1 ಕೊರಿಂಥದವರಿಗೆ 10:14 - ಪರಿಶುದ್ದ ಬೈಬಲ್14 ಆದ್ದರಿಂದ, ನನ್ನ ಪ್ರಿಯ ಸ್ನೇಹಿತರೇ, ವಿಗ್ರಹಗಳ ಪೂಜೆಯ ಬಗ್ಗೆ ಯೋಚಿಸಲೂಬೇಡಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಆದ್ದರಿಂದ ಪ್ರಿಯರೇ, ವಿಗ್ರಹಾರಾಧನೆಯನ್ನು ಬಿಟ್ಟು ದೂರವಾಗಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ಆದ್ದರಿಂದ ಪ್ರಿಯರೇ, ವಿಗ್ರಹಾರಾಧನೆಯನ್ನು ತೊರೆದುಬಿಡಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ಆದದರಿಂದ ಪ್ರಿಯ ಸಹೋದರರೇ, ವಿಗ್ರಹಾರಾಧನೆಯ ಗೊಡವೆಯನ್ನು ಸಂಪೂರ್ಣವಾಗಿ ತೊರೆದುಬಿಡಿರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ಆದ್ದರಿಂದ ನನ್ನ ಪ್ರಿಯ ಸ್ನೇಹಿತರೇ, ವಿಗ್ರಹಾರಾಧನೆಯನ್ನು ಬಿಟ್ಟು ಓಡಿಹೋಗಿರಿ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್14 ತಸೆ ಮನುನ್ ಮಾಜ್ಯಾ ಪ್ರೆಮಾಚ್ಯಾ ಭಾವಾನು ಅನಿ ಭೆನಿಯಾನು, ಮುರ್ತಿ ಫುಜ್ಯಾ ಧುರ್ ಕರಾ. ಅಧ್ಯಾಯವನ್ನು ನೋಡಿ |
“ಆದರೆ ನಿನ್ನ ವಿರುದ್ಧವಾಗಿ ಹೇಳಬೇಕಾದ ಕೆಲವು ಸಂಗತಿಗಳಿವೆ. ನಿನ್ನ ಸಭೆಯಲ್ಲಿ ಬಿಳಾಮನ ದುರ್ಬೋಧನೆಗಳನ್ನು ಅನುಸರಿಸುವ ಜನರಿದ್ದಾರೆ. ಇಸ್ರೇಲಿನ ಜನರನ್ನು ಹೇಗೆ ಪಾಪಕ್ಕೆ ಒಳಗಾಗುವಂತೆ ಮಾಡಬೇಕೆಂಬುದನ್ನು ಬಿಳಾಮನು ಬಾಲಾಕನಿಗೆ ದುರ್ಬೋಧನೆ ಮಾಡಿದನು. ಆದ್ದರಿಂದ ಇಸ್ರೇಲರು ವಿಗ್ರಹಗಳಿಗೆ ಅರ್ಪಿತವಾದ ಆಹಾರವನ್ನು ತಿನ್ನುವುದರ ಮೂಲಕವಾಗಿಯೂ ಲೈಂಗಿಕ ಪಾಪಗಳನ್ನು ಮಾಡುವುದರ ಮೂಲಕವಾಗಿಯೂ ಪಾಪ ಮಾಡಿದರು.