ದೇವರು ನನಗೆ ವಿಶೇಷವಾದ ಒಂದು ವರವನ್ನು ಕೊಟ್ಟಿದ್ದಾನೆ. ಆದಕಾರಣವೇ, ನಿಮ್ಮಲ್ಲಿರುವ ಪ್ರತಿಯೊಬ್ಬರಿಗೂ ಈ ಸಂಗತಿಗಳನ್ನು ತಿಳಿಸುತ್ತಿದ್ದೇನೆ. ನೀವು ನಿಮ್ಮ ನಿಜವಾದ ಯೋಗ್ಯತೆಗಿಂತಲೂ ಹೆಚ್ಚಾಗಿ ನಿಮ್ಮ ವಿಷಯದಲ್ಲಿ ಭಾವಿಸಿಕೊಳ್ಳಬೇಡಿ. ನೀವು ನಿಮ್ಮ ವಿಷಯದಲ್ಲಿ ಏನು ಭಾವಿಸಿಕೊಂಡರೂ ಆ ಭಾವನೆಯು ನಿಮ್ಮ ನಿಜವಾದ ಯೋಗ್ಯತೆಗೆ ಸರಿಸಮಾನವಾಗಿರಬೇಕು. ದೇವರು ನಿಮಗೆ ಎಂಥ ನಂಬಿಕೆಯನ್ನು ಕೊಟ್ಟಿದ್ದಾನೋ ಆ ನಂಬಿಕೆಗೆ ತಕ್ಕಂತೆ ನಿಮ್ಮ ವಿಷಯದಲ್ಲಿ ಭಾವಿಸಿಕೊಳ್ಳಿರಿ.
ನೀವು ಯಾವುದನ್ನೇ ಮಾಡುವಾಗ, ಸ್ವಾರ್ಥವಾಗಲಿ ಅಹಂಕಾರವಾಗಲಿ ನಿಮಗೆ ಮಾರ್ಗದರ್ಶಕವಾಗದಂತೆ ನೋಡಿಕೊಳ್ಳಿರಿ. ದೀನಭಾವವುಳ್ಳವರಾಗಿದ್ದು ನಿಮಗಿಂತಲೂ ಹೆಚ್ಚಾಗಿ ಬೇರೆಯವರಿಗೆ ಗೌರವವನ್ನು ಕೊಡಿರಿ.