21 ಏಕೆಂದರೆ, ನೀವು ಊಟ ಮಾಡುವಾಗ, ಇತರರಿಗೋಸ್ಕರ ಕಾಯದೆ ಪ್ರತಿಯೊಬ್ಬರು ತಮ್ಮಷ್ಟಕ್ಕೆ ತಾವೇ ಊಟ ಮಾಡುತ್ತಾರೆ. ಕೆಲವು ಜನರಲ್ಲಿ ಊಟಮಾಡಲು ಸಾಕಷ್ಟು ಆಹಾರ ಇರುವುದಿಲ್ಲ. ಇನ್ನು ಕೆಲವರಲ್ಲಿ ತಿಂದು, ಕುಡಿದು ಮತ್ತರಾಗುವಷ್ಟು ಆಹಾರವಿರುತ್ತದೆ.
21 ಏಕೆಂದರೆ, ಭೋಜನ ಸಮಯದಲ್ಲಿ ಒಬ್ಬೊಬ್ಬನೂ ತಾನು ತಂದದ್ದನ್ನು ತಿನ್ನಲು ಇತರರಿಗಿಂತ ಮುಂಚಿತವಾಗಿಯೇ ಕುಳಿತುಕೊಳ್ಳುತ್ತಾನೆ. ಒಬ್ಬನು ಹಸಿದಿರುತ್ತಾನೆ; ಇನ್ನೊಬ್ಬನು ಕುಡಿದು ಮತ್ತನಾಗುತ್ತಾನೆ.
ನಿಮ್ಮ ಅನ್ಯೋನ್ಯತೆಯ ಭೋಜನದಲ್ಲಿ ಈ ಜನರು ಮುಳುಗಿಹೋದ ಬಂಡೆಗಳಂತಿದ್ದಾರೆ. ಅವರು ಭಯವಿಲ್ಲದೆ ನಿಮ್ಮ ಜೊತೆಯಲ್ಲಿ ತಿನ್ನುತ್ತಾರೆ. ಅವರು ತಮ್ಮ ಬಗ್ಗೆ ಮಾತ್ರ ಚಿಂತಿಸುವ ಕುರುಬರಾಗಿದ್ದಾರೆ. ಅವರು ನೀರಿಲ್ಲದ ಮೋಡಗಳಂತಿದ್ದಾರೆ. ಗಾಳಿಯು ಆ ಮೋಡಗಳನ್ನು ಬಡಿದುಕೊಂಡು ಹೋಗುವುದು. ಅವರು ಕಾಲಕ್ಕೆ ತಕ್ಕಂತೆ ಫಲಬಿಡದ ಮತ್ತು ಬೇರುಸಹಿತ ಕಿತ್ತುಬಂದು ಉರುಳಿಹೋದ ಮರಗಳಿಂತಿದ್ದಾರೆ.
ಅವರಿಂದ ಅನೇಕ ಜನರು ಸಂಕಟಕ್ಕೆ ಒಳಗಾಗುವರು. ಅವರು ಮಾಡಿದ್ದಕ್ಕೆ ಅದೇ ಪ್ರತಿಫಲವಾಗಿರುವುದು. ಈ ಸುಳ್ಳುಬೋಧಕರು ಜನರೆಲ್ಲರ ಎದುರಿನಲ್ಲಿ ಕೆಟ್ಟದ್ದನ್ನು ಮಾಡಲು ಸಂತೋಷಿಸುತ್ತಾರೆ. ತಮ್ಮನ್ನು ಸಂತಸಗೊಳಿಸುವ ಕೆಟ್ಟಕಾರ್ಯಗಳಿಂದ ಅವರು ಆನಂದಿಸುತ್ತಾರೆ. ಅವರು ನಿಮ್ಮ ಮಧ್ಯದಲ್ಲಿ ಕೊಳಕಾದ ಕಲೆಗಳಂತಿದ್ದಾರೆ. ನೀವು ಒಟ್ಟಾಗಿ ಊಟ ಮಾಡುವಾಗ ಅವರು ನಿಮಗೆ ಅಪಮಾನಕರವಾಗಿದ್ದಾರೆ.
“ಜನರು ಉತ್ತಮವಾದ ದ್ರಾಕ್ಷಾರಸವನ್ನು ಯಾವಾಗಲೂ ಮೊದಲು ಹಂಚುತ್ತಾರೆ. ಅತಿಥಿಗಳು ಕುಡಿದು ಮತ್ತರಾದ ಮೇಲೆ ಅವರಿಗೆ ಕಡಿಮೆ ದರ್ಜೆಯ ದ್ರಾಕ್ಷಾರಸವನ್ನು ಕೊಡುತ್ತಾರೆ. ಆದರೆ ನೀನು ಉತ್ತಮವಾದ ದ್ರಾಕ್ಷಾರಸವನ್ನು ಈವರೆಗೂ ಇಟ್ಟಿರುವೆ!” ಎಂದು ಹೇಳಿದನು.
ಒಬ್ಬ ವ್ಯಕ್ತಿಯು ಹಸಿವೆಗೊಂಡಿದ್ದರೆ, ಅವನು ಮನೆಯಲ್ಲಿ ಊಟಮಾಡಲಿ. ನೀವು ಹೀಗೆ ಮಾಡಿದರೆ, ನಿಮ್ಮ ಸಭಾಕೂಟವು ನಿಮ್ಮ ಮೇಲೆ ನ್ಯಾಯತೀರ್ಪನ್ನು ಬರಮಾಡುವುದಿಲ್ಲ. ಉಳಿದ ವಿಷಯಗಳ ಬಗ್ಗೆ ನೀವು ಏನು ಮಾಡಬೇಕೆಂಬುದನ್ನು ನಾನು ನಿಮ್ಮಲ್ಲಿಗೆ ಬಂದಾಗ ತಿಳಿಸಿಕೊಡುತ್ತೇನೆ.