1 ಕೊರಿಂಥದವರಿಗೆ 12:18 - ಪರಿಶುದ್ದ ಬೈಬಲ್18-19 ದೇಹದ ಪ್ರತಿಯೊಂದು ಅಂಗವು ಒಂದೇ ರೀತಿಯ ಅಂಗವಾಗಿದ್ದರೆ, ಆಗ ದೇಹವೇ ಇರುತ್ತಿರಲಿಲ್ಲ. ಆದರೆ ದೇವರು ತನ್ನ ಇಚ್ಛೆಗನುಸಾರವಾಗಿ ದೇಹದಲ್ಲಿ ಅಂಗಾಂಗಗಳನ್ನು ಇಟ್ಟಿದ್ದಾನೆ. ಆತನು ಅವುಗಳಲ್ಲಿ ಪ್ರತಿಯೊಂದಕ್ಕೂ ಸ್ಥಳವನ್ನು ಗೊತ್ತುಪಡಿಸಿದ್ದಾನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ಆದರೆ ದೇವರು ಆ ಅಂಗಗಳಲ್ಲಿ ಪ್ರತಿಯೊಂದನ್ನು ತನಗೆ ಸರಿಯಾಗಿ ತೋಚಿದ ಪ್ರಕಾರ ದೇಹದೊಳಗೆ ಇಟ್ಟಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 ಸದ್ಯ, ದೇವರು ತಮ್ಮ ಚಿತ್ತಾನುಸಾರ, ಪ್ರತಿಯೊಂದು ಅಂಗವನ್ನು ಸರಿಯಾಗಿ ಜೋಡಿಸಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 ಆದರೆ ದೇವರು ಆ ಅಂಗಗಳಲ್ಲಿ ಪ್ರತಿಯೊಂದನ್ನು ತನಗೆ ಸರಿಯಾಗಿ ತೋಚಿದ ಪ್ರಕಾರ ದೇಹದೊಳಗೆ ಇಟ್ಟಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18 ಆದರೆ ದೇವರು ಆ ಅಂಗಗಳಲ್ಲಿ ಪ್ರತಿಯೊಂದನ್ನು ತಮ್ಮ ಇಷ್ಟದ ಪ್ರಕಾರ ದೇಹದಲ್ಲಿ ಇಟ್ಟಿದ್ದಾರೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್18 ತಸೆ ಮನುನ್ ಎಕ್ ಅಂಗಾತ್ ದುಸ್ರ್ಯಾ, ದುಸ್ರ್ಯಾ ಭಾಗಾಕ್ನಿ ದೆವಾನ್ ಅಪ್ನಾಂಚ್ಯಾ ಮನಾಕ್ ಯೆತಾ ತಸೆ ದುಸ್ರೊ ದುಸ್ರೊ ಜಾಗೊ ದಿಲ್ಯಾನಾಯ್. ಅಧ್ಯಾಯವನ್ನು ನೋಡಿ |
ದೇವರು ನನಗೆ ವಿಶೇಷವಾದ ಒಂದು ವರವನ್ನು ಕೊಟ್ಟಿದ್ದಾನೆ. ಆದಕಾರಣವೇ, ನಿಮ್ಮಲ್ಲಿರುವ ಪ್ರತಿಯೊಬ್ಬರಿಗೂ ಈ ಸಂಗತಿಗಳನ್ನು ತಿಳಿಸುತ್ತಿದ್ದೇನೆ. ನೀವು ನಿಮ್ಮ ನಿಜವಾದ ಯೋಗ್ಯತೆಗಿಂತಲೂ ಹೆಚ್ಚಾಗಿ ನಿಮ್ಮ ವಿಷಯದಲ್ಲಿ ಭಾವಿಸಿಕೊಳ್ಳಬೇಡಿ. ನೀವು ನಿಮ್ಮ ವಿಷಯದಲ್ಲಿ ಏನು ಭಾವಿಸಿಕೊಂಡರೂ ಆ ಭಾವನೆಯು ನಿಮ್ಮ ನಿಜವಾದ ಯೋಗ್ಯತೆಗೆ ಸರಿಸಮಾನವಾಗಿರಬೇಕು. ದೇವರು ನಿಮಗೆ ಎಂಥ ನಂಬಿಕೆಯನ್ನು ಕೊಟ್ಟಿದ್ದಾನೋ ಆ ನಂಬಿಕೆಗೆ ತಕ್ಕಂತೆ ನಿಮ್ಮ ವಿಷಯದಲ್ಲಿ ಭಾವಿಸಿಕೊಳ್ಳಿರಿ.
ಬಳಿಕ ಯೇಸು ಪವಿತ್ರಾತ್ಮನ ಮೂಲಕ ಬಹಳ ಸಂತೋಷಗೊಂಡು ಹೀಗೆ ಪ್ರಾರ್ಥಿಸಿದನು: “ಪರಲೋಕ ಭೂಲೋಕಗಳ ಪ್ರಭುವಾದ ತಂದೆಯೇ, ನಾನು ನಿನ್ನನ್ನು ಸ್ತುತಿಸುತ್ತೇನೆ. ನೀನು ಜ್ಞಾನಿಗಳಿಗೂ ಬುದ್ಧಿವಂತರಿಗೂ ಈ ಸಂಗತಿಗಳನ್ನು ಮರೆಮಾಡಿದ್ದಕ್ಕಾಗಿ ನಾನು ನಿನ್ನನ್ನು ಸ್ತುತಿಸುತ್ತೇನೆ. ಆದರೆ ನೀನು ಚಿಕ್ಕಮಕ್ಕಳಂತಿರುವ ಜನರಿಗೆ ಈ ಸಂಗತಿಗಳನ್ನು ಪ್ರಕಟಮಾಡಿದೆ. ಹೌದು, ತಂದೆಯೇ, ಅದೇ ನಿನ್ನ ಅಪೇಕ್ಷೆಯಾಗಿತ್ತು.
ಆಗ ಆ ಜನರು ಯೆಹೋವನಿಗೆ, “ಯೆಹೋವನೇ, ಈ ಮನುಷ್ಯನು ಕೆಟ್ಟಕಾರ್ಯ ಮಾಡಿದ್ದರಿಂದ ನಾವು ಇವನನ್ನು ಸಮುದ್ರಕ್ಕೆ ಬಿಸಾಡುತ್ತೇವೆ. ನಾವು ಒಬ್ಬ ನಿರಪರಾಧಿಯನ್ನು ಕೊಂದೆವು ಎಂಬ ಅಪರಾಧವನ್ನು ನಮ್ಮ ಮೇಲೆ ಹೊರಿಸಬೇಡ. ಅವನನ್ನು ಕೊಂದದ್ದಕ್ಕಾಗಿ ನಮ್ಮನ್ನು ಕೊಲ್ಲಬೇಡ. ನೀನು ಯೆಹೋವನೆಂದು ನಮಗೆ ಗೊತ್ತಿದೆ. ನಿನಗೆ ಇಷ್ಟಬಂದದ್ದನ್ನು ನೀನು ನೆರವೇರಿಸುವೆ. ಆದ್ದರಿಂದ ದಯವಿಟ್ಟು ನಮಗೆ ಕರುಣೆ ತೋರಿಸು” ಅಂದರು.