1 ಕೊರಿಂಥದವರಿಗೆ 13:4 - ಪರಿಶುದ್ದ ಬೈಬಲ್4 ಪ್ರೀತಿಯು ತಾಳ್ಮೆಯುಳ್ಳದ್ದು, ದಯೆಯುಳ್ಳದ್ದು. ಪ್ರೀತಿಯು ಅಸೂಯೆಪಡುವುದಿಲ್ಲ; ಹೊಗಳಿಕೊಳ್ಳುವುದಿಲ್ಲ; ಗರ್ವಪಡುವುದಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಪ್ರೀತಿಯು ಬಹು ತಾಳ್ಮೆಯುಳ್ಳದ್ದು, ದಯೆಯುಳ್ಳದ್ದು. ಪ್ರೀತಿಯು ಹೊಟ್ಟೆಕಿಚ್ಚುಪಡುವುದಿಲ್ಲ, ಹೊಗಳಿಕೊಳ್ಳುವುದಿಲ್ಲ. ಅದು ಗರ್ವಪಡುವುದಿಲ್ಲ, ಅಸಭ್ಯವಾಗಿ ನಡೆಯುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4-6 ಸಹನೆ ಸೈರಣೆ, ದಯೆದಾಕ್ಷಿಣ್ಯ ಪ್ರೀತಿಯಲ್ಲಿವೆ. ಎಡೆಯಿಲ್ಲ ಅದರಲಿ ಗರ್ವಕೆ, ಮರ್ಮಕೆ, ಮೆರೆತಕೆ, ಮತ್ಸರಕೆ, ಸಿಡುಕಿಗೆ, ಸೊಕ್ಕಿಗೆ, ಸ್ವಾರ್ಥಕೆ, ಸೇಡುಗಳೆಣಿಕೆಗೆ. ನಲಿಯದು ಪ್ರೀತಿ ಅನೀತಿಯಲಿ ನಲಿಯದಿರದದು ಸತ್ಯದ ಜಯದಲಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ಪ್ರೀತಿ ಬಹು ತಾಳ್ಮೆಯುಳ್ಳದ್ದು, ಪ್ರೀತಿ ದಯೆ ತೋರಿಸುವದು. ಪ್ರೀತಿಯು ಹೊಟ್ಟೆಕಿಚ್ಚುಪಡುವದಿಲ್ಲ, ಹೊಗಳಿಕೊಳ್ಳುವದಿಲ್ಲ, ಉಬ್ಬಿಕೊಳ್ಳುವದಿಲ್ಲ; ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ಪ್ರೀತಿ ತಾಳ್ಮೆಯುಳ್ಳದ್ದು, ಪ್ರೀತಿ ದಯೆಯುಳ್ಳದ್ದು, ಪ್ರೀತಿ ಅಸೂಯೆಪಡುವುದಿಲ್ಲ, ಪ್ರೀತಿ ಹೊಗಳಿಕೊಳ್ಳುವುದಿಲ್ಲ, ಗರ್ವಪಡುವುದಿಲ್ಲ, ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್4 ಪ್ರೆಮ್ ಸೊಸುನ್ ಘೆವ್ನ್ ಜಾತಾ, ಪ್ರೆಮ್ ದಯಾಳ್, ಅನಿಎಕ್ಲ್ಯಾಕ್ ಬಗುನ್ ಜಳಿ ನಾ, ಅಪ್ನಾಚಿಚ್ ಬಡಾಯ್ ಬೊಲಿನಾ, ಗರುಕಿನ್ ಭರಿನಾ; ಅಧ್ಯಾಯವನ್ನು ನೋಡಿ |
ನಿನ್ನ ಮಾತನ್ನು ಕೇಳಲು ನಿರಾಕರಿಸಿದರು. ಅವರಿಗಾಗಿ ಅದ್ಭುತಕಾರ್ಯಗಳನ್ನು ಮಾಡಿದ್ದನ್ನು ಅವರು ಮರೆತರು. ಅವರು ಹಠಮಾರಿಗಳಾಗಿದ್ದರಿಂದ ತಮ್ಮನ್ನು ಈಜಿಪ್ಟಿನ ಗುಲಾಮಗಿರಿಗೆ ಮತ್ತೆ ಕರೆದೊಯ್ಯಲು ಒಬ್ಬ ನಾಯಕನನ್ನು ನೇಮಿಸಲು ಅವರು ನಿರ್ಧರಿಸಿದರು. “ಆದರೆ ನೀನು ಕ್ಷಮಿಸುವ ದೇವರಾಗಿರುವೆ. ನೀನು ಕನಿಕರ ಉಳ್ಳವನಾಗಿರುವೆ. ನೀನು ತಾಳ್ಮೆಯುಳ್ಳವನೂ ಪ್ರೀತಿಸ್ವರೂಪನೂ ಆಗಿರುವೆ. ಆದ್ದರಿಂದ ನೀನು ಅವರನ್ನು ತೊರೆಯಲಿಲ್ಲ.
ಕೆಲವರು ದೇವದೂತರ ಪೂಜೆಯಲ್ಲಿಯೂ ಅತಿವಿನಯವಂತರಂತೆ ನಟಿಸುವುದರಲ್ಲಿಯೂ ಆಸಕ್ತರಾಗಿದ್ದಾರೆ. ಆ ಜನರು ತಾವು ಕಂಡ ದರ್ಶನಗಳ ಬಗ್ಗೆ ಯಾವಾಗಲೂ ಮಾತನಾಡುತ್ತಿರುತ್ತಾರೆ. “ನೀವು ಇಂಥಿಂಥ ಕಾರ್ಯಗಳನ್ನು ಮಾಡದಿರುವುದರಿಂದ ತಪ್ಪಿತಸ್ಥರಾಗಿದ್ದೀರಿ” ಎಂದು ಆ ಜನರು ನಿಮ್ಮ ಬಗ್ಗೆ ಹೇಳಲು ಅವಕಾಶಕೊಡಬೇಡಿ. ಅವರ ಪ್ರಾಪಂಚಿಕ ಆಲೋಚನೆಯು ಅವರನ್ನು ನಿಷ್ಕಾರಣವಾಗಿ ಗರ್ವದಿಂದ ಉಬ್ಬಿಸುತ್ತದೆ.