1 ಕೊರಿಂಥದವರಿಗೆ 11:25 - ಪರಿಶುದ್ದ ಬೈಬಲ್25 ಅದೇ ರೀತಿಯಲ್ಲಿ ಅವರು ಊಟಮಾಡಿದ ಮೇಲೆ ಯೇಸು ದ್ರಾಕ್ಷಾರಸದ ಪಾತ್ರೆಯನ್ನು ತೆಗೆದುಕೊಂಡು, “ದೇವರು ತನ್ನ ಜನರೊಂದಿಗೆ ಮಾಡಿಕೊಂಡ ಹೊಸ ಒಡಂಬಡಿಕೆಯನ್ನು ಈ ದ್ರಾಕ್ಷಾರಸ ಸೂಚಿಸುತ್ತದೆ. ಈ ಹೊಸ ಒಡಂಬಡಿಕೆ ನನ್ನ ರಕ್ತದಿಂದ ಆರಂಭವಾಗುತ್ತದೆ. ನೀವು ಇದನ್ನು ಕುಡಿಯುವಾಗಲೆಲ್ಲಾ ನನ್ನನ್ನು ನೆನಸಿಕೊಳ್ಳವವರಾಗಿದ್ದೀರಿ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201925 ಊಟವಾದ ಮೇಲೆ ಆತನು ಅದೇ ರೀತಿಯಲ್ಲಿ ಪಾನಪಾತ್ರೆಯನ್ನು ತೆಗೆದುಕೊಂಡು, “ಈ ಪಾನಪಾತ್ರೆಯು ನನ್ನ ರಕ್ತದಿಂದ ಸ್ಥಾಪಿತವಾಗುವ ಹೊಸ ಒಡಂಬಡಿಕೆಯನ್ನು ಸೂಚಿಸುತ್ತದೆ. ನೀವು ಇದರಲ್ಲಿ ಪಾನಮಾಡುವಾಗೆಲೆಲ್ಲಾ ನನ್ನನ್ನು ನೆನಪುಮಾಡಿಕೊಳ್ಳುವುದಕ್ಕೋಸ್ಕರ ಇದನ್ನು ಪಾನಮಾಡಿರಿ” ಅಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)25 ಅಂತೆಯೇ ಭೋಜನದ ಕೊನೆಯಲ್ಲಿ ಪಾನಪಾತ್ರೆಯನ್ನು ತೆಗೆದುಕೊಂಡು, “ಈ ಪಾತ್ರೆ ನನ್ನ ರಕ್ತದಿಂದ ಮುದ್ರಿತವಾದ ಹೊಸ ಒಡಂಬಡಿಕೆ; ಇದನ್ನು ನೀವು ಪಾನಮಾಡುವಾಗಲೆಲ್ಲಾ ನನ್ನ ಸ್ಮರಣೆಗಾಗಿ ಮಾಡಿರಿ,” ಎಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)25 ಊಟವಾದ ಮೇಲೆ ಆತನು ಅದೇ ರೀತಿಯಾಗಿ ಪಾತ್ರೆಯನ್ನು ತೆಗೆದುಕೊಂಡು - ಈ ಪಾತ್ರೆಯು ನನ್ನ ರಕ್ತದಿಂದ ಸ್ಥಾಪಿತವಾಗುವ ಹೊಸ ಒಡಂಬಡಿಕೆಯನ್ನು ಸೂಚಿಸುತ್ತದೆ; ನೀವು ಇದರಲ್ಲಿ ಪಾನಮಾಡುವಾಗೆಲ್ಲಾ ನನ್ನನ್ನು ನೆನಸಿಕೊಳ್ಳುವದಕ್ಕೋಸ್ಕರ ಪಾನಮಾಡಿರಿ ಅಂದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ25 ಅದೇ ಪ್ರಕಾರ, ಭೋಜನವಾದ ಮೇಲೆ ಪಾನಪಾತ್ರೆಯನ್ನು ತೆಗೆದುಕೊಂಡು, “ಈ ಪಾತ್ರೆಯು ನಿಮಗೋಸ್ಕರ ಸುರಿಸಲಾಗುವ, ನನ್ನ ರಕ್ತದಿಂದಾದ ಹೊಸ ಒಡಂಬಡಿಕೆಯಾಗಿದೆ. ನೀವು ಇದರಲ್ಲಿ ಪಾನಮಾಡುವಾಗೆಲ್ಲಾ ನನ್ನನ್ನು ಜ್ಞಾಪಿಸಿಕೊಳ್ಳುವದಕ್ಕೋಸ್ಕರ ಪಾನಮಾಡಿರಿ,” ಎಂದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್25 ತಸೆಚ್ ಜೆವಾನ್ ಹೊವ್ನಗೆತ್ ರ್‍ಹಾತಾನಾ, ತೆನಿ ಆಯ್ದಾನ್ ಘೆಟ್ಲ್ಯಾನ್ ಅನಿ ಅಸೆ ಮಟ್ಲ್ಯಾನ್, “ಹೆ ಆಯ್ದಾನ್ ಮಾಜ್ಯಾ ರಗ್ತಾನ್ ಘಟ್ಟ್ ಕರಲ್ಲೊ ನ್ಹವೊ ಕರಾರ್, ಕವ್ಡೆಂದಾ ತಿ ತುಮಿ ಫಿತ್ಯಾಶಿ ತವ್ಡೆಂದಾ ತೆ ಮಾಜ್ಯಾ ಯಾದಿಸಾಟ್ನಿ ಕರಾ”. ಅಧ್ಯಾಯವನ್ನು ನೋಡಿ |
ಶಾಂತಿಸ್ವರೂಪನಾದ ದೇವರು ನಿಮಗೆ ಬೇಕಾದ ತನ್ನ ವರದಾನಗಳನ್ನು ದಯಪಾಲಿಸಲಿ ಎಂದು ನಾನು ಆತನಲ್ಲಿ ಪ್ರಾರ್ಥಿಸುತ್ತೇನೆ. ಏಕೆಂದರೆ ಆಗ ನೀವು ಆತನ ಇಷ್ಟಕ್ಕನುಸಾರವಾದವುಗಳನ್ನೆಲ್ಲಾ ಮಾಡಲು ಸಾಧ್ಯವಾಗುವುದು. ತನ್ನ ರಕ್ತವನ್ನು ಸುರಿಸಿ ಸಭೆಯೆಂಬ ಹಿಂಡಿಗೆ ಮಹಾಕುರುಬನಾಗಿರುವ ನಮ್ಮ ಪ್ರಭುವಾದ ಯೇಸುವನ್ನು ಸತ್ತವರೊಳಗಿಂದ ಮೇಲಕ್ಕೆ ಎಬ್ಬಿಸಿದವನು ದೇವರೇ. ಆತನ ರಕ್ತವು ಶಾಶ್ವತವಾದ ಹೊಸ ಒಡಂಬಡಿಕೆಯನ್ನಾರಂಭಿಸಿತು. ದೇವರು ತನಗೆ ಸಂತೋಷವನ್ನು ಉಂಟುಮಾಡುವ ಕಾರ್ಯಗಳನ್ನು ಯೇಸು ಕ್ರಿಸ್ತನ ಮೂಲಕ ನಮ್ಮಲ್ಲಿ ನಡೆಸಲಿ. ಯೇಸುವಿಗೆ ಎಂದೆಂದಿಗೂ ಮಹಿಮೆಯಾಗಲಿ. ಆಮೆನ್.