1 ಕೊರಿಂಥದವರಿಗೆ 13:1 - ಪರಿಶುದ್ದ ಬೈಬಲ್1 ನಾನು ಮನುಷ್ಯರ ಭಾಷೆಗಳನ್ನಲ್ಲದೆ ದೇವದೂತರ ಭಾಷೆಗಳನ್ನು ಮಾತಾಡಬಹುದು. ಆದರೆ ನನ್ನಲ್ಲಿ ಪ್ರೀತಿಯಿಲ್ಲದಿದ್ದರೆ, ನಾನು ಕೇವಲ ಗಣಗಣಿಸುವ ಘಂಟೆ, ಝಣಝಣಿಸುವ ತಾಳ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ನಾನು ಮನುಷ್ಯರ ಭಾಷೆಗಳನ್ನೂ, ದೇವದೂತರ ಭಾಷೆಗಳನ್ನೂ ಮಾತನಾಡುವವನಾದರೂ ಪ್ರೀತಿಯಿಲ್ಲದವನಾಗಿದ್ದರೆ ನಾದಕೊಡುವ ಕಂಚಿನ ಜಾಗಟೆ, ಗಣಗಣಿಸುವ ಘಂಟೆ ಆಗಿದ್ದೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ಸುರನರರ ನುಡಿಗಳ ನಾನಾಡಬಲ್ಲೆನಾದರೂ ಪರಮ ಪ್ರೀತಿಯೊಂದೆನಗಿಲ್ಲದಿರಲು ನಾ ಕೇವಲ ಗಣಗಣಿಸುವ ಘಂಟೆ, ಝಣಝಣಿಸುವ ಜಾಗಟೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ನಾನು ಮನುಷ್ಯರ ಭಾಷೆಗಳನ್ನೂ ದೇವದೂತರ ಭಾಷೆಗಳನ್ನೂ ಆಡುವವನಾದರೂ ಪ್ರೀತಿಯಿಲ್ಲದವನಾಗಿದ್ದರೆ ನಾದಕೊಡುವ ಕಂಚೂ ಗಣಗಣಿಸುವ ತಾಳವೂ ಆಗಿದ್ದೇನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ನಾನು ಮನುಷ್ಯರ ಭಾಷೆಗಳನ್ನೂ, ದೇವದೂತರ ಭಾಷೆಗಳನ್ನೂ ಮಾತನಾಡುವವನಾದರೂ ನನಗೆ ಪ್ರೀತಿಯಿಲ್ಲದಿದ್ದರೆ, ನಾದ ಕೊಡುವ ಕಂಚೂ ಗಣಗಣಿಸುವ ತಾಳವೂ ಆಗಿದ್ದೇನೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್1 ಮಾನ್ಸಾಂಚ್ಯಾ ಅನಿ ದೆವಾಚ್ಯಾ ದುತಾಂಚ್ಯಾ ಸಗ್ಳ್ಯಾ ಬಾಶಾನಿ ಮಿಯಾ ಬೊಲಿಲ್, ಹೊಲ್ಯಾರ್ಬಿ ಮಾಜ್ಯಾ ಭುತ್ತುರ್ ಪ್ರೆಮ್ ನಾ ಹೊಲ್ಯಾರ್ ಮಿಯಾ ಎಕ್ ಆವಾಜ್ ಕರ್‍ತಲ್ಯಾ ಆಯ್ದಾನ್ ಸಾರ್ಕೊ, ಕಿನ್ನಿಕ್ ಕಿನ್ನಿಕ್ ವಾಜ್ತಲ್ಯಾ ತಾಳಾ ಸಾರ್ಕೊ. ಅಧ್ಯಾಯವನ್ನು ನೋಡಿ |
ನೀನು ತಿನ್ನುವ ಒಂದು ಆಹಾರಪದಾರ್ಥದಿಂದ ನಿನ್ನ ಸಹೋದರನ ನಂಬಿಕೆಗೆ ನೀನು ತೊಂದರೆಯನ್ನು ಮಾಡಿದರೆ, ನೀನು ಪ್ರೀತಿಯ ಮಾರ್ಗವನ್ನು ನಿಜವಾಗಿಯೂ ಅನುಸರಿಸುತ್ತಿಲ್ಲ. ಒಬ್ಬನು ಯಾವುದಾದರೂ ಆಹಾರಪದಾರ್ಥವನ್ನು ತಿನ್ನುವುದು ತಪ್ಪೆಂದು ಭಾವಿಸಿಕೊಂಡಿರುವಾಗ, ನೀನು ಆ ಪದಾರ್ಥವನ್ನು ತಿಂದರೆ ಅವನ ನಂಬಿಕೆ ಹಾಳಾಗುವುದು. ಆದ್ದರಿಂದ ನೀನು ಹಾಗೆ ಮಾಡಕೂಡದು. ಕ್ರಿಸ್ತನು ಆ ವ್ಯಕ್ತಿಗಾಗಿಯೂ ಸತ್ತನು.
ವಿವಿಧ ಭಾಷೆಗಳಲ್ಲಿ ಮಾತಾಡುವ ವರವನ್ನು ನೀವೆಲ್ಲರೂ ಹೊಂದಿರಬೇಕೆಂದು ನನ್ನ ಅಪೇಕ್ಷೆಯಾಗಿದೆ. ಆದರೆ ನೀವು ಪ್ರವಾದಿಸಬೇಕೆಂದು ನಾನು ಇನ್ನೂ ಹೆಚ್ಚಾಗಿ ಅಪೇಕ್ಷಿಸುತ್ತೇನೆ. ಕೇವಲ ವಿವಿಧ ಭಾಷೆಗಳನ್ನು ಮಾತನಾಡುವವನಿಗಿಂತಲೂ ಪ್ರವಾದಿಸುವವನು ಹೆಚ್ಚು ಶ್ರೇಷ್ಠನಾಗಿದ್ದಾನೆ. ಆದರೆ ವಿವಿಧ ಭಾಷೆಗಳಲ್ಲಿ ಮಾತಾಡುವವನು ಆ ಭಾಷೆಗಳನ್ನು ಅನುವಾದಿಸಬಲ್ಲವನಾಗಿದ್ದರೆ, ಅವನು ಪ್ರವಾದಿಸುವವನಷ್ಟೇ ಶ್ರೇಷ್ಠನಾಗುತ್ತಾನೆ. ಆಗ ಅವನು ಹೇಳುವ ಸಂಗತಿಗಳ ಮೂಲಕ ಸಭೆಗೆ ಸಹಾಯವಾಗುವುದು.