1 ಕೊರಿಂಥದವರಿಗೆ 15:12 - ಪರಿಶುದ್ದ ಬೈಬಲ್12 ಕ್ರಿಸ್ತನು ಸತ್ತವರೊಳಗಿಂದ ಜೀವಂತವಾಗಿ ಎದ್ದುಬಂದನೆಂದು ನಾವು ಬೋಧಿಸಿದ್ದೇವೆ. ಹೀಗಿರಲಾಗಿ, ಜನರಿಗೆ ಪುನರುತ್ಥಾನವಿಲ್ಲವೆಂದು ನಿಮ್ಮಲ್ಲಿ ಕೆಲವರು ಹೇಳುತ್ತಿರುವುದೇಕೆ? ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಕ್ರಿಸ್ತನು ಸತ್ತವರೊಳಗಿಂದ ಎಬ್ಬಿಸಲ್ಪಟ್ಟನೆಂದು ಸಾರುತ್ತಿರುವಲ್ಲಿ, ನಿಮ್ಮೊಳಗೆ ಕೆಲವರು ಸತ್ತವರಿಗೆ ಪುನರುತ್ಥಾನವೇ ಇಲ್ಲವೆಂದು ಹೇಳುವುದಾದರೂ ಹೇಗೆ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ಕ್ರಿಸ್ತಯೇಸು ಮರಣದಿಂದ ಪುನರುತ್ಥಾನ ಹೊಂದಿದರು ಎಂದು ನಾವು ಸಾರುತ್ತಿರುವಲ್ಲಿ, ಸತ್ತವರು ಪುನರುತ್ಥಾನರಾಗುವುದಿಲ್ಲ ಎಂದು ನಿಮ್ಮಲ್ಲಿ ಕೆಲವರು ವಾದಿಸುವುದು ಹೇಗೆ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ಕ್ರಿಸ್ತನು ಸತ್ತವರೊಳಗಿಂದ ಎಬ್ಬಿಸಲ್ಪಟ್ಟನೆಂದು ಸಾರೋಣವಾಗುತ್ತಿರುವಲ್ಲಿ ನಿಮ್ಮೊಳಗೆ ಕೆಲವರು - ಸತ್ತವರಿಗೆ ಪುನರುತ್ಥಾನವೇ ಇಲ್ಲವೆಂದು ಹೇಳುವದು ಹೇಗೆ? ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ಆದರೆ ಕ್ರಿಸ್ತ ಯೇಸು ಸತ್ತವರೊಳಗಿಂದ ಎದ್ದು ಬಂದಿರುತ್ತಾರೆಂದು ಸಾರುತ್ತಿರುವಲ್ಲಿ ನಿಮ್ಮೊಳಗೆ ಕೆಲವರು ಸತ್ತವರಿಗೆ ಪುನರುತ್ಥಾನ ಇಲ್ಲ ಎಂದು ಹೇಳುವುದು ಹೇಗೆ? ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್12 ಮಾಕಾ ಎಕ್ ಸಾಂಗಾ, ಕ್ರಿಸ್ತಾಕ್ ಮರಲ್ಲ್ಯಾತ್ಲೊ ಝಿತ್ತೊ ಕರುನ್ ಉಟ್ವಲ್ಲೆ ಹಾಯ್ ಮನುನ್ ಅಮಿ ಪರ್ಗಟ್ ಕರ್ತಾಂವ್ ಅಶೆ ಹೊಲ್ಯಾರ್, ತುಮ್ಚ್ಯಾತ್ಲಿ ಉಲ್ಲಿ ಲೊಕಾ ಮರಲ್ಲ್ಯಾಂಚೆ ಝಿತ್ತೆ ಹೊವ್ನ್ ಉಟ್ನೆ ನಾ ಮನುನ್ ಕಶ್ಯಾಕ್ ಮನ್ತ್ಯಾತ್? ಅಧ್ಯಾಯವನ್ನು ನೋಡಿ |