Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 15:22 - ಪರಿಶುದ್ದ ಬೈಬಲ್‌

22 ಆದಾಮನ ಸಂಬಂಧದಿಂದ ಎಲ್ಲರೂ ಸಾಯುತ್ತಾರೆ. ಇದೇರೀತಿ ಕ್ರಿಸ್ತನ ಸಂಬಂಧದಿಂದ ನಾವೆಲ್ಲರೂ ಮತ್ತೆ ಜೀವಂತರಾಗುತ್ತೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಆದಾಮನಿಂದ ಹೇಗೆ ಎಲ್ಲರೂ ಸಾಯುವವರಾದರೋ ಅದೇ ಪ್ರಕಾರ ಯೇಸು ಕ್ರಿಸ್ತನಿಂದ ಎಲ್ಲರೂ ಬದುಕುವವರಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ಆದಾಮನ ಸಂಬಂಧದಿಂದ ಎಲ್ಲರೂ ಸಾವಿಗೀಡಾದಂತೆ ಕ್ರಿಸ್ತಯೇಸುವಿನ ಸಂಬಂಧದಿಂದ ಎಲ್ಲರೂ ಜೀವಂತರಾಗಿ ಏಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಯಾವ ಪ್ರಕಾರ ಆದಾಮನ ಸಂಬಂಧದಿಂದ ಎಲ್ಲರೂ ಸಾಯುವವರಾದರೋ ಅದೇ ಪ್ರಕಾರ ಕ್ರಿಸ್ತನ ಸಂಬಂಧದಿಂದ ಎಲ್ಲರೂ ಜೀವಿತರಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಏಕೆಂದರೆ, ಆದಾಮನಲ್ಲಿ ಎಲ್ಲರೂ ಸತ್ತಂತೆಯೇ, ಕ್ರಿಸ್ತನಲ್ಲಿ ಎಲ್ಲರೂ ಜೀವಂತರಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

22 ಕಶೆ ಆದಾಮಾಚ್ಯಾ ವೈನಾ ಸಗ್ಳೆ ಜಾನಾ ಮರ್‍ತ್ಯಾತ್, ತಶೆ ಕ್ರಿಸ್ತಾಚ್ಯಾ ವೈನಾ ಸಗ್ಳ್ಯಾಕ್ನಿ ಝಿತ್ತೆ ಕರುನ್ ಉಟ್ವುನ್ ಹೊತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 15:22
6 ತಿಳಿವುಗಳ ಹೋಲಿಕೆ  

ಆದರೆ ಒಳ್ಳೆಯದು ಮತ್ತು ಕೆಟ್ಟದ್ದರ ಬಗ್ಗೆ ಜ್ಞಾನ ಕೊಡುವ ಮರದ ಹಣ್ಣನ್ನು ಮಾತ್ರ ನೀನು ತಿನ್ನಕೂಡದು. ಒಂದುವೇಳೆ ಆ ಮರದ ಹಣ್ಣನ್ನು ತಿಂದರೆ ನೀನು ಸಾಯುವೆ!” ಎಂದು ಆಜ್ಞಾಪಿಸಿದನು.


ಸ್ತ್ರೀಗೆ ಆ ಮರ ಸುಂದರವಾಗಿ ಕಂಡಿತು. ಅದರ ಹಣ್ಣು ಆಕೆಗೆ ತಿನ್ನಲು ಯೋಗ್ಯವಾಗಿ ಕಂಡಿತು. ಆ ಮರ ತನ್ನನ್ನು ಜ್ಞಾನಿಯನ್ನಾಗಿ ಮಾಡುತ್ತದೆಯೆಂದು ಆಕೆ ಉತ್ಸಾಹಗೊಂಡಳು. ಆದ್ದರಿಂದ ಸ್ತ್ರೀಯು ಆ ಮರದ ಹಣ್ಣನ್ನು ಕಿತ್ತುಕೊಂಡು ತಿಂದಳು; ತನ್ನೊಂದಿಗಿದ್ದ ಗಂಡನಿಗೂ ಸ್ವಲ್ಪ ಹಣ್ಣನ್ನು ಕೊಟ್ಟಳು. ಅವನು ಸಹ ಅದನ್ನು ತಿಂದನು.


ನಿನ್ನ ಮುಖದಲ್ಲಿ ಬೆವರು ಹರಿಯುವ ತನಕ ನೀನು ಆಹಾರಕ್ಕಾಗಿ ಕಷ್ಟಪಟ್ಟು ದುಡಿಯುವೆ. ನೀನು ಸಾಯುವ ದಿನದವರೆಗೆ ಕಷ್ಟಪಟ್ಟು ಕೆಲಸ ಮಾಡುವೆ. ಆಮೇಲೆ ನೀನು ಮಣ್ಣಾಗುವೆ. ನಾನು ನಿನ್ನನ್ನು ನಿರ್ಮಿಸಲು ಮಣ್ಣನ್ನು ಉಪಯೋಗಿಸಿದೆ. ನೀನು ಸತ್ತಾಗ ಮತ್ತೆ ಮಣ್ಣೇ ಆಗುವೆ” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು