Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 1:21 - ಪರಿಶುದ್ದ ಬೈಬಲ್‌

21 ಇದು ದೇವರ ಜ್ಞಾನದ ಸಂಕಲ್ಪವಾಗಿತ್ತು. ಲೋಕವು ತನ್ನ ಸ್ವಂತ ಜ್ಞಾನದ ಮೂಲಕವಾಗಿ ದೇವರನ್ನು ತಿಳಿದುಕೊಂಡಿರಲಿಲ್ಲ. ಆದ್ದರಿಂದ ಮೂರ್ಖತನದಂತೆ ತೋರುವ ಸಂದೇಶದ ಮೂಲಕ ನಂಬುವವರನ್ನು ರಕ್ಷಿಸುವುದು ದೇವರಿಗೆ ಒಳ್ಳೆಯದೆನಿಸಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಲೋಕವು ತನ್ನ ಜ್ಞಾನದಿಂದ ದೇವರನ್ನು ತಿಳಿದುಕೊಳ್ಳದೆ ಹೋದದ್ದರಿಂದ; ಮೂರ್ಖತನವೆನಿಸಿಕೊಂಡಿರುವ ನಮ್ಮ ಬೋಧನೆಯ ಮೂಲಕ ನಂಬುವವರನ್ನು ರಕ್ಷಿಸುವುದು ದೇವರಿಗೆ ಹಿತವೆಂದು ತೋರಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಲೋಕವು ತನ್ನ ಸ್ವಂತ ಜ್ಞಾನದಿಂದ ದೇವರನ್ನು ಅರಿಯಲಾರದೆ ಹೋಯಿತು. ಇದು ದೈವಸಂಕಲ್ಪವೇ ಸರಿ. ಆದ್ದರಿಂದಲೇ ನಾವು ಸಾರುವ ‘ಹುಚ್ಚುತನ’ವೆಂಬ ಸಂದೇಶದ ಮೂಲಕ ವಿಶ್ವಾಸವುಳ್ಳವರನ್ನು ಉದ್ಧರಿಸುವುದು ದೇವರಿಗೆ ಉಚಿತವೆನಿಸಿತು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಹೇಗಂದರೆ ಲೋಕವು ಜ್ಞಾನವೆನಿಸುವ ಮಾರ್ಗದಿಂದ ದೇವರನ್ನು ತಿಳುಕೊಳ್ಳದೆ ಹೋದದ್ದು ದೇವರ ಜ್ಞಾನದ ಸಂಕಲ್ಪವೆ; ಹೀಗಾದ ಮೇಲೆ ಹುಚ್ಚು ಮಾತು ಎಣಿಸಿಕೊಂಡಿರುವ ನಮ್ಮ ಪ್ರಸಂಗದಿಂದಲೇ ನಂಬುವವರನ್ನು ರಕ್ಷಿಸುವದು ದೇವರಿಗೆ ಒಳ್ಳೇದೆಂದು ತೋಚಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಈ ಪ್ರಪಂಚವು ತನ್ನ ಜ್ಞಾನದ ಮೂಲಕ ದೇವರನ್ನು ಅರಿತುಕೊಳ್ಳಲಿಲ್ಲ; ಆದ್ದರಿಂದ ದೇವರ ಜ್ಞಾನದಿಂದ, ನಂಬಿದವರನ್ನು ಪ್ರಸಂಗದ ಬುದ್ದಿಹೀನತೆಯಿಂದ ರಕ್ಷಿಸುವುದು ದೇವರಿಗೆ ಮೆಚ್ಚುಗೆಯಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

21 ದೆವಾನ್ ಅಪ್ನಾಚ್ಯಾ ಶಾನ್‍ಪಾನಾನ್ ನಿರ್ದಾರ್ ಕರಲ್ಲ್ಯಾ ಸರ್ಕೆ ಜಗಾನ್ ಅಪ್ನಾಚ್ಯಾ ಶಾನ್‍ಪಾನಾನ್‍ ದೆವಾಚಿ ವಳಕ್ ಧರುಕ್ ಹೊವ್ಕ್ ನಾ, ತಸೆ ಮನುನ್ ಅಮ್ಚ್ಯಾ ಬರ್‍ಯಾ ಖಬ್ರೆಚ್ಯಾ ಪಿಶೆಪಾನಾಚ್ಯಾ ವೈನಾ ವಿಶ್ವಾಸ್ ಕರ್ತಲ್ಯಾಕ್ನಿ ಸುಟ್ಕಾ ಕಮ್ವುನ್ ಘೆವ್ಚೆ ಮನ್ತಲಿ ದೆವಾಚಿ ಮರ್ಜಿ ಹೊತ್ತಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 1:21
28 ತಿಳಿವುಗಳ ಹೋಲಿಕೆ  

ಬಳಿಕ ಯೇಸು ಪವಿತ್ರಾತ್ಮನ ಮೂಲಕ ಬಹಳ ಸಂತೋಷಗೊಂಡು ಹೀಗೆ ಪ್ರಾರ್ಥಿಸಿದನು: “ಪರಲೋಕ ಭೂಲೋಕಗಳ ಪ್ರಭುವಾದ ತಂದೆಯೇ, ನಾನು ನಿನ್ನನ್ನು ಸ್ತುತಿಸುತ್ತೇನೆ. ನೀನು ಜ್ಞಾನಿಗಳಿಗೂ ಬುದ್ಧಿವಂತರಿಗೂ ಈ ಸಂಗತಿಗಳನ್ನು ಮರೆಮಾಡಿದ್ದಕ್ಕಾಗಿ ನಾನು ನಿನ್ನನ್ನು ಸ್ತುತಿಸುತ್ತೇನೆ. ಆದರೆ ನೀನು ಚಿಕ್ಕಮಕ್ಕಳಂತಿರುವ ಜನರಿಗೆ ಈ ಸಂಗತಿಗಳನ್ನು ಪ್ರಕಟಮಾಡಿದೆ. ಹೌದು, ತಂದೆಯೇ, ಅದೇ ನಿನ್ನ ಅಪೇಕ್ಷೆಯಾಗಿತ್ತು.


ಬಳಿಕ ಯೇಸು, “ಪರಲೋಕ ಭೂಲೋಕಗಳ ಪ್ರಭುವಾದ ತಂದೆಯೇ, ನಿನಗೆ ನಾನು ವಂದನೆ ಸಲ್ಲಿಸುತ್ತೇನೆ. ನಾನು ನಿನ್ನನ್ನು ಕೊಂಡಾಡುತ್ತೇನೆ. ಏಕೆಂದರೆ, ನೀನು ಈ ಸಂಗತಿಗಳನ್ನು ಜ್ಞಾನಿಗಳಿಗೂ ಸೂಕ್ಷ್ಮಬುದ್ದಿಯುಳ್ಳವರಿಗೂ ಮರೆಮಾಡಿರುವೆ. ಆದರೆ ಚಿಕ್ಕ ಮಕ್ಕಳಂತಿರುವ ಈ ಜನರಿಗೆ ನೀನು ಗೋಚರಪಡಿಸಿರುವೆ.


ತನ್ನ ನಾನಾ ವಿಧವಾದ ಜ್ಞಾನವು ಆಕಾಶಮಂಡಲದಲ್ಲಿರುವ ಎಲ್ಲಾ ಅಧಿಪತಿಗಳಿಗೂ ಅಧಿಕಾರಿಗಳಿಗೂ ಈಗ ಸಭೆಯ ಮೂಲಕ ಗೊತ್ತಾಗಬೇಕೆಂಬುದೇ ದೇವರ ಉದ್ದೇಶವಾಗಿತ್ತು.


ದೇವರಿಂದ ಕರೆಯಲ್ಪಟ್ಟಿರುವ ಜನರು ಯೆಹೂದ್ಯರಾಗಿದ್ದರೂ ಯೆಹೂದ್ಯರಲ್ಲದವರಾಗಿದ್ದರೂ ಅವರಿಗೆ ಕ್ರಿಸ್ತನು ದೇವರ ಶಕ್ತಿಯಾಗಿದ್ದಾನೆ; ಮತ್ತು ದೇವರ ಜ್ಞಾನವಾಗಿದ್ದಾನೆ.


“ದೇವರ ನಾಮವನ್ನು ಎಂದೆಂದಿಗೂ ಸ್ತುತಿಸಿರಿ! ಜ್ಞಾನವೂ ಸಾಮರ್ಥ್ಯವೂ ಆತನವೇ.


ದೇವರ ನಿಜ ಜ್ಞಾನವನ್ನು ಹೊಂದಿಕೊಳ್ಳಲು ಅವರಿಗೆ ಇಷ್ಟವಿಲ್ಲದ್ದರಿಂದ ದೇವರು ಅವರನ್ನು ಅವರ ಅಯೋಗ್ಯ ಭಾವಕ್ಕೆ ಒಪ್ಪಿಸಿಕೊಟ್ಟನು. ಆದ್ದರಿಂದ ಅವರು ತಾವು ಮಾಡಬಾರದ ಕೆಲಸಗಳನ್ನು ಮಾಡುತ್ತಾರೆ.


ಹೌದು, ದೇವರ ಐಶ್ವರ್ಯವು ಎಷ್ಟೋ ಅಪಾರವಾಗಿದೆ! ದೇವರ ವಿವೇಕಕ್ಕೂ ಜ್ಞಾನಕ್ಕೂ ಕೊನೆಯೇ ಇಲ್ಲ! ದೇವರು ನಿರ್ಧರಿಸುವ ಸಂಗತಿಗಳನ್ನು ಯಾವನೂ ವಿವರಿಸಲಾರನು. ದೇವರ ಮಾರ್ಗಗಳನ್ನು ಯಾವನೂ ಅರ್ಥಮಾಡಿಕೊಳ್ಳಲಾರನು.


“ಚಿಕ್ಕ ಮಂದೆಯೇ, ಹೆದರಬೇಡ, ನಿಮಗೆ ರಾಜ್ಯವನ್ನು ಕೊಡಲು ನಿಮ್ಮ ತಂದೆ ಬಯಸಿದ್ದಾನೆ.


ಈ ಲೋಕಕ್ಕೆ ತೀರ್ಪಾಗುವ ಕಾಲ ಇದೇ ಆಗಿದೆ. ಈಗ ಈ ಲೋಕದ ಅಧಿಪತಿಯನ್ನು (ಸೈತಾನ) ಹೊರಗೆ ದಬ್ಬಲಾಗುವುದು.


ನಾಶನ ಮಾರ್ಗದಲ್ಲಿರುವ ಜನರಿಗೆ ಶಿಲುಬೆಯ ಉಪದೇಶವು ಮೂರ್ಖತನವಾಗಿದೆ. ಆದರೆ ರಕ್ಷಣೆಯ ಮಾರ್ಗದಲ್ಲಿರುವ ನಮಗಾದರೋ ಅದು ದೇವರ ಶಕ್ತಿಯಾಗಿದೆ.


ನಾವಾದರೋ, ಶಿಲುಬೆಗೇರಿಸಲ್ಪಟ್ಟ ಕ್ರಿಸ್ತನ ಕುರಿತಾಗಿ ಬೋಧಿಸುತ್ತೇವೆ. ಇದು ಯೆಹೂದ್ಯರಿಗೆ ದೊಡ್ಡ ಸಮಸ್ಯೆಯಾಗಿದೆ; ಯೆಹೂದ್ಯರಲ್ಲದ ಜನರಿಗೆ ಮೂರ್ಖತನದಂತೆ ತೋರುತ್ತದೆ.


ದೇವರ ಮೂಢತನವು ಸಹ ಮನುಷ್ಯರ ಜ್ಞಾನಕ್ಕಿಂತಲೂ ಶ್ರೇಷ್ಠವಾಗಿದೆ. ದೇವರ ಬಲಹೀನತೆಯು ಸಹ ಮನುಷ್ಯರ ಬಲಕ್ಕಿಂತಲೂ ಹೆಚ್ಚು ಶಕ್ತಿಯುತವಾಗಿದೆ.


ಆದರೆ ದೇವರು ಈ ಲೋಕದ ಜ್ಞಾನಿಗಳನ್ನು ನಾಚಿಕೆಪಡಿಸುವುದಕ್ಕಾಗಿ ಮೂಢರನ್ನು ಆರಿಸಿಕೊಂಡಿದ್ದಾನೆ; ಬಲಿಷ್ಠರನ್ನು ನಾಚಿಕೆಪಡಿಸುವುದಕ್ಕಾಗಿ ಬಲಹೀನರನ್ನು ಆರಿಸಿಕೊಂಡಿದ್ದಾನೆ.


ಆತ್ಮಿಕನಲ್ಲದ ವ್ಯಕ್ತಿಯು ದೇವಾರಾತ್ಮನ ವಿಷಯಗಳನ್ನು ಸ್ವೀಕರಿಸಿಕೊಳ್ಳವುದಿಲ್ಲ. ಅವನು ಆ ವಿಷಯಗಳನ್ನು ಮೂರ್ಖತನವೆಂದು ಯೋಚಿಸುತ್ತಾನೆ. ಅವನು ಪವಿತ್ರಾತ್ಮನ ವಿಷಯಗಳನ್ನು ಅರ್ಥಮಾಡಿಕೊಳ್ಳಲಾರನು; ಏಕೆಂದರೆ ಆ ವಿಷಯಗಳನ್ನು ಆತ್ಮಿಕವಾಗಿ ವಿಚಾರಣೆ ಮಾಡಲು ಮಾತ್ರ ಸಾಧ್ಯ.


ನಾವು ಕ್ರಿಸ್ತನಿಗೋಸ್ಕರ ಮೂರ್ಖರಾಗಿದ್ದೇವೆ. ಆದರೆ ನೀವು ನಿಮ್ಮನ್ನು ಕ್ರಿಸ್ತನಲ್ಲಿ ಬಹು ಜ್ಞಾನಿಗಳೆಂದು ಭಾವಿಸಿಕೊಂಡಿದ್ದೀರಿ. ನಾವು ಬಲಹೀನರಾಗಿದ್ದೇವೆ, ಆದರೆ ನೀವು ನಿಮ್ಮನ್ನು ಬಲಿಷ್ಠರೆಂದು ಭಾವಿಸಿಕೊಂಡಿದ್ದೀರಿ. ಜನರು ನಿಮಗೆ ಗೌರವವನ್ನು ಕೊಡುತ್ತಾರೆ; ನಮಗಾದರೋ ಅವರು ಗೌರವವನ್ನು ಕೊಡುವುದಿಲ್ಲ.


ದೇವಜನರು ಲೋಕಕ್ಕೆ ತೀರ್ಪು ಮಾಡುವರೆಂಬುದು ನಿಮಗೆ ತಿಳಿಯದೋ? ದೇವಜನರು ಲೋಕಕ್ಕೆ ನ್ಯಾಯತೀರ್ಪು ಮಾಡುವವರಾಗಿದ್ದರೆ, ಇಂಥ ಚಿಕ್ಕ ಸಂಗತಿಗಳ ಬಗ್ಗೆಯೂ ನ್ಯಾಯತೀರ್ಪು ಮಾಡಬಲ್ಲರೆಂಬುದು ನಿಶ್ಚಯವಾಗಿದೆ.


ಆದರೆ ಪ್ರಭುವು ನಮಗೆ ತೀರ್ಪು ಮಾಡುವಾಗ, ನಮಗೆ ಸರಿಯಾದ ಮಾರ್ಗವನ್ನು ತೋರಿಸುವುದಕ್ಕಾಗಿಯೂ ಈ ಲೋಕದ ಇತರ ಜನರೊಂದಿಗೆ ನಮಗೆ ಅಪರಾಧಿಗಳೆಂಬ ತೀರ್ಪಾಗದಂತೆಯೂ ಆತನು ನಮ್ಮನ್ನು ಶಿಕ್ಷಿಸುತ್ತಾನೆ.


ಆದರೆ ನಾನು ಹುಟ್ಟುವುದಕ್ಕಿಂತ ಮೊದಲೇ ನನ್ನ ವಿಷಯದಲ್ಲಿ ದೇವರಿಗೆ ವಿಶೇಷವಾದ ಯೋಜನೆಯಿತ್ತು. ಆದ್ದರಿಂದ ದೇವರು ತನ್ನ ಕೃಪೆಯಿಂದ ನನ್ನನ್ನು ಕರೆದನು.


ಪೂರ್ವಕಾಲದಲ್ಲಿ ನೀವು ದೇವರನ್ನು ತಿಳಿಯದೆ ಸುಳ್ಳು ದೇವರುಗಳಿಗೆ ಗುಲಾಮರಾಗಿದ್ದಿರಿ.


ಇದು ದೇವರ ಚಿತ್ತವಾಗಿತ್ತು. ಕ್ರಿಸ್ತನ ಮೂಲಕ ಇದನ್ನು ನೆರವೇರಿಸಲು ಆತನು ಯೋಜನೆ ಮಾಡಿದನು.


ಆತನಲ್ಲಿ ತನ್ನ ಸರ್ವಸಂಪೂರ್ಣತೆಯು ನೆಲಸಿರಬೇಕೆಂಬುದೂ,


ದೇವದೂತರೆಲ್ಲರೂ ದೇವರ ಸೇವೆಮಾಡುವ ಆತ್ಮಗಳಾಗಿದ್ದಾರೆ ಮತ್ತು ರಕ್ಷಣೆಯನ್ನು ಹೊಂದಿಕೊಳ್ಳುವ ಜನರ ಸಹಾಯಕ್ಕಾಗಿ ಕಳುಹಿಸಲ್ಪಟ್ಟವರಾಗಿದ್ದಾರೆ.


ನಮಗೆ ದಯಪಾಲಿಸಲ್ಪಟ್ಟ ಈ ವಿಶೇಷ ರಕ್ಷಣೆಯನ್ನು ನಾವು ಅಲಕ್ಷ್ಯ ಮಾಡಿದರೆ ದಂಡನೆಯಂತೂ ಖಂಡಿತ. ಇದು ಪ್ರಭುವಿನಿಂದ ಮೊದಲು ಹೇಳಲ್ಪಟ್ಟಿತು. ಆತನಿಂದ ಕೇಳಿದವರೇ ಈ ರಕ್ಷಣೆಯ ಕುರಿತಾಗಿ ನಮಗೆ ಸ್ಥಿರಪಡಿಸಿದರು.


ಆದ್ದರಿಂದಲೇ ತನ್ನ ಮೂಲಕ ದೇವರ ಬಳಿಗೆ ಬರುವ ಜನರನ್ನು ಯೇಸು ಯಾವಾಗಲೂ ರಕ್ಷಿಸಬಲ್ಲನು. ಏಕೆಂದರೆ ಆತನು ಸದಾಕಾಲ ಜೀವಿಸುವವನಾಗಿದ್ದಾನೆ ಮತ್ತು ಜನರು ದೇವರ ಸನ್ನಿಧಿಗೆ ಬಂದಾಗ ಜನರಿಗೆ ಸಹಾಯ ಮಾಡಲು ಸಿದ್ಧನಾಗಿದ್ದಾನೆ.


ಆದ್ದರಿಂದ ನೀವು ದೇವರಿಗೆ ನಂಬಿಗಸ್ತರಾಗಿಲ್ಲ! ಇಹಲೋಕದ ಮೇಲಿರುವ ವ್ಯಾಮೋಹ ದೇವರ ಮೇಲಿರುವ ದ್ವೇಷಕ್ಕೆ ಸಮಾನವಾಗಿದೆ. ಆದ್ದರಿಂದ ಈ ಲೋಕವನ್ನು ಪ್ರೀತಿಸುವವನು ತನ್ನನ್ನು ದೇವರಿಗೆ ಶತ್ರುವನ್ನಾಗಿ ಮಾಡಿಕೊಳ್ಳುತ್ತಾನೆ.


ನಂಬಿಕೆಯಿಂದ ಮಾಡಿದ ಪ್ರಾರ್ಥನೆಯು ಕಾಯಿಲೆಯಲ್ಲಿರುವವನನ್ನು ಗುಣಪಡಿಸುತ್ತದೆ. ಪ್ರಭುವು ಅವನನ್ನು ಗುಣಪಡಿಸುತ್ತಾನೆ. ಒಂದುವೇಳೆ, ಆ ವ್ಯಕ್ತಿಯು ಪಾಪ ಮಾಡಿದ್ದರೆ, ಪ್ರಭುವು ಅವನನ್ನು ಕ್ಷಮಿಸುತ್ತಾನೆ.


ಇದನ್ನು ಜ್ಞಾಪಕದಲ್ಲಿಟ್ಟುಕೊಂಡಿರಿ: ಒಬ್ಬ ಪಾಪಿಯನ್ನು ತಪ್ಪಾದ ಮಾರ್ಗದಿಂದ ಸರಿಯಾದ ಮಾರ್ಗಕ್ಕೆ ನಡೆಸುವವನು ಆ ಪಾಪಿಯ ಆತ್ಮವನ್ನು ಮರಣದಿಂದ ಪಾರುಮಾಡಿದವನೂ ಅನೇಕ ಪಾಪಗಳಿಗೆ ಕ್ಷಮಾಪಣೆಯಾಗುವಂತೆ ಮಾಡಿದವನೂ ಆಗುತ್ತಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು