1 ಕೊರಿಂಥದವರಿಗೆ 10:1 - ಪರಿಶುದ್ದ ಬೈಬಲ್1 ಸಹೋದರ ಸಹೋದರಿಯರೇ, ಮೋಶೆಯನ್ನು ಅನುಸರಿಸಿದ ನಮ್ಮ ಪಿತೃಗಳಿಗೆ ಏನು ಸಂಭವಿಸಿತೆಂಬುದನ್ನು ನೀವು ತಿಳಿದುಕೊಳ್ಳಬೇಕೆಂದು ನಾನು ಅಪೇಕ್ಷಿಸುತ್ತೇನೆ. ಅವರೆಲ್ಲರೂ ಮೋಡದ ಕೆಳಗಿದ್ದರು; ಸಮುದ್ರದ ಮೂಲಕ ನಡೆದುಕೊಂಡು ಹೋದರು; ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಸಹೋದರರೇ, ನಾನು ನಿಮಗೆ ತಿಳಿಸಲು ಅಪೇಕ್ಷಿಸುವ ಸಂಗತಿ ಏನೆಂದರೆ, ನಮ್ಮ ಪೂರ್ವಿಕರೆಲ್ಲರೂ ಮೇಘದ ಅಡಿಯಲ್ಲಿದ್ದು ಸಮುದ್ರವನ್ನು ದಾಟಿಹೋದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ಪ್ರಿಯ ಸಹೋದರರೇ, ನಮ್ಮ ಪೂರ್ವಜರಿಗೆ ಸಂಭವಿಸಿದವುಗಳತ್ತ ನಿಮ್ಮ ಗಮನವನ್ನು ಸೆಳೆಯಬೇಕೆಂದಿದ್ದೇನೆ. ಅವರೆಲ್ಲರೂ ಮೋಡದ ನೆರಳಿನಲ್ಲಿಯೇ ನಡೆದರು. ಎಲ್ಲರೂ ಸಮುದ್ರವನ್ನು ಸುರಕ್ಷಿತವಾಗಿ ದಾಟಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ಸಹೋದರರೇ, ಮುಂದಿನ ಸಂಗತಿಯಲ್ಲಿ ನೀವು ಲಕ್ಷ್ಯವಿಡಬೇಕೆಂದು ನಾನು ಅಪೇಕ್ಷಿಸುತ್ತೇನೆ. ಅದೇನಂದರೆ, ನಮ್ಮ ಪಿತೃಗಳೆಲ್ಲರೂ ಮೇಘದ ನೆರಳಿನಲ್ಲಿದ್ದರು; ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ಪ್ರಿಯರೇ, ನಮ್ಮ ಪಿತೃಗಳೆಲ್ಲರೂ ಮೇಘದ ನೆರಳಿನಲ್ಲಿದ್ದರು, ಅವರೆಲ್ಲರೂ ಸಮುದ್ರವನ್ನು ಹಾದುಹೋದರು ಎಂಬ ವಿಷಯದಲ್ಲಿ ನೀವು ಅಜ್ಞಾನಿಗಳಾಗಿರಬಾರದೆಂದು ಅಪೇಕ್ಷಿಸುತ್ತೇನೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್1 ಮಾಜ್ಯಾ ಭಾವಾನು ಅನಿ ಭೆನಿಯಾನು, ಮೊಯ್ಜೆಚ್ಯಾ ಫಾಟ್ನಾ ಗೆಲ್ಲ್ಯಾ ಅಮ್ಚ್ಯಾ ವಾಡ್ ವಡ್ಲಾಕ್ನಿ ಕಾಯ್ ಘಡ್ಲೆ ಮನುನ್ ತುಮಿ ಇಸ್ರುಚೆ ನ್ಹಯ್, ತೆನಿ ಸಗ್ಳೆ ಜಾನಾ ಮೊಡಾಚ್ಯಾ ಸಾವ್ಳಿಕ್ ಹೊತ್ತೆ ಅನಿ ಸಮುಂದರಾತ್ನಾ ಸಮೆತ್ ಉತ್ರುನ್ ಗೆಲ್ಯಾನಿ. ಅಧ್ಯಾಯವನ್ನು ನೋಡಿ |
ದೇವರು ತನ್ನನ್ನು ಸ್ವೀಕರಿಸಿಕೊಂಡಿದ್ದಾನೆಂಬುದನ್ನು ತೋರಿಸುವುದಕ್ಕಾಗಿ ಅಬ್ರಹಾಮನು ಅನಂತರ ಸುನ್ನತಿ ಮಾಡಿಸಿಕೊಂಡನು. ಅಬ್ರಹಾಮನು ಸುನ್ನತಿ ಮಾಡಿಸಿಕೊಳ್ಳುವುದಕ್ಕಿಂತ ಮೊದಲೇ ನಂಬಿಕೆಯ ಮೂಲಕ ನೀತಿವಂತನಾಗಿದ್ದನು ಎಂಬುದಕ್ಕೆ ಅವನ ಸುನ್ನತಿಯೇ ಆಧಾರವಾಗಿದೆ. ಆದಕಾರಣ ನಂಬುವ ಎಲ್ಲಾ ಜನರಿಗೆ, ಅವರು ಸುನ್ನತಿ ಮಾಡಿಸಿಕೊಂಡಿಲ್ಲದಿದ್ದರೂ ಅಬ್ರಹಾಮನು ತಂದೆಯಾಗಿದ್ದಾನೆ. ಏಕೆಂದರೆ ಅವರು ತಮ್ಮ ನಂಬಿಕೆಯ ಮೂಲಕ ನೀತಿವಂತರೆಂದು ಎಣಿಸಲ್ಪಡುವರು.