1 ಕೊರಿಂಥದವರಿಗೆ 12:28 - ಪರಿಶುದ್ದ ಬೈಬಲ್28 ದೇವರು ಸಭೆಯಲ್ಲಿ ಅಪೊಸ್ತಲರಿಗೆ ಮೊದಲನೆಯ ಸ್ಥಾನವನ್ನೂ ಪ್ರವಾದಿಗಳಿಗೆ ಎರಡನೆಯ ಸ್ಥಾನವನ್ನೂ ಉಪದೇಶಕರಿಗೆ ಮೂರನೆಯ ಸ್ಥಾನವನ್ನೂ ಇಟ್ಟಿದ್ದಾನೆ. ಇದಲ್ಲದೆ ದೇವರು, ಅದ್ಭುತಕಾರ್ಯಗಳನ್ನು ಮಾಡುವ ಜನರಿಗೂ ಸ್ಪಸ್ಥಪಡಿಸುವ ಜನರಿಗೂ ಇತರರಿಗೆ ಸಹಾಯಮಾಡುವ ಜನರಿಗೂ ಮುನ್ನಡೆಸಬಲ್ಲ ಜನರಿಗೂ ವಿವಿಧ ಭಾಷೆಗಳನ್ನು ಮಾತಾಡಬಲ್ಲ ಜನರಿಗೂ ಸಭೆಯಲ್ಲಿ ಸ್ಥಾನವನ್ನು ಕೊಟ್ಟಿದ್ದಾನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201928 ದೇವರು ತನ್ನ ಸಭೆಯಲ್ಲಿ ಮೊದಲನೆಯದಾಗಿ ಅಪೊಸ್ತಲರನ್ನು, ಎರಡನೆಯದಾಗಿ ಪ್ರವಾದಿಗಳನ್ನು, ಮೂರನೆಯದಾಗಿ ಬೋಧಕರನ್ನು ಇಟ್ಟಿದ್ದಾನೆ. ಆ ಮೇಲೆ ಮಹತ್ಕಾರ್ಯ ಮಾಡುವ ಶಕ್ತಿಯನ್ನು, ನಾನಾ ರೋಗಗಳನ್ನು ವಾಸಿಮಾಡುವ ವರವನ್ನೂ, ಪರಸಹಾಯ ಮಾಡುವ ಗುಣವನ್ನೂ, ಕಾರ್ಯಗಳನ್ನು ನಿರ್ವಹಿಸುವ ಜ್ಞಾನವನ್ನು ಮತ್ತು ವಿವಿಧ ಭಾಷೆಗಳನ್ನಾಡುವ ವರವನ್ನೂ ಅವರವರಿಗೆ ಬೇರೆ ಬೇರೆಯಾಗಿ ಕೊಟ್ಟಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)28 ದೇವರು ತಮ್ಮ ಸಭೆಯಲ್ಲಿ, ಮೊದಲನೆಯದಾಗಿ ಪ್ರೇಷಿತರನ್ನು, ಎರಡನೆಯದಾಗಿ ಪ್ರವಾದಿಗಳನ್ನು, ಮೂರನೆಯದಾಗಿ ಬೋಧಕರನ್ನು ನೇಮಿಸಿದ್ದಾರೆ. ಅನಂತರ ಪವಾಡಗಳನ್ನು ಎಸಗುವವರನ್ನು, ರೋಗಗಳನ್ನು ಗುಣಪಡಿಸುವವರನ್ನು, ಪರೋಪಕಾರಿಗಳನ್ನು, ಪರಿಪಾಲಕರನ್ನು, ಬಹುಭಾಷಾಪಂಡಿತರನ್ನು ನೇಮಿಸಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)28 ದೇವರು ತನ್ನ ಸಭೆಯಲ್ಲಿ ಮೊದಲನೇದಾಗಿ ಅಪೊಸ್ತಲರನ್ನು, ಎರಡನೇದಾಗಿ ಪ್ರವಾದಿಗಳನ್ನು, ಮೂರನೇದಾಗಿ ಉಪದೇಶಕರನ್ನು ಇಟ್ಟಿದ್ದಾನೆ; ಆಮೇಲೆ ಮಹಾತ್ಕಾರ್ಯ ಮಾಡುವ ಶಕ್ತಿಯನ್ನೂ ನಾನಾ ರೋಗಗಳನ್ನು ವಾಸಿಮಾಡುವ ವರವನ್ನೂ ಪರಸಹಾಯ ಮಾಡುವ ಗುಣವನ್ನೂ ಕಾರ್ಯಗಳನ್ನು ನಿರ್ವಹಿಸುವ ಜ್ಞಾನವನ್ನೂ ವಿವಿಧ ವಾಣಿಗಳನ್ನಾಡುವ ವರವನ್ನೂ ಅವರವರಿಗೆ ಕೊಟ್ಟಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ28 ದೇವರು ತಮ್ಮ ಸಭೆಯಲ್ಲಿ ಮೊದಲನೆಯದಾಗಿ ಅಪೊಸ್ತಲರನ್ನು, ಎರಡನೆಯದಾಗಿ ಪ್ರವಾದಿಗಳನ್ನು, ಮೂರನೆಯದಾಗಿ ಬೋಧಕರನ್ನು ನೇಮಿಸಿದ್ದಾರೆ. ಅನಂತರ ಅದ್ಭುತಕಾರ್ಯಗಳನ್ನು ಮಾಡುವವರನ್ನು, ರೋಗಗಳನ್ನು ಗುಣಪಡಿಸುವ ವರವನ್ನು, ಪರೋಪಕಾರಿಗಳನ್ನು, ಆಡಳಿತಗಾರರನ್ನು, ವಿವಿಧ ವಾಣಿಗಳನ್ನಾಡುವವರನ್ನು ನೇಮಿಸಿದ್ದಾರೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್28 ದೆವಾಚ್ಯಾ ಲೊಕಾಂಚ್ಯಾ ತಾಂಡ್ಯಾತ್ನಿ ದೆವಾನ್ ನೆಮಲ್ಲೆ ಕೊನ್ ಮಟ್ಲ್ಯಾರ್ ತೆನಿ ಹೆ: ಪೈಲೆಚೆ ಅಪೊಸ್ತಲಾ, ದೊನ್ವೆಚೆ ಪ್ರವಾದಿ, ತಿನ್ವೆಚಿ ಶಿಕ್ವುತಲಿ ಲೊಕಾ; ಹೆಂಚ್ಯಾ ಮಾನಾ ವಿಚಿತ್ರ್ ಕಾಮಾ ಕರ್‍ತಲೆ, ಪಿಡಾ ಗುನ್ ಕರ್‍ತಲೆ, ದುಸ್ರ್ಯಾಂಚಿ ಸೆವಾ ಕರ್‍ತಲೆ, ಅಧಿಕಾರ್ ಚಾಲ್ವುತಲೆ ಅನಿ ದುಸ್ರಿ ದುಸ್ರಿ ಬಾಶಾ ಬೊಲ್ತಲೆ. ಅಧ್ಯಾಯವನ್ನು ನೋಡಿ |
ವಿವಿಧ ಭಾಷೆಗಳಲ್ಲಿ ಮಾತಾಡುವ ವರವನ್ನು ನೀವೆಲ್ಲರೂ ಹೊಂದಿರಬೇಕೆಂದು ನನ್ನ ಅಪೇಕ್ಷೆಯಾಗಿದೆ. ಆದರೆ ನೀವು ಪ್ರವಾದಿಸಬೇಕೆಂದು ನಾನು ಇನ್ನೂ ಹೆಚ್ಚಾಗಿ ಅಪೇಕ್ಷಿಸುತ್ತೇನೆ. ಕೇವಲ ವಿವಿಧ ಭಾಷೆಗಳನ್ನು ಮಾತನಾಡುವವನಿಗಿಂತಲೂ ಪ್ರವಾದಿಸುವವನು ಹೆಚ್ಚು ಶ್ರೇಷ್ಠನಾಗಿದ್ದಾನೆ. ಆದರೆ ವಿವಿಧ ಭಾಷೆಗಳಲ್ಲಿ ಮಾತಾಡುವವನು ಆ ಭಾಷೆಗಳನ್ನು ಅನುವಾದಿಸಬಲ್ಲವನಾಗಿದ್ದರೆ, ಅವನು ಪ್ರವಾದಿಸುವವನಷ್ಟೇ ಶ್ರೇಷ್ಠನಾಗುತ್ತಾನೆ. ಆಗ ಅವನು ಹೇಳುವ ಸಂಗತಿಗಳ ಮೂಲಕ ಸಭೆಗೆ ಸಹಾಯವಾಗುವುದು.