1 ಕೊರಿಂಥದವರಿಗೆ 10:21 - ಪರಿಶುದ್ದ ಬೈಬಲ್21 ನೀವು ಪ್ರಭುವಿನ ಪಾತ್ರೆ ಮತ್ತು ದೆವ್ವಗಳ ಪಾತ್ರೆ ಇವುಗಳೊಳಗೆ ಒಂದರಲ್ಲಿಯೇ ಹೊರತು ಎರಡರಲ್ಲಿಯೂ ಕುಡಿಯಲಾಗದು. ಪ್ರಭುವಿನ ಪಂಕ್ತಿ ಮತ್ತು ದೆವ್ವಗಳ ಪಂಕ್ತಿ ಇವುಗಳೊಳಗೆ ಒಂದರಲ್ಲಿಯೇ ಹೊರತು ಎರಡರಲ್ಲಿಯೂ ಊಟ ಮಾಡಲಾರಿರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ನೀವು ಕರ್ತನ ಪಾನಪಾತ್ರೆಯಲ್ಲಿಯೂ ಹಾಗೂ ದೆವ್ವಗಳ ಪಾನಪಾತ್ರೆಯಲ್ಲಿಯೂ ಕುಡಿಯಲಾರಿರಿ. ಕರ್ತನ ಪಂಕ್ತಿಯಲ್ಲಿಯೂ ಮತ್ತು ದೆವ್ವಗಳ ಪಂಕ್ತಿಯಲ್ಲಿಯೂ ಊಟಮಾಡಲಾರಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)21 ನೀವು ಪ್ರಭುವಿನ ಪಾತ್ರೆಯಿಂದ ಹಾಗೂ ದೆವ್ವಗಳ ಪಾತ್ರೆಯಿಂದ ಕುಡಿಯಲಾಗದು. ಪ್ರಭುವಿನ ಪಂಕ್ತಿಯಲ್ಲೂ ಅಂತೆಯೇ ದೆವ್ವಗಳ ಪಂಕ್ತಿಯಲ್ಲೂ ಊಟಮಾಡಲಾಗದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)21 ನೀವು ಕರ್ತನ ಪಾತ್ರೆ ಮತ್ತು ದೆವ್ವಗಳ ಪಾತ್ರೆ ಇವುಗಳೊಳಗೆ ಒಂದರಲ್ಲಿಯೇ ಹೊರತು ಎರಡರಲ್ಲಿಯೂ ಕುಡಿಯಲಾರಿರಿ; ಕರ್ತನ ಪಂಕ್ತಿ ಮತ್ತು ದೆವ್ವಗಳ ಪಂಕ್ತಿ ಇವುಗಳೊಳಗೆ ಒಂದರಲ್ಲಿಯೇ ಹೊರತು ಎರಡರಲ್ಲಿಯೂ ಊಟಮಾಡಲಾರಿರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ21 ನೀವು ಕರ್ತದೇವರ ಪಾತ್ರೆಯಲ್ಲಿಯೂ ದೆವ್ವಗಳ ಪಾತ್ರೆಯಲ್ಲಿಯೂ ಕುಡಿಯಲಾರಿರಿ. ನೀವು ಕರ್ತದೇವರ ಪಂಕ್ತಿಯಲ್ಲಿಯೂ ದೆವ್ವಗಳ ಪಂಕ್ತಿಯಲ್ಲಿಯೂ ಭಾಗಿಗಳಾಗಿರಲಾರಿರಿ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್21 ಧನಿಯಾಚ್ಯಾ ಆಯ್ದಾನಾತ್ಲೆ ಅನಿ ವಾಂಗ್ಡಾಚ್ ಮ್ಹಾರ್ವ್ವಾಚ್ಯಾಬಿ ಆಯ್ದಾನಾತ್ಲೆ ತುಮಿ ಫಿವ್ಕ್ ಹೊಯ್ನಾ, ಧನಿಯಾಚ್ಯಾಬಿ ಪಂಕ್ತಿತ್ ಅನಿ ಮ್ಹಾರ್ವಾಚ್ಯಾಬಿ ಪಂಕ್ತಿತ್ ಬಸುನ್ ತುಮ್ಕಾ ಜೆವಾನ್ ಕರುಕ್ ಹೊಯ್ನಾ. ಅಧ್ಯಾಯವನ್ನು ನೋಡಿ |
ನೀವು ವಿಗ್ರಹಗಳನ್ನು ಮಾಡಿ ನನ್ನನ್ನು ಏಕೆ ಸಿಟ್ಟಿಗೆಬ್ಬಿಸುವಿರಿ? ಈಗ ನೀವು ಈಜಿಪ್ಟಿನಲ್ಲಿ ವಾಸಮಾಡುತ್ತಿರುವಿರಿ. ಈಗ ಈಜಿಪ್ಟಿನ ಸುಳ್ಳುದೇವರುಗಳಿಗೆ ನೈವೇದ್ಯವನ್ನು ಅರ್ಪಿಸಿ ನನಗೆ ಕೋಪ ಬರುವಂತೆ ಮಾಡುತ್ತಿರುವಿರಿ. ನೀವೇ ನಿಮ್ಮನ್ನು ನಾಶಮಾಡಿಕೊಳ್ಳುವಿರಿ. ಅದು ನಿಮ್ಮ ತಪ್ಪೇ ಆಗುವುದು. ಬೇರೆ ಜನಾಂಗದವರು ನಿಂದಿಸುವಂತೆ ನಿಮ್ಮನ್ನು ನೀವು ಮಾಡಿಕೊಳ್ಳುತ್ತಿದ್ದೀರಿ. ಭೂಮಂಡಲದ ಎಲ್ಲಾ ಜನಾಂಗಗಳು ನಿಮ್ಮನ್ನು ತಮಾಷೆ ಮಾಡುವಂತಾಗುವುದು.