25 ಆ ವ್ಯಕ್ತಿಯ ಹೃದಯದಲ್ಲಿರುವ ರಹಸ್ಯ ಸಂಗತಿಗಳು ಬಯಲಾಗುತ್ತವೆ. ಆದ್ದರಿಂದ ಆ ವ್ಯಕ್ತಿಯು ಅಡ್ಡಬಿದ್ದು ದೇವರನ್ನು ಆರಾಧಿಸುವನು. “ನಿಜವಾಗಿಯೂ ದೇವರು ನಿಮ್ಮ ಸಂಗಡವಿದ್ದಾನೆ” ಎಂದು ಅವನು ಹೇಳುವನು.
ಯೆಹೋವನು ಹೇಳುವುದೇನೆಂದರೆ, “ಈಜಿಪ್ಟ್ ಮತ್ತು ಇಥಿಯೋಪ್ಯ ಐಶ್ವರ್ಯವುಳ್ಳ ರಾಜ್ಯಗಳಾಗಿವೆ. ಇಸ್ರೇಲೇ, ನೀನು ಆ ಐಶ್ವರ್ಯವನ್ನು ಪಡೆದುಕೊಳ್ಳುವೆ. ಸೆಬಾದ ಉನ್ನತ ಜನರು ನಿನ್ನವರಾಗುವರು. ಅವರು ತಮ್ಮ ಕುತ್ತಿಗೆಗಳಲ್ಲಿ ಸಂಕೋಲೆಗಳಿಂದ ಬಂಧಿತರಾಗಿ ನಿಮ್ಮ ಹಿಂದೆ ನಡೆಯುವರು. ಅವರು ನಿಮ್ಮ ಮುಂದೆ ಅಡ್ಡಬಿದ್ದು, ‘ಇಸ್ರೇಲೇ, ದೇವರು ನಿಜವಾಗಿ ನಿಮ್ಮೊಂದಿಗಿದ್ದಾನೆ. ಬೇರೆ ದೇವರುಗಳೇ ಇಲ್ಲ’” ಎಂದು ನಿಮ್ಮಲ್ಲಿ ಪ್ರಾರ್ಥಿಸುವರು.
ಸರ್ವಶಕ್ತನಾದ ಯೆಹೋವನು ಹೀಗೆನ್ನುತ್ತಾನೆ: “ಆ ಸಮಯದಲ್ಲಿ ಬೇರೆಬೇರೆ ಭಾಷೆಗಳನ್ನು ಮಾತಾಡುವ ಅನೇಕ ವಿದೇಶಿಯರು ಯೆಹೂದ್ಯನೊಬ್ಬನ ಬಳಿಗೆ ಬಂದು, ಅವನ ಬಟ್ಟೆಯ ಅಂಚನ್ನು ಹಿಡಿದು, ‘ದೇವರು ನಿಮ್ಮೊಂದಿಗಿದ್ದಾನೆಂದು ನಾವು ಕೇಳಿದ್ದೇವೆ. ನಿಮ್ಮೊಂದಿಗೆ ನಾವೂ ಬಂದು ಆತನನ್ನು ಆರಾಧಿಸಬಹುದೋ?’” ಎಂದು ಕೇಳುವರು.
ಆಗ ನಾಲ್ಕು ಜೀವಿಗಳು ಮತ್ತು ಇಪ್ಪತ್ನಾಲ್ಕು ಮಂದಿ ಹಿರಿಯರು ಆ ಕುರಿಮರಿಯ ಮುಂದೆ ಮೊಣಕಾಲೂರಿ ನಮಸ್ಕರಿಸಿದರು. ಪ್ರತಿಯೊಬ್ಬರ ಕೈಯಲ್ಲೂ ಒಂದೊಂದು ತಂತಿವಾದ್ಯವಿತ್ತು. ಧೂಪವು ತುಂಬಿದ್ದ ಚಿನ್ನದ ಪಾತ್ರೆಗಳನ್ನು ಅವರು ಹಿಡಿದುಕೊಂಡಿದ್ದರು. ಪಾತ್ರೆಗಳು ದೇವರ ಪರಿಶುದ್ಧ ಜನರ ಪ್ರಾರ್ಥನೆಗಳಾಗಿದ್ದವು.
ದೆವ್ವವು ಅವನನ್ನು ಪದೇಪದೇ ವಶಪಡಿಸಿಕೊಳ್ಳುತ್ತಿತ್ತು. ಆ ಮನುಷ್ಯನನ್ನು ಸೆರೆಮನೆಗೆ ಹಾಕಿ ಕೈಕಾಲುಗಳನ್ನು ಸರಪಣಿಗಳಿಂದ ಕಟ್ಟಿದರೂ ಅವನು ಅವುಗಳನ್ನು ಕಿತ್ತೊಗೆದುಬಿಡುತ್ತಿದ್ದನು. ಅವನೊಳಗಿದ್ದ ದೆವ್ವವು ಅವನನ್ನು ಜನರಿಲ್ಲದ ಸ್ಥಳಗಳಿಗೆ ಬಲವಂತವಾಗಿ ಕೊಂಡೊಯ್ಯುತ್ತಿತ್ತು. ಯೇಸು ಆ ದೆವ್ವಕ್ಕೆ, “ಅವನನ್ನು ಬಿಟ್ಟು ಹೋಗು” ಎಂದು ಆಜ್ಞಾಪಿಸಿದನು. ಆ ಮನುಷ್ಯನು ಯೇಸುವಿನ ಮುಂದೆ ಅಡ್ಡಬಿದ್ದು ಗಟ್ಟಿಯಾದ ಸ್ವರದಿಂದ, “ಯೇಸುವೇ, ಮಹೋನ್ನತನಾದ ದೇವರ ಮಗನೇ, ನನ್ನಿಂದ ನಿನಗೇನಾಗಬೇಕಾಗಿದೆ? ದಯಮಾಡಿ ನನ್ನನ್ನು ದಂಡಿಸಬೇಡ!” ಎಂದು ಕೂಗಿದನು.
ಹಿಂದಿನ ದಿವಸಗಳಲ್ಲಿ ಜನರು ನಿನಗೆ ಹಿಂಸೆ ಕೊಟ್ಟರು. ಆ ಜನರು ಈಗ ನಿನ್ನ ಮುಂದೆ ಅಡ್ಡಬೀಳುವರು. ಗತಿಸಿದ ದಿವಸಗಳಲ್ಲಿ ಜನರು ನಿನ್ನನ್ನು ದ್ವೇಷಿಸಿದರು. ಆದರೆ ಈಗ ಅವರು ನಿನ್ನ ಕಾಲಿನ ಮುಂದೆ ಬೀಳುವರು. ಅವರು ನಿನ್ನನ್ನು ‘ಯೆಹೋವನ ಪಟ್ಟಣ,’ ‘ಇಸ್ರೇಲಿನ ಪರಿಶುದ್ಧನಾದ ಯೆಹೋವನ ಚೀಯೋನ್’ ಎಂದು ಕರೆಯುವರು.
ಆಮೇಲೆ ನಾನು ನಲವತ್ತು ದಿನ ಹಗಲಿರುಳು ಯೆಹೋವನ ಮುಂದೆ ಬೋರಲ ಬಿದ್ದಿದ್ದೆನು. ನಾನು ಊಟ ಮಾಡಲಿಲ್ಲ, ನೀರನ್ನು ಕುಡಿಯಲಿಲ್ಲ ಯಾಕೆಂದರೆ ನೀವು ಪಾಪಮಾಡಿ ಯೆಹೋವನ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿದ್ದರಿಂದ ಆತನು ಕೋಪಗೊಂಡಿದ್ದನು.
ನಂತರ ಇಪ್ಪತ್ತನಾಲ್ಕು ಮಂದಿ ಹಿರಿಯರು ಮತ್ತು ನಾಲ್ಕು ಜೀವಿಗಳು ಮೊಣಕಾಲೂರಿ ನಮಸ್ಕರಿಸಿದರು. ಸಿಂಹಾಸನದ ಮೇಲೆ ಕುಳಿತಿರುವ ದೇವರನ್ನು ಆರಾಧಿಸಿದರು. ಅವರು, “ಆಮೆನ್! ಹಲ್ಲೆಲೂಯಾ!” ಎಂದು ಹೇಳಿದರು.
“ನಿನ್ನ ದೇವರು ಸರ್ವಶ್ರೇಷ್ಠನು ಮತ್ತು ಪ್ರಬಲನು ಎನ್ನುವದು ನನಗೆ ಖಚಿತವಾಯಿತು. ಆತನು ಎಲ್ಲ ಅರಸರ ಒಡೆಯನಾಗಿದ್ದಾನೆ. ಆತನು ಜನರಿಗೆ ನಿಗೂಢವಾಗಿದ್ದ ರಹಸ್ಯವನ್ನು ತಿಳಿಸುತ್ತಾನೆ. ನೀನು ನನಗೆ ಈ ರಹಸ್ಯವನ್ನು ತಿಳಿಸಲು ಸಮರ್ಥನಾದುದರಿಂದ ಇದೆಲ್ಲ ನಿಜವೆಂದು ನಾನು ನಂಬುತ್ತೇನೆ” ಎಂದು ಹೇಳಿದನು.
ಪೇತ್ರ ಮತ್ತು ಯೋಹಾನರಿಗೆ ವಿಶೇಷವಾದ ಯಾವ ತರಬೇತಿಯಾಗಲಿ ವಿದ್ಯೆಯಾಗಲಿ ಇಲ್ಲವೆಂಬುದು ಯೆಹೂದ್ಯನಾಯಕರಿಗೆ ಗೊತ್ತಿತ್ತು. ಅಲ್ಲದೆ ಅವರು ಹೆದರದೆ ಮಾತಾಡುವುದನ್ನು ಸಹ ನಾಯಕರು ಗಮನಿಸಿದರು. ಆದ್ದರಿಂದ ಆ ನಾಯಕರಿಗೆ ಬಹಳ ಆಶ್ಚರ್ಯವಾಯಿತು. ಪೇತ್ರ ಮತ್ತು ಯೋಹಾನರು ಯೋಸುವಿನೊಂದಿಗೆ ಇದ್ದರೆಂಬುದನ್ನು ಅವರು ಆ ಬಳಿಕ ಗ್ರಹಿಸಿಕೊಂಡರು.
ಸಮುವೇಲನು, “ನಾನೇ ಆ ದರ್ಶಿ. ನನ್ನೊಡನೆ ಆರಾಧನೆಯ ಸ್ಥಳಕ್ಕೆ ಬಾ. ನೀನು ಮತ್ತು ನಿನ್ನ ಸೇವಕ ಈ ದಿನ ನನ್ನ ಜೊತೆಯಲ್ಲಿ ಊಟಮಾಡಬೇಕು. ನಾನು ನಿಮ್ಮನ್ನು ನಾಳೆ ಬೆಳಿಗ್ಗೆ ನಿಮ್ಮ ಮನೆಗೆ ಕಳುಹಿಸುತ್ತೇನೆ. ನಿಮ್ಮ ಪ್ರಶ್ನೆಗಳಿಗೆಲ್ಲ ಉತ್ತರ ಕೊಡುತ್ತೇನೆ.