Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 10:5 - ಪರಿಶುದ್ದ ಬೈಬಲ್‌

5 ಆದರೂ ಅವರಲ್ಲಿ ಅನೇಕರು ದೇವರ ಮೆಚ್ಚುಗೆಗೆ ಪಾತ್ರರಾಗಲಿಲ್ಲ. ಅವರು ಮರುಭೂಮಿಯಲ್ಲಿ ಕೊಲ್ಲಲ್ಪಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಆದರೂ ಅವರಲ್ಲಿ ಬಹು ಮಂದಿಯನ್ನು ದೇವರು ಮೆಚ್ಚಲಿಲ್ಲ. ಆದ್ದರಿಂದ ಅವರು ಸಂಹರಿಸಲ್ಪಟ್ಟರು ಮತ್ತು ಅವರ ಶವಗಳು ಅಡವಿಯಲ್ಲೆಲ್ಲ ಬಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಆದರೂ ಅವರಲ್ಲಿ ಬಹುಮಂದಿ ದೇವರ ಮೆಚ್ಚುಗೆಗೆ ಪಾತ್ರರಾಗಲಿಲ್ಲ. ಆದ್ದರಿಂದಲೇ ಮರುಭೂಮಿಯಲ್ಲೆ ಮಡಿದು ಮಣ್ಣುಪಾಲಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಆದರೂ ಅವರೊಳಗೆ ಬಹುಮಂದಿಯ ವಿಷಯದಲ್ಲಿ ದೇವರು ಸಂತೋಷಿಸಲಿಲ್ಲ. ಅವರು ಅಡವಿಯಲ್ಲಿ ಸಂಹರಿಸಲ್ಪಟ್ಟರೆಂದು ಬರೆದದೆಯಷ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಆದರೆ ಅವರೊಳಗೆ ಬಹುಮಂದಿಯನ್ನು ದೇವರು ಮೆಚ್ಚಲಿಲ್ಲ. ಆದ್ದರಿಂದ ಅವರು ಅರಣ್ಯದಲ್ಲಿ ಸಂಹಾರವಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

5 ಜಾಲ್ಯಾರ್ಬಿ ತೆಂಚ್ಯಾತ್ಲಿ ಜಾಸ್ತಿಚಿ ಲೊಕಾ ದೆವಾಚ್ಯಾ ಮನಾಕ್ ಯೆವ್ಕನಾತ್ ತಸೆ ಮನುನ್ ತೆಂಕಾ ಜಿವಾನಿ ಮಾರುನ್ ಹೊಲೆ ಅನಿ ತೆಂಚಿ ಮಡಿ ಡಂಗ್ಳಿತ್ ಸಿಪ್ಡುನ್ ಪಡ್ಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 10:5
16 ತಿಳಿವುಗಳ ಹೋಲಿಕೆ  

ನಲವತ್ತು ವರ್ಷಗಳ ಕಾಲ ದೇವರು ಯಾರ ಮೇಲೆ ಕೋಪಗೊಂಡಿದ್ದನು? ಪಾಪವನ್ನು ಮಾಡಿದವರ ಮೇಲಲ್ಲವೇ? ಅವರೆಲ್ಲರೂ ಮರುಭೂಮಿಯಲ್ಲಿ ಸತ್ತುಹೋದರು.


ನೀವು ಈಗಾಗಲೇ ತಿಳಿದುಕೊಂಡಿರುವ ಕೆಲವು ವಿಚಾರಗಳನ್ನು ನೆನಪು ಮಾಡಿಕೊಳ್ಳಲು ನಾನು ನಿಮಗೆ ಸಹಾಯ ಮಾಡಲಿಚ್ಛಿಸುತ್ತೇನೆ. ಪ್ರಭುವು ತನ್ನ ಜನರನ್ನು ಈಜಿಪ್ಟ್ ದೇಶದಿಂದ ಹೊರಗೆ ತಂದು ಅವರನ್ನು ರಕ್ಷಿಸಿದನೆಂಬುದನ್ನು ನೆನಪು ಮಾಡಿಕೊಳ್ಳಿರಿ. ತರುವಾಯ ಪ್ರಭುವು ನಂಬಿಕೆಯಿಲ್ಲದ ಜನರೆಲ್ಲರನ್ನೂ ನಾಶಪಡಿಸಿದನು.


ಆದ್ದರಿಂದ ಅವರು ಅರಣ್ಯದಲ್ಲಿ ಸಾಯುವುದಾಗಿ ದೇವರು ಪ್ರಮಾಣ ಮಾಡಿದನು.


ಆದ್ದರಿಂದ ನಾನು ಕೋಪಗೊಂಡು ನನ್ನ ವಿಶ್ರಾಂತಿಯ ನಾಡನ್ನು ಅವರು ಪ್ರವೇಶಿಸಕೂಡದೆಂದು ನಾನು ಪ್ರಮಾಣ ಮಾಡಿದೆನು.”


ಯೆಹೋವನೇ, ತಲತಲಾಂತರಗಳಿಂದಲೂ ನೀನೇ ನಮ್ಮ ವಾಸಸ್ಥಾನ.


ಈಜಿಪ್ಟಿನಲ್ಲಿಯೂ ಮರುಭೂಮಿಯಲ್ಲಿಯೂ ನಾನು ನಡಿಸಿರುವ ಮಹಾತ್ಕಾರ್ಯಗಳನ್ನೂ ನನ್ನ ಮಹಿಮೆಯನ್ನೂ ನೋಡಿದ ಈ ಜನರೆಲ್ಲರೂ ಪದೇಪದೇ ನನ್ನನ್ನು ಪರೀಕ್ಷಿಸಿದ್ದರಿಂದ ಮತ್ತು ನನಗೆ ವಿಧೇಯರಾಗದಿದ್ದ ಕಾರಣ,


ಕಾದೇಶ್‌ಬರ್ನೇಯದಿಂದ ಜೆರೆದ್ ಕಣಿವೆಯನ್ನು ದಾಟಿ ಆಗಲೇ ಮೂವತ್ತೆಂಟು ವರ್ಷಗಳು ದಾಟಿದ್ದವು. ನಮ್ಮ ಸಮೂಹದಲ್ಲಿದ್ದ ಯುದ್ಧಭಟರೆಲ್ಲಾ ಸತ್ತುಹೋಗಿದ್ದರು. ಹೀಗೆ ಆಗುವುದೆಂದು ದೇವರು ಪ್ರಮಾಣ ಮಾಡಿದ್ದನು.


ನಾನು ಈಜಿಪ್ಟಿನ ಮರುಭೂಮಿಯಲ್ಲಿ ನಿಮ್ಮ ಪೂರ್ವಿಕರನ್ನು ದಂಡಿಸಿದಂತೆ ನಿಮ್ಮನ್ನೂ ದಂಡಿಸುವೆನು.” ನನ್ನ ಒಡೆಯನಾದ ಯೆಹೋವನು ಇವುಗಳನ್ನು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು