Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 10:15 - ಪರಿಶುದ್ದ ಬೈಬಲ್‌

15 ನೀವು ಬುದ್ಧಿವಂತರೆಂದು ನಾನು ನಿಮ್ಮೊಂದಿಗೆ ಮಾತಾಡುತ್ತಿದ್ದೇನೆ. ನಾನು ಹೇಳುವುದನ್ನು ಸ್ವತಃ ನೀವೇ ವಿಚಾರಣೆ ಮಾಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ನೀವು ವಿವೇಕಿಗಳೆಂದು ಇದನ್ನು ಹೇಳುತ್ತೇನೆ. ನಾನು ಹೇಳುವುದನ್ನು ನೀವೇ ಯೋಚಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ನೀವು ಅರಿತವರೆಂದು ತಿಳಿದೇ ಇದನ್ನು ಹೇಳುತ್ತಿದ್ಧೇನೆ. ನನ್ನ ಮಾತುಗಳನ್ನು ನೀವೇ ಪರಿಶೀಲಿಸಿನೋಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ನೀವು ವಿವೇಕಿಗಳೆಂದು ಇದನ್ನು ಹೇಳುತ್ತೇನೆ; ನಾನು ಹೇಳುವದನ್ನು ನೀವೇ ಯೋಚಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ವಿವೇಕಿಗಳಿಗೆ ಹೇಳಿದಂತೆ, ನಾನು ಹೇಳುವುದನ್ನು ನೀವು ವಿವೇಚಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

15 ಬರ್‍ಯಾ ಸಮ್ಜುನ್ ಘೆತಲ್ಯಾ ಮಾನ್ಸಾಕ್ಡೆ ಬೊಲಲ್ಲ್ಯಾ ಸಾರ್ಕೆ ಮಿಯಾ ತುಮ್ಚಾಕ್ಡೆ ಬೊಲ್ತಾ, ಮಿಯಾ ಸಾಂಗ್ತಾ ತೆ ತುಮಿಚ್ ಟಕ್ಲ್ಯಾತ್ ಘೆವ್ನ್ ಬಗಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 10:15
9 ತಿಳಿವುಗಳ ಹೋಲಿಕೆ  

ಎಲ್ಲವನ್ನೂ ಪರಿಶೋಧಿಸಿ, ಒಳ್ಳೆಯದನ್ನು ಭದ್ರವಾಗಿ ಹಿಡಿದುಕೊಳ್ಳಿರಿ.


ವಿಗ್ರಹಗಳಿಗೆ ಯಜ್ಞ ಮಾಡಿದ ಪಶುವಿನ ಮಾಂಸದ ಬಗ್ಗೆ ಈಗ ನಾನು ಬರೆಯುತ್ತೇನೆ. “ನಮಗೆಲ್ಲರಿಗೂ ಜ್ಞಾನವಿದೆ” ಎಂಬುದು ನಮಗೆ ಗೊತ್ತಿದೆ. “ಜ್ಞಾನವು” ನಮ್ಮನ್ನು ಅಹಂಕಾರದಿಂದ ತುಂಬಿಸುತ್ತದೆ. ಆದರೆ ಪ್ರೀತಿಯು ಬೇರೆಯವರಲ್ಲಿ ಭಕ್ತಿವೃದ್ಧಿಯನ್ನು ಮಾಡುತ್ತದೆ.


ಸಹೋದರ ಸಹೋದರಿಯರೇ, ಮಕ್ಕಳಂತೆ ಆಲೋಚಿಸಬೇಡಿ. ಕೆಟ್ಟ ವಿಷಯಗಳಲ್ಲಿ ಎಳೆಗೂಸುಗಳಂತಿರಿ. ಆದರೆ ನಿಮ್ಮ ಆಲೋಚನೆಗಳಲ್ಲಿ ಪ್ರಾಯಸ್ಥರಂತಿರಿ.


ಹೀಗಿರಲಾಗಿ, ಸ್ತ್ರೀಯು ತನ್ನ ತಲೆಗೆ ಮುಸುಕು ಹಾಕಿಕೊಳ್ಳದೆ ದೇವರಿಗೆ ಪ್ರಾರ್ಥಿಸುವುದು ಸರಿಯೋ? ನೀವೇ ತೀರ್ಮಾನಿಸಿರಿ.


ನಿಮ್ಮನ್ನು ನಾಚಿಕೆಪಡಿಸಲು ಹೀಗೆ ಹೇಳುತ್ತಿದ್ದೇನೆ. ವಿಶ್ವಾಸಿಗಳಾಗಿರುವ ಇಬ್ಬರು ಸಹೋದರರ ನಡುವೆ ಉಂಟಾಗಿರುವ ವ್ಯಾಜ್ಯಕ್ಕೆ ತೀರ್ಪು ನೀಡಬಲ್ಲ ಜ್ಞಾನಿಯೊಬ್ಬನು ನಿಮ್ಮ ಸಭೆಯಲ್ಲಿ ಇಲ್ಲವೇ?


ನಾವು ಕ್ರಿಸ್ತನಿಗೋಸ್ಕರ ಮೂರ್ಖರಾಗಿದ್ದೇವೆ. ಆದರೆ ನೀವು ನಿಮ್ಮನ್ನು ಕ್ರಿಸ್ತನಲ್ಲಿ ಬಹು ಜ್ಞಾನಿಗಳೆಂದು ಭಾವಿಸಿಕೊಂಡಿದ್ದೀರಿ. ನಾವು ಬಲಹೀನರಾಗಿದ್ದೇವೆ, ಆದರೆ ನೀವು ನಿಮ್ಮನ್ನು ಬಲಿಷ್ಠರೆಂದು ಭಾವಿಸಿಕೊಂಡಿದ್ದೀರಿ. ಜನರು ನಿಮಗೆ ಗೌರವವನ್ನು ಕೊಡುತ್ತಾರೆ; ನಮಗಾದರೋ ಅವರು ಗೌರವವನ್ನು ಕೊಡುವುದಿಲ್ಲ.


ಆದ್ದರಿಂದ, ನನ್ನ ಪ್ರಿಯ ಸ್ನೇಹಿತರೇ, ವಿಗ್ರಹಗಳ ಪೂಜೆಯ ಬಗ್ಗೆ ಯೋಚಿಸಲೂಬೇಡಿ.


ನಾವು ದ್ರಾಕ್ಷಾರಸದ ಪಾತ್ರೆಗಾಗಿ ದೇವರಿಗೆ ಸ್ತೋತ್ರ ಸಲ್ಲಿಸಿ ಕುಡಿಯುವಾಗ ಕ್ರಿಸ್ತನ ರಕ್ತದಲ್ಲಿ ಪಾಲುಗಾರರಾಗಲಿಲ್ಲವೇ? ನಾವು ರೊಟ್ಟಿಯನ್ನು ಮುರಿದು ತಿನ್ನುವಾಗ ಕ್ರಿಸ್ತನ ದೇಹದಲ್ಲಿ ಪಾಲುಗಾರರಾಗಲಿಲ್ಲವೇ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು