Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 1:27 - ಪರಿಶುದ್ದ ಬೈಬಲ್‌

27 ಆದರೆ ದೇವರು ಈ ಲೋಕದ ಜ್ಞಾನಿಗಳನ್ನು ನಾಚಿಕೆಪಡಿಸುವುದಕ್ಕಾಗಿ ಮೂಢರನ್ನು ಆರಿಸಿಕೊಂಡಿದ್ದಾನೆ; ಬಲಿಷ್ಠರನ್ನು ನಾಚಿಕೆಪಡಿಸುವುದಕ್ಕಾಗಿ ಬಲಹೀನರನ್ನು ಆರಿಸಿಕೊಂಡಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ದೇವರು ಜ್ಞಾನಿಗಳನ್ನು ನಾಚಿಕೆಪಡಿಸುವುದಕ್ಕಾಗಿ ಈ ಲೋಕದ ಬುದ್ಧಿಹೀನರನ್ನು ಆರಿಸಿಕೊಂಡನು; ದೇವರು ಬಲಿಷ್ಠರನ್ನು ನಾಚಿಕೆಪಡಿಸುವುದಕ್ಕಾಗಿ ಈ ಲೋಕದ ಅಶಕ್ತರನ್ನು, ಬಲಹೀನರನ್ನು ಆರಿಸಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

27 ಜ್ಞಾನಿಗಳನ್ನು ನಾಚಿಕೆಗೀಡುಮಾಡಲು ದೇವರು ಲೋಕದ ದೃಷ್ಟಿಯಲ್ಲಿ ಮೂರ್ಖರನ್ನು ಆರಿಸಿಕೊಂಡರು; ಅಂತೆಯೇ ಬಲಿಷ್ಠರನ್ನು ಲಜ್ಜೆಗೀಡುಮಾಡಲು ಲೋಕದ ದೃಷ್ಟಿಯಲ್ಲಿ ಬಲಹೀನರನ್ನು ಆರಿಸಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ದೇವರು ಜ್ಞಾನಿಗಳನ್ನು ನಾಚಿಕೆಪಡಿಸುವದಕ್ಕಾಗಿ ಈ ಲೋಕದ ಬುದ್ಧಿಹೀನರನ್ನು ಆರಿಸಿಕೊಂಡಿದ್ದಾನೆ; ದೇವರು ಬಲಿಷ್ಠರನ್ನು ನಾಚಿಕೆಪಡಿಸುವದಕ್ಕಾಗಿ ಈ ಲೋಕದ ಬಲಹೀನರನ್ನು ಆರಿಸಿಕೊಂಡಿದ್ದಾನೆ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 ದೇವರು ಜ್ಞಾನಿಗಳನ್ನು ನಾಚಿಕೆಪಡಿಸುವಂತೆ, ಈ ಲೋಕದ ಬುದ್ಧಿಹೀನರನ್ನು ಆರಿಸಿಕೊಂಡಿದ್ದಾರೆ. ದೇವರು ಬಲಿಷ್ಠರನ್ನು ನಾಚಿಕೆಪಡಿಸುವಂತೆ ಈ ಲೋಕದ ಬಲಹೀನರನ್ನು ಆರಿಸಿಕೊಂಡಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

27 ಖರೆ ಶಾನ್ಯಾಕ್ನಿ ಲಜ್ಜಾ ಕರಿಸರ್ಕೆ ಕರುಸಾಟ್ನಿ ದೆವಾನ್ ಮುದ್ದಮ್ ಹ್ಯಾ ಜಗಾಕ್ ಪಿಶೆಪಾನ್ ಸರ್ಕೆ ದಿಸ್ತಲೆ ಎಚುನ್ ಘೆಟ್ಲ್ಯಾನ್ ಅನಿ ಘಟ್ಮುಟ್ ಮನುನ್ ಅಸಲ್ಲ್ಯಾಕ್ನಿ ಲಜ್ಜಾ ಕರಿಸರ್ಕೆ ಕರುಕ್ ಹ್ಯಾ ಜಗಾತ್ ಬಳ್ ನಸಲ್ಲೆ ತೆನಿ ಎಚುಕ್ ಕಾಡ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 1:27
27 ತಿಳಿವುಗಳ ಹೋಲಿಕೆ  

ನನ್ನ ಪ್ರಿಯ ಸಹೋದರ ಸಹೋದರಿಯರೇ, ಕೇಳಿರಿ! ಈ ಲೋಕದಲ್ಲಿ ಬಡವರು ನಂಬಿಕೆಯಲ್ಲಿ ಶ್ರೀಮಂತರಾಗಿರಲೆಂದು ದೇವರು ಅವರನ್ನು ಆರಿಸಿಕೊಂಡಿದ್ದಾನೆ. ತನ್ನನ್ನು ಪ್ರೀತಿಸುವ ಜನರಿಗೆ ದೇವರು ವಾಗ್ದಾನಮಾಡಿದ ರಾಜ್ಯವನ್ನು ಹೊಂದಿಕೊಳ್ಳಲು ಆತನು ಅವರನ್ನು ಆರಿಸಿಕೊಂಡಿದ್ದಾನೆ.


ಬಳಿಕ ಯೇಸು, “ಪರಲೋಕ ಭೂಲೋಕಗಳ ಪ್ರಭುವಾದ ತಂದೆಯೇ, ನಿನಗೆ ನಾನು ವಂದನೆ ಸಲ್ಲಿಸುತ್ತೇನೆ. ನಾನು ನಿನ್ನನ್ನು ಕೊಂಡಾಡುತ್ತೇನೆ. ಏಕೆಂದರೆ, ನೀನು ಈ ಸಂಗತಿಗಳನ್ನು ಜ್ಞಾನಿಗಳಿಗೂ ಸೂಕ್ಷ್ಮಬುದ್ದಿಯುಳ್ಳವರಿಗೂ ಮರೆಮಾಡಿರುವೆ. ಆದರೆ ಚಿಕ್ಕ ಮಕ್ಕಳಂತಿರುವ ಈ ಜನರಿಗೆ ನೀನು ಗೋಚರಪಡಿಸಿರುವೆ.


ಜ್ಞಾನಿಯು ಎಲ್ಲಿದ್ದಾನೆ? ವಿದ್ಯಾವಂತನು ಎಲ್ಲಿದ್ದಾನೆ? ಈ ಕಾಲದ ತತ್ವಜ್ಞಾನಿಯು ಎಲ್ಲಿದ್ದಾನೆ? ದೇವರು ಲೋಕದ ಜ್ಞಾನವನ್ನು ಮೂರ್ಖತನವನ್ನಾಗಿ ಮಾಡಿದ್ದಾನೆ.


ಚಿಕ್ಕಮಕ್ಕಳ ಬಾಯಿಗಳೂ ಕೂಸುಗಳ ಬಾಯಿಗಳೂ ನಿನ್ನನ್ನು ಸ್ತುತಿಸಿ ಕೊಂಡಾಡುತ್ತವೆ; ನಿನ್ನ ವೈರಿಗಳ ಬಾಯಿ ಮುಚ್ಚಿಸುವುದಕ್ಕಾಗಿಯೇ ನೀನು ಹೀಗೆ ಮಾಡಿರುವೆ.


ನಾನು ಅದ್ಭುತಕಾರ್ಯಗಳಿಂದ ಅವರನ್ನು ಆಶ್ಚರ್ಯಗೊಳಿಸುತ್ತಾ ಇರುವೆನು. ಅವರ ಜ್ಞಾನಿಗಳು ತಮ್ಮ ಜ್ಞಾನವನ್ನು ಕಳೆದುಕೊಳ್ಳುವರು. ಅವರು ಅರ್ಥಮಾಡಿಕೊಳ್ಳಲಾರರು.”


ಏಕೆಂದರೆ ನಾನೇ ನಿಮಗೆ ಜ್ಞಾನವನ್ನು ಕೊಡುತ್ತೇನೆ. ಆದ್ದರಿಂದ ನಿಮ್ಮ ವೈರಿಗಳಲ್ಲಿ ಯಾರೂ ನಿಮ್ಮ ಮಾತಿಗೆ ಪ್ರತ್ಯುತ್ತರವನ್ನು ಕೊಡಲು ಸಾಧ್ಯವಿಲ್ಲ.


ನಮಗೆ ಈ ನಿಕ್ಷೇಪವು ದೇವರಿಂದ ದೊರೆತಿದೆ. ನಾವಾದರೋ ನಿಕ್ಷೇಪವನ್ನು ತುಂಬಿ ಕೊಂಡಿರುವ ಕೇವಲ ಮಡಕೆಗಳಂತಿದ್ದೇವೆ. ಈ ಮಹಾಶಕ್ತಿಯು ಬಂದದ್ದು ದೇವರಿಂದಲೇ ಹೊರತು ನಮ್ಮಿಂದಲ್ಲವೆಂಬುದನ್ನು ಇದು ತೋರಿಸುತ್ತದೆ.


ಮಹಾಯಾಜಕರು ಮತ್ತು ಧರ್ಮೋಪದೇಶಕರು ಯೇಸುವಿಗೆ, “ಈ ಚಿಕ್ಕಮಕ್ಕಳು ಹೇಳುತ್ತಿರುವ ಮಾತುಗಳನ್ನು ನೀನು ಕೇಳಿಸಿಕೊಂಡೆಯೋ?” ಎಂದು ಕೇಳಿದರು. ಯೇಸು, “ಹೌದು, ‘ನೀನು ಚಿಕ್ಕಮಕ್ಕಳಿಗೂ ಎಳೆಯ ಕೂಸುಗಳಿಗೂ ಸ್ತೋತ್ರಮಾಡಲು ಕಲಿಸಿರುವೆ’ ಎಂದು ಪವಿತ್ರ ಗ್ರಂಥದಲ್ಲಿ ಹೇಳಿದೆ. ನೀವು ಪವಿತ್ರ ಗ್ರಂಥವನ್ನು ಓದಿಲ್ಲವೇ?” ಎಂದು ಉತ್ತರಕೊಟ್ಟನು.


ನನ್ನ ಪಟ್ಟಣದೊಳಗೆ ಬರೇ ದೀನದರಿದ್ರರೇ ವಾಸಮಾಡುವರು. ಅವರು ಯೆಹೋವನ ಹೆಸರಿನಲ್ಲಿ ಭರವಸೆ ಇಡುವವರಾಗಿರುವರು.


“ಪೌಲನ ಪತ್ರಗಳು ಬಲಯುತವಾಗಿವೆ ಮತ್ತು ಪ್ರಾಮುಖ್ಯವಾಗಿವೆ, ಆದರೆ ಅವನು ನಮ್ಮೊಂದಿಗಿರುವಾಗ ಬಲಹೀನನಾಗಿರುತ್ತಾನೆ, ಅವನ ಮಾತುಗಳು ನಿಸ್ಸಾರವಾಗಿರುತ್ತವೆ” ಎಂದು ಕೆಲವರು ಹೇಳುತ್ತಾರೆ.


ದೀನರನ್ನು ಯೆಹೋವನು ಸಂತೋಷಿಸುವಂತೆ ಮಾಡುವನು. ಬಡವರು ಇಸ್ರೇಲರ ಪರಿಶುದ್ಧನಲ್ಲಿ ಉಲ್ಲಾಸಿಸುವರು.


ಯೇಸು ಹೋಗುತ್ತಿರುವಾಗ, ಮತ್ತಾಯ ಎಂಬ ವ್ಯಕ್ತಿಯನ್ನು ಕಂಡನು. ಮತ್ತಾಯನು ಸುಂಕದಕಟ್ಟೆಯಲ್ಲಿ ಕುಳಿತಿದ್ದನು. ಯೇಸು ಅವನಿಗೆ, “ನನ್ನನ್ನು ಹಿಂಬಾಲಿಸು” ಅಂದನು. ಆಗ ಮತ್ತಾಯನು ಎದ್ದು ಯೇಸುವನ್ನು ಹಿಂಬಾಲಿಸಿದನು.


ಎಪಿಕೊರಿಯಾ ಮತ್ತು ಸ್ತೋಯಿಕ ತತ್ವಶಾಸ್ತ್ರಜ್ಞರಲ್ಲಿ ಕೆಲವರು ಅವನೊಂದಿಗೆ ವಾದಿಸಿದರು. ಅವರಲ್ಲಿ ಕೆಲವರು, “ಈ ಮನುಷ್ಯನಿಗೆ ತಾನು ಯಾವುದರ ಬಗ್ಗೆ ಮಾತಾಡುತ್ತಿದ್ದೇನೆ ಎಂಬುದೇ ನಿಜವಾಗಿಯೂ ತಿಳಿದಿಲ್ಲ. ಅವನು ಏನು ಹೇಳಲು ಪ್ರಯತ್ನಿಸುತ್ತಿದ್ದಾನೆ?” ಎಂದರು. ಯೇಸುವು ಸತ್ತವರೊಳಗಿಂದ ಜೀವಂತನಾಗಿ ಎದ್ದುಬಂದಿದ್ದಾನೆ ಎಂಬ ಸುವಾರ್ತೆಯನ್ನು ಪೌಲನು ಅವರಿಗೆ ಹೇಳುತ್ತಿದ್ದನು. ಆದ್ದರಿಂದ ಅವರು, “ಕೆಲವು ಬೇರೆ ದೇವರುಗಳ ಬಗ್ಗೆ ಅವನು ನಮಗೆ ಹೇಳುತ್ತಿರುವಂತೆ ತೋರುತ್ತಿದೆ” ಎಂದರು.


ಸ್ತೆಫನನ ಈ ಮಾತುಗಳನ್ನು ಕೇಳಿದ ಆ ಯೆಹೂದ್ಯನಾಯಕರು ಬಹಳ ಕೋಪಗೊಂಡರು. ಅವರು ರೋಷದಿಂದ ಸ್ತೆಫನನ ಮೇಲೆ ಹಲ್ಲು ಕಡಿದರು.


“ಆ ಯೆಹೂದ್ಯರಿಂದ ತಿರಸ್ಕೃತನಾದವನೇ ಈ ಮೋಶೆ. ಅವರು ಅವನಿಗೆ, ‘ನಿನ್ನನ್ನು ನಮ್ಮ ಅಧಿಪತಿ ಎಂದಾಗಲಿ ನ್ಯಾಯಾಧೀಶ ಎಂದಾಗಲಿ ನಿನಗೆ ಯಾರಾದರೂ ಹೇಳಿದರೇ?’ ಎಂದು ಪ್ರಶ್ನಿಸಿದ್ದರು. ಆದರೆ ದೇವರು ಅಧಿಪತಿಯನ್ನಾಗಿಯೂ ವಿಮೋಚಕನನ್ನಾಗಿಯೂ ಕಳುಹಿಸಿದ್ದು ಆ ಮೋಶೆಯನ್ನೇ. ದೇವರು ತನ್ನ ದೂತನ ಮೂಲಕವಾಗಿ ಮೋಶೆಯನ್ನು ಕಳುಹಿಸಿದನು. ಉರಿಯುವ ಪೊದೆಯಲ್ಲಿ ಮೋಶೆಯು ಕಂಡದ್ದು ಈ ದೇವದೂತನನ್ನೇ.


ಸುಳ್ಳುಪ್ರವಾದಿಗಳು ಸುಳ್ಳನ್ನೇ ಹೇಳುತ್ತಾರೆ. ಅವರು ಹೇಳಿದ್ದೆಲ್ಲವೂ ಸುಳ್ಳು ಎಂದು ಯೆಹೋವನು ತೋರಿಸಿಕೊಡುತ್ತಾನೆ. ಮಂತ್ರಗಾರರನ್ನು ದೇವರು ಮೂರ್ಖರನ್ನಾಗಿ ಮಾಡುತ್ತಾನೆ. ಆತನು ಜ್ಞಾನಿಗಳನ್ನು ಗಲಿಬಿಲಿಗೊಳಿಸುತ್ತಾನೆ. ಅವರು ತಮಗೆ ಎಲ್ಲವೂ ಗೊತ್ತಿದೆ ಎಂದು ತಿಳಿದುಕೊಳ್ಳುತ್ತಾರೆ. ಆದರೆ ದೇವರು ಅವರನ್ನು ಮೂಢರನ್ನಾಗಿ ಮಾಡುತ್ತಾನೆ.


ಆ “ಜ್ಞಾನಿಗಳು” ಯೆಹೋವನ ಉಪದೇಶವನ್ನು ಕೇಳಲು ಒಪ್ಪಲಿಲ್ಲ. ಆದ್ದರಿಂದ ಅವರು ನಿಜವಾದ ಜ್ಞಾನಿಗಳಲ್ಲವೇ ಅಲ್ಲ. ಆ “ಜ್ಞಾನಿಗಳು” ಸಿಕ್ಕಿಹಾಕಿಕೊಂಡಿದ್ದಾರೆ. ಅವರು ಗಾಬರಿಪಟ್ಟಿದ್ದಾರೆ ಮತ್ತು ನಾಚಿಕೆಪಟ್ಟಿದ್ದಾರೆ. ಅವರ ಜ್ಞಾನವು ಅಪ್ರಯೋಜಕವಾಗಿದೆ.


ಇದು ದೇವರ ಜ್ಞಾನದ ಸಂಕಲ್ಪವಾಗಿತ್ತು. ಲೋಕವು ತನ್ನ ಸ್ವಂತ ಜ್ಞಾನದ ಮೂಲಕವಾಗಿ ದೇವರನ್ನು ತಿಳಿದುಕೊಂಡಿರಲಿಲ್ಲ. ಆದ್ದರಿಂದ ಮೂರ್ಖತನದಂತೆ ತೋರುವ ಸಂದೇಶದ ಮೂಲಕ ನಂಬುವವರನ್ನು ರಕ್ಷಿಸುವುದು ದೇವರಿಗೆ ಒಳ್ಳೆಯದೆನಿಸಿತು.


ನಾವು ಹೊಂದಿಕೊಂಡದ್ದು ದೇವರಿಂದ ಬಂದ ಪವಿತ್ರಾತ್ಮನನ್ನೇ ಹೊರತು ಪ್ರಾಪಂಚಿಕವಾದ ಆತ್ಮವನ್ನಲ್ಲ. ದೇವರು ನಮಗೆ ಉಚಿತವಾಗಿ ಕೊಟ್ಟಿರುವಂಥವುಗಳನ್ನು ತಿಳಿದುಕೊಳ್ಳುವುದಕ್ಕಾಗಿ ನಾವು ಆತನನ್ನು ಹೊಂದಿಕೊಂಡೆವು.


ಅದಕ್ಕೆ ಕತ್ತೆಯು ಬಿಳಾಮನಿಗೆ, “ನೋಡು, ನಾನು ನಿನ್ನ ಸ್ವಂತ ಕತ್ತೆ. ಅನೇಕಾನೇಕ ವರ್ಷಗಳಿಂದ ನೀನು ನನ್ನ ಮೇಲೆ ಸವಾರಿ ಮಾಡುತ್ತಿರುವೆ. ನಾನು ಹಿಂದೆಂದೂ ಹೀಗೆ ಮಾಡಲಿಲ್ಲವೆಂದು ನಿನಗೆ ತಿಳಿದದೆ” ಎಂದು ಹೇಳಿತು. ಅದಕ್ಕೆ ಬಿಳಾಮನು, “ಅದು ನಿಜ” ಅಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು