಥಾತ್ಲ್ಯಾ ದೆವಾಚ್ಯಾ ಲೊಕಾಂಚ್ಯಾ ತಾಂಡ್ಯಾಕ್, ದೆವಾಚಿ ಪವಿತ್ರ್ ಲೊಕಾ ಹೊವ್ಕ್ ಮನುನ್ ಬಲ್ವುಲ್ಲ್ಯಾಕ್ನಿ ಅನಿ ಜೆಜು ಕ್ರಿಸ್ತಾಚ್ಯಾ ಎಕ್ವಟ್ಟಾನ್ ದೆವಾಕ್ ಸಮಂದ್ ಪಡಲ್ಲ್ಯಾಕ್ನಿ ಅನಿ ಸಗ್ಳ್ಯಾಕ್ಡೆ ತೆಂಚ್ಯಾ ಅನಿ ಅಮ್ಚ್ಯಾ ಧನಿಯಾ ಜೆಜು ಕ್ರಿಸ್ತಾಚೆ ಆರಾದನ್ ಕರ್‍ತಲ್ಯಾ ಸಗ್ಳ್ಯಾ ಲೊಕಾಕ್ನಿ ಲಿವ್ತಲೆ ಕಾಯ್ ಮಟ್ಲ್ಯಾರ್:

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 1:2
45 ತಿಳಿವುಗಳ ಹೋಲಿಕೆ  

ರೋಮಿನಲ್ಲಿರುವವರೂ ದೇವರ ಪವಿತ್ರ ಜನರಾಗಿರುವುದಕ್ಕಾಗಿ ದೇವರಿಂದಲೇ ಕರೆಯಲ್ಪಟ್ಟವರೂ ಆಗಿರುವ ನಿಮ್ಮೆಲ್ಲರಿಗೆ ಈ ಪತ್ರವನ್ನು ಬರೆಯುತ್ತಿದ್ದೇನೆ. ನೀವು ದೇವರಿಗೆ ಪ್ರಿಯರಾದ ಜನರಾಗಿದ್ದೀರಿ. ನಮ್ಮ ತಂದೆಯಾದ ದೇವರಿಂದಲೂ ಪ್ರಭುವಾದ ಯೇಸು ಕ್ರಿಸ್ತನಿಂದಲೂ ನಿಮಗೆ ಕೃಪೆಯೂ ಶಾಂತಿಯೂ ಆಗಲಿ.


ನಿಮ್ಮನ್ನು ಕ್ರಿಸ್ತ ಯೇಸುವಿನಲ್ಲಿ ಒಂದು ಭಾಗವನ್ನಾಗಿ ಮಾಡಿದಾತನು ದೇವರೇ. ಕ್ರಿಸ್ತನು ನಮಗಾಗಿ ದೇವರಿಂದ ಬಂದ ಜ್ಞಾನವಾಗಿದ್ದಾನೆ. ನಾವು ನೀತಿವಂತರಾಗಿರುವುದಕ್ಕೆ, ಪಾಪದಿಂದ ಬಿಡುಗಡೆಯಾಗಿರುವುದಕ್ಕೆ ಮತ್ತು ಪವಿತ್ರರಾಗಿರುವುದಕ್ಕೆ ಕ್ರಿಸ್ತನೇ ಕಾರಣನಾಗಿದ್ದಾನೆ.


ನೀನು ಅವರಿಗೆ ಸತ್ಯವನ್ನು ತಿಳಿಸಿ ಅವರನ್ನು ಕತ್ತಲೆಯಿಂದ ಬೆಳಕಿಗೆ ಬರುವಂತೆಯೂ ಸೈತಾನನ ಅಧಿಕಾರಕ್ಕೆ ವಿಮುಖರಾಗಿ ದೇವರ ಕಡೆಗೆ ತಿರುಗಿಕೊಳ್ಳುವಂತೆಯೂ ಮಾಡಬೇಕು. ಆಗ ಅವರ ಪಾಪಗಳು ಕ್ಷಮಿಸಲ್ಪಡುತ್ತವೆ. ನನ್ನಲ್ಲಿ ನಂಬಿಕೆ ಇಡುವುದರ ಮೂಲಕ ಪವಿತ್ರರಾದ ಜನರೊಂದಿಗೆ ಅವರು ಪಾಲು ಹೊಂದುವರು’ ಎಂದನು.”


ಆದ್ದರಿಂದ ಯೇಸುವು ನಗರದ ಹೊರಗಡೆ ಸಂಕಟವನ್ನು ಅನುಭವಿಸಿದನು. ಆತನು ತನ್ನ ಜನರನ್ನು ಪವಿತ್ರರನ್ನಾಗಿಸಲು, ತನ್ನ ಸ್ವಂತ ರಕ್ತವನ್ನೇ ಅರ್ಪಿಸಿ ಸತ್ತನು.


ದೇವರು ನಮ್ಮನ್ನು ಪರಿಶುದ್ಧರಾಗಿ ಜೀವಿಸುವುದಕ್ಕೆ ಕರೆದಿದ್ದಾನೆ. ನಾವು ಪಾಪದಲ್ಲಿ ಜೀವಿಸಲು ಆತನು ಇಷ್ಟಪಡುವುದಿಲ್ಲ.


ದೇವರ ಇಷ್ಟಕ್ಕನುಸಾರವಾದ ಕಾರ್ಯಗಳನ್ನು ಯೇಸು ಕ್ರಿಸ್ತನು ಮಾಡಿದನು. ಆ ಕಾರಣದಿಂದಲೇ, ಯಜ್ಞವಾಗಿ ಅರ್ಪಿತವಾದ ಆತನ ದೇಹದ ಮೂಲಕ ನಾವು ಪರಿಶುದ್ಧರಾದೆವು. ಆತನು ಶಾಶ್ವತವಾದ ಯಜ್ಞವನ್ನು ಒಂದೇ ಸಲ ಅರ್ಪಿಸಿದನು.


ನಾವು ನಮ್ಮ ಬಗ್ಗೆ ಬೋಧಿಸುವುದಿಲ್ಲ. ಆದರೆ ಯೇಸು ಕ್ರಿಸ್ತನೇ ಪ್ರಭುವೆಂದು ಮತ್ತು ಯೇಸುವಿಗೋಸ್ಕರ ನಿಮ್ಮ ಸೇವಕರಾಗಿದ್ದೇವೆಂದು ಬೋಧಿಸುತ್ತೇವೆ.


ಈಗ ಅವನು ದಮಸ್ಕಕ್ಕೂ ಬಂದಿದ್ದಾನೆ. ನಿನ್ನಲ್ಲಿ ನಂಬಿಕೆ ಇಡುವ ಜನರೆಲ್ಲರನ್ನು ಬಂಧಿಸುವ ಅಧಿಕಾರವನ್ನು ಮಹಾಯಾಜಕರು ಅವನಿಗೆ ಕೊಟ್ಟಿದ್ದಾರೆ” ಎಂದು ಹೇಳಿದನು.


ಆತನ ನಿಲುವಂಗಿಯ ಮೇಲೆಯೂ ಆತನ ಕಾಲಿನ ಮೇಲೆಯೂ, ರಾಜಾಧಿರಾಜ ಮತ್ತು ಪ್ರಭುಗಳ ಪ್ರಭು ಎಂಬ ಹೆಸರನ್ನು ಬರೆಯಲಾಗಿತ್ತು.


ಯೇಸು ಕ್ರಿಸ್ತನ ಸೇವಕನೂ ಯಾಕೋಬನ ಸಹೋದರನೂ ಆಗಿರುವ ಯೂದನು ದೇವರಿಂದ ಕರೆಯಲ್ಪಟ್ಟವರಿಗೂ ತಂದೆಯಾದ ದೇವರಿಗೆ ಪ್ರಿಯರಾದವರಿಗೂ ಯೇಸು ಕ್ರಿಸ್ತನಲ್ಲಿ ಸುರಕ್ಷಿತವಾಗಿಡಲ್ಪಟ್ಟವರಿಗೂ ಬರೆಯವ ಪತ್ರ.


ಜನರನ್ನು ಪರಿಶುದ್ಧರನ್ನಾಗಿ ಮಾಡುವ ಯೇಸುವೂ ಮತ್ತು ಆತನಿಂದ ಪರಿಶುದ್ಧರಾಗುವ ಜನರೂ ಒಂದೇ ಕುಟುಂಬಕ್ಕೆ ಸೇರಿದವರಾಗಿದ್ದಾರೆ. ಆದ್ದರಿಂದ ಆ ಜನರನ್ನು ಸಹೋದರರೆಂದೂ ಸಹೋದರಿಯರೆಂದೂ ಕರೆಯಲು ಆತನು (ಯೇಸು) ನಾಚಿಕೆಪಡುವುದಿಲ್ಲ.


ಆತನು ನಮ್ಮನ್ನು ರಕ್ಷಿಸಿ, ತನ್ನ ಪವಿತ್ರ ಜನರಾಗಿರುವುದಕ್ಕಾಗಿ ನಮ್ಮನ್ನು ಕರೆದನು. ನಾವು ಮಾಡಿದ ಒಳ್ಳೆಯ ಕಾರ್ಯಗಳಿಂದ ಹೀಗಾಯಿತು ಎಂದಲ್ಲ. ಆತನು ತನ್ನ ಸಂಕಲ್ಪಕ್ಕನುಸಾರವಾಗಿ ಮತ್ತು ಕೃಪೆಗನುಸಾರವಾಗಿ ನಮ್ಮನ್ನು ರಕ್ಷಿಸಿ ತನ್ನವರನ್ನಾಗಿ ಮಾಡಿದನು. ಅನಾದಿಕಾಲದಲ್ಲಿಯೇ ಈ ಕೃಪೆಯು ಕ್ರಿಸ್ತ ಯೇಸುವಿನ ಮೂಲಕ ನಮಗೆ ದೊರೆಯಿತು.


ನಂತರ ನಾನು ನಿನ್ನ ಬಳಿಗೆ ಬೇಗ ಬಾರದೆ ಇದ್ದರೂ, ದೇವರ ಮನೆಯಲ್ಲಿ ಜನರು ಮಾಡಲೇಬೇಕಾದ ಕಾರ್ಯಗಳ ಬಗ್ಗೆ ನಿನಗೆ ತಿಳಿದಿದೆ. ಆ ಮನೆಯು ಜೀವಂತ ದೇವರ ಸಭೆ. ಅದು ಸತ್ಯದ ಅಡಿಪಾಯವೂ ಆಧಾರವೂ ಆಗಿದೆ.


ತಂದೆಯಾದ ದೇವರಲ್ಲಿಯೂ ಮತ್ತು ಪ್ರಭುವಾದ ಯೇಸು ಕ್ರಿಸ್ತನಲ್ಲಿಯೂ ಇರುವ ಥೆಸಲೋನಿಕದವರ ಸಭೆಗೆ ಪೌಲನು, ಸಿಲ್ವಾನನು ಮತ್ತು ತಿಮೊಥೆಯನು ಬರೆಯುವ ಪತ್ರ.


ತಂದೆಯಾದ ದೇವರಲ್ಲಿಯೂ ಮತ್ತು ಪ್ರಭುವಾದ ಯೇಸು ಕ್ರಿಸ್ತನಲ್ಲಿಯೂ ಇರುವ ಥೆಸಲೋನಿಕದವರ ಸಭೆಗೆ ಪೌಲ, ಸಿಲ್ವಾನ ಮತ್ತು ತಿಮೊಥೆ ಬರೆಯುವ ಪತ್ರ. ದೇವರ ಕೃಪೆಯೂ ಶಾಂತಿಯೂ ನಿಮಗಿರಲಿ.


ಕ್ರಿಸ್ತನು ಸಭೆಯನ್ನು ಪರಿಶುದ್ಧಗೊಳಿಸುವುದಕ್ಕಾಗಿ ಪ್ರಾಣಕೊಟ್ಟನು. ಸುವಾರ್ತೆಯನ್ನು ತಿಳಿಸುವುದರ ಮೂಲಕ ಜಲಸ್ನಾನವನ್ನು ಮಾಡಿಸಿ ಆತನು ಸಭೆಯನ್ನು ಶುದ್ಧಗೊಳಿಸಿದನು.


ಕ್ರಿಸ್ತ ಯೇಸುವಿನ ಅಪೊಸ್ತಲನಾದ ಪೌಲನು ಬರೆಯುವ ಪತ್ರ. ನಾನು ದೇವರ ಚಿತ್ತಾನುಸಾರ ಅಪೊಸ್ತಲನಾಗಿದ್ದೇನೆ. ಕೊರಿಂಥದಲ್ಲಿರುವ ದೇವರ ಸಭೆಯವರಿಗೂ ಇಡೀ ಅಖಾಯ ಸೀಮೆಯಲ್ಲಿರುವ ದೇವಜನರೆಲ್ಲರಿಗೂ ನಾನು ಈ ಪತ್ರವನ್ನು ಕ್ರಿಸ್ತನಲ್ಲಿ ನಮ್ಮ ಸಹೋದರನಾದ ತಿಮೊಥೆಯನೊಡನೆ ಸೇರಿ ಬರೆಯುತ್ತಿದ್ದೇನೆ.


ನಮಗಾದರೋ ಒಬ್ಬನೇ ಒಬ್ಬ ದೇವರಿದ್ದಾನೆ. ಆತನು ನಮ್ಮ ತಂದೆ. ಸಮಸ್ತವನ್ನು ಆತನೇ ಸೃಷ್ಟಿ ಮಾಡಿದನು. ನಾವು ಆತನಿಗೋಸ್ಕರ ಜೀವಿಸುತ್ತೇವೆ. ಒಬ್ಬನೇ ಒಬ್ಬ ಪ್ರಭುವಿದ್ದಾನೆ. ಆತನೇ ಯೇಸು ಕ್ರಿಸ್ತನು. ಆತನ ಮೂಲಕವಾಗಿ ಸಮಸ್ತವು ಉಂಟಾಯಿತು. ಆತನ ಮೂಲಕವಾಗಿ ನಾವು ಜೀವವನ್ನು ಹೊಂದಿದ್ದೇವೆ.


ಏಕೆಂದರೆ ಯೆಹೂದ್ಯರಿಗೂ ಯೆಹೂದ್ಯರಲ್ಲದವರಿಗೂ ಯಾವ ವ್ಯತ್ಯಾಸವೂ ಇಲ್ಲ. ಎಲ್ಲರಿಗೂ ಒಬ್ಬನೇ ಪ್ರಭು. ತನ್ನಲ್ಲಿ ನಂಬಿಕೆಯಿಡುವ ಜನರೆಲ್ಲರಿಗೆ ಪ್ರಭುವು ಅನೇಕ ಆಶೀರ್ವಾದಗಳನ್ನು ಕೊಡುತ್ತಾನೆ.


ನಂಬಿಕೆಯ ಮೂಲಕವಾಗಿ ಅಂದರೆ ಯೇಸು ಕ್ರಿಸ್ತನಲ್ಲಿ ನಂಬಿಕೆ ಇಡುವ ಎಲ್ಲಾ ಜನರನ್ನು ದೇವರು ನೀತಿವಂತರನ್ನಾಗಿ ಮಾಡುತ್ತಾನೆ. ಆತನಿಗೆ ಎಲ್ಲಾ ಜನರು ಒಂದೇ.


ಈಗ ನೀನು ತಡಮಾಡುವುದೇಕೆ? ಎದ್ದೇಳು! ಆತನಲ್ಲಿ ನಂಬಿಕೆಯಿಟ್ಟು ದೀಕ್ಷಾಸ್ನಾನ ಮಾಡಿಸಿಕೊಂಡು ನಿನ್ನ ಪಾಪಗಳನ್ನು ತೊಳೆದುಕೊ’ ಎಂದು ಹೇಳಿದನು.


ತರುವಾಯ ಪೌಲನು ಅಥೆನ್ಸನ್ನು ಬಿಟ್ಟು ಕೊರಿಂಥ ಪಟ್ಟಣಕ್ಕೆ ಹೋದನು.


ದೇವರ ದೃಷ್ಟಿಯಲ್ಲಿ ಅವರಿಗೂ ನಮಗೂ ಯಾವ ವ್ಯತ್ಯಾಸವಿಲ್ಲ. ಅವರು ನಂಬಿಕೊಂಡಾಗ, ದೇವರು ಅವರ ಹೃದಯಗಳನ್ನು ಶುದ್ಧೀಕರಿಸಿದನು.


ದೇವರು ಯೆಹೂದ್ಯ ಜನರೊಂದಿಗೆ ಮಾತಾಡಿದ್ದಾನೆ. ಯೇಸು ಕ್ರಿಸ್ತನ ಮೂಲಕವಾಗಿ ಶಾಂತಿ ಬಂದಿದೆ ಎಂಬ ಸುವಾರ್ತೆಯನ್ನು ದೇವರು ಅವರಿಗೆ ಕಳುಹಿಸಿದನು. ಯೇಸುವು ಎಲ್ಲಾ ಜನರಿಗೆ ಪ್ರಭುವಾಗಿದ್ದಾನೆ!


ಸೌಲನ ಮಾತನ್ನು ಕೇಳಿದ ಜನರೆಲ್ಲರೂ ವಿಸ್ಮಯಗೊಂಡು, “ಜೆರುಸಲೇಮಿನಲ್ಲಿದ್ದವನು ಈ ಮನುಷ್ಯನೇ. ಈ ಹೆಸರಿನಲ್ಲಿ (ಯೇಸುವಿನ) ನಂಬಿಕೆ ಇಡುವ ಜನರನ್ನು ನಾಶಮಾಡಲು ಇವನು ಪ್ರಯತ್ನಿಸುತ್ತಿದ್ದನು! ಯೇಸುವಿನ ಶಿಷ್ಯರನ್ನು ಬಂಧಿಸಿ ಜೆರುಸಲೇಮಿನಲ್ಲಿರುವ ಮಹಾಯಾಜಕರ ಬಳಿಗೆ ಕೊಂಡೊಯ್ಯಲು ಇವನು ಇಲ್ಲಿಗೂ ಬಂದಿದ್ದಾನೆ” ಎಂದು ಹೇಳಿದರು.


ಆಗ ರಾಜನು ನಿನ್ನ ಸೌಂದರ್ಯವನ್ನು ಮೆಚ್ಚಿಕೊಳ್ಳುವನು. ಅವನು ನಿನಗೆ ಹೊಸ ಯಜಮಾನನಾಗಿರುವನು. ಆದ್ದರಿಂದ ನೀನು ಅವನನ್ನು ಗೌರವಿಸಬೇಕು.


ಆಮೇಲೆ ಅಬ್ರಾಮನು ಆ ಸ್ಥಳದಿಂದ ಹೊರಟು ಬೇತೇಲಿಗೆ ಪೂರ್ವದಲ್ಲಿರುವ ಗುಡ್ಡಗಳ ಬಳಿಗೆ ಪ್ರಯಾಣ ಮಾಡಿದನು. ಅಲ್ಲಿ ಅಬ್ರಾಮನು ತನ್ನ ಗುಡಾರಗಳನ್ನು ಹಾಕಿದನು. ಪಶ್ಚಿಮಕ್ಕೆ ಬೇತೇಲ್ ಪಟ್ಟಣವಿತ್ತು, ಪೂರ್ವಕ್ಕೆ ಆಯಿ ಪಟ್ಟಣವಿತ್ತು. ಆ ಸ್ಥಳದಲ್ಲಿ ಅವನು ಯೆಹೋವನಿಗೋಸ್ಕರ ಒಂದು ಯಜ್ಞವೇದಿಕೆಯನ್ನು ಕಟ್ಟಿ ಅಲ್ಲಿ ಅವನು ಯೆಹೋವನನ್ನು ಆರಾಧಿಸಿದನು.


ಸೇತನು ಒಬ್ಬ ಮಗನನ್ನು ಪಡೆದನು. ಆ ಮಗುವಿಗೆ ಅವನು ಎನೋಷ್ ಎಂದು ಹೆಸರಿಟ್ಟನು. ಆ ಕಾಲದಲ್ಲಿ ಜನರು ಯೆಹೋವನ ಮೇಲೆ ಭರವಸೆ ಇಡಲಾರಂಭಿಸಿದರು.


ಯುವಕರು ಇಷ್ಟಪಡುವ ಕೆಟ್ಟಕಾರ್ಯಗಳಿಂದ ನೀನು ದೂರವಾಗಿರು. ಪ್ರೀತಿ, ನಂಬಿಕೆ ಮತ್ತು ಶಾಂತಿಯನ್ನು ಹೊಂದಿದವನಾಗಿದ್ದು ಯೋಗ್ಯವಾದ ರೀತಿಯಲ್ಲಿ ಜೀವಿಸಲು ಬಹಳವಾಗಿ ಪ್ರಯತ್ನಪಡು. ಪ್ರಭುವಿನಲ್ಲಿ ಭರವಸವಿಟ್ಟಿರುವ ಮತ್ತು ಪರಿಶುದ್ಧ ಹೃದಯ ಹೊಂದಿರುವ ಜನರೊಂದಿಗೆ ಒಟ್ಟುಗೂಡಿ ಈ ಕಾರ್ಯಗಳನ್ನು ಮಾಡು.


ನಾನು ಮತ್ತು ನನ್ನೊಂದಿಗಿರುವ ಎಲ್ಲಾ ಸಹೋದರರು ಈ ಪತ್ರವನ್ನು ಗಲಾತ್ಯದಲ್ಲಿರುವ ಸಭೆಗಳವರಿಗೆ ಬರೆದಿದ್ದೇವೆ.


ಆದರೆ ಅನನೀಯನು, “ಪ್ರಭುವೇ, ಜೆರುಸಲೇಮಿನಲ್ಲಿರುವ ನಿನ್ನ ಪವಿತ್ರ ಜನರಿಗೆ ಈ ಮನುಷ್ಯನು ಮಾಡಿದ ಅನೇಕ ಕೆಟ್ಟಕೃತ್ಯಗಳ ಬಗ್ಗೆ ಜನರು ನನಗೆ ಹೇಳಿದ್ದಾರೆ.


ದೇವರು ತನ್ನನ್ನು ಪ್ರೀತಿಸುವವರ ಒಳ್ಳೆಯದಕ್ಕಾಗಿ ಪ್ರತಿಯೊಂದು ಕಾರ್ಯವನ್ನೂ ಅನುಕೂಲ ಮಾಡುತ್ತಾನೆಂದು ನಮಗೆ ಗೊತ್ತಿದೆ. ಆ ಜನರನ್ನು ದೇವರೇ ಆರಿಸಿಕೊಂಡನು, ಏಕೆಂದರೆ ಅದು ಆತನ ಯೋಜನೆಯಾಗಿತ್ತು.


ಇತರ ಜನರು ಅಂದರೆ ಯೆಹೂದ್ಯರಾಗಲಿ ಗ್ರೀಕರಾಗಲಿ ಅಥವಾ ದೇವರ ಸಭೆಯವರಾಗಲಿ ತಪ್ಪುಮಾಡಲು ಕಾರಣವಾಗುವಂಥದ್ದನ್ನು ನೀವೆಂದಿಗೂ ಮಾಡಬೇಡಿರಿ.


ನೀವೆಲ್ಲರೂ ಒಂದುಗೂಡಿ ಕ್ರಿಸ್ತನ ದೇಹವಾಗಿದ್ದೀರಿ. ನಿಮ್ಮಲ್ಲಿ ಪ್ರತಿಯೊಬ್ಬರೂ ಅದರ ಅಂಗವಾಗಿದ್ದೀರಿ.


ಎಲ್ಲಾ ಸ್ಥಳಗಳಲ್ಲಿ ಪುರುಷರು ಪ್ರಾರ್ಥನೆ ಮಾಡಬೇಕೆಂಬುದು ನನ್ನ ಅಪೇಕ್ಷೆ. ತಮ್ಮ ಕೈಗಳನ್ನು ಮೇಲೆತ್ತಿ ಪ್ರಾರ್ಥಿಸುವ ಅವರು ಪರಿಶುದ್ಧರಾಗಿರಬೇಕು. ಅವರು ವಾಗ್ವಾದ ಮಾಡುವವರೂ ಕೋಪಗೊಳ್ಳುವವರೂ ಆಗಿರಬಾರದು.


ಆದರೆ ದೇವರ ಭದ್ರವಾದ ಬುನಾದಿಯು ಬದಲಾಗುವುದೇ ಇಲ್ಲ. “ಪ್ರಭುವಿಗೆ ತನ್ನವರು ಯಾರೆಂಬುದು ತಿಳಿದಿದೆ” ಎಂತಲೂ “ಪ್ರಭುವಿನಲ್ಲಿ ನಂಬಿಕೆಯಿಟ್ಟಿರುವವರೆಲ್ಲರೂ ದುರ್ಮಾರ್ಗತನವನ್ನು ಬಿಟ್ಟುಬಿಡಬೇಕು” ಎಂತಲೂ ಆ ಬುನಾದಿಯ ಮೇಲೆ ಕೆತ್ತಲಾಗಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು