1 ಕೊರಿಂಥದವರಿಗೆ 14:39 - ಪರಿಶುದ್ದ ಬೈಬಲ್39 ಆದ್ದರಿಂದ ಸಹೋದರ ಸಹೋದರಿಯರೇ, ನೀವು ಪ್ರವಾದನಾ ವರವನ್ನು ನಿಜವಾಗಿಯೂ ಬಯಸಿರಿ. ವಿವಿಧ ಭಾಷೆಗಳಲ್ಲಿ ಮಾತಾಡುವ ವರವನ್ನು ಹೊಂದಿರುವವರು ತಮ್ಮ ವರವನ್ನು ಉಪಯೋಗಿಸಲಿ. ಅವರನ್ನು ತಡೆಯಬೇಡಿರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201939 ಆದಕಾರಣ ನನ್ನ ಸಹೋದರರೇ, ಪ್ರವಾದನಾವರವನ್ನು ಆಸಕ್ತಿಯಿಂದ ಅಪೇಕ್ಷಿಸಿರಿ, ಮತ್ತು ಅನ್ಯಭಾಷೆಗಳನ್ನಾಡುವವರಿಗೆ ಅಡ್ಡಿಮಾಡಬೇಡಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)39 ಸಹೋದರರೇ, ದೇವರ ವಾಕ್ಯವನ್ನು ಸಾರುವುದರಲ್ಲಿ ಆಸಕ್ತರಾಗಿರಿ. ಪರವಶಾಭಾಷೆಗಳನ್ನು ಆಡುವವರನ್ನು ತಡೆಯಬೇಡಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)39 ಆದಕಾರಣ ನನ್ನ ಸಹೋದರರೇ, ಪ್ರವಾದಿಸುವದಕ್ಕೆ ಆಸಕ್ತಿಯಿಂದ ಅಪೇಕ್ಷಿಸಿರಿ, ಮತ್ತು ವಾಣಿಯನ್ನಾಡುವದಕ್ಕೆ ಬೇಡವೆನ್ನಬಾರದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ39 ಆದಕಾರಣ ನನ್ನ ಪ್ರಿಯರೇ, ಪ್ರವಾದಿಸುವ ವರಕ್ಕಾಗಿ ಆಸಕ್ತರಾಗಿರಿ. ಅನ್ಯಭಾಷೆಯನ್ನಾಡುವುದಕ್ಕೆ ಅಡ್ಡಿಮಾಡಬೇಡಿರಿ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್39 ತಸೆ ಮನುನ್ ಭಾವಾನು ಅನಿ ಭೆನಿಯಾನು, ಪ್ರವಾದ್ ಕರುನ್ ಬೊಲ್ತಲ್ಯಾ ವರುಚಿ ಆಶಾ ಕರಾ ಅನಿ ವಿಚಿತ್ರ್ ಬಾಶಾನಿ ಬೊಲ್ತಲ್ಯಾಕ್ನಿ ಅಡ್ವುನಕಾಶಿ. ಅಧ್ಯಾಯವನ್ನು ನೋಡಿ |
ವಿವಿಧ ಭಾಷೆಗಳಲ್ಲಿ ಮಾತಾಡುವ ವರವನ್ನು ನೀವೆಲ್ಲರೂ ಹೊಂದಿರಬೇಕೆಂದು ನನ್ನ ಅಪೇಕ್ಷೆಯಾಗಿದೆ. ಆದರೆ ನೀವು ಪ್ರವಾದಿಸಬೇಕೆಂದು ನಾನು ಇನ್ನೂ ಹೆಚ್ಚಾಗಿ ಅಪೇಕ್ಷಿಸುತ್ತೇನೆ. ಕೇವಲ ವಿವಿಧ ಭಾಷೆಗಳನ್ನು ಮಾತನಾಡುವವನಿಗಿಂತಲೂ ಪ್ರವಾದಿಸುವವನು ಹೆಚ್ಚು ಶ್ರೇಷ್ಠನಾಗಿದ್ದಾನೆ. ಆದರೆ ವಿವಿಧ ಭಾಷೆಗಳಲ್ಲಿ ಮಾತಾಡುವವನು ಆ ಭಾಷೆಗಳನ್ನು ಅನುವಾದಿಸಬಲ್ಲವನಾಗಿದ್ದರೆ, ಅವನು ಪ್ರವಾದಿಸುವವನಷ್ಟೇ ಶ್ರೇಷ್ಠನಾಗುತ್ತಾನೆ. ಆಗ ಅವನು ಹೇಳುವ ಸಂಗತಿಗಳ ಮೂಲಕ ಸಭೆಗೆ ಸಹಾಯವಾಗುವುದು.