Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 14:27 - ಪರಿಶುದ್ದ ಬೈಬಲ್‌

27 ನೀವು ಸಭೆಸೇರಿರುವಾಗ, ಯಾರಾದರೂ ಪರಭಾಷೆಯಲ್ಲಿ ಮಾತಾಡಲು ಬಯಸಿದರೆ, ಇಬ್ಬರು ಅಥವಾ ಮೂವರಿಗಿಂತಲೂ ಹೆಚ್ಚು ಜನರು ಪರಭಾಷೆಯಲ್ಲಿ ಮಾತಾಡಬಾರದು. ಅವರು ಹೇಳುವುದನ್ನು ಮತ್ತೊಬ್ಬ ವ್ಯಕ್ತಿಯು ಅನುವಾದಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಅನ್ಯಭಾಷೆಗಳನ್ನಾಡುವುದಾದರೆ ಇಬ್ಬರು ಅಥವಾ ಅವಶ್ಯವಿದ್ದರೆ ಮೂವರಿಗಿಂತ ಹೆಚ್ಚಿಲ್ಲದೆ ಒಬ್ಬೊಬ್ಬರಾಗಿ ಮಾತನಾಡಬೇಕು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

27 ಪರವಶಾಭಾಷೆಯನ್ನು ಆಡುವುದಾದರೆ ಇಬ್ಬರು, ಹೆಚ್ಚೆಂದರೆ ಮೂವರು ಮಾತನಾಡಲಿ. ಆದರೆ ಒಬ್ಬರ ನಂತರ ಇನ್ನೊಬ್ಬರು ಮಾತನಾಡಲಿ. ಬೇರೊಬ್ಬರು ವಿವರಿಸಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ವಾಣಿಯನ್ನಾಡುವದಾದರೆ ಇಬ್ಬರು ಅಥವಾ ಅವಶ್ಯಕವಿದ್ದರೆ ಮೂವರಿಗಿಂತ ಹೆಚ್ಚಿಲ್ಲದೆ ಒಬ್ಬೊಬ್ಬರಾಗಿ ಮಾತಾಡಬೇಕು; ಮತ್ತು ಒಬ್ಬನೇ ಅರ್ಥವನ್ನು ಹೇಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 ಯಾವನಾದರೂ ಅನ್ಯಭಾಷೆಗಳನ್ನಾಡುವುದಾದರೆ, ಇಬ್ಬರು ಅಥವಾ ಹೆಚ್ಚೆಂದರೆ ಮೂವರು ಒಬ್ಬೊಬ್ಬರಾಗಿ ಮಾತನಾಡಬೇಕು, ಒಬ್ಬನು ಅರ್ಥವನ್ನು ಹೇಳಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

27 ಕೊನ್‍ಬಿ ವಿಚಿತ್ರ್ ಬಾಶಾನಿ ಬೊಲುಕ್ ಬಗ್ತಾ ಜಾಲ್ಯಾರ್ ದೊಗಾ ನಾ ಹೊಲ್ಯಾರ್ ಲೈ ಲೈ ಮಟ್ಲ್ಯಾರ್ ತಿಗ್ ಜಾನಾ ಬೊಲುಂದಿತ್; ತೆಬಿ ಪಾಳಿ ಲಾವ್ನ್ ಅನಿ ದುಸ್ರೊ ಎಕ್ಲೊ ತೆಚೊ ಅರ್ಥ್ ಸಾಂಗುಂದಿತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 14:27
6 ತಿಳಿವುಗಳ ಹೋಲಿಕೆ  

ಆದ್ದರಿಂದ ಸಹೋದರ ಸಹೋದರಿಯರೇ, ನೀವು ಮಾಡತಕ್ಕದ್ದೇನು? ನೀವು ಸಭೆಸೇರಿದಾಗ, ಒಬ್ಬನು ಹಾಡುತ್ತಾನೆ; ಒಬ್ಬನು ಉಪದೇಶ ಮಾಡುತ್ತಾನೆ; ಒಬ್ಬನು ದೇವರಿಂದ ಹೊಸ ಸತ್ಯವನ್ನು ತಿಳಿಸುತ್ತಾನೆ; ಒಬ್ಬನು ಪರಭಾಷೆಯಲ್ಲಿ ಮಾತಾಡುತ್ತಾನೆ; ಒಬ್ಬನು ಆ ಪರಭಾಷೆಯನ್ನು ಅನುವಾದಿಸುತ್ತಾನೆ. ಸಭೆಯು ದೃಢವಾಗಿ ಬೆಳೆಯಬೇಕೆಂಬುದೇ ಇವುಗಳ ಉದ್ದೇಶವಾಗಿರಬೇಕು.


ಮತ್ತೊಬ್ಬನಿಗೆ ಅದ್ಭುತಕಾರ್ಯಗಳನ್ನು ಮಾಡುವ ಶಕ್ತಿಯನ್ನೂ ಇನ್ನೊಬ್ಬನಿಗೆ ಪ್ರವಾದಿಸುವ ಸಾಮರ್ಥ್ಯವನ್ನೂ ಇನ್ನೊಬ್ಬನಿಗೆ ಒಳ್ಳೆಯ ಮತ್ತು ಕೆಟ್ಟ ಆತ್ಮಗಳ ನಡುವೆ ಇರುವ ವ್ಯತ್ಯಾಸವನ್ನು ತಿಳಿದುಕೊಳ್ಳುವ ಸಾಮರ್ಥ್ಯವನ್ನೂ ಕೊಡುತ್ತಾನೆ; ಒಬ್ಬನಿಗೆ ಅನೇಕ ಭಾಷೆಗಳನ್ನು ಮಾತಾಡುವ ಸಾಮರ್ಥ್ಯವನ್ನೂ ಮತ್ತೊಬ್ಬನಿಗೆ ಆ ಭಾಷೆಗಳನ್ನು ಅನುವಾದಿಸುವ ಸಾಮರ್ಥ್ಯವನ್ನೂ ಕೊಡುತ್ತಾನೆ.


ಅದಕ್ಕೆ ಕಾರಣವೇನೆಂದರೆ: ಪರಭಾಷೆಯಲ್ಲಿ ಮಾತಾಡುವ ವರವನ್ನು ಹೊಂದಿರುವವನು ಜನರೊಂದಿಗೆ ಮಾತಾಡುವುದಿಲ್ಲ. ಅವನು ದೇವರೊಂದಿಗೆ ಮಾತಾಡುತ್ತಾನೆ. ಯಾರೂ ಅವನನ್ನು ಅರ್ಥಮಾಡಿಕೊಳ್ಳುವುದಿಲ್ಲ. ಏಕೆಂದರೆ ಅವನು ಪವಿತ್ರಾತ್ಮನ ಮೂಲಕವಾಗಿ ರಹಸ್ಯ ಸಂಗತಿಗಳನ್ನು ಮಾತಾಡುತ್ತಿರುತ್ತಾನೆ.


ವಿವಿಧ ಭಾಷೆಗಳಲ್ಲಿ ಮಾತಾಡುವ ವರವನ್ನು ನೀವೆಲ್ಲರೂ ಹೊಂದಿರಬೇಕೆಂದು ನನ್ನ ಅಪೇಕ್ಷೆಯಾಗಿದೆ. ಆದರೆ ನೀವು ಪ್ರವಾದಿಸಬೇಕೆಂದು ನಾನು ಇನ್ನೂ ಹೆಚ್ಚಾಗಿ ಅಪೇಕ್ಷಿಸುತ್ತೇನೆ. ಕೇವಲ ವಿವಿಧ ಭಾಷೆಗಳನ್ನು ಮಾತನಾಡುವವನಿಗಿಂತಲೂ ಪ್ರವಾದಿಸುವವನು ಹೆಚ್ಚು ಶ್ರೇಷ್ಠನಾಗಿದ್ದಾನೆ. ಆದರೆ ವಿವಿಧ ಭಾಷೆಗಳಲ್ಲಿ ಮಾತಾಡುವವನು ಆ ಭಾಷೆಗಳನ್ನು ಅನುವಾದಿಸಬಲ್ಲವನಾಗಿದ್ದರೆ, ಅವನು ಪ್ರವಾದಿಸುವವನಷ್ಟೇ ಶ್ರೇಷ್ಠನಾಗುತ್ತಾನೆ. ಆಗ ಅವನು ಹೇಳುವ ಸಂಗತಿಗಳ ಮೂಲಕ ಸಭೆಗೆ ಸಹಾಯವಾಗುವುದು.


ಪರಭಾಷೆಯಲ್ಲಿ ಮಾತಾಡುವ ವರವುಳ್ಳವನು ತಾನು ಹೇಳುವ ವಿಷಯಗಳನ್ನು ಅನುವಾದಿಸುವ ಸಾಮರ್ಥ್ಯಕ್ಕಾಗಿಯೂ ದೇವರಲ್ಲಿ ಪ್ರಾರ್ಥಿಸಲಿ.


ಆದರೆ ಅನುವಾದಕನು ಇಲ್ಲದಿದ್ದರೆ, ಪರಭಾಷೆಯಲ್ಲಿ ಮಾತಾಡುವವನು ಸಭೆಯಲ್ಲಿ ಮೌನವಾಗಿರಬೇಕು. ಆ ವ್ಯಕ್ತಿಯು ತನ್ನೊಂದಿಗೂ ದೇವರೊಂದಿಗೂ ಮಾತ್ರ ಮಾತಾಡಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು