ಆದರೆ ಎಲ್ಲಾ ಜನರಿಗೆ ಇದರ ಬಗ್ಗೆ ತಿಳಿದಿಲ್ಲ. ಕೆಲವು ಜನರು ಇಂದಿನವರೆಗೂ ವಿಗ್ರಹಗಳನ್ನು ಆರಾಧಿಸುವ ರೂಢಿಯಲ್ಲಿದ್ದಾರೆ. ಹೀಗಿರಲಾಗಿ, ಆ ಜನರು ಮಾಂಸವನ್ನು ತಿನ್ನುವಾಗ ಅದು ವಿಗ್ರಹಕ್ಕೆ ಅರ್ಪಿತವಾದದ್ದೆಂದು ಆಲೋಚಿಸುತ್ತಾರೆ. ಆದರೆ ಈ ಮಾಂಸವನ್ನು ತಿನ್ನುವುದು ತಪ್ಪಲ್ಲ ಎಂಬ ದೃಢನಂಬಿಕೆ ಅವರಲ್ಲಿಲ್ಲ. ಆದ್ದರಿಂದ, ಅವರು ಮಾಂಸವನ್ನು ತಿನ್ನುವಾಗ ತಮ್ಮನ್ನು ದೋಷಿಗಳೆಂದು ಭಾವಿಸಿಕೊಳ್ಳುತ್ತಾರೆ.
ಪರಿಶುದ್ಧರಾದ ಜನರಿಗೆ ಎಲ್ಲಾ ಸಂಗತಿಗಳು ಪರಿಶುದ್ಧವಾಗಿರುತ್ತವೆ. ಆದರೆ ಪಾಪಗಳನ್ನೇ ತುಂಬಿಕೊಂಡಿರುವ ಮತ್ತು ನಂಬಿಕೆಯಿಲ್ಲದ ಜನರಿಗೆ ಯಾವುದೂ ಪರಿಶುದ್ಧವಾಗಿರುವುದಿಲ್ಲ. ನಿಜವಾಗಿಯೂ, ಅವರ ಮನಸ್ಸುಗಳು ಮತ್ತು ಮನಸ್ಸಾಕ್ಷಿಗಳು ಮಲಿನವಾಗಿವೆ.
ನಾನು ಪ್ರಭುವಾದ ಯೇಸುವಿನಲ್ಲಿದ್ದೇನೆ. ಯಾವ ಆಹಾರಪದಾರ್ಥವನ್ನೇ ಆಗಲಿ ತಿನ್ನುವುದು ತಪ್ಪಲ್ಲವೆಂದು ನನಗೆ ಗೊತ್ತಿದೆ. ಒಬ್ಬನು ಯಾವುದಾದರೂ ಆಹಾರಪದಾರ್ಥವನ್ನು ತಿನ್ನುವುದು ತಪ್ಪೆಂದು ನಂಬಿದರೆ, ಆ ಆಹಾರಪದಾರ್ಥವು ಅವನಿಗೆ ಅಶುದ್ಧವಾಗುತ್ತದೆ.