1 ಕೊರಿಂಥದವರಿಗೆ 13:2 - ಪರಿಶುದ್ದ ಬೈಬಲ್2 ಪ್ರವಾದಿಸುವ ವರ ನನಗಿರಬಹುದು; ದೇವರ ರಹಸ್ಯ ಸಂಗತಿಗಳನ್ನೆಲ್ಲಾ ಮತ್ತು ಜ್ಞಾನವನ್ನೆಲ್ಲಾ ನಾನು ಅರ್ಥಮಾಡಿಕೊಂಡಿರಬಹುದು ಮತ್ತು ಬೆಟ್ಟಗಳನ್ನು ಚಲಿಸಬಲ್ಲಂಥ ಮಹಾನಂಬಿಕೆ ನನಗಿರಬಹುದು. ಇವುಗಳೆಲ್ಲಾ ನನ್ನಲ್ಲಿ ಇದ್ದರೂ ಪ್ರೀತಿಯು ಇಲ್ಲದಿದ್ದರೆ, ನಾನು ನಿಷ್ಪ್ರಯೋಜಕನಾಗಿದ್ದೇನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ನನಗೆ ಪ್ರವಾದನ ವರವಿದ್ದರೂ, ಎಲ್ಲಾ ರಹಸ್ಯಗಳೂ, ಸಕಲ ವಿಧವಾದ ವಿದ್ಯೆಗಳನ್ನು ತಿಳಿದ್ದರೂ, ಬೆಟ್ಟಗಳನ್ನೂ ತೆಗೆದಿಡುವುಷ್ಟು ನಂಬಿಕೆಯಿದ್ದರೂ, ಪ್ರೀತಿಯಿಲ್ಲದವನಾಗಿದ್ದರೆ ನಾನು ಏನೂ ಅಲ್ಲದವನಾಗಿದ್ದೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ಪ್ರವಾದನೆಯ ವರವೆನಗಿರಬಹುದು ಇರಬಹುದು ನಿಗೂಢ ರಹಸ್ಯಗಳರಿವು ಎಲ್ಲದರ ಪರಿಜ್ಞಾನ, ಪರ್ವತವನೇ ಕದಲಿಪ ವಿಶ್ವಾಸ ಪ್ರೀತಿಯೊಂದಿಲ್ಲದಿರೆ ನಾ ಶೂನ್ಯಸಮಾನ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ನನಗೆ ಪ್ರವಾದನವರವಿದ್ದರೂ ಎಲ್ಲಾ ರಹಸ್ಯಗಳೂ ಸಕಲ ವಿಧವಾದ ವಿದ್ಯೆಯೂ ತಿಳಿದರೂ, ಬೆಟ್ಟಗಳನ್ನು ತೆಗೆದಿಡುವದಕ್ಕೆ ಬೇಕಾದಷ್ಟು ನಂಬಿಕೆಯಿದ್ದರೂ ನಾನು ಪ್ರೀತಿಯಿಲ್ಲದವನಾಗಿದ್ದರೆ ಏನೂ ಅಲ್ಲದವನಾಗಿದ್ದೇನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ನನಗೆ ಪ್ರವಾದನ ವರವಿದ್ದರೂ ನಾನು ಎಲ್ಲಾ ರಹಸ್ಯಗಳನ್ನೂ, ಸಕಲ ವಿದ್ಯೆಯನ್ನು ತಿಳಿದಿದ್ದರೂ ಬೆಟ್ಟಗಳನ್ನು ಕದಲಿಸುವಷ್ಟು ನಂಬಿಕೆಯಿದ್ದರೂ ನನಗೆ ಪ್ರೀತಿಯಿಲ್ಲದಿದ್ದರೆ, ಶೂನ್ಯನಾಗಿದ್ದೇನೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್2 ಪ್ರವಾದ್ ಕರ್‍ತಲೆ ವರು ಮಾಕಾ ಅಸಿಲ್ ಅನಿ ಘುಟಾನ್ ಹೊತ್ತ್ಯಾ ಸಂಗ್ತಿಯಾಂಚೆ ಸಗ್ಳೆ ಶಾನ್‍ಪಾನ್ ಮಾಕಾ ಅಸಿಲ್, ನಾ ಹೊಲ್ಯಾರ್ ಎಕಾಕ್ಲಿ ಮಡ್ಡಿ ಅನಿ ಎಕಾಕ್ಡೆ ಜಾಯ್ ಸಾರ್ಕೆ ಕರುಕ್ ಹೊತಾ ತಸ್ಲೊ ವಿಶ್ವಾಸ್ ಮಾಕಾ ಅಸಿಲ್, ಜಾಲ್ಯಾರ್ಬಿ ಮಾಜ್ಯಾ ಭುತ್ತುರ್ ಪ್ರೆಮ್ ನಾ ಹೊಲ್ಯಾರ್ ಮಿಯಾ ಕಾಯ್ಬಿ ನ್ಹಯ್. ಅಧ್ಯಾಯವನ್ನು ನೋಡಿ |
ನಿಸ್ಸಂದೇಹವಾಗಿಯೂ ನಮ್ಮ ಆರಾಧನಾ ಜೀವಿತದ ರಹಸ್ಯವು ಮಹೋನ್ನತವಾದದ್ದು: ಕ್ರಿಸ್ತನು ಮಾನವ ದೇಹದಲ್ಲಿ ನಮಗೆ ಪ್ರತ್ಯಕ್ಷನಾದನು. ಆತನೇ ಕ್ರಿಸ್ತನೆಂದು ಪವಿತ್ರಾತ್ಮನು ನಿರೂಪಿಸಿದನು. ದೇವದೂತರಿಗೆ ಆತನು ಕಾಣಿಸಿಕೊಂಡನು. ಆತನನ್ನು ಕುರಿತ ಸುವಾರ್ತೆಯನ್ನು ಜನಾಂಗಗಳವರಿಗೆಲ್ಲ (ಯೆಹೂದ್ಯರಲ್ಲದವರಿಗೆ) ಪ್ರಸಿದ್ಧಿಪಡಿಸಲಾಯಿತು. ಲೋಕದಲ್ಲಿರುವ ಜನರು ಆತನಲ್ಲಿ ನಂಬಿಕೆಯಿಟ್ಟರು. ಆತನು ಮಹಿಮೆಯೊಂದಿಗೆ ಪರಲೋಕಕ್ಕೆ ಎತ್ತಲ್ಪಟ್ಟನು.