1 ಕೊರಿಂಥದವರಿಗೆ 10:27 - ಪರಿಶುದ್ದ ಬೈಬಲ್27 ಕ್ರಿಸ್ತ ವಿಶ್ವಾಸಿಯಲ್ಲದ ಒಬ್ಬನು ನಿಮ್ಮನ್ನು ಊಟಕ್ಕೆ ಆಹ್ವಾನಿಸಿದರೆ, ಹೋಗುವುದಕ್ಕೆ ನಿಮಗೆ ಇಷ್ಟವಿದ್ದರೆ, ಅವನು ನಿಮಗೆ ಏನು ಬಡಿಸಿದರೂ ತಿನ್ನಿರಿ. ನೀವು ಆ ಪದಾರ್ಥವನ್ನು ತಿನ್ನಬೇಕೇ ಅಥವಾ ತಿನ್ನಬಾರದೇ ಎಂದು ನಿರ್ಧರಿಸಲು ಪ್ರಶ್ನೆಗಳನ್ನು ಕೇಳಬೇಡಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201927 ಕ್ರಿಸ್ತನನ್ನು ನಂಬದವರಲ್ಲಿ ಒಬ್ಬನು ನಿಮ್ಮನ್ನು ಊಟಕ್ಕೆ ಕರೆಯುವಾಗ ಹೋಗುವುದಕ್ಕೆ ನಿಮಗಿಷ್ಟವಿದ್ದರೆ ನಿಮಗೇನು ಬಡಿಸಿದರೂ ಮನಸ್ಸಾಕ್ಷಿಯನ್ನು ಪ್ರಶ್ನಿಸದೇ ಅದನ್ನು ತಿನ್ನಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)27 ಕ್ರೈಸ್ತವಿಶ್ವಾಸಿ ಅಲ್ಲದವನು, ನಿಮ್ಮನ್ನು ಊಟಕ್ಕೆ ಕರೆದಾಗ, ನಿಮಗಿಷ್ಟವಿದ್ದರೆ ಹೋಗಿರಿ; ಮನಸ್ಸಾಕ್ಷಿಯನ್ನು ಕೆದಕುವ ಪ್ರಶ್ನೆಗಳಿಗೆ ಎಡೆಕೊಡದೆ ಅವನು ಬಡಿಸಿದ್ದನ್ನು ಊಟಮಾಡಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)27 ಕ್ರಿಸ್ತನನ್ನು ನಂಬದವರಲ್ಲಿ ಒಬ್ಬನು ನಿಮ್ಮನ್ನು ಊಟಕ್ಕೆ ಕರೆಯುವಾಗ ಹೋಗುವದಕ್ಕೆ ನಿಮಗಿಷ್ಟವಿದ್ದರೆ ನಿಮಗೇನು ಬಡಿಸಿದರೂ ಅದನ್ನು ಮನಸ್ಸಿನಲ್ಲಿ ಸಂಶಯ ಹುಟ್ಟಿಸುವ ವಿಚಾರಣೆಮಾಡದೆ ತಿನ್ನಿರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ27 ಅವಿಶ್ವಾಸಿಗಳಲ್ಲಿ ಯಾವನಾದರೂ ನಿಮ್ಮನ್ನು ಊಟಕ್ಕೆ ಕರೆದಾಗ ನೀವು ಹೋಗಬಯಸಿದರೆ, ನಿಮ್ಮ ಮುಂದೆ ಬಡಿಸಿದ ಪ್ರತಿಯೊಂದನ್ನು ಮನಸ್ಸಾಕ್ಷಿ ನಿಮಿತ್ತ ಏನನ್ನೂ ಪ್ರಶ್ನಿಸದೆ ತಿನ್ನಿರಿ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್27 ವಿಶ್ವಾಸಾತ್ ನಸಲ್ಲ್ಯಾಂಚ್ಯಾ ಮಟ್ಲ್ಯಾರ್ ಕೊನ್ ಬಿ ಎಕ್ಲ್ಯಾನ್ ತುಕಾ ಜೆವ್ನಾಕ್ ಬಲ್ವಲ್ಲ್ಯಾ ವೆಳಾರ್ ತೆಚ್ಯಾ ಬಲ್ವನಿಕ್ ಮಾನ್ ದಿತೆಯ್ ಮನುನ್ ಚಿಂತುವಾ, ತನ್ನಾ ತುಕಾ ವಾಡಲ್ಲೆ ಸಗ್ಳೆ ಜೆವಾನ್ ಕರ್, ತ್ಯಾ ವಿಶಯಾತ್ ಭುತ್ತುರ್‍ಲ್ಯಾ ಮನಾತ್ ಸಂಶಯ್ ಕರುಕ್ ಜಾವ್‍ನಕೊ. ಅಧ್ಯಾಯವನ್ನು ನೋಡಿ |
ರಹಸ್ಯವಾದ ಮತ್ತು ನಾಚಿಕೆಕರವಾದ ಮಾರ್ಗಗಳಿಗೆ ನಾವು ವಿಮುಖರಾಗಿದ್ದೇವೆ. ನಾವು ಕುತಂತ್ರವನ್ನು ಉಪಯೋಗಿಸುವುದೂ ಇಲ್ಲ, ದೇವರ ಉಪದೇಶವನ್ನು ಬದಲಾಯಿಸುವುದೂ ಇಲ್ಲ. ನಾವು ಸತ್ಯವನ್ನು ಸ್ಪಷ್ಟವಾಗಿ ಬೋಧಿಸುತ್ತೇವೆ. ನಾವು ಯಾರೆಂಬುದನ್ನು ಜನರಿಗೆ ಈ ರೀತಿ ತೋರಿಸಿಕೊಡುತ್ತೇವೆ. ಹೀಗೆ ನಾವು ದೇವರ ಸಮ್ಮುಖದಲ್ಲಿ ಎಂಥಾ ಜನರಾಗಿದ್ದೇವೆ ಎಂಬುದನ್ನು ಅವರು ತಮ್ಮ ಹೃದಯಗಳಲ್ಲಿ ತಿಳಿದುಕೊಳ್ಳಬಲ್ಲರು.
ನೀವು ಓದಿ ಅರ್ಥಮಾಡಿಕೊಳ್ಳಬಲ್ಲ ಸಂಗತಿಗಳನ್ನು ಮಾತ್ರ ನಾನು ನಿಮಗೆ ಬರೆಯುತ್ತೇನೆ. ನಮ್ಮ ವಿಷಯವಾದ ಕೆಲವು ಸಂಗತಿಗಳನ್ನು ನೀವು ಈಗಾಗಲೇ ಸ್ಪಲ್ಪ ಅರ್ಥಮಾಡಿಕೊಂಡಂತೆ ಸಂಪೂರ್ಣವಾಗಿ ಅರ್ಥಮಾಡಿಕೊಳ್ಳುತ್ತೀರೆಂಬ ನಿರೀಕ್ಷೆ ನನಗಿದೆ. ನಮ್ಮ ಪ್ರಭುವಾದ ಯೇಸು ಕ್ರಿಸ್ತನು ಮತ್ತೆ ಬಂದಾಗ ನಾವು ನಿಮ್ಮ ವಿಷಯದಲ್ಲಿ ಹೆಮ್ಮೆಪಡುವಂತೆ ನೀವೂ ನಮ್ಮ ವಿಷಯದಲ್ಲಿ ಹೆಮ್ಮೆಪಡಲಾಗುವಂತೆ ನೀವು ಅರ್ಥಮಾಡಿಕೊಳ್ಳುತ್ತೀರಿ ಎಂಬ ಭರವಸೆ ನನಗಿದೆ.