1 ಕೊರಿಂಥದವರಿಗೆ 14:33 - ಪರಿಶುದ್ದ ಬೈಬಲ್33 ದೇವರು ಸಮಾಧಾನಕ್ಕೆ ಕಾರಣನೇ ಹೊರತು ಗಲಿಬಿಲಿಗೆ ಕಾರಣನಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201933 ದೇವರು ಸಮಾಧಾನಕ್ಕೆ ಕಾರಣನೇ ಹೊರತು ಗಲಿಬಿಲಿಗೆ ಕಾರಣನಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)33 ದೇವರು ಗಲಿಬಿಲಿಯನ್ನು ಬಯಸುವವರಲ್ಲ; ಅವರು ಶಾಂತಿ ಮತ್ತು ಸುವ್ಯವಸ್ಥೆಯ ದೇವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)33 ದೇವರು ಸಮಾಧಾನಕ್ಕೆ ಕಾರಣನೇ ಹೊರತು ಗಲಿಬಿಲಿಗೆ ಕಾರಣನಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ33 ದೇವಜನರ ಎಲ್ಲಾ ಸಭೆಗಳಲ್ಲಿರುವಂತೆ, ದೇವರು ಗಲಿಬಿಲಿಯ ದೇವರಲ್ಲ, ಸಮಾಧಾನದ ದೇವರಾಗಿದ್ದಾರೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್33 ಕಶ್ಯಾಕ್ ಮಟ್ಲ್ಯಾರ್ ದೆವ್ ಗೊಂದಳಾಚೊ ದೆವ್ ನ್ಹಯ್, ಸಮಾಧಾನಾಚೊ ದೆವ್. ದೆವಾಚ್ಯಾ ಲೊಕಾಂಚ್ಯಾ ಸಗ್ಳ್ಯಾ ತಾಂಡ್ಯಾತ್ನಿ ಅಸಲ್ಲ್ಯಾ ಸಾರ್ಕೆ, ಅಧ್ಯಾಯವನ್ನು ನೋಡಿ |
ಶಾಂತಿಸ್ವರೂಪನಾದ ದೇವರು ನಿಮಗೆ ಬೇಕಾದ ತನ್ನ ವರದಾನಗಳನ್ನು ದಯಪಾಲಿಸಲಿ ಎಂದು ನಾನು ಆತನಲ್ಲಿ ಪ್ರಾರ್ಥಿಸುತ್ತೇನೆ. ಏಕೆಂದರೆ ಆಗ ನೀವು ಆತನ ಇಷ್ಟಕ್ಕನುಸಾರವಾದವುಗಳನ್ನೆಲ್ಲಾ ಮಾಡಲು ಸಾಧ್ಯವಾಗುವುದು. ತನ್ನ ರಕ್ತವನ್ನು ಸುರಿಸಿ ಸಭೆಯೆಂಬ ಹಿಂಡಿಗೆ ಮಹಾಕುರುಬನಾಗಿರುವ ನಮ್ಮ ಪ್ರಭುವಾದ ಯೇಸುವನ್ನು ಸತ್ತವರೊಳಗಿಂದ ಮೇಲಕ್ಕೆ ಎಬ್ಬಿಸಿದವನು ದೇವರೇ. ಆತನ ರಕ್ತವು ಶಾಶ್ವತವಾದ ಹೊಸ ಒಡಂಬಡಿಕೆಯನ್ನಾರಂಭಿಸಿತು. ದೇವರು ತನಗೆ ಸಂತೋಷವನ್ನು ಉಂಟುಮಾಡುವ ಕಾರ್ಯಗಳನ್ನು ಯೇಸು ಕ್ರಿಸ್ತನ ಮೂಲಕ ನಮ್ಮಲ್ಲಿ ನಡೆಸಲಿ. ಯೇಸುವಿಗೆ ಎಂದೆಂದಿಗೂ ಮಹಿಮೆಯಾಗಲಿ. ಆಮೆನ್.
ಆದಕಾರಣವೇ, ನಾನು ನಿಮ್ಮ ಬಳಿಗೆ ತಿಮೊಥೆಯನನ್ನು ಕಳುಹಿಸುತ್ತಿದ್ದೇನೆ, ಅವನು ಪ್ರಭುವಿನಲ್ಲಿ ನನ್ನ ಮಗನಾಗಿದ್ದಾನೆ. ನಾನು ಅವನನ್ನು ಪ್ರೀತಿಸುತ್ತೇನೆ. ಅವನು ನಂಬಿಗಸ್ತನಾಗಿದ್ದಾನೆ. ನಾನು ಕ್ರಿಸ್ತ ಯೇಸುವಿನಲ್ಲಿ ಜೀವಿಸುವ ರೀತಿಯನ್ನು ಅವನು ನಿಮ್ಮ ಜ್ಞಾಪಕಕ್ಕೆ ತರುವನು. ಪ್ರತಿಯೊಂದು ಕಡೆಯಲ್ಲಿಯೂ ಎಲ್ಲಾ ಸಭೆಗಳಲ್ಲಿಯೂ ನಾನು ಅದೇ ರೀತಿಯ ಜೀವನವನ್ನು ಉಪದೇಶಿಸುತ್ತೇನೆ.