Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 14:3 - ಪರಿಶುದ್ದ ಬೈಬಲ್‌

3 ಆದರೆ ಪ್ರವಾದಿಸುವವನು ಜನರೊಂದಿಗೆ ಮಾತಾಡುತ್ತಾನೆ. ಅವನು ಜನರಿಗೆ ಶಕ್ತಿಯನ್ನು, ಪ್ರೋತ್ಸಾಹವನ್ನು ಮತ್ತು ಆದರಣೆಯನ್ನು ಕೊಡುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಆದರೆ ಪ್ರವಾದಿಸುವವನಾದರೋ, ಅವನ ಮಾತುಗಳಿಂದ ಭಕ್ತಿವೃದ್ಧಿಯನ್ನೂ, ಪ್ರೋತ್ಸಾಹವನ್ನೂ ಸಂತೈಸುವಿಕೆಯನ್ನೂ ಉಂಟುಮಾಡುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಅವನ ಮಾತು ಭಕ್ತಿಯನ್ನು ವೃದ್ಧಿಸುತ್ತದೆ. ಉತ್ಸಾಹವನ್ನುಂಟುಮಾಡುತ್ತದೆ, ಉಪಶಮನವನ್ನು ತರುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಪ್ರವಾದಿಸುವವರಾದರೋ ಮನುಷ್ಯರ ಸಂಗಡ ಮಾತಾಡುವವನಾಗಿ ಅವರಿಗೆ ಭಕ್ತಿವೃದ್ಧಿಯನ್ನೂ ಪ್ರೋತ್ಸಾಹವನ್ನೂ ಸಂತೈಸುವಿಕೆಯನ್ನೂ ಉಂಟುಮಾಡುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಪ್ರವಾದಿಸುವವನಾದರೋ, ಜನರ ಭಕ್ತಿವೃದ್ಧಿಗಾಗಿ, ಪ್ರೋತ್ಸಾಹಕ್ಕಾಗಿ, ಸಂತೈಸುವಿಕೆಗಾಗಿ ಮಾತನಾಡುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

3 ಖರೆ ಪ್ರವಾದ್ ಕರುನ್ ಬೊಲ್ತಾ ತೊ ಮಾನ್ಸಾಂಚ್ಯಾ ಕಡೆ ಬೊಲ್ತಾ; ತೊ ತೆಂಕಾ ಧನಿಯಾತ್ ವಾಡುಸಾಟ್ನಿ ಪ್ರವಾದ್, ಉಮ್ಮೆದ್ ಅನಿ ಸಮಾಧಾನ್ ಸಾಂಗ್ತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 14:3
42 ತಿಳಿವುಗಳ ಹೋಲಿಕೆ  

ಇದು ನಿಮಗೂ ಅನ್ವಯಿಸುತ್ತದೆ. ನೀವು ಆತ್ಮಿಕ ವರಗಳನ್ನು ಬಹಳವಾಗಿ ಅಪೇಕ್ಷಿಸುತ್ತೀರಿ. ಆದ್ದರಿಂದ, ಸಭೆಯು ದೃಢವಾಗಿ ಬೆಳೆಯಲು ಸಹಾಯಕರವಾದ ವರಗಳನ್ನು ಹೊಂದಿಕೊಳ್ಳಲು ಹೆಚ್ಚಾಗಿ ಪ್ರಯತ್ನಿಸಿರಿ.


ದೇವರ ವಾಕ್ಯವನ್ನು ಜನರಿಗೆ ಓದಿಹೇಳಿ ಅವರನ್ನು ಬಲಪಡಿಸು ಮತ್ತು ಅವರಿಗೆ ಬೋಧಿಸು. ನಾನು ಬರುವತನಕ ಈ ಕಾರ್ಯಗಳನ್ನು ಮಾಡುತ್ತಿರು.


ಆದರೆ ಪ್ರಿಯ ಸ್ನೇಹಿತರೇ, ನೀವು ನಿಮ್ಮ ಅತಿಪರಿಶುದ್ಧ ನಂಬಿಕೆಯ ಮೂಲಕ ದೃಢವಾಗಿರಿ. ಪವಿತ್ರಾತ್ಮಭರಿತರಾಗಿ ಪ್ರಾರ್ಥಿಸಿರಿ.


ನಾವು ಬೋಧಿಸುವ ಸತ್ಯವಾಕ್ಯವನ್ನು ಅವನು ನಂಬಿಗಸ್ತಿಕೆಯಿಂದ ಅನುಸರಿಸಬೇಕು. ಸತ್ಯವಾದ ಮತ್ತು ಯೋಗ್ಯವಾದ ಬೋಧನೆಯಿಂದ ಅವನು ಜನರಿಗೆ ಸಹಾಯ ಮಾಡುವವನಾಗಿರಬೇಕು. ಅವನು ಸತ್ಯಬೋಧನೆಗೆ ವಿರುದ್ಧವಾದ ಜನರಿಗೆ ಅವರ ತಪ್ಪನ್ನು ತೋರಿಸಿಕೊಡುವ ಸಾಮರ್ಥ್ಯ ಉಳ್ಳವನಾಗಿರಬೇಕು.


ನಮ್ಮ ಸ್ಥಿತಿಗತಿಗಳು ನಿಮಗೆ ತಿಳಿದಿರಬೇಕೆಂಬುದು ನನ್ನ ಇಷ್ಟ. ಅಲ್ಲದೆ ಅವನು ನಿಮ್ಮನ್ನು ಪ್ರೋತ್ಸಾಹಿಸುವನು.


ಸುವಾರ್ತೆಯನ್ನು ಜನರಿಗೆ ತಿಳಿಸು. ಕಾಲವು ಅನುಕೂಲವಾಗಿದ್ದರೂ ಅನಾನುಕೂಲವಾಗಿದ್ದರೂ ಬೋಧನೆಯನ್ನು ಮುಂದುವರಿಸು. ಜನರು ಮಾಡಬೇಕಾದುದನ್ನು ಅವರಿಗೆ ತಿಳಿಸು. ಅವರು ತಪ್ಪು ಮಾಡಿದಾಗ ಅದನ್ನು ಅವರಿಗೆ ತೋರಿಸಿಕೊಡು. ಅವರನ್ನು ಗದರಿಸು, ಇವುಗಳನ್ನು ಬಹಳ ತಾಳ್ಮೆಯಿಂದಲೂ ಎಚ್ಚರಿಕೆಯಿಂದಲೂ ಮಾಡು.


ಇದೇ ರೀತಿಯಲ್ಲಿ ಯುವಕರಿಗೆ ಜ್ಞಾನಿಗಳಾಗಿರಲು ತಿಳಿಸು.


ನೀವೆಲ್ಲರೂ ಒಬ್ಬರಾದ ನಂತರ ಒಬ್ಬರು ಪ್ರವಾದಿಸಬಹುದು. ಈ ರೀತಿಯಲ್ಲಿ ಎಲ್ಲಾ ಜನರು ಕಲಿತುಕೊಳ್ಳುವರು ಮತ್ತು ಪ್ರೋತ್ಸಾಹಿತರಾಗುವರು.


ಆದ್ದರಿಂದ ಸಹೋದರ ಸಹೋದರಿಯರೇ, ನೀವು ಮಾಡತಕ್ಕದ್ದೇನು? ನೀವು ಸಭೆಸೇರಿದಾಗ, ಒಬ್ಬನು ಹಾಡುತ್ತಾನೆ; ಒಬ್ಬನು ಉಪದೇಶ ಮಾಡುತ್ತಾನೆ; ಒಬ್ಬನು ದೇವರಿಂದ ಹೊಸ ಸತ್ಯವನ್ನು ತಿಳಿಸುತ್ತಾನೆ; ಒಬ್ಬನು ಪರಭಾಷೆಯಲ್ಲಿ ಮಾತಾಡುತ್ತಾನೆ; ಒಬ್ಬನು ಆ ಪರಭಾಷೆಯನ್ನು ಅನುವಾದಿಸುತ್ತಾನೆ. ಸಭೆಯು ದೃಢವಾಗಿ ಬೆಳೆಯಬೇಕೆಂಬುದೇ ಇವುಗಳ ಉದ್ದೇಶವಾಗಿರಬೇಕು.


ಆದ್ದರಿಂದ ಸಮಾಧಾನವನ್ನು ಉಂಟುಮಾಡುವ ಕಾರ್ಯಗಳನ್ನು ನಮ್ಮಿಂದ ಸಾಧ್ಯವಾದಷ್ಟರ ಮಟ್ಟಿಗೆ ಮಾಡಲು ನಾವು ಪ್ರಯತ್ನಿಸೋಣ. ಪರಸ್ಪರ ಸಹಾಯಕವಾದ ಕಾರ್ಯಗಳನ್ನೇ ಮಾಡಲು ನಾವು ಪ್ರಯತ್ನಿಸೋಣ. ದೇವರ ಕಾರ್ಯವನ್ನು ನಾಶಪಡಿಸಲು ಆಹಾರಕ್ಕೆ ಅವಕಾಶ ಕೊಡಬೇಡಿ.


ಮೋಶೆಯ ಧರ್ಮಶಾಸ್ತ್ರವನ್ನು ಮತ್ತು ಪ್ರವಾದಿಗಳ ಗ್ರಂಥಗಳನ್ನು ಓದಲಾಯಿತು. ಬಳಿಕ ಸಭಾಮಂದಿರದ ನಾಯಕರು ಪೌಲ ಬಾರ್ನಬರಿಗೆ, “ಸಹೋದರರೇ, ಇಲ್ಲಿರುವ ಜನರಿಗೆ ಸಹಾಯವಾಗುವಂತೆ ಏನನ್ನಾದರೂ ನೀವು ಹೇಳಬೇಕೆಂದಿದ್ದರೆ, ದಯವಿಟ್ಟು ಹೇಳಿ!” ಎಂಬ ಸಂದೇಶವನ್ನು ಕಳುಹಿಸಿದರು.


ಗುಲಾಮರಿಗೆ ಈ ಸಂಗತಿಗಳನ್ನು ತಿಳಿಸು: ಅವರು ತಮ್ಮ ಯಜಮಾನರಿಗೆ ಯಾವಾಗಲೂ ವಿಧೇಯರಾಗಿದ್ದು ಅವರನ್ನು ಮೆಚ್ಚಿಸಲು ಪ್ರಯತ್ನಿಸಬೇಕು. ಅವರು ತಮ್ಮ ಯಜಮಾನರ ಜೊತೆಯಲ್ಲಿ ವಾಗ್ವಾದ ಮಾಡಬಾರದು;


ನಮ್ಮ ಬೋಧನೆಯು ತಪ್ಪೂ ಅಲ್ಲ ಮತ್ತು ಅಶುದ್ಧವಾದ ಉದ್ದೇಶವನ್ನು ಹೊಂದಿಯೂ ಇಲ್ಲ ಮತ್ತು ನಿಮ್ಮನ್ನು ಮೋಸಗೊಳಿಸುವ ಪ್ರಯತ್ನವೂ ಅಲ್ಲ.


“ಎಲ್ಲಾ ಕಾರ್ಯಗಳನ್ನು ಮಾಡುವುದಕ್ಕೆ ಸ್ವಾತಂತ್ರ್ಯವಿದೆ.” ಆದರೆ ನಾವು ಮಾಡುವ ಕಾರ್ಯಗಳೆಲ್ಲಾ ಒಳ್ಳೆಯವೆಂದು ಹೇಳುವುದು ಸರಿಯಲ್ಲ. “ಎಲ್ಲಾ ಕಾರ್ಯಗಳನ್ನು ಮಾಡುವುದಕ್ಕೆ ಸ್ವಾತಂತ್ರ್ಯವಿದೆ.” ಆದರೆ ಕೆಲವು ಕಾರ್ಯಗಳು ಬೇರೆಯವರ ಅಭಿವೃದ್ಧಿಗೆ ಸಹಾಯಕವಾಗಿರುವುದಿಲ್ಲ.


ನಾನು ಈ ಕಿರುಪತ್ರವನ್ನು ಸಿಲ್ವಾನನ ನೆರವಿನಿಂದ ಬರೆದೆನು. ಅವನು ಕ್ರಿಸ್ತನಲ್ಲಿ ನಂಬಿಗಸ್ತನಾದ ಸಹೋದರನೆಂಬುದು ನನಗೆ ತಿಳಿದಿದೆ. ನಾನು ನಿಮ್ಮನ್ನು ಸಂತೈಸಲು ಮತ್ತು ಪ್ರೋತ್ಸಾಹಿಸಲು ಈ ಪತ್ರವನ್ನು ಬರೆದೆನು. ಇದುವೇ ದೇವರ ನಿಜವಾದ ಕೃಪೆ ಎಂಬುದನ್ನು ನಿಮಗೆ ತಿಳಿಸಬೇಕೆಂಬುದೇ ನನ್ನ ಅಪೇಕ್ಷೆಯಾಗಿತ್ತು. ಆ ಕೃಪೆಯಲ್ಲಿ ಸ್ಥಿರತೆಯಿಂದಿರಿ.


ನನ್ನ ಸಹೋದರ ಸಹೋದರಿಯರೇ, ನಾನು ಹೇಳಿದ ಈ ಸಂಗತಿಗಳನ್ನು ನೀವು ತಾಳ್ಮೆಯಿಂದ ಆಲಿಸಬೇಕೆಂದು ನಿಮ್ಮಲ್ಲಿ ಬೇಡಿಕೊಳ್ಳುತ್ತೇನೆ. ನಿಮ್ಮನ್ನು ಬಲಪಡಿಸುವುದಕ್ಕಾಗಿ ಈ ಪತ್ರವನ್ನು ಬರೆದಿರುವೆನು. ಈ ಪತ್ರವು ಬಹುದೀರ್ಘವಾದದ್ದೇನೂ ಅಲ್ಲ.


ನಾವು ಸಭೆಯಾಗಿ ಸೇರಿಬರುವುದನ್ನು ಬಿಡಬಾರದು. ಕೆಲವರು ಸಭೆಗೆ ಬರುತ್ತಿಲ್ಲ. ನಾವು ಒಟ್ಟಾಗಿ ಸೇರಿಬಂದು ಒಬ್ಬರನ್ನೊಬ್ಬರು ಬಲಪಡಿಸಬೇಕು. ಯೇಸುವು ಪ್ರತ್ಯಕ್ಷನಾಗುವ ದಿನ ಸಮೀಪವಾಗುತ್ತಿರುವುದರಿಂದ ನೀವು ಇದನ್ನು ಮತ್ತಷ್ಟು ಹೆಚ್ಚಾಗಿ ಮಾಡಬೇಕು.


ಈ ಸಂಗತಿಗಳನ್ನು ಜನರಿಗೆ ತಿಳಿಸಲು ನಿನಗೆ ಸಂಪೂರ್ಣ ಅಧಿಕಾರವಿದೆ. ಜನರನ್ನು ಬಲಗೊಳಿಸಲು ಈ ಅಧಿಕಾರವನ್ನು ಬಳಸಿಕೊಂಡು, ಅವರು ಮಾಡಬೇಕಾದುದನ್ನು ತಿಳಿಸು. ನೀನು ಮುಖ್ಯನಾದವನಲ್ಲವೆಂದು ಯಾರೂ ನಿನ್ನನ್ನು ಪರಿಗಣಿಸದಂತೆ ನೋಡಿಕೊ.


ಕೆಲವರಿಗೆ ವಿಶ್ವಾಸಿಗಳಾದ ಯಜಮಾನರಿದ್ದಾರೆ. ಆದ್ದರಿಂದ ಆ ಗುಲಾಮರು ಮತ್ತು ಯಜಮಾನರು ಸಹೋದರರಾಗಿದ್ದಾರೆ. ಆದರೆ ಅವರು ತಮ್ಮ ಯಜಮಾನರಿಗೆ ಕಡಿಮೆ ಗೌರವ ಕೊಡದೆ ತಮ್ಮ ಯಜಮಾನರ ಸೇವೆಯನ್ನು ಇನ್ನೂ ಉತ್ತಮವಾಗಿ ಮಾಡಬೇಕು. ಏಕೆಂದರೆ ಅವರು ಒಳ್ಳೆಯ ಕೆಲಸಗಳಿಗಾಗಿ ತಮ್ಮನ್ನು ಪ್ರತಿಷ್ಠಿಸಿಕೊಳ್ಳುವ ವಿಶ್ವಾಸಿಗಳಾಗಿದ್ದಾರೆ ಮತ್ತು ಸ್ನೇಹಿತರಾಗಿದ್ದಾರೆ. ಈ ಕಾರ್ಯಗಳನ್ನು ಮಾಡುವಂತೆ ನೀನು ಜನರಿಗೆ ಉಪದೇಶಿಸಬೇಕು ಮತ್ತು ತಿಳಿಸಬೇಕು.


ಕಲ್ಪನಾಕಥೆಗಳಿಗೂ ಕೊನೆಯಿಲ್ಲದ ವಂಶಾವಳಿಗಳಿಗೂ ಗಮನಕೊಡಬಾರದೆಂದು ಅವರಿಗೆ ಆಜ್ಞಾಪಿಸು. ಆ ಸಂಗತಿಗಳು ವಾದವಿವಾದಗಳನ್ನು ಮಾತ್ರ ತರುತ್ತವೆ. ಅವುಗಳಿಂದ ದೇವರ ಕಾರ್ಯಕ್ಕೆ ಪ್ರಯೋಜನವೇನೂ ಇಲ್ಲ. ದೇವರ ಕಾರ್ಯವನ್ನು ನಂಬಿಕೆಯಿಂದ ಮಾಡಬೇಕು.


ತಮ್ಮ ಕೆಲಸವನ್ನು ತಾವು ನೋಡಿಕೊಳ್ಳುವಂತೆ ಅವರಿಗೆ ಆಜ್ಞಾಪಿಸುತ್ತಿದ್ದೇವೆ. ಅವರೇ ದುಡಿದು ತಮ್ಮ ಆಹಾರವನ್ನು ಸಂಪಾದಿಸಿಕೊಳ್ಳಬೇಕೆಂದು ಆಜ್ಞಾಪಿಸಿ ಪ್ರಭುವಾದ ಯೇಸು ಕ್ರಿಸ್ತನಲ್ಲಿ ಬೇಡಿಕೊಳ್ಳುತ್ತೇವೆ.


ಆದಕಾರಣ ಈ ಮಾತುಗಳಿಂದ ಒಬ್ಬರನ್ನೊಬ್ಬರು ಸಂತೈಸಿರಿ.


ಸಹೋದರ ಸಹೋದರಿಯರೇ, ಈಗ ನಿಮಗೆ ಇತರ ಕೆಲವು ವಿಚಾರಗಳನ್ನು ತಿಳಿಸುತ್ತೇನೆ. ದೇವರನ್ನು ಮೆಚ್ಚಿಸಲು ಹೇಗೆ ಜೀವಿಸಬೇಕೆಂದು ನಿಮಗೆ ಕಲಿಸಿದ್ದೇವೆ. ನೀವು ಅದೇ ರೀತಿಯಲ್ಲಿ ಜೀವಿಸುತ್ತಿರುವಿರಿ. ಅದೇ ರೀತಿಯಲ್ಲಿ ಇನ್ನೂ ಹೆಚ್ಚು ಸಮರ್ಪಕವಾಗಿ ಜೀವಿಸಬೇಕೆಂದು ನಾವು ನಿಮ್ಮನ್ನು ಕ್ರಿಸ್ತನಲ್ಲಿ ಕೇಳಿಕೊಳ್ಳುತ್ತೇವೆ ಮತ್ತು ಪ್ರೋತ್ಸಾಹಿಸುತ್ತೇವೆ.


ಆದುದರಿಂದ ಅಥೆನ್ಸಿನಲ್ಲಿ ಉಳಿದುಕೊಂಡು ತಿಮೊಥೆಯನನ್ನು ನಿಮ್ಮ ಬಳಿಗೆ ಕಳುಹಿಸಲು ತೀರ್ಮಾನಿಸಿದೆವು. ತಿಮೊಥೆಯನು ನಮ್ಮ ಸಹೋದರ. ಅವನು ದೇವರಿಗೋಸ್ಕರ ನಮ್ಮೊಡನೆ ಕೆಲಸ ಮಾಡುತ್ತಿದ್ದಾನೆ. ಕ್ರಿಸ್ತನ ವಿಷಯವಾದ ಸುವಾರ್ತೆಯನ್ನು ಜನರಿಗೆ ತಿಳಿಸಲು ಅವನು ನಮಗೆ ಸಹಾಯ ಮಾಡುತ್ತಿದ್ದಾನೆ. ನಿಮ್ಮ ನಂಬಿಕೆಯನ್ನು ಬಲಗೊಳಿಸಲು ಮತ್ತು ನಿಮ್ಮನ್ನು ಸಂತೈಸಲು ತಿಮೊಥೆಯನನ್ನು ಕಳುಹಿಸಿದ್ದೇವೆ.


ತಂದೆಯು ತನ್ನ ಸ್ವಂತ ಮಕ್ಕಳೊಡನೆ ನಡೆದುಕೊಳ್ಳುವಂತೆ ನಿಮ್ಮಲ್ಲಿ ಪ್ರತಿಯೊಬ್ಬರೊಡನೆಯೂ ನಡೆದುಕೊಂಡೆವೆಂಬುದು ನಿಮಗೆ ತಿಳಿದಿದೆ.


ಆದಕಾರಣವೇ ನಾನು ಅವನನ್ನು ಕಳುಹಿಸುತ್ತಿದ್ದೇನೆ. ನಾವು ಹೇಗಿರುವೆವು ಎಂಬುದನ್ನು ನೀವು ತಿಳಿದುಕೊಳ್ಳಬೇಕೆಂಬುದು ನನ್ನ ಅಪೇಕ್ಷೆ. ನಿಮ್ಮನ್ನು ಪ್ರೋತ್ಸಾಹಿಸಲು ನಾನು ಅವನನ್ನು ಒನೇಸಿಮನ ಜೊತೆಯಲ್ಲಿ ಕಳುಹಿಸುತ್ತಿದ್ದೇನೆ.


ನಿಮ್ಮ ಬಾಯಿಂದ ಕೆಟ್ಟ ಮಾತುಗಳು ಬಾರದಿರಲಿ. ಭಕ್ತಿಯನ್ನು ವೃದ್ಧಿಮಾಡುವಂಥ ಕಾಲೋಚಿತವಾದ ಮಾತು ಇದ್ದರೆ ಕೇಳುವವರ ಹಿತಕ್ಕಾಗಿ ಅದನ್ನು ಆಡಿರಿ.


ಆದರೆ ಈಗ ನೀವು ಅವನನ್ನು ಕ್ಷಮಿಸಬೇಕು ಮತ್ತು ಸಂತೈಸಬೇಕು. ಆಗ ಅವನು ಅತೀವ ದುಃಖದಿಂದ ಸಂಪೂರ್ಣವಾಗಿ ಸೋತುಹೋಗಲು ಸಾಧ್ಯವಾಗುವುದಿಲ್ಲ.


ನಮಗೆ ಸಂಕಷ್ಟವಿರುವಾಗಲೆಲ್ಲಾ ಆತನು ನಮ್ಮನ್ನು ಸಂತೈಸುತ್ತಾನೆ; ಸಂಕಷ್ಟಗಳಲ್ಲಿರುವ ಇತರ ಜನರನ್ನು ಸಂತೈಸಲು ಇದರ ಮೂಲಕ ನಾವು ಸಹ ಶಕ್ತರಾಗುತ್ತೇವೆ. ದೇವರು ನಮ್ಮನ್ನು ಸಂತೈಸುವಂತೆಯೇ ನಾವು ಸಹ ಅವರನ್ನು ಸಂತೈಸಬಲ್ಲವರಾಗುತ್ತೇವೆ.


ಸತ್ಯವಾಗಿ ಹೇಳುವುದಾದರೆ, ದೇವರಿಗೆ ಮಾಡುವ ಕೃತಜ್ಞತಾಸ್ತುತಿಯಿಂದ ಬೇರೊಬ್ಬನಿಗೆ ಸಹಾಯವಾಗುವುದಿಲ್ಲ.


ವಿಗ್ರಹಗಳಿಗೆ ಯಜ್ಞ ಮಾಡಿದ ಪಶುವಿನ ಮಾಂಸದ ಬಗ್ಗೆ ಈಗ ನಾನು ಬರೆಯುತ್ತೇನೆ. “ನಮಗೆಲ್ಲರಿಗೂ ಜ್ಞಾನವಿದೆ” ಎಂಬುದು ನಮಗೆ ಗೊತ್ತಿದೆ. “ಜ್ಞಾನವು” ನಮ್ಮನ್ನು ಅಹಂಕಾರದಿಂದ ತುಂಬಿಸುತ್ತದೆ. ಆದರೆ ಪ್ರೀತಿಯು ಬೇರೆಯವರಲ್ಲಿ ಭಕ್ತಿವೃದ್ಧಿಯನ್ನು ಮಾಡುತ್ತದೆ.


ನಮ್ಮಲ್ಲಿ ಪ್ರತಿಯೊಬ್ಬರು ತಮ್ಮ ನೆರೆಯವರ ಹಿತವನ್ನು ನೋಡಿಕೊಳ್ಳಬೇಕು. ನಂಬಿಕೆಯಲ್ಲಿ ಬಲಹೀನರಾಗಿರುವವರನ್ನು ಬಲಗೊಳಿಸಲು ನೆರವಾಗಿರಬೇಕು.


ಉಪದೇಶಮಾಡುವ ವರವನ್ನು ಹೊಂದಿರುವವನು ಉಪದೇಶ ಮಾಡಬೇಕು. ಸಂತೈಸುವ ವರವನ್ನು ಹೊಂದಿರುವವನು ಬೇರೆಯವರನ್ನು ಸಂತೈಸಬೇಕು. ದಾನಮಾಡುವ ವರವನ್ನು ಹೊಂದಿರುವವನು ಉದಾರವಾಗಿ ಕೊಡಬೇಕು. ನಾಯಕತ್ವದ ವರವನ್ನು ಹೊಂದಿರುವವನು ನಾಯಕತ್ವವನ್ನು ವಹಿಸಿಕೊಂಡಿರುವಾಗ ಕಷ್ಟಪಟ್ಟು ದುಡಿಯಬೇಕು. ಕನಿಕರವನ್ನು ತೋರುವ ವರವನ್ನು ಹೊಂದಿರುವವನು ಆನಂದದಿಂದ ಆ ಕಾರ್ಯವನ್ನು ಮಾಡಬೇಕು.


ಯೂದ ಸೀಲರು ಸಹ ಪ್ರವಾದಿಗಳಾಗಿದ್ದರು. ಅವರು ಅನೇಕ ಸಂಗತಿಗಳನ್ನು ಸಹೋದರರಿಗೆ ತಿಳಿಸಿ ಅವರನ್ನು ಬಲಪಡಿಸಿದರು.


ಯೇಸುವಿನ ಶಿಷ್ಯರನ್ನು ಬಲಗೊಳಿಸಿ, ನಂಬಿಕೆಯಲ್ಲಿ ದೃಢವಾಗಿರಲು ಅವರಿಗೆ ಪ್ರೋತ್ಸಾಹಿಸಿದರು, “ನಾವು ದೇವರ ರಾಜ್ಯಕ್ಕೆ ಅನೇಕ ಕಷ್ಟಗಳ ಮೂಲಕ ಹೋಗಬೇಕಾಗಿದೆ” ಎಂದು ಬೋಧಿಸಿದರು.


ಇಂತಿರಲು, ಜುದೇಯ, ಗಲಿಲಾಯ ಮತ್ತು ಸಮಾರ್ಯ ಪ್ರದೇಶಗಳಲ್ಲಿ ಇದ್ದ ಸಭೆಗಳಲ್ಲಿ ಶಾಂತಿ ನೆಲೆಸಿತು. ಪವಿತ್ರಾತ್ಮನ ಸಹಾಯದಿಂದ ಸಭೆಗಳು ಬಲವಾಗತೊಡಗಿದವು. ವಿಶ್ವಾಸಿಗಳು ತಾವು ಪ್ರಭುವನ್ನು ಗೌರವಿಸುವುದಾಗಿ ತಮ್ಮ ಜೀವಿತಗಳ ಮೂಲಕ ತೋರಿಸಿಕೊಟ್ಟರು. ಇದರಿಂದ ವಿಶ್ವಾಸಿಗಳ ಸಭೆಯು ಹೆಚ್ಚುಹೆಚ್ಚು ಬೆಳೆಯತೊಡಗಿತು.


ಯೋಹಾನನು ಜನರಿಗೆ ಇನ್ನೂ ಅನೇಕ ವಿಷಯಗಳನ್ನು ಹೇಳಿ ಪ್ರೋತ್ಸಾಹಿಸುತ್ತಾ ಸುವಾರ್ತೆಯನ್ನು ಬೋಧಿಸುತ್ತಿದ್ದನು.


ಆದರೆ ಒಬ್ಬರನ್ನೊಬ್ಬರು ಪ್ರತಿದಿನವೂ ಸಂತೈಸಿರಿ. “ಈ ದಿನ”ವು ಇನ್ನೂ ಇರುವಾಗಲೇ ಇದನ್ನೆಲ್ಲ ಮಾಡಿರಿ. ಪಾಪದಿಂದಾಗಲಿ ಪಾಪವು ಮೋಸಗೊಳಿಸುವ ರೀತಿಯಿಂದಾಗಲಿ ನಿಮ್ಮಲ್ಲಿ ಯಾರೂ ಕಠಿಣರಾಗದಂತೆ ಒಬ್ಬರಿಗೊಬ್ಬರು ಸಹಾಯ ಮಾಡಿರಿ.


ಆ ವಿಶ್ವಾಸಿಗಳಲ್ಲಿ ಯೋಸೇಫ ಎಂಬವನೂ ಇದ್ದನು. ಅಪೊಸ್ತಲರು ಅವನನ್ನು ಬಾರ್ನಬ ಎಂದು ಕರೆಯುತ್ತಿದ್ದರು. (ಬಾರ್ನಬ ಅಂದರೆ “ಧೈರ್ಯದಾಯಕ.”) ಸೈಪ್ರಸ್‌ನಲ್ಲಿ ಹುಟ್ಟಿದ ಇವನು ಲೇವಿಯನಾಗಿದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು