Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 12:10 - ಪರಿಶುದ್ದ ಬೈಬಲ್‌

10 ಮತ್ತೊಬ್ಬನಿಗೆ ಅದ್ಭುತಕಾರ್ಯಗಳನ್ನು ಮಾಡುವ ಶಕ್ತಿಯನ್ನೂ ಇನ್ನೊಬ್ಬನಿಗೆ ಪ್ರವಾದಿಸುವ ಸಾಮರ್ಥ್ಯವನ್ನೂ ಇನ್ನೊಬ್ಬನಿಗೆ ಒಳ್ಳೆಯ ಮತ್ತು ಕೆಟ್ಟ ಆತ್ಮಗಳ ನಡುವೆ ಇರುವ ವ್ಯತ್ಯಾಸವನ್ನು ತಿಳಿದುಕೊಳ್ಳುವ ಸಾಮರ್ಥ್ಯವನ್ನೂ ಕೊಡುತ್ತಾನೆ; ಒಬ್ಬನಿಗೆ ಅನೇಕ ಭಾಷೆಗಳನ್ನು ಮಾತಾಡುವ ಸಾಮರ್ಥ್ಯವನ್ನೂ ಮತ್ತೊಬ್ಬನಿಗೆ ಆ ಭಾಷೆಗಳನ್ನು ಅನುವಾದಿಸುವ ಸಾಮರ್ಥ್ಯವನ್ನೂ ಕೊಡುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಮತ್ತೊಬ್ಬನಿಗೆ ಮಹತ್ಕಾರ್ಯಗಳನ್ನು ಮಾಡುವ ವರವು, ಇನ್ನೊಬ್ಬನಿಗೆ ಪ್ರವಾದನೆಯ ವರವು, ಒಬ್ಬನಿಗೆ ಆತ್ಮವನ್ನು ವಿವೇಚಿಸುವ ವರವು, ಮತ್ತೊಬ್ಬನಿಗೆ ವಿವಿಧ ಭಾಷೆಗಳನ್ನಾಡುವ ವರವು, ಒಬ್ಬನಿಗೆ ಭಾಷೆಗಳ ಅರ್ಥವನ್ನು ಬಿಡಿಸಿ ಹೇಳುವ ವರವು ಕೊಡಲ್ಪಡುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಒಬ್ಬನಿಗೆ ಪವಾಡಗಳನ್ನು ಎಸಗುವ ಪರಾಕ್ರಮವನ್ನು, ಇನ್ನೊಬ್ಬನಿಗೆ ಪ್ರವಾದನೆಮಾಡುವ ಪ್ರತಿಭೆಯನ್ನು, ಮತ್ತೊಬ್ಬನಿಗೆ ಸತ್ಯಾಸತ್ಯವನ್ನು ವಿವೇಚಿಸುವ ಜಾಣ್ಮೆಯನ್ನು, ಮಗದೊಬ್ಬನಿಗೆ ವಿವಿಧ ಭಾಷೆಗಳನ್ನಾಡುವ ಸಾಮರ್ಥ್ಯವನ್ನು, ಮತ್ತೂ ಒಬ್ಬನಿಗೆ ಅವುಗಳನ್ನು ಅರ್ಥೈಸುವ ಅರಿವನ್ನು ಆ ಪವಿತ್ರಾತ್ಮರಿಂದಲೇ ಕೊಡಲಾಗುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಒಬ್ಬನಿಗೆ ಮಹತ್ತುಗಳನ್ನು ಮಾಡುವ ವರವು, ಒಬ್ಬನಿಗೆ ಪ್ರವಾದನೆಯ ವರವು, ಒಬ್ಬನಿಗೆ ಸತ್ಯಾಸತ್ಯಾತ್ಮಗಳನ್ನು ವಿವೇಚಿಸುವ ವರವು, ಒಬ್ಬನಿಗೆ ವಿವಿಧ ವಾಣಿಗಳನ್ನಾಡುವ ವರವು, ಒಬ್ಬನಿಗೆ ವಾಣಿಗಳ ಅರ್ಥವನ್ನು ಹೇಳುವ ವರವು ಕೊಡಲ್ಪಡುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಒಬ್ಬನಿಗೆ ಅದ್ಭುತಕಾರ್ಯಗಳ ಶಕ್ತಿಯೂ ಒಬ್ಬನಿಗೆ ಪ್ರವಾದನೆಯೂ ಒಬ್ಬನಿಗೆ ಆತ್ಮಗಳನ್ನು ವಿವೇಚಿಸುವ ವರವೂ ಒಬ್ಬನಿಗೆ ವಿವಿಧ ಭಾಷೆಗಳನ್ನಾಡುವ ಶಕ್ತಿಯೂ ಮತ್ತೊಬ್ಬನಿಗೆ ಅನ್ಯಭಾಷೆಗಳ ಅರ್ಥವನ್ನು ಹೇಳುವ ವರವೂ ಕೊಡಲಾಗುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

10 ಎಕ್ಲ್ಯಾಕ್ ವಿಚಿತ್ರ್ ಕಾಮಾ ಕರ್‍ತಲೆ ವರು ಗಾವ್ತಾ, ಅನಿಎಕ್ಲ್ಯಾಕ್ ಪ್ರವಾದ್ ಕರ್‍ತಲೆ, ತಿನ್ವೆಚ್ಯಾಕ್ ಪ್ರೆರಕ್ ಆತ್ಮೆ ಪರಿಕ್ಷಾ ಕರುನ್ ಬಗ್ತಲೆ ವರು ಗಾವ್ತಾ. ಎಕ್ಲ್ಯಾಕ್ ದುಸ್ರಿ ದುಸ್ರಿ ಬಾಶಾ ಬೊಲ್ತಲೆ ವರು ಗಾವ್ತಾ, ಅನಿಎಕ್ಲ್ಯಾಕ್ ಹ್ಯಾ ಬಾಶಾಂಚೊ ಅರ್ಥ್ ಸಾಂಗ್ತಲೆ ವರು ಗಾವ್ತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 12:10
38 ತಿಳಿವುಗಳ ಹೋಲಿಕೆ  

ಆದ್ದರಿಂದ ಸಹೋದರ ಸಹೋದರಿಯರೇ, ನೀವು ಪ್ರವಾದನಾ ವರವನ್ನು ನಿಜವಾಗಿಯೂ ಬಯಸಿರಿ. ವಿವಿಧ ಭಾಷೆಗಳಲ್ಲಿ ಮಾತಾಡುವ ವರವನ್ನು ಹೊಂದಿರುವವರು ತಮ್ಮ ವರವನ್ನು ಉಪಯೋಗಿಸಲಿ. ಅವರನ್ನು ತಡೆಯಬೇಡಿರಿ.


ನನ್ನ ಪ್ರಿಯ ಸ್ನೇಹಿತರೇ, ಈಗ ಲೋಕದಲ್ಲಿ ಅನೇಕ ಸುಳ್ಳುಪ್ರವಾದಿಗಳಿದ್ದಾರೆ. ಆದ್ದರಿಂದ ಪ್ರತಿಯೊಂದು ಆತ್ಮವನ್ನು ನಂಬಬೇಡಿ. ಆದರೆ ಆ ಆತ್ಮಗಳು ದೇವರಿಂದ ಬಂದವುಗಳೇ ಎಂಬುದನ್ನು ಪರೀಕ್ಷಿಸಿ ತಿಳಿದುಕೊಳ್ಳಿರಿ.


ನಂಬುವವರಾದರೋ ಅದ್ಭುತಕಾರ್ಯಗಳನ್ನು ಮಾಡುವರು. ಅವರು ನನ್ನ ಹೆಸರಿನ ಮೂಲಕ ದೆವ್ವಗಳನ್ನು ಬಿಡಿಸುವರು. ತಾವೆಂದೂ ಕಲಿತಿಲ್ಲದ ಭಾಷೆಗಳಲ್ಲಿ ಮಾತನಾಡುವರು.


“ಆ ಬಳಿಕ ನಾನು ನನ್ನ ಆತ್ಮವನ್ನು ಎಲ್ಲಾ ತರದ ಜನರ ಮೇಲೆ ಸುರಿಸುವೆನು. ನಿಮ್ಮ ಗಂಡುಹೆಣ್ಣು ಮಕ್ಕಳು ಪ್ರವಾದಿಸುವರು. ನಿಮ್ಮ ವೃದ್ಧರು ಕನಸು ಕಾಣುವರು. ನಿಮ್ಮ ಯುವಕರಿಗೆ ದರ್ಶನಗಳಾಗುವವು.


ದೇವರು ಪವಿತ್ರಾತ್ಮನನ್ನು ಕೊಡುವುದು ನೀವು ಧರ್ಮಶಾಸ್ತ್ರವನ್ನು ಅನುಸರಿಸಿದ್ದರಿಂದಲೋ? ದೇವರು ಮಹತ್ಕಾರ್ಯಗಳನ್ನು ಮಾಡುವುದು ನೀವು ಧರ್ಮಶಾಸ್ತ್ರವನ್ನು ಅನುಸರಿಸಿದ್ದರಿಂದಲೋ? ಇಲ್ಲ! ಸುವಾರ್ತೆಯನ್ನು ಕೇಳಿ ಅದನ್ನು ನಂಬಿಕೊಂಡದ್ದರಿಂದ ದೇವರು ನಿಮಗೆ ಪವಿತ್ರಾತ್ಮನನ್ನು ಕೊಡುತ್ತಾನೆ ಮತ್ತು ಮಹತ್ಕಾರ್ಯಗಳನ್ನು ಮಾಡುತ್ತಾನೆ.


ಶಿಷ್ಯರು ಪ್ರಪಂಚದ ಎಲ್ಲಾ ಕಡೆಗೆ ಹೋಗಿ, ಜನರಿಗೆ ಸುವಾರ್ತೆಯನ್ನು ಸಾರಿದರು. ಪ್ರಭುವು ಅವರೊಂದಿಗೆ ಕಾರ್ಯಸಾಧಿಸುತ್ತಾ, ಸೂಚಕಕಾರ್ಯಗಳಿಂದ ಸುವಾರ್ತೆಯ ವಾಕ್ಯವನ್ನು ಬಲಪಡಿಸಿದನು.


“ನೀನು ಮಾಡುತ್ತಿರುವುದು ನನಗೆ ತಿಳಿದಿದೆ. ನೀನು ಕಷ್ಟಪಟ್ಟು ಕೆಲಸಮಾಡುತ್ತಾ ತಾಳ್ಮೆಯಿಂದಿರುವೆ. ನೀನು ಕೆಟ್ಟ ಜನರನ್ನು ಸಹಿಸಿಕೊಳ್ಳುವುದಿಲ್ಲ ಎಂಬುದು ನನಗೆ ತಿಳಿದಿದೆ. ಅಪೊಸ್ತಲರಾಗಿಲ್ಲದಿದ್ದರೂ ತಮ್ಮನ್ನು ಅಪೊಸ್ತಲರೆಂದು ಹೇಳಿಕೊಳ್ಳುವವರನ್ನು ನೀನು ಪರೀಕ್ಷಿಸಿ, ಅವರು ಸುಳ್ಳುಗಾರರೆಂಬುದನ್ನು ಕಂಡುಹಿಡಿದಿರುವೆ.


ಪ್ರವಾದನೆಯನ್ನು ಹೀನೈಸಬೇಡಿ.


ಪ್ರೀತಿಯು ಎಂದಿಗೂ ಕೊನೆಗೊಳ್ಳುವುದಿಲ್ಲ. ಪ್ರವಾದಿಸುವ ವರಗಳಿವೆ, ಆದರೆ ಅವು ಕೊನೆಗೊಳ್ಳುತ್ತವೆ. ವಿವಿಧ ಭಾಷೆಗಳಲ್ಲಿ ಮಾತಾಡುವ ವರಗಳಿವೆ, ಆದರೆ ಆ ವರಗಳು ಕೊನೆಗೊಳ್ಳುತ್ತವೆ. ಜ್ಞಾನವೆಂಬ ವರವೂ ಇದೆ, ಆದರೆ ಅದೂ ಕೊನೆಗೊಳ್ಳುವುದು.


ಅದ್ಭುತಕಾರ್ಯಗಳ ಶಕ್ತಿಯನ್ನು ಮತ್ತು ಮಹಾಕಾರ್ಯಗಳನ್ನು ನೋಡಿದ್ದರಿಂದಲೂ ಪವಿತ್ರಾತ್ಮನ ಶಕ್ತಿಯ ನಿಮಿತ್ತದಿಂದಲೂ ಅವರು ದೇವರಿಗೆ ವಿಧೇಯರಾದರು. ನಾನು ಜೆರುಸಲೇಮಿನಿಂದ ಇಲ್ಲುರಿಕ ಪ್ರಾಂತ್ಯದವರೆಗೂ ಸುವಾರ್ತೆಯನ್ನು ಬೋಧಿಸಿ, ನನ್ನ ಆ ಕರ್ತವ್ಯವನ್ನು ಪೂರೈಸಿದ್ದೇನೆ.


ನಾವೆಲ್ಲರೂ ಬೇರೆಬೇರೆ ವರಗಳನ್ನು ಹೊಂದಿದ್ದೇವೆ. ದೇವರು ನಮಗೆ ಕೊಟ್ಟಿರುವ ಕೃಪೆಯಿಂದಲೇ ಪ್ರತಿಯೊಂದು ವರವು ಬಂದಿದೆ. ಪ್ರವಾದಿಸುವ ವರವನ್ನು ಹೊಂದಿರುವವನು ತನಗಿರುವ ನಂಬಿಕೆಯೊಂದಿಗೆ ಆ ವರವನ್ನು ಉಪಯೋಗಿಸಬೇಕು.


ಬಳಿಕ ಪೌಲನು ಅವರ ಮೇಲೆ ತನ್ನ ಕೈಗಳನ್ನಿಟ್ಟಾಗ ಅವರು ಪವಿತ್ರಾತ್ಮಭರಿತರಾದರು. ಅವರು ವಿವಿಧ ಭಾಷೆಗಳಲ್ಲಿ ಮಾತಾಡಿದರು ಮತ್ತು ಪ್ರವಾದನೆ ಮಾಡಿದರು.


ಈ ಪ್ರವಾದಿಗಳಲ್ಲಿ “ಅಗಬ” ಎಂಬ ಒಬ್ಬನಿದ್ದನು. ಅಗಬನು ಅಂತಿಯೋಕ್ಯದಲ್ಲಿ ಪವಿತ್ರಾತ್ಮನ ಪ್ರೇರಣೆಯಿಂದ, “ಇಡೀ ಪ್ರಪಂಚಕ್ಕೆ ಭೀಕರ ಕ್ಷಾಮ ಬರಲಿದೆ” ಎಂದು ಹೇಳಿದನು. (ಈ ಬರಗಾಲವು ಕ್ಲಾಡಿಯಸ್ ಚಕ್ರವರ್ತಿಯ ಕಾಲದಲ್ಲಿ ಬಂದಿತು.)


ಪೇತ್ರನು, “ಅನನೀಯನೇ, ನಿನ್ನ ಹೃದಯವನ್ನು ಆಳಲು ನೀನು ಸೈತಾನನಿಗೆ ಒಪ್ಪಿಸಿಕೊಟ್ಟದ್ದೇಕೆ? ನೀನು ಸುಳ್ಳು ಹೇಳಿ, ಪವಿತ್ರಾತ್ಮನನ್ನು ಮೋಸಪಡಿಸಲು ಪ್ರಯತ್ನಿಸಿದೆ. ನೀನು ನಿನ್ನ ಜಮೀನನ್ನು ಮಾರಿದೆ, ಆದರೆ ಬಂದ ಹಣದಲ್ಲಿ ಒಂದು ಭಾಗವನ್ನು ನೀನು ನಿನಗೋಸ್ಕರ ಇಟ್ಟುಕೊಂಡದ್ದೇಕೆ?


ಆದರೆ ಪವಿತ್ರಾತ್ಮನು ನಿಮ್ಮ ಮೇಲೆ ಬಂದಾಗ ನೀವು ಬಲಹೊಂದಿ ಜೆರುಸಲೇಮಿನಲ್ಲಿಯೂ ಇಡೀ ಜುದೇಯದಲ್ಲಿಯೂ ಸಮಾರ್ಯದಲ್ಲಿಯೂ ಮತ್ತು ಭೂಲೋಕದ ಕಟ್ಟಕಡೆಯವರೆಗೂ ನನಗೆ ಸಾಕ್ಷಿಗಳಾಗಿರುವಿರಿ” ಎಂದನು.


ಆದರೆ ಸತ್ಯದ ಆತ್ಮನು ಬಂದಾಗ, ಆತನು ನಿಮ್ಮನ್ನು ಸಕಲ ವಿಷಯದಲ್ಲಿಯೂ ಸತ್ಯಕ್ಕೆ ನಡೆಸುವನು. ಸತ್ಯದ ಆತ್ಮನು ಹೇಳುವುದು ಆತನ ಸ್ವಂತ ಮಾತುಗಳಲ್ಲ. ತಾನು ಕೇಳಿದ್ದನ್ನು ಮಾತ್ರ ಆತನು ಹೇಳುತ್ತಾನೆ. ಸಂಭವಿಸಲಿರುವ ಸಂಗತಿಗಳನ್ನು ಆತನು ನಿಮಗೆ ತಿಳಿಸುತ್ತಾನೆ.


“ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ನನ್ನಲ್ಲಿ ನಂಬಿಕೆ ಇಡುವ ವ್ಯಕ್ತಿಯು ನಾನು ಮಾಡಿದ ಕಾರ್ಯಗಳನ್ನೇ ಮಾಡುವನು. ಹೌದು ನಾನು ಮಾಡುವ ಕಾರ್ಯಗಳಿಗಿಂತಲೂ ದೊಡ್ಡಕಾರ್ಯಗಳನ್ನು ಅವನು ಮಾಡುವನು. ಏಕೆಂದರೆ ನಾನು ತಂದೆಯ ಬಳಿಗೆ ಹೋಗುತ್ತಿದ್ದೇನೆ.


ಕೇಳಿರಿ! ನನ್ನ ತಂದೆ ನಿಮಗೆ ವಾಗ್ದಾನ ಮಾಡಿದ್ದನ್ನು ನಾನು ನಿಮಗೆ ಕಳುಹಿಸಿಕೊಡುತ್ತೇನೆ. ಆದರೆ ನೀವು ಪರಲೋಕದಿಂದ ಆ ಶಕ್ತಿಯನ್ನು ಪಡೆಯುವ ತನಕ ಜೆರುಸಲೇಮಿನಲ್ಲೇ ಕಾದುಕೊಂಡಿರಿ” ಅಂದನು.


ಇದಲ್ಲದೆ, ದೇವರು ಅದ್ಭುತಕಾರ್ಯಗಳಿಂದ, ಸೂಚಕಕಾರ್ಯಗಳಿಂದ, ನಾನಾ ವಿಧವಾದ ಮಹತ್ಕಾರ್ಯಗಳಿಂದ ಮತ್ತು ಪವಿತ್ರಾತ್ಮನ ವರಗಳನ್ನು ತನ್ನ ಇಷ್ಟಾನುಸಾರವಾಗಿ ದಯಪಾಲಿಸುವುದರ ಮೂಲಕ ಅದನ್ನು ಸ್ಥಿರಪಡಿಸಿದನು.


ಆ ಕಾಲದಲ್ಲಿ ಕೆಲವು ಪ್ರವಾದಿಗಳು ಜೆರುಸಲೇಮಿನಿಂದ ಅಂತಿಯೋಕ್ಯಕ್ಕೆ ಹೋದರು.


ಪುರುಷನು ಪ್ರವಾದಿಸುವಾಗ ಅಥವಾ ಪ್ರಾರ್ಥಿಸುವಾಗ ತನ್ನ ತಲೆಯ ಮೇಲೆ ಮುಸುಕು ಹಾಕಿಕೊಂಡರೆ ಅದು ಅವನ ಶಿರಸ್ಸಾದ ಕ್ರಿಸ್ತನಿಗೆ ಅಪಮಾನಕರವಾಗಿದೆ.


ಪರಭಾಷೆಯಲ್ಲಿ ಮಾತಾಡುವ ವರವುಳ್ಳವನು ತಾನು ಹೇಳುವ ವಿಷಯಗಳನ್ನು ಅನುವಾದಿಸುವ ಸಾಮರ್ಥ್ಯಕ್ಕಾಗಿಯೂ ದೇವರಲ್ಲಿ ಪ್ರಾರ್ಥಿಸಲಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು