1 ಕೊರಿಂಥದವರಿಗೆ 10:13 - ಪರಿಶುದ್ದ ಬೈಬಲ್13 ಎಲ್ಲಾ ಜನರಿಗೆ ಬರುವಂತೆ ನಿಮಗೂ ಶೋಧನೆಗಳು ಬರುತ್ತವೆ. ಆದರೆ ದೇವರು ನಂಬಿಗಸ್ತನಾಗಿದ್ದಾನೆ. ನೀವು ಸಹಿಸಿಕೊಳ್ಳಲಾರದ ಶೋಧನೆಯನ್ನು ಆತನು ನಿಮಗೆ ಬರಗೊಡಿಸುವುದಿಲ್ಲ. ಶೋಧನೆಗಳು ಬಂದಾಗ, ಅವುಗಳಿಂದ ಪಾರಾಗುವ ಮಾರ್ಗವನ್ನು ಸಹ ದೇವರು ನಿಮಗೆ ಒದಗಿಸುತ್ತಾನೆ. ಆಗ ನೀವು ಅದನ್ನು ಸಹಿಸಿಕೊಳ್ಳುವುದಕ್ಕೆ ಶಕ್ತರಾಗುವಿರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಮನುಷ್ಯರಿಗೆ ಸಾಧಾರಣವಾಗಿ ಬರುವ ಶೋಧನೆಯೇ ಹೊರತು ಬೇರೆ ಯಾವುದೂ ನಿಮಗೆ ಸಂಭವಿಸಲಿಲ್ಲವಲ್ಲ. ದೇವರು ನಂಬಿಗಸ್ತನು. ನಿಮ್ಮ ಶಕ್ತಿಗೆ ಮೀರುವ ಶೋಧನೆಯನ್ನು ನಿಮಗೆ ಬರಗೊಡಿಸದೆ ನೀವು ಅದನ್ನು ಸಹಿಸುವುದಕ್ಕೆ ಶಕ್ತರಾಗುವಂತೆ ಶೋಧನೆಯಾಗುತ್ತಲೇ ತಪ್ಪಿಸಿಕೊಳ್ಳುವ ಮಾರ್ಗವನ್ನು ಸಿದ್ಧಮಾಡುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ಮಾನವರಿಂದ ಜಯಿಸಲಾಗದ ಶೋಧನೆಗಳೇನೂ ನಿಮಗೆ ಬಂದಿಲ್ಲ. ದೇವರು ಕೊಟ್ಟಮಾತಿಗೆ ತಪ್ಪಲಾರರು. ಗೆಲ್ಲಲಾಗದ ಶೋಧನೆಗಳಿಗೆ ನಿಮ್ಮನ್ನೆಂದೂ ಗುರಿಪಡಿಸಲಾರರು. ಶೋಧನೆಗಳು ಬಂದಾಗ ಅವುಗಳನ್ನು ಸಹಿಸಿಕೊಳ್ಳುವ ಶಕ್ತಿಯನ್ನೂ ತಪ್ಪಿಸಿಕೊಳ್ಳುವ ಮಾರ್ಗವನ್ನೂ ಅವರೇ ಒದಗಿಸುತ್ತಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ಮನುಷ್ಯರು ಸಹಿಸಬಹುದಾದ ಶೋಧನೆಯೇ ಹೊರತು ಬೇರೆ ಯಾವದೂ ನಿಮಗೆ ಸಂಭವಿಸಲಿಲ್ಲ. ದೇವರು ನಂಬಿಗಸ್ಥನು; ನಿಮ್ಮ ಶಕ್ತಿಯನ್ನು ಮೀರುವ ಶೋಧನೆಯನ್ನು ನಿಮಗೆ ಬರಗೊಡಿಸದೆ ನೀವು ಅದನ್ನು ಸಹಿಸುವದಕ್ಕೆ ಶಕ್ತರಾಗುವಂತೆ ಶೋಧನೆಯಾಗುತ್ತಲೇ ತಪ್ಪಿಸಿಕೊಳ್ಳುವ ಮಾರ್ಗವನ್ನು ಸಿದ್ಧಮಾಡುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ಮನುಷ್ಯರಿಗಾಗುವ ಶೋಧನೆಯೇ ಹೊರತು, ಬೇರೆ ಯಾವುದೂ ನಿಮಗೆ ಸಂಭವಿಸಲಿಲ್ಲ. ಆದರೆ ದೇವರು ನಂಬಿಗಸ್ತರು. ನಿಮ್ಮ ಶಕ್ತಿಗೆ ಮೀರಿದ ಶೋಧನೆಗಳನ್ನು ಅವರು ನಿಮ್ಮ ಮೇಲೆ ಬರುವಂತೆ ಮಾಡುವುದಿಲ್ಲ. ಆದರೆ ನಿಮಗೆ ಶೋಧನೆಗಳು ಬಂದಾಗ, ಅವುಗಳನ್ನು ಜಯಿಸುವುದಕ್ಕೆ ಶಕ್ತರಾಗುವಂತೆ, ಅವುಗಳಿಂದ ತಪ್ಪಿಸಿಕೊಳ್ಳುವ ಮಾರ್ಗವನ್ನು ಮಾಡುವರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್13 ಮಾನ್ಸಾಚ್ಯಾನ್ ಜಿಕುಕ್ ಹೊಯ್ನಾ ತಸ್ಲಿ ಪರಿಕ್ಷಾ ಅಮ್ಕಾ ಅಜುನ್ ಪತರ್ ಯೆವ್ಕ್ ನಾ. ದೆವ್ ವಿಶ್ವಾಸಿ, ತೊ ಅಮ್ಕಾ ಆಟ್ಪಿನಾ ತಸ್ಲಿ ಪರಿಕ್ಷಾ ಯೆವ್ಕ್ ಸೊಡಿ ನಾ; ಪರಿಕ್ಷಾ ಯೆಲ್ಲ್ಯಾ ವೆಳಾರ್ ತೆಚೆ ವೈರ್ ಜಿಕುಕ್ ಉಪಾಯ್ ಅನಿ ಘಟ್ ರ್‍ಹಾವ್ಕ್ ತಾಕತ್ ದಿತಾ. ಅಧ್ಯಾಯವನ್ನು ನೋಡಿ |
“ಆದ್ದರಿಂದ ನಿಮ್ಮ ದೇವರಾದ ಯೆಹೋವನೊಬ್ಬನೇ ನಿಜವಾದ ದೇವರೆಂಬುದು ನಿಮಗೆ ತಿಳಿದಿರಲಿ. ನೀವು ಆತನ ಮೇಲೆ ಭರವಸವಿಡಬಹುದು. ಆತನು ತಾನು ಮಾಡಿದ ಒಡಂಬಡಿಕೆಯನ್ನು ನೆರವೇರಿಸುವಾತನಾಗಿದ್ದಾನೆ. ಆತನನ್ನು ಪ್ರೀತಿಸಿ ಆತನ ಕಟ್ಟಳೆಗಳಿಗೆ ವಿಧೇಯರಾಗುವವರನ್ನೆಲ್ಲಾ ಆತನು ಪ್ರೀತಿಸುತ್ತಾನೆ; ಅವರಿಗೆ ಕರುಣೆ ತೋರುತ್ತಾನೆ. ಈ ಪ್ರೀತಿ, ಕರುಣೆಗಳು ಸಾವಿರ ತಲೆಮಾರುಗಳವರೆಗೂ ಮುಂದುವರಿಯುವವು.
ಇಸ್ರೇಲಿನ ಪರಿಶುದ್ಧನೂ ವಿಮೋಚಕನೂ ಆದ ಯೆಹೋವನು ಇಸ್ರೇಲನ್ನು ಬಿಡಿಸುವನು. ಆತನು ಹೇಳುವುದೇನೆಂದರೆ, “ನನ್ನ ಸೇವಕನು ದೀನನಾಗಿದ್ದಾನೆ. ಆತನು ಅರಸರನ್ನು ಸೇವಿಸುವನು. ಆದರೆ ಜನರು ಆತನನ್ನು ದ್ವೇಷಿಸುವರು. ಆದರೆ ರಾಜರುಗಳು ಅವನನ್ನು ನೋಡಿ ಎದ್ದುನಿಂತು ಗೌರವಿಸುವರು. ಶ್ರೇಷ್ಠ ನಾಯಕರು ಆತನ ಮುಂದೆ ಅಡ್ಡಬೀಳುವರು.” ಇದು ಇಸ್ರೇಲರ ಪರಿಶುದ್ಧನಾದ ಯೆಹೋವನ ಚಿತ್ತಕ್ಕನುಸಾರವಾಗಿದೆ. ಆತನು ಭರವಸೆಗೆ ಯೋಗ್ಯನಾಗಿದ್ದಾನೆ. ಆತನೇ ನಿನ್ನನ್ನು ಆರಿಸಿಕೊಂಡನು.