Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 13:11 - ಪರಿಶುದ್ದ ಬೈಬಲ್‌

11 ನಾನು ಬಾಲಕನಾಗಿದ್ದಾಗ ಬಾಲಕನಂತೆ ಮಾತಾಡಿದೆನು, ಆಲೋಚಿಸಿದೆನು, ಯೋಜನೆಗಳನ್ನು ಮಾಡಿದೆನು. ಆದರೆ ನಾನು ಪ್ರಾಯಸ್ಥನಾದ ಮೇಲೆ ಬಾಲ್ಯದ ನಡವಳಿಕೆಯನ್ನು ಬಿಟ್ಟುಬಿಟ್ಟೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ನಾನು ಬಾಲಕನಾಗಿದ್ದಾಗ ಬಾಲಕನ ರೀತಿಯಲ್ಲಿ ಮಾತನಾಡಿದೆನು. ಬಾಲಕನ ಹಾಗೆ ಯೋಚಿಸಿದೆನು. ಬಾಲಕನಂತೆ ವಿವೇಚಿಸಿದೆನು. ಪ್ರಾಯಸ್ಥನಾದ ಮೇಲೆ ಬಾಲ್ಯದವುಗಳನ್ನು ಬಿಟ್ಟುಬಿಟ್ಟೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಬಾಲಕ ನಾನಾಗಿರೆ ಆಡಿದೆ, ಮಾತಾಡಿದೆ, ಚಿಂತಿಸಿದೆ, ಸುಖದುಃಖಗಳ ಸವಿದೆ ಬಾಲಕನಂತೆ. ಬಲಿತು ಬೆಳೆದು ಮನುಜನಾದುದೆ ಬಾಲಿಶವಾದುದೆಲ್ಲವನು ಬದಿಗೊತ್ತಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ನಾನು ಬಾಲಕನಾಗಿದ್ದಾಗ ಬಾಲಕನ ಮಾತುಗಳನ್ನಾಡಿದೆನು, ಬಾಲಕನ ಸುಖ ದುಃಖಗಳನ್ನು ಅನುಭವಿಸಿದೆನು, ಬಾಲಕನ ಆಲೋಚನೆಗಳನ್ನು ಮಾಡಿಕೊಂಡೆನು. ಪ್ರಾಯಸ್ಥನಾದ ಮೇಲೆ ಬಾಲ್ಯದವುಗಳನ್ನು ಬಿಟ್ಟುಬಿಟ್ಟೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ನಾನು ಬಾಲಕನಾಗಿದ್ದಾಗ, ಬಾಲಕನ ಮಾತುಗಳನ್ನಾಡಿದೆನು, ಬಾಲಕನಂತೆ ಯೋಚಿಸಿದೆನು, ಬಾಲಕನಂತೆಯೇ ತರ್ಕಿಸಿದೆನು. ಪ್ರೌಢನಾದಾಗ ಬಾಲ್ಯದವುಗಳನ್ನು ಬಿಟ್ಟುಬಿಟ್ಟೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

11 ಮಿಯಾ ಬಾರಿಕ್ ಹೊತ್ತೊ ತನ್ನಾ ಬಾರ್‍ಕ್ಯಾ ಪೊರಾ ಸಾರ್ಕೆ ಬೊಲಿ, ಬಾರಿಕ್ ಪೊರಾ ಸಾರ್ಕೆ ಕಳ್ವುನ್ ಘೆಯ್ ಅನಿ ಬಾರಿಕ್ ಪೊರಾ ಸಾರ್ಕೆ ಚಿಂತಿ. ಅತ್ತಾ ಜಾನ್ತೊ ಹೊಲ್ಲ್ಯಾ ತನ್ನಾ ಬಾರಿಕ್ ಪೊರಾಚಿ ಸಗ್ಳಿ ಚಲ್ನುಕ್ ಮಿಯಾ ಸೊಡುನ್ ಸೊಡ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 13:11
8 ತಿಳಿವುಗಳ ಹೋಲಿಕೆ  

ಸಹೋದರ ಸಹೋದರಿಯರೇ, ಮಕ್ಕಳಂತೆ ಆಲೋಚಿಸಬೇಡಿ. ಕೆಟ್ಟ ವಿಷಯಗಳಲ್ಲಿ ಎಳೆಗೂಸುಗಳಂತಿರಿ. ಆದರೆ ನಿಮ್ಮ ಆಲೋಚನೆಗಳಲ್ಲಿ ಪ್ರಾಯಸ್ಥರಂತಿರಿ.


ನಾನು ಮತ್ತೆ ಹೇಳುವುದೇನೆಂದರೆ: ಬಾಧ್ಯಸ್ತನು ಬಾಲಕನಾಗಿರುವಾಗ ಅವನಿಗೂ ಗುಲಾಮನಿಗೂ ಯಾವ ವ್ಯತ್ಯಾಸವೂ ಇಲ್ಲ. ಆಸ್ತಿಗೆಲ್ಲಾ ಒಡೆಯನಾಗಿದ್ದರೂ ಅವನು ಗುಲಾಮನಂತಿರುವನು.


ನಿಮ್ಮ ಕೋಪವು ನಿಮ್ಮನ್ನು ಹತೋಟಿಯಲ್ಲಿಡದಂತೆ ನೋಡಿಕೊಳ್ಳಿರಿ. ನಿಮ್ಮ ದೇಹವು ನಿಮ್ಮನ್ನು ಪಾಪಕ್ಕೆ ನಡೆಸದಂತೆ ನೋಡಿಕೊಳ್ಳಿರಿ. ಜನರು ಯೌವನಪ್ರಾಯದಲ್ಲಿರುವಾಗ, ಜೀವನದ ಆರಂಭದಲ್ಲಿಯೇ ಮೂಢಕಾರ್ಯಗಳನ್ನು ಮಾಡುವರು.


ಆ ವರೆಗೂ ಸಮುವೇಲನಿಗೆ ಯೆಹೋವನ ಅನುಭವವಿರಲಿಲ್ಲ; ಯೆಹೋವನು ಅವನೊಂದಿಗೆ ನೇರವಾಗಿ ಮಾತಾಡಿರಲಿಲ್ಲ.


ಶಿಷ್ಯರು ಇದರ ಅರ್ಥವನ್ನು ಚರ್ಚಿಸಿದರು. ಅವರು, “ನಾವು ರೊಟ್ಟಿ ತರಲು ಮರೆತುಬಿಟ್ಟದ್ದಕ್ಕಾಗಿ ಯೇಸು ಹೀಗೆ ಹೇಳಿರಬಹುದೆ?” ಎಂದು ಮಾತಾಡಿಕೊಂಡರು.


ಆದರೆ ಸಂಪೂರ್ಣತೆಯು ಬಂದಾಗ ಸಂಪೂರ್ಣವಲ್ಲದವುಗಳು ಕೊನೆಗೊಳ್ಳುತ್ತವೆ.


ನಮಗೂ ಸಹ ಇದು ಅನ್ವಯಿಸುತ್ತದೆ. ಕನ್ನಡಿಯಲ್ಲಿ ಕೇವಲ ಪ್ರತಿಬಿಂಬ ಕಾಣುವಂತೆ ಈಗ ನಾವು ನೋಡುತ್ತಿದ್ದೇವೆ. ಆದರೆ ಮುಂದಿನ ಕಾಲದಲ್ಲಿ ನಾವು ಮುಖಾಮುಖಿಯಾಗಿ ಕಾಣುತ್ತೇವೆ. ಈಗ ನನಗೆ ತಿಳಿದಿರುವುದು ಕೇವಲ ಒಂದು ಭಾಗವಷ್ಟೆ, ಆದರೆ ಆ ಕಾಲದಲ್ಲಿ ದೇವರು ನನ್ನನ್ನು ತಿಳಿದಿರುವಂತೆ ನಾನು ಸಂಪೂರ್ಣವಾಗಿ ತಿಳಿದುಕೊಳ್ಳುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು