Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 15:2 - ಪರಿಶುದ್ದ ಬೈಬಲ್‌

2 ನೀವು ಆ ಸಂದೇಶದ ಮೂಲಕ ರಕ್ಷಣೆ ಹೊಂದಿದ್ದೀರಿ. ನಾನು ನಿಮಗೆ ತಿಳಿಸಿದ ಸಂದೇಶದಲ್ಲಿ ನಿಮಗೆ ದೃಢವಾದ ನಂಬಿಕೆ ಇರಲೇಬೇಕು. ನೀವು ಹೀಗೆ ಮಾಡದಿದ್ದರೆ, ನಿಮ್ಮ ನಂಬಿಕೆಯು ನಿರರ್ಥಕವಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ನಾನು ನಿಮಗೆ ಸಾರಿದ ಸುವಾರ್ತೆಯನ್ನು ನೀವು ದೃಢವಾಗಿ ಹಿಡಿದುಕೊಂಡರೆ ನಿಮಗೆ ರಕ್ಷಣೆಯಾಗುತ್ತದೆ. ಇಲ್ಲದಿದ್ದರೆ ನಿಮ್ಮ ನಂಬಿಕೆಯು ನಿರರ್ಥಕವಾಗುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ನಾನು ನಿಮಗೆ ಶುಭಸಂದೇಶವೆಂದು ತಿಳಿಸಿದ ಸಂಗತಿಯನ್ನು ದೃಢವಾಗಿ ವಿಶ್ವಾಸಿಸಿದರೆ ನೀವು ಜೀವೋದ್ಧಾರವನ್ನು ಪಡೆಯುವಿರಿ. ಇಲ್ಲವಾದರೆ ನಿಮ್ಮ ವಿಶ್ವಾಸ ನಿರರ್ಥಕವಾದೀತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ನಾನು ಯಾವ ಸಂಗತಿಯನ್ನು ಹೇಳಿ ನಿಮಗೆ ಸುವಾರ್ತೆಯನ್ನು ತಿಳಿಸಿದೆನೋ ನೀವು ಅದನ್ನು ಗಟ್ಟಿಯಾಗಿ ಹಿಡುಕೊಂಡರೆ ಮತ್ತು ನಿಮ್ಮ ನಂಬಿಕೆಯು ನಿರಾಧಾರವಾಗದ ಪಕ್ಷಕ್ಕೆ ಆ ಸುವಾರ್ತೆಯಿಂದ ನಿಮಗೆ ರಕ್ಷಣೆಯಾಗುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ನಾನು ಸಾರಿದ ಈ ಸುವಾರ್ತೆಯ ವಾಕ್ಯವನ್ನು ನೀವು ಬಿಗಿಯಾಗಿ ಹಿಡಿದುಕೊಂಡರೆ, ನಿಮಗೆ ರಕ್ಷಣೆಯಾಗುತ್ತದೆ. ಇಲ್ಲದಿದ್ದರೆ, ನಿಮ್ಮ ನಂಬಿಕೆ ವ್ಯರ್ಥವಾಗಿ ಹೋಗುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

2 ಮಿಯಾ ತುಮ್ಕಾ ಪರ್ಗಟ್ ಕರಲ್ಲ್ಯಾ ಸರ್ಕೆಚ್ ತುಮಿ ತಿ ಖಬರ್ ಸಂಬಾಳುನ್ ಘೆವ್ನ್ ಗೆಲ್ಯಾಶಿ ತರ್, ತಿಚೆ ವೈನಾ ತುಮ್ಕಾ ಸುಟ್ಕಾ ಗಾವ್ತಾ. ನಾ ಹೊಲ್ಯಾರ್ ತುಮ್ಚೊ ವಿಶ್ವಾಸ್ ಬೆಕಾರ್ ಮನುನ್ ಹೊಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 15:2
31 ತಿಳಿವುಗಳ ಹೋಲಿಕೆ  

ಕ್ರಿಸ್ತನಾದರೋ ಮಗನಾಗಿ ದೇವರ ಮನೆಯನ್ನು ಆಳುವುದರಲ್ಲಿ ನಂಬಿಗಸ್ತನಾಗಿದ್ದಾನೆ. ವಿಶ್ವಾಸಿಗಳಾದ ನಾವು ನಮಗಿರುವ ಮಹಾ ನಿರೀಕ್ಷೆಯಲ್ಲಿ ದೃಢವಾಗಿಯೂ ಹೆಮ್ಮೆಯಿಂದಲೂ ಇರುವುದಾಗಿದ್ದರೆ ದೇವರ ಮನೆಯವರಾಗಿದ್ದೇವೆ.


ಆದ್ದರಿಂದ ನಮಗೆ ಬೋಧಿಸಲ್ಪಟ್ಟ ಸಂಗತಿಗಳನ್ನು ಬಹಳ ಎಚ್ಚರಿಕೆಯಿಂದ ಅನುಸರಿಸಬೇಕು. ಸತ್ಯಮಾರ್ಗವನ್ನು ಬಿಟ್ಟು ತಪ್ಪಿಹೋಗದಂತೆ ಎಚ್ಚರಿಕೆಯಿಂದಿರಬೇಕು.


ನಾವೆಲ್ಲರೂ ಒಟ್ಟಾಗಿ ಕ್ರಿಸ್ತನಲ್ಲಿ ಪಾಲುಗಾರರಾಗಿದ್ದೇವೆ. ಆರಂಭದಲ್ಲಿ ನಮಗಿದ್ದ ದೃಢನಂಬಿಕೆಯನ್ನು ಅಂತ್ಯದವರೆಗೂ ಬಲವಾಗಿ ಹಿಡಿದುಕೊಳ್ಳುವುದಾದರೆ ಇದು ನಿಜವಾಗುತ್ತದೆ.


ಆತನು ನಮ್ಮನ್ನು ರಕ್ಷಿಸಿ, ತನ್ನ ಪವಿತ್ರ ಜನರಾಗಿರುವುದಕ್ಕಾಗಿ ನಮ್ಮನ್ನು ಕರೆದನು. ನಾವು ಮಾಡಿದ ಒಳ್ಳೆಯ ಕಾರ್ಯಗಳಿಂದ ಹೀಗಾಯಿತು ಎಂದಲ್ಲ. ಆತನು ತನ್ನ ಸಂಕಲ್ಪಕ್ಕನುಸಾರವಾಗಿ ಮತ್ತು ಕೃಪೆಗನುಸಾರವಾಗಿ ನಮ್ಮನ್ನು ರಕ್ಷಿಸಿ ತನ್ನವರನ್ನಾಗಿ ಮಾಡಿದನು. ಅನಾದಿಕಾಲದಲ್ಲಿಯೇ ಈ ಕೃಪೆಯು ಕ್ರಿಸ್ತ ಯೇಸುವಿನ ಮೂಲಕ ನಮಗೆ ದೊರೆಯಿತು.


ನೀವು ಕೇಳಿದ ಸುವಾರ್ತೆಯ ಮೇಲೆ ನಿಮಗಿರುವ ನಂಬಿಕೆಯಲ್ಲಿ ದೃಢವಾಗಿ ನೆಲೆಗೊಂಡಿದ್ದು ಅದರಿಂದುಂಟಾಗುವ ನಿರೀಕ್ಷೆಯನ್ನು ಬಿಟ್ಟು ಹೋಗದಿದ್ದರೆ ಇದು ಸಾಧ್ಯ. ಈ ಸುವಾರ್ತೆಯನ್ನು ಪ್ರಪಂಚದ ಜನರಿಗೆಲ್ಲ ಸಾರಲಾಗಿದೆ. ಪೌಲನಾದ ನಾನು ಈ ಸುವಾರ್ತೆಯನ್ನು ಸಾರುವ ಸೇವಕನಾದೆನು.


ಆದ್ದರಿಂದ ನೀವು ನಂಬಿಕೆಯ ಮೂಲಕ ದೇವರ ಕೃಪೆಯಿಂದಲೇ ರಕ್ಷಣೆ ಹೊಂದಿದವರಾಗಿದ್ದೀರಿ. ಆ ರಕ್ಷಣೆಯು ನಿಮ್ಮಿಂದ ಉಂಟಾದದ್ದಲ್ಲ, ಅದು ದೇವರ ವರ.


ನಾಶನ ಮಾರ್ಗದಲ್ಲಿರುವ ಜನರಿಗೆ ಶಿಲುಬೆಯ ಉಪದೇಶವು ಮೂರ್ಖತನವಾಗಿದೆ. ಆದರೆ ರಕ್ಷಣೆಯ ಮಾರ್ಗದಲ್ಲಿರುವ ನಮಗಾದರೋ ಅದು ದೇವರ ಶಕ್ತಿಯಾಗಿದೆ.


ಒಬ್ಬ ವ್ಯಕ್ತಿಯ ದೇಹದಲ್ಲಿ ಆತ್ಮವಿಲ್ಲದಿದ್ದರೆ, ಅವನ ದೇಹವು ಸತ್ತದ್ದೇ. ಅದೇ ರೀತಿಯಲ್ಲಿ ಕ್ರಿಯೆಯಿಲ್ಲದ ನಂಬಿಕೆಯು ಸತ್ತದ್ದೇ.


ನನ್ನ ಸಹೋದರ ಸಹೋದರಿಯರೇ, ಒಬ್ಬ ವ್ಯಕ್ತಿಯು ತನ್ನಲ್ಲಿ ನಂಬಿಕೆಯಿದೆಯೆಂದು ಹೇಳಿಕೊಂಡರೂ ಅದನ್ನು ಕಾರ್ಯರೂಪಕ್ಕೆ ತರದಿದ್ದರೆ, ಅವನ ನಂಬಿಕೆಯಿಂದ ಪ್ರಯೋಜನವೇನೂ ಇಲ್ಲ. ಆ ರೀತಿಯ ನಂಬಿಕೆಯು ಅವನನ್ನು ರಕ್ಷಿಸಬಲ್ಲದೇ? ಇಲ್ಲ!


ನಮ್ಮಲ್ಲಿರುವ ನಿರೀಕ್ಷೆಯನ್ನು ದೃಢವಾಗಿ ಕಾಯ್ದುಕೊಂಡು ಅದರ ಬಗ್ಗೆ ಜನರಿಗೆ ತಿಳಿಸುವುದರಲ್ಲಿ ದೃಢವಾಗಿರೋಣ. ದೇವರು ತನ್ನ ವಾಗ್ದಾನವನ್ನು ಈಡೇರಿಸುತ್ತಾನೆ ಎಂಬ ಭರವಸೆ ನಮ್ಮಲ್ಲಿರಬೇಕು.


ಬಂಡೆಯ ಮೇಲೆ ಬಿದ್ದ ಬೀಜವೆಂದರೇನು? ಕೆಲವರು ದೇವರ ವಾಕ್ಯ ಕೇಳಿ ಸಂತೋಷದಿಂದ ಸ್ವೀಕರಿಸಿಕೊಳ್ಳುತ್ತಾರೆ. ಆದರೆ ಅವರಿಗೆ ಆಳವಾದ ಬೇರುಗಳಿರುವುದಿಲ್ಲ. ಅವರು ಸ್ವಲ್ಪಕಾಲ ಮಾತ್ರವೇ ನಂಬುತ್ತಾರೆ. ಬಳಿಕ ತೊಂದರೆಯೇನಾದರೂ ಬಂದರೆ ತಮ್ಮ ನಂಬಿಕೆಯನ್ನು ಕಳೆದುಕೊಂಡು ದೇವರಿಂದ ದೂರ ಸರಿಯುತ್ತಾರೆ.


ಇದೇ ನಿಯಮ ನಂಬಿಕೆಗೂ ಅನ್ವಯಿಸುತ್ತದೆ. ಕ್ರಿಯೆಯಿಲ್ಲದ ನಂಬಿಕೆಯು ತನ್ನಲ್ಲಿಯೇ ಸತ್ತುಹೋಗಿದೆ.


ಪರಲೋಕಕ್ಕೆ ಏರಿಹೋದ ಪ್ರಧಾನ ಯಾಜಕನೊಬ್ಬನು ನಮಗಿದ್ದಾನೆ. ಆತನೇ ದೇವರ ಮಗನಾದ ಯೇಸು. ಆದ್ದರಿಂದ ನಮಗಿರುವ ನಂಬಿಕೆಯಲ್ಲೇ ದೃಢವಾಗಿ ಸಾಗೋಣ.


ಸಹೋದರ ಸಹೋದರಿಯರೇ, ದೃಢವಾಗಿರಿ. ನಾವು ಮಾತಿನ ಮೂಲಕ ಮತ್ತು ಪತ್ರಗಳ ಮೂಲಕ ನಿಮಗೆ ತಿಳಿಸಿದ ಬೋಧನೆಗಳನ್ನು ನಂಬಿಕೊಂಡೇ ಇರಿ.


ಅನೇಕ ಸಂಗತಿಗಳನ್ನು ಅನುಭವದಿಂದ ತಿಳಿದುಕೊಂಡಿದ್ದೀರಿ. ಆ ಅನುಭವಗಳೆಲ್ಲಾ ವ್ಯರ್ಥಗೊಂಡವೇ?


ನಾವು ದೇವರ ಜೊತೆಕೆಲಸದವರಾಗಿದ್ದೇವೆ. ಆದ್ದರಿಂದ ನಿಮ್ಮನ್ನು ಬೇಡಿಕೊಳ್ಳುವುದೇನೆಂದರೆ, ನೀವು ದೇವರಿಂದ ಹೊಂದಿಕೊಂಡ ಕೃಪೆಯು ವ್ಯರ್ಥವಾಗದಂತೆ ನೋಡಿಕೊಳ್ಳಿ.


ನಾನು ಸುವಾರ್ತೆಯ ವಿಷಯದಲ್ಲಿ ಹೆಮ್ಮೆಪಡುತ್ತೇನೆ. ನಂಬುವ ಪ್ರತಿಯೊಬ್ಬರನ್ನು ರಕ್ಷಿಸುವುದಕ್ಕಾಗಿ ಅಂದರೆ ಮೊದಲನೆಯದಾಗಿ, ಯೆಹೂದ್ಯರನ್ನು ಅನಂತರ ಯೆಹೂದ್ಯರಲ್ಲದವರನ್ನು ಸಹ ರಕ್ಷಿಸುವುದಕ್ಕಾಗಿ ದೇವರು ಸುವಾರ್ತೆ ಎಂಬ ಶಕ್ತಿಯನ್ನು ಉಪಯೋಗಿಸುತ್ತಾನೆ.


ಈ ಉಪದೇಶಗಳನ್ನು ಯಾವಾಗಲೂ ನೆನಪುಮಾಡಿಕೊ; ಮರೆತುಬಿಡಬೇಡ. ಅವು ನಿನಗೆ ಜೀವವಾಗಿವೆ!


ನನ್ನ ಮಗನೇ, ನನ್ನ ಉಪದೇಶವನ್ನು ಮರೆಯಬೇಡ. ನನ್ನ ಆಜ್ಞೆಗಳನ್ನು ಜ್ಞಾಪಕದಲ್ಲಿಟ್ಟುಕೊ.


ರಕ್ಷಣಾಮಾರ್ಗದಲ್ಲಿರುವವರ ಮತ್ತು ನಾಶನಮಾರ್ಗದಲ್ಲಿರುವವರ ಮಧ್ಯದಲ್ಲಿ ನಾವು ಕ್ರಿಸ್ತನ ಪರಿಮಳವಾಗಿದ್ದೇವೆ. ದೇವರಿಗೆ ಇದೇ ನಮ್ಮ ಕಾಣಿಕೆ.


ಕ್ರಿಸ್ತನು ಎದ್ದೇಬಂದಿಲ್ಲವಾದರೆ ನಮ್ಮ ಬೋಧನೆಗೂ ನಿಮ್ಮ ನಂಬಿಕೆಗೂ ಯಾವ ಬೆಲೆಯೂ ಇಲ್ಲ.


ಇದು ದೇವರ ಜ್ಞಾನದ ಸಂಕಲ್ಪವಾಗಿತ್ತು. ಲೋಕವು ತನ್ನ ಸ್ವಂತ ಜ್ಞಾನದ ಮೂಲಕವಾಗಿ ದೇವರನ್ನು ತಿಳಿದುಕೊಂಡಿರಲಿಲ್ಲ. ಆದ್ದರಿಂದ ಮೂರ್ಖತನದಂತೆ ತೋರುವ ಸಂದೇಶದ ಮೂಲಕ ನಂಬುವವರನ್ನು ರಕ್ಷಿಸುವುದು ದೇವರಿಗೆ ಒಳ್ಳೆಯದೆನಿಸಿತು.


ಆದ್ದರಿಂದ ದೇವರು ದಯೆ ಉಳ್ಳವನಾಗಿದ್ದರೂ ಬಹುಕಠಿಣನೂ ಆಗಿದ್ದಾನೆ ಎಂಬುದನ್ನು ಗಮನಿಸು. ದೇವರು ತನ್ನನ್ನು ಹಿಂಬಾಲಿಸದಿರುವ ಜನರನ್ನು ದಂಡಿಸುತ್ತಾನೆ. ಆದರೆ ನೀನು ದೇವರ ದಯೆಯನ್ನು ಆಶ್ರಯಿಸಿಕೊಂಡಿದ್ದರೆ, ದೇವರು ನಿನಗೆ ದಯಾಳುವಾಗಿರುತ್ತಾನೆ. ಇಲ್ಲವಾದರೆ, ನಿನ್ನನ್ನು ಮರದಿಂದ ಕಡಿದುಹಾಕಲಾಗುವುದು.


ಸಿಮೋನನು ಸಹ ನಂಬಿ ದೀಕ್ಷಾಸ್ನಾನ ಮಾಡಿಸಿಕೊಂಡನು. ಸಿಮೋನನು ಫಿಲಿಪ್ಪನ ಸಮೀಪದಲ್ಲೇ ಇದ್ದನು. ಫಿಲಿಪ್ಪನು ಮಾಡಿದ ಅದ್ಭುತಕಾರ್ಯಗಳನ್ನು ಮತ್ತು ಸೂಚಕಕಾರ್ಯಗಳನ್ನು ಸಿಮೋನನು ನೋಡಿ ವಿಸ್ಮಿತನಾದನು.


ಅವರು ದೇವರನ್ನು ಕೊಂಡಾಡುತ್ತಿದ್ದರು ಮತ್ತು ಜನರೆಲ್ಲರೂ ಅವರನ್ನು ಇಷ್ಟಪಡುತ್ತಿದ್ದರು. ಪ್ರತಿದಿನವೂ ಹೆಚ್ಚುಹೆಚ್ಚು ಜನರು ರಕ್ಷಣೆ ಹೊಂದುತ್ತಿದ್ದರು; ಪ್ರಭುವು ಅವರನ್ನೆಲ್ಲಾ ವಿಶ್ವಾಸಿಗಳ ಸಭೆಗೆ ಸೇರಿಸುತ್ತಿದ್ದನು.


ಸತ್ಯವನ್ನು ಕೊಂಡುಕೊ; ಅದನ್ನು ಮಾರಬೇಡ. ಜ್ಞಾನ, ಸುಶಿಕ್ಷೆ ಮತ್ತು ವಿವೇಕವನ್ನು ಕೊಂಡುಕೊ. ಇವು ಖರೀದಿಗೆ ಯೋಗ್ಯವಾದವುಗಳೂ ಮಾರಲಾಗದಷ್ಟು ಅಮೂಲ್ಯವಾದವುಗಳೂ ಆಗಿವೆ.


ನೀವು ಎಲ್ಲಾ ವಿಷಯಗಳಲ್ಲಿ ನನ್ನನ್ನು ಜ್ಞಾಪಿಸಿಕೊಳುವುದರಿಂದ ನಿಮ್ಮನ್ನು ಹೊಗಳುತ್ತೇನೆ. ನಾನು ನಿಮಗೆ ಕೊಟ್ಟ ಉಪದೇಶಗಳನ್ನು ನೀವು ಸೂಕ್ಷ್ಮವಾಗಿ ಅನುಸರಿಸುತ್ತಿದ್ದೀರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು