Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 14:16 - ಪರಿಶುದ್ದ ಬೈಬಲ್‌

16 ನೀನು ನಿನ್ನ ಜೀವಾತ್ಮದಿಂದ ಸುತ್ತಿಸಬಹದು. ಆದರೆ ಅಲ್ಲಿರುವ ಒಬ್ಬನು ನಿನ್ನ ಕೃತಜ್ಞತಾಸ್ತುತಿಯನ್ನು ಅರ್ಥಮಾಡಿಕೊಳ್ಳದ ಹೊರತು “ಆಮೆನ್‌” ಎಂದು ಹೇಳಲಾರನು. ಏಕೆಂದರೆ ನೀನು ಹೇಳುತ್ತಿರುವುದು ಅವನಿಗೆ ತಿಳಿಯುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ನೀನು ಆತ್ಮನಿಂದ ಮಾತ್ರ ದೇವರ ಸ್ತೋತ್ರ ಮಾಡಿದರೆ ನೀನು ಹೇಳಿದ್ದು ತಿಳಿಯದೆ ಇರುವ ಇನ್ನೊಬ್ಬನು ನೀನು ಮಾಡುವ ಕೃತಜ್ಞತಾಸ್ತುತಿಗೆ ಅವನು “ಆಮೆನ್” ಎಂದು ಹೇಗೆ ಹೇಳಬಲ್ಲನು? ನೀನು ಮಾತನಾಡಿದು ಅವನಿಗೆ ತಿಳಿಯುವುದಿಲ್ಲವಲ್ಲಾ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಸಭೆಯಲ್ಲಿ ನೀನು ಆತ್ಮದಿಂದ ಮಾತ್ರ ದೇವರ ಸ್ತುತಿಮಾಡಿದರೆ ನಿನ್ನ ಹಾಗೆ ಪರವಶನಲ್ಲದವನು ನಿನ್ನ ಕೃತಜ್ಞತಾ ಸ್ತುತಿಗೆ ‘ಆಮೆನ್’ ಎಂದು ಹೇಗೆ ತಾನೇ ಹೇಳಬಲ್ಲನು? ನೀನು ಹೇಳುವುದೇ ಅವನಿಗೆ ತಿಳಿಯುವುದಿಲ್ಲವಲ್ಲಾ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ನೀನು ಆತ್ಮದಿಂದ ಮಾತ್ರ ದೇವರ ಸ್ತೋತ್ರಮಾಡಿದರೆ ಆ ವರವನ್ನು ಹೊಂದದಿರುವ ಸಭೆಯವನಿಗೆ ನೀನು ಹೇಳಿದ್ದು ತಿಳಿಯದೆ ಇರುವದರಿಂದ ನೀನು ಮಾಡುವ ಕೃತಜ್ಞತಾಸ್ತುತಿಗೆ ಅವನು ಆಮೆನ್ ಎಂದು ಹೇಗೆ ಹೇಳಾನು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ನೀನು ಆತ್ಮದಲ್ಲಿ ಮಾತ್ರ ಸ್ತೋತ್ರ ಮಾಡಿದರೆ, ತಿಳುವಳಿಕೆ ಇಲ್ಲದೆ ಕುಳಿತಿರುವವನು ನಿನ್ನ ಕೃತಜ್ಞತಾಸ್ತುತಿಗೆ, “ಆಮೆನ್” ಎಂದು ಹೇಳುವುದು ಹೇಗೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

16 ದೆವಾಚಿ ಧನ್ಯವಾದ್ ಸುತ್ತಿ ಆತ್ಮ್ಯಾನ್ ಎವ್ಡೆಚ್ ಕರ್ತೆಯ್ ಹೊಲ್ಯಾರ್ ದೆವಾಚ್ಯಾ ಲೊಕಾಂಚ್ಯಾ ತಾಂಡ್ಯಾತ್ ಹೊತ್ತ್ಯಾ ವರು ನಸ್ತಾನಾ ಹೊತ್ತ್ಯಾ ಮಾನ್ಸಾನ್ ತುಜ್ಯಾ ಧನ್ಯವಾದ್ ಸುತ್ತಿಕ್ ಆಮೆನ್ ಮನುನ್ ಕಶೆ ಮನ್ತಲೆ? ಕಶ್ಯಾಕ್ ಮಟ್ಲ್ಯಾರ್ ತಿಯಾ ಬೊಲ್ತಲೆ ತೆಕಾ ಕಾಯ್ಬಿ ಕಳಿನಾ,

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 14:16
30 ತಿಳಿವುಗಳ ಹೋಲಿಕೆ  

ಆ ನಾಲ್ಕು ಜೀವಿಗಳು “ಆಮೆನ್!” ಎಂದು ಹೇಳಿದವು. ಹಿರಿಯರು ಮೊಣಕಾಲೂರಿ ಆರಾಧಿಸಿದರು.


ಇಸ್ರೇಲಿನ ದೇವರಾದ ಯೆಹೋವನನ್ನು ಕೊಂಡಾಡಿರಿ. ಆತನು ಯಾವಾಗಲೂ ಇದ್ದವನೂ ಎಂದೆಂದಿಗೂ ಇರುವಾತನೂ ಆಗಿದ್ದಾನೆ. “ಆಮೆನ್! ಯೆಹೋವನಿಗೆ ಸ್ತೋತ್ರವಾಗಲಿ!” ಎಂದು ಜನರೆಲ್ಲರೂ ಹೇಳಲಿ.


ಇಸ್ರೇಲರ ದೇವರಾದ ಯೆಹೋವನು ಸದಾಕಾಲವೂ ಘನಹೊಂದಲಿ; ನಿರಂತರವೂ ಕೊಂಡಾಡಲ್ಪಡಲಿ! ಇಸ್ರೇಲರೆಲ್ಲರೂ ಯೆಹೋವನನ್ನು ಸ್ತುತಿಸಿ “ಆಮೆನ್” ಅಂದರು.


ಅದಕ್ಕಾಗಿ ಸ್ತೋತ್ರ ಸಲ್ಲಿಸಿ, ಅದನ್ನು ಮುರಿದು, “ಇದು ನನ್ನ ದೇಹ; ಇದನ್ನು ನಿಮಗೋಸ್ಕರ ಕೊಡಲಾಗಿದೆ. ನನ್ನನ್ನು ನೆನಸಿಕೊಳ್ಳುವುದಕ್ಕಾಗಿ ಹೀಗೆ ಮಾಡಿರಿ” ಎಂದು ಹೇಳಿದನು.


ಯೆರೆಮೀಯನು ಹನನ್ಯನಿಗೆ, “ಹಾಗೆಯೇ ಆಗಲಿ, ನೀನು ಹೇಳಿದಂತೆ ಯೆಹೋವನು ಮಾಡಲಿ. ನೀನು ಪ್ರವಾದಿಸಿದ ಸಂದೇಶವನ್ನು ಯೆಹೋವನು ನಿಜವಾಗುವಂತೆ ಮಾಡುವನೆಂದು ನಾನು ಆಶಿಸುತ್ತೇನೆ. ಯೆಹೋವನು ಬಾಬಿಲೋನಿನಿಂದ ತನ್ನ ಆಲಯದ ವಸ್ತುಗಳನ್ನು ಇಲ್ಲಿಗೆ ತರುವನೆಂದು ನಾನು ಆಶಿಸುವೆ. ತಮ್ಮ ಮನೆಗಳನ್ನು ಬಿಟ್ಟುಹೋಗಲು ಒತ್ತಾಯಿಸಲ್ಪಟ್ಟ ಜನರನ್ನು ಮತ್ತೆ ಯೆಹೋವನು ಇಲ್ಲಿಗೆ ಕರೆತರುವನೆಂದು ನಾನು ಆಶಿಸುವೆ.


ಎಜ್ರನು ಮಹೋನ್ನತ ದೇವರಾದ ಯೆಹೋವನನ್ನು ಸ್ತುತಿಸಿದನು. ಆಗ ಜನರೆಲ್ಲರೂ ಕೈಗಳನ್ನೆತ್ತಿ, “ಆಮೆನ್! ಆಮೆನ್!” ಎಂದು ಹೇಳಿದರು; ತಲೆಬಾಗಿ ಯೆಹೋವನನ್ನು ಆರಾಧಿಸಿದರು.


ಅವರು, “ಆಮೆನ್! ನಮ್ಮ ದೇವರಿಗೆ ಸ್ತೋತ್ರವೂ ಪ್ರಭಾವವೂ ಜ್ಞಾನವೂ ಕೃತಜ್ಞತಾಸುತ್ತಿಯೂ ಗೌರವವೂ ಅಧಿಕಾರವೂ ಮತ್ತು ಬಲವೂ ಯುಗಯುಗಾಂತರಗಳಲ್ಲಿಯೂ ಇರಲಿ. ಆಮೆನ್!” ಎಂದರು.


ಯಾಜಕನು, ‘ಹಾನಿಯನ್ನು ಉಂಟುಮಾಡುವ ಈ ನೀರನ್ನು ನೀನು ಕುಡಿಯಬೇಕು. ನೀನು ಪಾಪ ಮಾಡಿದ್ದರೆ ನಿನಗೆ ಮಕ್ಕಳಾಗುವುದಿಲ್ಲ ಮತ್ತು ನೀನು ಪಡೆಯುವ ಮಗು ಹುಟ್ಟುವ ಮೊದಲೇ ಸಾಯುವುದು’ ಎಂದು ಹೇಳಬೇಕು. ಅದಕ್ಕೆ ಸ್ತ್ರೀಯು, ‘ಹಾಗೆಯೇ ಆಗಲಿ’ ಎಂದು ಹೇಳಬೇಕು.


ಇವುಗಳೆಲ್ಲಾ ನಿಜವೆಂದು ಹೇಳುವಾತನು ಯೇಸುವೇ. ಈಗ ಆತನು, “ಹೌದು, ನಾನು ಬೇಗನೆ ಬರುತ್ತೇನೆ” ಎಂದು ಹೇಳುತ್ತಾನೆ. ಆಮೆನ್! ಪ್ರಭು ಯೇಸುವೇ, ಬಾ!


ಕ್ರಿಸ್ತ ಯೇಸುವಿನಲ್ಲಿ ನಿಮ್ಮೆಲ್ಲರೊಂದಿಗೆ ನನ್ನ ಪ್ರೀತಿಯಿರಲಿ!


ನಾನು ಪರಭಾಷೆಯಲ್ಲಿ ಪ್ರಾರ್ಥಿಸಿದರೆ, ನನ್ನ ಆತ್ಮವು ಪ್ರಾರ್ಥಿಸುವುದೇ ಹೊರತು ನನ್ನ ಮನಸ್ಸು ತಟಸ್ಥವಾಗಿರುವುದು.


ಅದಕ್ಕೆ ಕಾರಣವೇನೆಂದರೆ: ಪರಭಾಷೆಯಲ್ಲಿ ಮಾತಾಡುವ ವರವನ್ನು ಹೊಂದಿರುವವನು ಜನರೊಂದಿಗೆ ಮಾತಾಡುವುದಿಲ್ಲ. ಅವನು ದೇವರೊಂದಿಗೆ ಮಾತಾಡುತ್ತಾನೆ. ಯಾರೂ ಅವನನ್ನು ಅರ್ಥಮಾಡಿಕೊಳ್ಳುವುದಿಲ್ಲ. ಏಕೆಂದರೆ ಅವನು ಪವಿತ್ರಾತ್ಮನ ಮೂಲಕವಾಗಿ ರಹಸ್ಯ ಸಂಗತಿಗಳನ್ನು ಮಾತಾಡುತ್ತಿರುತ್ತಾನೆ.


ಪೇತ್ರ ಮತ್ತು ಯೋಹಾನರಿಗೆ ವಿಶೇಷವಾದ ಯಾವ ತರಬೇತಿಯಾಗಲಿ ವಿದ್ಯೆಯಾಗಲಿ ಇಲ್ಲವೆಂಬುದು ಯೆಹೂದ್ಯನಾಯಕರಿಗೆ ಗೊತ್ತಿತ್ತು. ಅಲ್ಲದೆ ಅವರು ಹೆದರದೆ ಮಾತಾಡುವುದನ್ನು ಸಹ ನಾಯಕರು ಗಮನಿಸಿದರು. ಆದ್ದರಿಂದ ಆ ನಾಯಕರಿಗೆ ಬಹಳ ಆಶ್ಚರ್ಯವಾಯಿತು. ಪೇತ್ರ ಮತ್ತು ಯೋಹಾನರು ಯೋಸುವಿನೊಂದಿಗೆ ಇದ್ದರೆಂಬುದನ್ನು ಅವರು ಆ ಬಳಿಕ ಗ್ರಹಿಸಿಕೊಂಡರು.


ಯೇಸು ಇತರ ಅನೇಕ ಕಾರ್ಯಗಳನ್ನು ಮಾಡಿದನು. ಅವುಗಳಲ್ಲಿ ಪ್ರತಿಯೊಂದನ್ನೂ ಬರೆಯುವುದಾದರೆ, ಬರೆಯಲ್ಪಡುವ ಪುಸ್ತಕಗಳನ್ನು ಇಡೀ ಪ್ರಪಂಚವೇ ಹಿಡಿಸಲಾರದೆಂದು ನಾನು ನೆನಸುತ್ತೇನೆ.


ಯೆಹೂದ್ಯರಿಗೆ ಆಶ್ಚರ್ಯವಾಯಿತು. “ಈ ಮನುಷ್ಯನು ಎಂದೂ ಶಾಲೆಯಲ್ಲಿ ವಿದ್ಯಾಭ್ಯಾಸ ಮಾಡಲಿಲ್ಲ. ಇವನು ಇಷ್ಟೆಲ್ಲವನ್ನೂ ಹೇಗೆ ಕಲಿತನು?” ಎಂದು ವಿಚಾರಿಸತೊಡಗಿದರು.


ಶಿಷ್ಯರು ಪ್ರಪಂಚದ ಎಲ್ಲಾ ಕಡೆಗೆ ಹೋಗಿ, ಜನರಿಗೆ ಸುವಾರ್ತೆಯನ್ನು ಸಾರಿದರು. ಪ್ರಭುವು ಅವರೊಂದಿಗೆ ಕಾರ್ಯಸಾಧಿಸುತ್ತಾ, ಸೂಚಕಕಾರ್ಯಗಳಿಂದ ಸುವಾರ್ತೆಯ ವಾಕ್ಯವನ್ನು ಬಲಪಡಿಸಿದನು.


ನಾನು ನಿಮಗೆ ಆಜ್ಞಾಪಿಸಿದವುಗಳಿಗೆಲ್ಲಾ ವಿಧೇಯರಾಗುವಂತೆ ಜನರಿಗೆ ಉಪದೇಶಿಸಿ, ಲೋಕಾಂತ್ಯದವರೆಗೂ ಸದಾಕಾಲ ನಾನು ನಿಮ್ಮೊಂದಿಗಿರುತ್ತೇನೆ” ಎಂದು ಹೇಳಿದನು.


ನಮ್ಮನ್ನು ಶೋಧನೆಗೆ ಒಳಪಡಿಸದೆ ಕೆಡುಕನಿಂದ (ಸೈತಾನನಿಂದ) ನಮ್ಮನ್ನು ರಕ್ಷಿಸು.’


“ನಾನು ನಿಮ್ಮ ಪೂರ್ವಿಕರಿಗೆ ಮಾಡಿದ ವಾಗ್ದಾನವನ್ನು ನೆರವೇರಿಸಲು ನಾನು ಇದೆಲ್ಲವನ್ನು ಮಾಡಿದೆ. ನಾನು ಅವರಿಗೆ ಫಲವತ್ತಾದ ಭೂಮಿಯನ್ನೂ ಹಾಲು ಮತ್ತು ಜೇನು ಹರಿಯುವ ಪ್ರದೇಶವನ್ನೂ ಕೊಡುವ ವಾಗ್ದಾನ ಮಾಡಿದ್ದೆ. ನೀವು ಈಗ ಈ ಪ್ರದೇಶದಲ್ಲಿ ವಾಸಮಾಡುತ್ತಿದ್ದೀರಿ.” ನಾನು, “ಯೆಹೋವನೇ ನಿನ್ನ ಅಪ್ಪಣೆಯಂತಾಗಲಿ” ಎಂದು ಉತ್ತರಿಸಿದೆನು.


ಯೆಹೋವನನ್ನು ಎಂದೆಂದಿಗೂ ಕೊಂಡಾಡಿರಿ! ಆಮೆನ್, ಆಮೆನ್!


ಆತನ ಪ್ರಭಾವಪೂರ್ಣವಾದ ಹೆಸರನ್ನು ಎಂದೆಂದಿಗೂ ಕೊಂಡಾಡಿರಿ! ಆತನ ಮಹಿಮೆ ಭೂಲೋಕವನ್ನೆಲ್ಲಾ ತುಂಬಿಕೊಳ್ಳಲಿ! ಆಮೆನ್, ಆಮೆನ್!


ಇಸ್ರೇಲರ ದೇವರಾದ ಯೆಹೋವನನ್ನು ಕೊಂಡಾಡಿರಿ! ಆತನು ಯಾವಾಗಲೂ ಇದ್ದವನು; ಯಾವಾಗಲೂ ಇರುವವನು. ಆಮೆನ್, ಆಮೆನ್!


ನಂತರ ನಾನು ನನ್ನ ಉಡುಪಿನ ನೆರಿಗೆಯನ್ನು ಝಾಡಿಸಿ, “ತಾನು ಮಾಡಿದ ಪ್ರತಿಜ್ಞೆಯಂತೆ ನಡೆಯದವನನ್ನು ದೇವರು ಅವನ ಮನೆಯಿಂದ ಝಾಡಿಸಿಬಿಡಲಿ; ಅವನು ತಾನು ಗಳಿಸಿದ್ದೆಲ್ಲವನ್ನು ಕಳೆದುಕೊಳ್ಳಲಿ” ಎಂದು ಹೇಳಿದಾಗ ಜನರೆಲ್ಲರೂ “ಆಮೆನ್” ಅಂದರು; ಯೆಹೋವನನ್ನು ಸ್ತುತಿಸಿದರು. ತಾವು ಮಾಡಿದ ಪ್ರತಿಜ್ಞೆಯಂತೆ ನಡೆದುಕೊಂಡರು.


ಯೆಹೋಯಾದಾವನ ಮಗನಾದ ಬೆನಾಯನು, “ಆಮೆನ್, ನಿನ್ನ ದೇವರಾದ ಯೆಹೋವನು ಇದನ್ನು ಕಾರ್ಯಗತಗೊಳಿಸಲಿ.


ಆ ಏಳು ರೊಟ್ಟಿಗಳನ್ನು ಮತ್ತು ಮೀನುಗಳನ್ನು ತೆಗೆದುಕೊಂಡು ಅವುಗಳಿಗಾಗಿ ದೇವರಿಗೆ ಸ್ತೋತ್ರ ಸಲ್ಲಿಸಿದನು. ಬಳಿಕ ಅವುಗಳನ್ನು ಮುರಿದು ಶಿಷ್ಯರಿಗೆ ಕೊಟ್ಟನು. ಶಿಷ್ಯರು ಅವುಗಳನ್ನು ಜನರಿಗೆ ಹಂಚಿದರು.


ದೇವರು ಮಾಡಿದ ವಾಗ್ದಾನಗಳಿಗೆಲ್ಲ “ಹೌದು” ಎಂಬ ಉತ್ತರ ಕ್ರಿಸ್ತನೇ ಆಗಿದ್ದಾನೆ. ಆದ್ದರಿಂದಲೇ ನಾವು ದೇವರ ಮಹಿಮೆಗಾಗಿ ಕ್ರಿಸ್ತನ ಮೂಲಕ “ಆಮೆನ್” ಎಂದು ಹೇಳುತ್ತೇವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು