Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 1:25 - ಪರಿಶುದ್ದ ಬೈಬಲ್‌

25 ದೇವರ ಮೂಢತನವು ಸಹ ಮನುಷ್ಯರ ಜ್ಞಾನಕ್ಕಿಂತಲೂ ಶ್ರೇಷ್ಠವಾಗಿದೆ. ದೇವರ ಬಲಹೀನತೆಯು ಸಹ ಮನುಷ್ಯರ ಬಲಕ್ಕಿಂತಲೂ ಹೆಚ್ಚು ಶಕ್ತಿಯುತವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ದೇವರ ಬುದ್ಧಿಹೀನತೆಯು ಮನುಷ್ಯರ ಜ್ಞಾನಕ್ಕಿಂತಲೂ ಶ್ರೇಷ್ಠವಾದದ್ದು, ದೇವರ ಬಲಹೀನತೆಯು ಮನುಷ್ಯರ ಬಲಕ್ಕಿಂತಲೂ ಶಕ್ತಿಯುಳ್ಳದ್ದಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 ‘ದೇವರ ಹುಚ್ಚುತನ’ ಎಂಬುದು ಮಾನವ ಜ್ಞಾನಕ್ಕಿಂತಲೂ ಶ್ರೇಷ್ಠವಾದುದು. ‘ದೇವರ ದೌರ್ಬಲ್ಯ’ ಎಂಬುದು ಮಾನವ ಶಕ್ತಿಗಿಂತಲೂ ಪ್ರಬಲವಾದುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ಲೋಕದವರು ದೇವರಲ್ಲಿ ಯಾವದನ್ನು ಬುದ್ಧಿಹೀನತೆಯೆಂದು ಎಣಿಸುತ್ತಾರೋ ಅದು ಮನುಷ್ಯರ ಜ್ಞಾನಕ್ಕಿಂತಲೂ ಶ್ರೇಷ್ಠ ಜ್ಞಾನವಾಗಿದೆ. ಅವರು ದೇವರಲ್ಲಿ ಯಾವದನ್ನು ಬಲಹೀನತೆಯೆಂದು ಎಣಿಸುತ್ತಾರೋ ಅದು ಮನುಷ್ಯರ ಬಲಕ್ಕಿಂತಲೂ ಬಲವುಳ್ಳದ್ದಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ಏಕೆಂದರೆ ದೇವರ ಬುದ್ಧಿಹೀನತೆ ಮನುಷ್ಯರ ಜ್ಞಾನಕ್ಕಿಂತಲೂ ಶ್ರೇಷ್ಠವಾಗಿದೆ. ದೇವರ ಬಲಹೀನತೆ ಮನುಷ್ಯರ ಬಲಕ್ಕಿಂತಲೂ ಬಲವುಳ್ಳದ್ದಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

25 ಕಶ್ಯಾಕ್ ಮಟ್ಲ್ಯಾರ್, ದೆವಾಚೆ ಪಿಶೆಪಾನ್ ಮಾನ್ಸಾಚ್ಯಾ ಶಾನ್ಪಾನಾನ್ ಬಿ ಶಾನೆ ಅನಿ ದೆವಾಚಿ ತಾಕತ್ ಕಮಿ ಮನ್ತಲೆ ಮಾನ್ಸಾಚ್ಯಾ ತಾಕ್ತಿಚ್ಯಾನ್ಕಿ ಜಾಸ್ತಿ ಘಟ್ಮುಟ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 1:25
16 ತಿಳಿವುಗಳ ಹೋಲಿಕೆ  

ನಾಶನ ಮಾರ್ಗದಲ್ಲಿರುವ ಜನರಿಗೆ ಶಿಲುಬೆಯ ಉಪದೇಶವು ಮೂರ್ಖತನವಾಗಿದೆ. ಆದರೆ ರಕ್ಷಣೆಯ ಮಾರ್ಗದಲ್ಲಿರುವ ನಮಗಾದರೋ ಅದು ದೇವರ ಶಕ್ತಿಯಾಗಿದೆ.


ಕ್ರಿಸ್ತನು ಶಿಲುಬೆಯ ಮೇಲೆ ಕೊಲ್ಲಲ್ಪಟ್ಟಾಗ ಬಲಹೀನನಾಗಿದ್ದನು ಎಂಬುದೇನೊ ನಿಜ. ಆದರೆ ಈಗ ಆತನು ದೇವರ ಶಕ್ತಿಯಿಂದ ಜೀವಿಸುತ್ತಿದ್ದಾನೆ. ಅಲ್ಲದೆ ನಾವು ಕ್ರಿಸ್ತನಲ್ಲಿ ಬಲಹೀನರೆಂಬುದೂ ನಿಜ. ಆದರೆ ನಾವು ನಿಮಗೋಸ್ಕರವಾಗಿ ಕ್ರಿಸ್ತನಲ್ಲಿ ದೇವರ ಶಕ್ತಿಯಿಂದ ಜೀವಿಸುತ್ತೇವೆ.


ಇಸ್ರೇಲರು ಈಜಿಪ್ಟನ್ನು ಬಿಟ್ಟುಹೋಗುವಂತೆ ಫರೋಹನು ಅನುಮತಿ ನೀಡಿದನು. ಇಸ್ರೇಲರು ಫಿಲಿಷ್ಟಿಯರ ದೇಶದ ಮೂಲಕ ಹಾದುಹೋಗುವ ರಸ್ತೆಯಲ್ಲಿ ಹೋಗಲು ಯೆಹೋವನು ಅನುಮತಿ ನೀಡಲಿಲ್ಲ. ಸಮುದ್ರದ ಮೂಲಕ ಹಾದುಹೋಗುವ ಆ ರಸ್ತೆ ಬಹಳ ಹತ್ತಿರವಾಗಿತ್ತು. ಆದರೆ ಯೆಹೋವನು, “ಇಸ್ರೇಲರು ಆ ದಾರಿಯಲ್ಲಿ ಹೋದರೆ, ಯುದ್ಧಮಾಡಬೇಕಾಗುವುದು. ಆಗ ಅವರು ತಮ್ಮ ಮನಸ್ಸುಗಳನ್ನು ಬದಲಾಯಿಸಿ ಈಜಿಪ್ಟಿಗೆ ಹಿಂತಿರುಗಬಹುದು” ಅಂದುಕೊಂಡನು.


ಇದು ದೇವರ ಜ್ಞಾನದ ಸಂಕಲ್ಪವಾಗಿತ್ತು. ಲೋಕವು ತನ್ನ ಸ್ವಂತ ಜ್ಞಾನದ ಮೂಲಕವಾಗಿ ದೇವರನ್ನು ತಿಳಿದುಕೊಂಡಿರಲಿಲ್ಲ. ಆದ್ದರಿಂದ ಮೂರ್ಖತನದಂತೆ ತೋರುವ ಸಂದೇಶದ ಮೂಲಕ ನಂಬುವವರನ್ನು ರಕ್ಷಿಸುವುದು ದೇವರಿಗೆ ಒಳ್ಳೆಯದೆನಿಸಿತು.


ಆತ್ಮಿಕನಲ್ಲದ ವ್ಯಕ್ತಿಯು ದೇವಾರಾತ್ಮನ ವಿಷಯಗಳನ್ನು ಸ್ವೀಕರಿಸಿಕೊಳ್ಳವುದಿಲ್ಲ. ಅವನು ಆ ವಿಷಯಗಳನ್ನು ಮೂರ್ಖತನವೆಂದು ಯೋಚಿಸುತ್ತಾನೆ. ಅವನು ಪವಿತ್ರಾತ್ಮನ ವಿಷಯಗಳನ್ನು ಅರ್ಥಮಾಡಿಕೊಳ್ಳಲಾರನು; ಏಕೆಂದರೆ ಆ ವಿಷಯಗಳನ್ನು ಆತ್ಮಿಕವಾಗಿ ವಿಚಾರಣೆ ಮಾಡಲು ಮಾತ್ರ ಸಾಧ್ಯ.


ನಾವು ಕ್ರಿಸ್ತನಿಗೋಸ್ಕರ ಮೂರ್ಖರಾಗಿದ್ದೇವೆ. ಆದರೆ ನೀವು ನಿಮ್ಮನ್ನು ಕ್ರಿಸ್ತನಲ್ಲಿ ಬಹು ಜ್ಞಾನಿಗಳೆಂದು ಭಾವಿಸಿಕೊಂಡಿದ್ದೀರಿ. ನಾವು ಬಲಹೀನರಾಗಿದ್ದೇವೆ, ಆದರೆ ನೀವು ನಿಮ್ಮನ್ನು ಬಲಿಷ್ಠರೆಂದು ಭಾವಿಸಿಕೊಂಡಿದ್ದೀರಿ. ಜನರು ನಿಮಗೆ ಗೌರವವನ್ನು ಕೊಡುತ್ತಾರೆ; ನಮಗಾದರೋ ಅವರು ಗೌರವವನ್ನು ಕೊಡುವುದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು