20 ನಾನು ಹೇಳುತ್ತಿರುವುದೇನೆಂದರೆ, ಜನರು ವಿಗ್ರಹಗಳಿಗೆ ಅರ್ಪಿಸಿದ ಪದಾರ್ಥಗಳು ದೆವ್ವಗಳಿಗೆ ಅರ್ಪಿತವಾದುವುಗಳೇ ಹೊರತು ದೇವರಿಗಲ್ಲ. ನೀವು ದೆವ್ವಗಳೊಂದಿಗೆ ಯಾವ ವಿಷಯದಲ್ಲಿಯೂ ಪಾಲು ಹೊಂದಬಾರದೆಂಬುದು ನನ್ನ ಆಸೆ.
20 ಆದರೆ ಅನ್ಯಜನರು ತಾವು ಅರ್ಪಿಸುವ ಬಲಿಗಳನ್ನು ದೇವರಿಗಲ್ಲ, ದೆವ್ವಗಳಿಗೆ ಅರ್ಪಿಸುತ್ತಾರೆಂಬುದು ನನ್ನ ಅಭಿಪ್ರಾಯವು. ನೀವು ದೆವ್ವಗಳೊಡನೆ ಪಾಲುಗಾರರಾಗಿರಬೇಕೆಂಬುದು ನನ್ನ ಇಷ್ಟವಲ್ಲ.
20 ಯಾವುದೂ ಅಲ್ಲ. ನಾನು ಹೇಳುವುದೇನೆಂದರೆ : ಅನ್ಯಜನರು ಬಲಿಯನ್ನು ದೆವ್ವಗಳಿಗೆ ಅರ್ಪಿಸುತ್ತಾರೆ ಹೊರತು ದೇವರಿಗಲ್ಲ. ಹೀಗೆ ನೀವು ದೆವ್ವಗಳೊಂದಿಗೆ ಭಾಗಿಯಾಗುವುದನ್ನು ನಾನೆಂದಿಗೂ ಇಷ್ಟಪಡುವುದಿಲ್ಲ.
ಈ ಉಪದ್ರವಗಳಿಂದ ಸಾಯದೆ ಉಳಿದ ಜನರು ತಮ್ಮ ಪಾಪಗಳಿಗಾಗಿ ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಳ್ಳಲಿಲ್ಲ. ತಮ್ಮ ಸ್ವಂತ ಕೈಗಳಿಂದ ನಿರ್ಮಿಸಿದ ವಿಗ್ರಹಗಳನ್ನು ತೊರೆದುಬಿಡಲಿಲ್ಲ. ಅವರು ದೆವ್ವಗಳ ಆರಾಧನೆಯನ್ನು ನಿಲ್ಲಿಸಲಿಲ್ಲ. ಚಿನ್ನ, ಬೆಳ್ಳಿ, ತಾಮ್ರ, ಕಲ್ಲು ಮತ್ತು ಮರಗಳಿಂದ ಮಾಡಲ್ಪಟ್ಟು, ನಡೆಯಲಾರದ, ನೋಡಲಾರದ ಮತ್ತು ಕೇಳಲಾರದ ವಿಗ್ರಹಗಳನ್ನು ಪೂಜಿಸುವುದನ್ನು ಅವರು ನಿಲ್ಲಿಸಲಿಲ್ಲ.
ಈ ಲೋಕದ ಅಧಿಪತಿಯು (ಸೈತಾನನು) ನಂಬದವರ ಮನಸ್ಸುಗಳನ್ನು ಕುರುಡುಗೊಳಿಸಿದ್ದಾನೆ. ಕ್ರಿಸ್ತನ ಮಹಿಮೆಯ ವಿಷಯವಾದ ಸುವಾರ್ತೆಯ ಬೆಳಕನ್ನು (ಸತ್ಯವನ್ನು) ಅವರು ಕಾಣಲಾರರು. ಕ್ರಿಸ್ತನೊಬ್ಬನೇ ದೇವರಿಗೆ ಪ್ರತಿರೂಪವಾಗಿದ್ದಾನೆ.
“ಆದರೆ ನಿನ್ನ ವಿರುದ್ಧವಾಗಿ ಹೇಳಬೇಕಾದ ಕೆಲವು ಸಂಗತಿಗಳಿವೆ. ನಿನ್ನ ಸಭೆಯಲ್ಲಿ ಬಿಳಾಮನ ದುರ್ಬೋಧನೆಗಳನ್ನು ಅನುಸರಿಸುವ ಜನರಿದ್ದಾರೆ. ಇಸ್ರೇಲಿನ ಜನರನ್ನು ಹೇಗೆ ಪಾಪಕ್ಕೆ ಒಳಗಾಗುವಂತೆ ಮಾಡಬೇಕೆಂಬುದನ್ನು ಬಿಳಾಮನು ಬಾಲಾಕನಿಗೆ ದುರ್ಬೋಧನೆ ಮಾಡಿದನು. ಆದ್ದರಿಂದ ಇಸ್ರೇಲರು ವಿಗ್ರಹಗಳಿಗೆ ಅರ್ಪಿತವಾದ ಆಹಾರವನ್ನು ತಿನ್ನುವುದರ ಮೂಲಕವಾಗಿಯೂ ಲೈಂಗಿಕ ಪಾಪಗಳನ್ನು ಮಾಡುವುದರ ಮೂಲಕವಾಗಿಯೂ ಪಾಪ ಮಾಡಿದರು.
ಆದರೆ ನಿನ್ನ ವಿರುದ್ಧವಾಗಿ ಇವುಗಳನ್ನು ಹೇಳಬೇಕಾಗಿದೆ. ಯೆಜೆಬೇಲ್ ಎಂಬ ಸ್ತ್ರೀಯು ತನ್ನ ಇಷ್ಟದಂತೆ ಮಾಡಲು ಅವಕಾಶಕೊಟ್ಟಿರುವೆ. ಆಕೆಯು ತನ್ನನ್ನು ಪ್ರವಾದಿನಿಯೆಂದು ಹೇಳಿಕೊಂಡು ತನ್ನ ಬೋಧನೆಗಳಿಂದ ನನ್ನ ಸೇವಕರನ್ನು ನನ್ನಿಂದ ದೂರ ಸೆಳೆಯುತ್ತಿದ್ದಾಳೆ. ಲೈಂಗಿಕ ಪಾಪಗಳನ್ನು ಮಾಡುವಂತೆಯೂ ವಿಗ್ರಹಗಳಿಗೆ ಅರ್ಪಿತವಾದ ಆಹಾರವನ್ನು ತಿನ್ನುವಂತೆಯೂ ಆಕೆಯು ನನ್ನ ಜನರನ್ನು ಪ್ರೇರೇಪಿಸುತ್ತಿದ್ದಾಳೆ.