1 ಕೊರಿಂಥದವರಿಗೆ 10:7 - ಪರಿಶುದ್ದ ಬೈಬಲ್7 ಅವರಲ್ಲಿ ಕೆಲವರು ಮಾಡಿದಂತೆ ನೀವು ವಿಗ್ರಹಗಳನ್ನು ಪೂಜಿಸಬೇಡಿ. “ಜನರು ತಿನ್ನಲು, ಕುಡಿಯಲು ಕುಳಿತುಕೊಂಡರು; ನೃತ್ಯ ಮಾಡಲು ಎದ್ದುನಿಂತರು” ಎಂದು ಪವಿತ್ರ ಗ್ರಂಥದಲ್ಲಿ ಬರೆದಿದೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಅವರಲ್ಲಿ ಕೆಲವರು ವಿಗ್ರಹಾರಾಧಕರಾಗಿದ್ದರು, “ಜನರು ತಿನ್ನುವುದಕ್ಕೂ, ಕುಡಿಯುವುದಕ್ಕೂ ಕುಳಿತುಕೊಂಡರು. ಕಾಮಾಭಿಲಾಷೆಯಿಂದ ಕುಣಿದಾಡುವುದಕ್ಕೆ ಎದ್ದರು” ಎಂದು ಬರೆದಿದೆಯಲ್ಲಾ. ನೀವು ಅವರ ಹಾಗೆ ವಿಗ್ರಹಾರಾಧಕರಾಗಬೇಡಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ಅವರಲ್ಲಿ ಕೆಲವರು ವಿಗ್ರಹಾರಾಧಕರಾದಂತೆ ನಾವು ಆಗಬಾರದು. ಇವರನ್ನು ಕುರಿತೇ : “ತಿನ್ನಲೆಂದು ಕುಡಿಯಲೆಂದು ಕುಳಿತರು ಕುಣಿಯಲೆಂದು ಕಾಮವೆದ್ದು ನಿಂತರು ಈ ಜನರು” - ಎಂದು ಬರೆದಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ಅವರಲ್ಲಿ ಕೆಲವರು ವಿಗ್ರಹಾರಾಧಕರಾಗಿದ್ದರು; ಜನರು ಉಣ್ಣುವದಕ್ಕೂ ಕುಡಿಯುವದಕ್ಕೂ ಕೂತುಕೊಂಡರು, ಕುಣಿದಾಡುವದಕ್ಕೆ ಎದ್ದರು ಎಂದು ಬರೆದದೆಯಲ್ಲಾ; ನೀವು ವಿಗ್ರಹಾರಾಧಕರಾಗಬೇಡಿರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 “ಅವರಲ್ಲಿ ಕೆಲವರು ವಿಗ್ರಹಾರಾಧಕರಾಗಿ ಉಣ್ಣುವುದಕ್ಕೂ, ಕುಡಿಯುವುದಕ್ಕೂ ಕುಳಿತುಕೊಂಡರು, ಕುಣಿದಾಡುವುದಕ್ಕೆ ಎದ್ದರು,” ಎಂದು ಬರೆದಿರುವಂತೆ ನೀವೂ ವಿಗ್ರಹಾರಾಧಕರಾಗಬೇಡಿರಿ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್7 ತೆಂಚ್ಯಾತ್ಲ್ಯಾ ಉಲ್ಲ್ಯಾನಿ ಮುರ್ತಿಚಿ ಫುಜ್ಯಾ ಕರ್‍ಲ್ಯಾನಿ, ತಸೆ ತುಮಿ ಕರುಚೆ ನ್ಹಯ್. ಪವಿತ್ರ್ ಪುಸ್ತಕಾತ್ ಲಿವಲ್ಲೆ ಹಾಯ್, “ತೆನಿಚ್ ಖಾವ್ಕ್ ಅನಿ ಫಿವ್ಕ್ ಬಸ್ಲೆ ಅನಿ ಬುರ್ಶಿ ಆಂಗಾಚೆ ಸಮಂದ್ ವಿಶಯಾತ್ ನಾಚುಕ್ ಅನಿ ಖೆಳ್ ಕರುಕ್ ಲಾಗ್ಲ್ಯಾನಿ” ಅಧ್ಯಾಯವನ್ನು ನೋಡಿ |
ಆದರೆ ಎಲ್ಲಾ ಜನರಿಗೆ ಇದರ ಬಗ್ಗೆ ತಿಳಿದಿಲ್ಲ. ಕೆಲವು ಜನರು ಇಂದಿನವರೆಗೂ ವಿಗ್ರಹಗಳನ್ನು ಆರಾಧಿಸುವ ರೂಢಿಯಲ್ಲಿದ್ದಾರೆ. ಹೀಗಿರಲಾಗಿ, ಆ ಜನರು ಮಾಂಸವನ್ನು ತಿನ್ನುವಾಗ ಅದು ವಿಗ್ರಹಕ್ಕೆ ಅರ್ಪಿತವಾದದ್ದೆಂದು ಆಲೋಚಿಸುತ್ತಾರೆ. ಆದರೆ ಈ ಮಾಂಸವನ್ನು ತಿನ್ನುವುದು ತಪ್ಪಲ್ಲ ಎಂಬ ದೃಢನಂಬಿಕೆ ಅವರಲ್ಲಿಲ್ಲ. ಆದ್ದರಿಂದ, ಅವರು ಮಾಂಸವನ್ನು ತಿನ್ನುವಾಗ ತಮ್ಮನ್ನು ದೋಷಿಗಳೆಂದು ಭಾವಿಸಿಕೊಳ್ಳುತ್ತಾರೆ.