1 ಕೊರಿಂಥದವರಿಗೆ 14:23 - ಪರಿಶುದ್ದ ಬೈಬಲ್23 ಒಂದುವೇಳೆ ಇಡೀ ಸಭೆಯು ಕೂಡಿಬಂದಾಗ ನೀವೆಲ್ಲರೂ ವಿವಿಧ ಭಾಷೆಗಳನ್ನು ಮಾತಾಡತೊಡಗಿದರೆ, ಅಲ್ಲಿಗೆ ಬರುವ ತಿಳುವಳಿಕೆಯಿಲ್ಲದ ಅಥವಾ ನಂಬದ ಕೆಲವು ಜನರು ನಿಮ್ಮನ್ನು ಹುಚ್ಚರೆಂದು ಹೇಳುವರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201923 ಹೀಗಿರುವಲ್ಲಿ ಸಭೆಯೆಲ್ಲಾ ಒಂದೇ ಸ್ಥಳದಲ್ಲಿ ಸೇರಿಬಂದಾಗ ಎಲ್ಲರೂ ಅನ್ಯಭಾಷೆಗಳನ್ನಾಡಿದರೆ ಈ ಭಾಷೆಯನ್ನು ತಿಳಿಯದ ಬೇರೆಯವರು ಅಥವಾ ಕ್ರಿಸ್ತ ನಂಬಿಕೆಯಿಲ್ಲದವರು ಒಳಗೆ ಬಂದು ನೋಡಿ, ನಿಮಗೆ ಹುಚ್ಚು ಹಿಡಿದಿದೆ ಎಂದು ಹೇಳುವುದಿಲ್ಲವೋ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)23 ಒಂದು ಕಡೆ ಎಲ್ಲರೂ ಸಭೆ ಸೇರಿದಾಗ ಪ್ರತಿಯೊಬ್ಬನೂ ಪರವಶಾಭಾಷೆಗಳನ್ನು ಆಡಲು ಆರಂಭಿಸಿದರೆ ಅಲ್ಲಿಗೆ ಬರುವ ಅಪರಿಚಿತರು, ಅವಿಶ್ವಾಸಿಗಳು ನಿಮ್ಮನ್ನು ಹುಚ್ಚರೆಂದು ಕರೆಯಲಾರರೇ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)23 ಹೀಗಿರುವಲ್ಲಿ ಸಭೆಯೆಲ್ಲಾ ಒಂದೇ ಸ್ಥಳದಲ್ಲಿ ಕೂಡಿಬಂದಾಗ ಎಲ್ಲರೂ ವಾಣಿಗಳನ್ನಾಡಿದರೆ ಈ ವರವನ್ನು ಹೊಂದದಿರುವ ಸಭೆಯವರು ಅಥವಾ ಕ್ರಿಸ್ತನಂಬಿಕೆಯಿಲ್ಲದವರು ಒಳಗೆ ಬಂದು ನೋಡಿ - ನಿಮಗೆ ಹುಚ್ಚು ಹಿಡಿದದೆ ಎಂದು ಹೇಳುವದಿಲ್ಲವೋ? ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ23 ಆದಕಾರಣ ಸಭೆಯೆಲ್ಲವೂ ಕೂಡಿಬಂದಾಗ ಎಲ್ಲರೂ ಅನ್ಯಭಾಷೆಗಳನ್ನಾಡಿದರೆ, ಅಜ್ಞಾನಿಗಳು ಇಲ್ಲವೆ ಅವಿಶ್ವಾಸಿಗಳು ಒಳಗೆ ಬಂದು, ನೀವು ಹುಚ್ಚರೆಂದು ಹೇಳುವುದಿಲ್ಲವೇ? ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್23 ಅಶೆ ರ್‍ಹಾತಾನಾ ಸಗ್ಳೊ ದೆವಾಚ್ಯಾ ಲೊಕಾಂಚೊ ತಾಂಡೊ ಗೊಳಾ ಹೊಲ್ಲ್ಯಾಕ್ಡೆ ಸಗ್ಳೆಬಿ ವಿಚಿತ್ರ್ ಬಾಶಾನಿ ಬೊಲುನ್ ಹಾತ್ ಮನುನ್ ಚಿಂತುವಾ, ಹ್ಯಾ ಎಳಾರ್ ಕೊನ್‍ಬಿ ಎಕ್ಲೊ ಸಾದೊ ಮಾನುಸ್ ನಾ ಹೊಲ್ಯಾರ್ ವಿಶ್ವಾಸಾತ್ ನಸಲ್ಲೊ ಮಾನುಸ್ ಥೈ ಯೆಲ್ಯಾರ್ ತೊ ತುಮ್ಕಾ ಪಿಶೆ ಲಾಗ್ಲಾ ಮನಿನಸ್ತಾನಾ ರ್‍ಹಾಯ್ಲ್ ಕಾಯ್? ಅಧ್ಯಾಯವನ್ನು ನೋಡಿ |
ಪ್ರವಾದಿಯು ಹೀಗೆ ಹೇಳುತ್ತಾನೆ, “ಇಸ್ರೇಲೇ, ಇದನ್ನು ಕಲಿತುಕೋ. ಶಿಕ್ಷೆಯ ಸಮಯವು ಬಂದದೆ. ನೀನು ಮಾಡಿದ ದುಷ್ಟತನಕ್ಕೆ ಪ್ರತಿಯಾಗಿ ದೊರಕಬೇಕಾದ ಸಂಬಳ (ಫಲ)ದ ಸಮಯವು ಬಂತು.” ಆದರೆ ಇಸ್ರೇಲ್ ಜನರು ಹೀಗೆ ಹೇಳುತ್ತಾರೆ: “ಪ್ರವಾದಿಯು ಮೂರ್ಖನಾಗಿದ್ದಾನೆ. ದೇವರಾತ್ಮನುಳ್ಳ ಈ ಮನುಷ್ಯನು ಹುಚ್ಚನಾಗಿದ್ದಾನೆ.” ಪ್ರವಾದಿಯು ಹೀಗೆ ಹೇಳಿದನು, “ನಿನ್ನ ಕೆಟ್ಟ ಪಾಪಗಳಿಗಾಗಿ ನೀನು ಶಿಕ್ಷಿಸಲ್ಪಡುವೆ. ನೀನು ಹಗೆ ಮಾಡಿದುದಕ್ಕೆ ನೀನು ಶಿಕ್ಷೆ ಅನುಭವಿಸುವೆ.”