1 ಕೊರಿಂಥದವರಿಗೆ 11:27 - ಪರಿಶುದ್ದ ಬೈಬಲ್27 ಹೀಗಿರಲಾಗಿ ಒಬ್ಬನು ಪ್ರಭುವಿನ ರೊಟ್ಟಿಯನ್ನು ತಿನ್ನುವಾಗ, ಪಾತ್ರೆಯಲ್ಲಿ ಕುಡಿಯುವಾಗ ಇವುಗಳ ನಿಜವಾದ ಅರ್ಥವನ್ನು ಕಾರ್ಯಗಳ ಮೂಲಕ ತೋರ್ಪಡಿಸಬೇಕು, ಇಲ್ಲವಾದರೆ ಅವನು ಪ್ರಭುವಿನ ದೇಹಕ್ಕೂ ರಕ್ತಕ್ಕೂ ದೋಷಿಯಾಗುತ್ತಾನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201927 ಹೀಗಿರುವುದರಿಂದ ಯಾವನಾದರೂ ಅಯೋಗ್ಯವಾಗಿ ಕರ್ತನ ರೊಟ್ಟಿಯನ್ನು ತಿಂದರೆ ಇಲ್ಲವೆ ಆತನ ಪಾನಪಾತ್ರೆಯಲ್ಲಿ ಪಾನ ಮಾಡಿದರೆ ಅವನು ಕರ್ತನ ದೇಹಕ್ಕೂ ಮತ್ತು ಕರ್ತನ ರಕ್ತಕ್ಕೂ ಸಂಬಂಧಿಸಿದಂತೆ ದ್ರೋಹಮಾಡಿದವನಾಗಿರುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)27 ಯಾರಾದರೂ ಅಯೋಗ್ಯವಾಗಿ ಈ ರೊಟ್ಟಿಯನ್ನು ಭುಜಿಸಿದರೆ, ಅಥವಾ ಪ್ರಭುವಿನ ಪಾತ್ರೆಯಿಂದ ಪಾನಮಾಡಿದರೆ ಅವನು ಪ್ರಭುವಿನ ಶರೀರಕ್ಕೂ ರಕ್ತಕ್ಕೂ ದ್ರೋಹವೆಸಗುತ್ತಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)27 ಹೀಗಿರುವದರಿಂದ ಯಾವನಾದರೂ ಅಯೋಗ್ಯವಾಗಿ ಕರ್ತನ ರೊಟ್ಟಿಯನ್ನು ತಿಂದರೆ ಇಲ್ಲವೆ ಆತನ ಪಾತ್ರೆಯಲ್ಲಿ ಪಾನಮಾಡಿದರೆ ಅವನು ಕರ್ತನ ದೇಹಕ್ಕೂ ರಕ್ತಕ್ಕೂ ದ್ರೋಹಮಾಡಿದವನಾಗಿರುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ27 ಹೀಗಿರುವುದರಿಂದ, ಯಾರಾದರೂ ಅಯೋಗ್ಯವಾಗಿ ಕರ್ತದೇವರ ರೊಟ್ಟಿಯನ್ನು ತಿಂದರೆ, ಇಲ್ಲವೆ ಅವರ ಪಾತ್ರೆಯಲ್ಲಿ ಪಾನ ಮಾಡಿದರೆ, ಅಂಥವರು ಕರ್ತದೇವರ ದೇಹಕ್ಕೂ, ರಕ್ತಕ್ಕೂ ದ್ರೋಹ ಮಾಡಿದವರಾಗಿರುವರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್27 ತಸೆ ಮನುನ್ ಜೆ ಕೊನ್ ಯೊಗ್ಯ್ ನಸ್ತಾನಾ ಹಿ ಭಾಕ್ರಿ ಖಾತಾ, ನಾ ಹೊಲ್ಯಾರ್ ಧನಿಯಾಚ್ಯಾ ಆಂಗಾ ಅನಿ ರಗ್ತಾಚ್ಯಾ ವಿರೊದ್ ಚುಕ್ ಕರ್‍ತಾ ಅನಿ ತೊ ಚುಕಿದಾರ್ ಹೊತಾ. ಅಧ್ಯಾಯವನ್ನು ನೋಡಿ |
ಹೀಗಿರಲು ದೇವರ ಮಗನನ್ನು ದ್ವೇಷಿಸುವ ಒಬ್ಬ ವ್ಯಕ್ತಿಯನ್ನು ಏನು ಮಾಡಬೇಕೆಂದು ನೀವು ಆಲೋಚಿಸುವಿರಿ? ನಿಜವಾಗಿಯೂ ಆ ವ್ಯಕ್ತಿಗೆ ಇದಕ್ಕಿಂತಲೂ ತೀವ್ರವಾದ ದಂಡನೆಯನ್ನು ವಿಧಿಸಬೇಕಲ್ಲವೇ? ಹೌದು, ಹೊಸ ಒಡಂಬಡಿಕೆಯ ರಕ್ತಕ್ಕೆ ಗೌರವವನ್ನು ತೋರದಿದ್ದ ಆ ವ್ಯಕ್ತಿಗೆ ಕ್ರೂರವಾದ ದಂಡನೆಯಾಗಬೇಕು. ಆ ರಕ್ತವು ಅವನನ್ನು ಪವಿತ್ರನನ್ನಾಗಿಸಿತು. ದೇವರಾತ್ಮನ ಕೃಪೆಗೆ ಗೌರವವನ್ನು ತೋರದಿದ್ದ ಆ ವ್ಯಕ್ತಿಗೆ ತೀವ್ರವಾದ ದಂಡನೆಯಾಗಬೇಕು.