Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 10:22 - ಪರಿಶುದ್ದ ಬೈಬಲ್‌

22 ಪ್ರಭುವಿಗೆ ಅಸೂಯೆಯನ್ನು ಉಂಟುಮಾಡಬೇಕೆಂದಿದ್ದೀರೋ? ಆತನಿಗಿಂತಲೂ ನಾವು ಬಲಿಷ್ಠರಾಗಿದ್ದೇವೋ? ಇಲ್ಲ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಕರ್ತನಿಗೆ ಕೋಪವನ್ನುಂಟುಮಾಡಿ ರೇಗಿಸಬೇಕೆಂದಿದ್ದೇವೋ? ಆತನಿಗಿಂತಲೂ ನಾವು ಬಲಿಷ್ಠರೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ನಾವು ಪ್ರಭುವನ್ನು ಅಸೂಯೆಗೆಬ್ಬಿಸಬಹುದೇ? ಅವರಿಗಿಂತ ನಾವು ಬಲಾಢ್ಯರೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಕರ್ತನನ್ನು ರೇಗಿಸಬೇಕೆಂದಿದ್ದೇವೋ? ಆತನಿಗಿಂತಲೂ ನಾವು ಬಲಿಷ್ಠರೇನು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ನಾವು ಹೀಗೆ ದೇವರನ್ನು ಅಸೂಯೆಗೆಬ್ಬಿಸಬಹುದೇ? ನಾವು ದೇವರಿಗಿಂತಲೂ ಬಲಿಷ್ಠರಾಗಿದ್ದೇವೆಯೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

22 ಅಮಿ ಧನಿಯಾಕ್ ರಾಗ್ ಯೆಯ್ ಸಾರ್ಕೆ ಚಿಡ್ವುಲಾವ್ ಕಾಯ್? ಅಮಿ ಕಾಯ್ ತೆಚ್ಯಾನ್ಬಿ ಘಟ್ ಕಾಯ್?

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 10:22
18 ತಿಳಿವುಗಳ ಹೋಲಿಕೆ  

ಅವರು ದೆವ್ವಗಳನ್ನು ದೇವರನ್ನಾಗಿ ಮಾಡಿ ನನ್ನಲ್ಲಿ ಅಸೂಯೆಯನ್ನು ಉಂಟುಮಾಡಿದರು. ಆ ವಿಗ್ರಹಗಳು ನಿಜವಾದ ದೇವರುಗಳಲ್ಲ! ಅವರು ಪ್ರಯೋಜನವಿಲ್ಲದ ವಿಗ್ರಹಗಳನ್ನು ಮಾಡಿ ನನ್ನನ್ನು ಸಿಟ್ಟಿಗೆಬ್ಬಿಸಿದರು. ಆದ್ದರಿಂದ ನಿಜವಾದ ಜನಾಂಗವಲ್ಲದವರಿಂದ ನಾನು ಅವರಲ್ಲಿ ಈರ್ಷೆಯನ್ನು ಉಂಟು ಮಾಡುವೆನು. ಮೂರ್ಖ ಜನಾಂಗದಿಂದ ಅವರನ್ನು ಸಿಟ್ಟಿಗೆಬ್ಬಿಸುವೆನು.


ದೇವಜನರು ಇತರ ದೇವರುಗಳನ್ನು ಪೂಜಿಸಿ ಯೆಹೋವನನ್ನು ರೇಗಿಸಿದರು. ಅವರು ಅಸಹ್ಯ ವಿಗ್ರಹಗಳನ್ನು ಪೂಜಿಸಿ ಯೆಹೋವನನ್ನು ಸಿಟ್ಟಿಗೆಬ್ಬಿಸಿದರು.


“ಪ್ರಭುವು ತನ್ನ ಜನರಿಗೆ ನ್ಯಾಯತೀರ್ಪು ನೀಡುತ್ತಾನೆ” ಎಂದು ಸಹ ದೇವರು ಹೇಳಿದ್ದಾನೆ. ಜೀವಸ್ವರೂಪನಾದ ದೇವರ ಹಿಡಿತಕ್ಕೆ ಸಿಕ್ಕಿ ಬೀಳುವುದು ಪಾಪಿಗೆ ಭಯಂಕರವಾಗಿದೆ.


ನಾನು ನಿಮ್ಮನ್ನು ಶಿಕ್ಷಿಸಲು ಬಂದಾಗ ನೀವು ಧೈರ್ಯಶಾಲಿಗಳಾಗುವಿರಾ? ನಿಮ್ಮಲ್ಲಿ ಬಲವಿರುವದೋ? ನಾನೇ ಯೆಹೋವನು. ನಾನು ಹೇಳಿದ ಪ್ರಕಾರ ಮಾಡುವೆನು.


ಮನುಷ್ಯನು ಕೇವಲ ಮನುಷ್ಯನಾಗಿ ಸೃಷ್ಟಿಸಲ್ಪಟ್ಟಿದ್ದಾನೆ. ಅದರ ಬಗ್ಗೆ ವಾದಮಾಡುವುದರಿಂದ ಉಪಯೋಗವಿಲ್ಲ. ಅಲ್ಲದೆ ಮನುಷ್ಯನು ದೇವರೊಂದಿಗೆ ವಾದಮಾಡಲಾರನು. ಯಾಕೆಂದರೆ ದೇವರು ಮನುಷ್ಯನಿಗಿಂತಲೂ ಬಲಿಷ್ಠನಾಗಿದ್ದಾನೆ. ಆದ್ದರಿಂದ ವಾದವು ಕೇವಲ ನಿರರ್ಥಕವಾಗಿದೆ.


ಅವರ ಬೆಳ್ಳಿಬಂಗಾರಗಳು ಅವರ ಸಹಾಯಕ್ಕೆ ಬಾರವು. ಆ ಸಮಯದಲ್ಲಿ ಯೆಹೋವನು ಕೋಪಾಗ್ನಿಯಿಂದ ತುಂಬಿದವನಾಗುವನು. ಯೆಹೋವನು ಇಡೀ ಪ್ರಪಂಚವನ್ನೇ ನಾಶಮಾಡುವನು. ಭೂಮಿಯ ಮೇಲಿರುವ ಪ್ರತಿಯೊಬ್ಬನನ್ನು ಯೆಹೋವನು ಸಂಪೂರ್ಣವಾಗಿ ನಾಶಮಾಡುವನು.”


“ಈ ಜನರನ್ನು ನೋಡು. ತಮ್ಮನ್ನು ಸೃಷ್ಟಿದಾತನೊಂದಿಗೆ ವಾದಿಸುತ್ತಿದ್ದಾರೆ. ನನ್ನೊಂದಿಗೆ ವಾದಿಸುವದನ್ನು ನೋಡಿರಿ! ಅವರು ಒಡೆಯಲ್ಪಟ್ಟ ಮಣ್ಣಿನ ಮಡಿಕೆಯ ತುಂಡುಗಳಂತಿದ್ದಾರೆ. ಒಬ್ಬನು ಮೃದುವಾದ ಜೇಡಿಮಣ್ಣಿನಿಂದ ಮಡಿಕೆಯನ್ನು ಮಾಡುತ್ತಾನೆ. ಆ ಮಡಿಕೆಯು ಕುಂಬಾರನಿಗೆ, ‘ನೀನು ಮಾಡುತ್ತಿರುವುದೇನು?’ ಎಂದು ಪ್ರಶ್ನಿಸುವದಿಲ್ಲ. ತಯಾರಿಸಲ್ಪಟ್ಟ ವಸ್ತುಗಳಿಗೆ ತಯಾರಿಸಿದವನನ್ನು ಪ್ರಶ್ನಿಸುವ ಅಧಿಕಾರವಿಲ್ಲ. ಜನರು ಈ ಜೇಡಿಮಣ್ಣಿನಂತೆ ಇದ್ದಾರೆ.


ಇಸ್ರೇಲರು ಎತ್ತರವಾದ ಸ್ಥಳಗಳನ್ನು ನಿರ್ಮಿಸಿ, ಆತನನ್ನು ಕೋಪಗೊಳಿಸಿದರು. ಸುಳ್ಳುದೇವರುಗಳ ವಿಗ್ರಹಗಳನ್ನು ರೂಪಿಸಿ ಆತನನ್ನು ರೇಗಿಸಿದರು.


ದೇವರ ಜ್ಞಾನವು ಅಗಾಧವಾದದ್ದು; ಆತನ ಶಕ್ತಿಯು ಮಹತ್ವವಾದದ್ದು; ಯಾವನೂ ದೇವರಿಗೆ ವಿರೋಧವಾಗಿ ಜಯಗಳಿಸಲಾರನು.


ಆಗ ಯೆಹೋಶುವನು ಅವರಿಗೆ, “ಅದು ನಿಜವಲ್ಲ, ನೀವು ಯೆಹೋವನ ಸೇವೆಯನ್ನು ಮುಂದುವರೆಸಿಕೊಂಡು ಹೋಗಲಾರಿರಿ. ನಮ್ಮ ದೇವರಾದ ಯೆಹೋವನು ಪವಿತ್ರನಾಗಿದ್ದಾನೆ; ತನ್ನ ಜನರು ಅನ್ಯದೇವರುಗಳನ್ನು ಪೂಜಿಸುವುದನ್ನು ಆತನು ದ್ವೇಷಿಸುತ್ತಾನೆ. ಒಂದುವೇಳೆ ನೀವೇನಾದರೂ ಆತನ ವಿರುದ್ಧವಾಗಿ ತಿರುಗಿಕೊಂಡರೆ ಆತನು ನಿಮ್ಮನ್ನು ಕ್ಷಮಿಸುವುದಿಲ್ಲ.


ನಿಮ್ಮ ದೇವರಾದ ಯೆಹೋವನು ಯಾವಾಗಲೂ ನಿಮ್ಮ ಜೊತೆಯಲ್ಲಿರುವನು. ಸುಳ್ಳುದೇವರನ್ನು ಪೂಜಿಸುವವರನ್ನು ಯೆಹೋವನು ದ್ವೇಷಿಸುವುದರಿಂದ ಅವರನ್ನು ಈ ಲೋಕದಿಂದ ಅಳಿಸಿಬಿಡುವನು.


ನೀವು ಇತರ ದೇವರುಗಳನ್ನು ಪೂಜಿಸುವುದನ್ನು ಜೀವಸ್ವರೂಪನಾದ ಯೆಹೋವನು ದ್ವೇಷಿಸುವುದರಿಂದ ಬೆಂಕಿಯಂತೆ ಆತನು ನಿಮ್ಮನ್ನು ದಹಿಸಿ ಬಿಡುವನು.


ಬೇರೆ ಯಾವ ದೇವರನ್ನೂ ಪೂಜಿಸಬೇಡಿರಿ. ನಾನೇ ಯೆಹೋವನು. ‘ಸ್ವಗೌರವವನ್ನು ಕಾಪಾಡಿಕೊಳ್ಳುವವನು’ ಎಂಬುದೇ ನನ್ನ ಹೆಸರು.


ನಿಮ್ಮ ದೇವರಾದ ಯೆಹೋವನೆಂಬ ನನಗೆ ಸಲ್ಲತಕ್ಕ ಗೌರವವನ್ನು ನೀವು ಬೇರೆಯವರಿಗೆ ಸಲ್ಲಿಸಿದರೆ ನಾನು ನಿಮ್ಮನ್ನು ದ್ವೇಷಿಸುತ್ತೇನೆ. ನನಗೆ ವಿರುದ್ಧವಾಗಿ ಪಾಪಮಾಡುವವರ ದೋಷಫಲವನ್ನು ಅವರ ಮೂರು ನಾಲ್ಕು ತಲೆಮಾರುಗಳವರೆಗೂ ಬರಮಾಡುವೆನು.


ಯೆಹೋವನು ತಪ್ಪೆಂದು ಹೇಳಿದ ಕಾರ್ಯಗಳನ್ನೆಲ್ಲ ಯೆಹೂದದ ಜನರು ಮಾಡಿ ಪಾಪಿಗಳಾದರು. ಯೆಹೋವನು ಅವರ ಮೇಲೆ ಹೆಚ್ಚು ಕೋಪಗೊಳ್ಳುವಂತೆ ಆತನಿಗೆ ವಿರುದ್ಧವಾದ ಅನೇಕ ಕಾರ್ಯಗಳನ್ನು ಮಾಡಿದರು. ಅವರಿಗಿಂತಲೂ ಮುಂಚೆ ಜೀವಿಸಿದ್ದ ಅವರ ಪೂರ್ವಿಕರಿಗಿಂತಲೂ ಈ ಜನರು ಹೆಚ್ಚು ಕೀಳಾಗಿದ್ದರು.


ನಿಜವಾಗಿ ಹೇಳುವುದಾದರೆ, ಯೆಹೂದದ ಜನರು ನನಗೆ ಕೇಡುಮಾಡುತ್ತಿಲ್ಲ, ಅವರು ತಮಗೇ ಕೇಡುಮಾಡಿಕೊಳ್ಳುತ್ತಿದ್ದಾರೆ. ಅವರು ತಮಗೆ ನಾಚಿಕೆಯಾಗುವಂತೆ ಮಾಡುತ್ತಿದ್ದಾರೆ” ಎಂದು ಯೆಹೋವನು ಹೇಳಿದನು.


ನೀವು ವಿಗ್ರಹಗಳನ್ನು ಮಾಡಿ ನನ್ನನ್ನು ಏಕೆ ಸಿಟ್ಟಿಗೆಬ್ಬಿಸುವಿರಿ? ಈಗ ನೀವು ಈಜಿಪ್ಟಿನಲ್ಲಿ ವಾಸಮಾಡುತ್ತಿರುವಿರಿ. ಈಗ ಈಜಿಪ್ಟಿನ ಸುಳ್ಳುದೇವರುಗಳಿಗೆ ನೈವೇದ್ಯವನ್ನು ಅರ್ಪಿಸಿ ನನಗೆ ಕೋಪ ಬರುವಂತೆ ಮಾಡುತ್ತಿರುವಿರಿ. ನೀವೇ ನಿಮ್ಮನ್ನು ನಾಶಮಾಡಿಕೊಳ್ಳುವಿರಿ. ಅದು ನಿಮ್ಮ ತಪ್ಪೇ ಆಗುವುದು. ಬೇರೆ ಜನಾಂಗದವರು ನಿಂದಿಸುವಂತೆ ನಿಮ್ಮನ್ನು ನೀವು ಮಾಡಿಕೊಳ್ಳುತ್ತಿದ್ದೀರಿ. ಭೂಮಂಡಲದ ಎಲ್ಲಾ ಜನಾಂಗಗಳು ನಿಮ್ಮನ್ನು ತಮಾಷೆ ಮಾಡುವಂತಾಗುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು