1 ಕೊರಿಂಥದವರಿಗೆ 15:28 - ಪರಿಶುದ್ದ ಬೈಬಲ್28 ಸಮಸ್ತವು ತನ್ನ ಅಧೀನಕ್ಕೆ ಬಂದ ಮೇಲೆ, ಕ್ರಿಸ್ತನು ತನ್ನನ್ನೇ ದೇವರಿಗೆ ಅಧೀನಪಡಿಸಿಕೊಳ್ಳುವನು. ಸಮಸ್ತವನ್ನು ಕ್ರಿಸ್ತನಿಗೆ ಅಧೀನಪಡಿಸಿದಾತನು ದೇವರೇ. ಹೀಗೆ ದೇವರು ಸಮಸ್ತಕ್ಕೂ ಸರ್ವಾಧಿಪತಿಯಾಗುವನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201928 ಸಮಸ್ತವೂ ಆತನಿಗೆ ಅಧೀನವಾದ ಮೇಲೆ ಮಗನು ಸಮಸ್ತವನ್ನೂ ತನಗೆ ಅಧೀನಮಾಡಿ ಕೊಟ್ಟಾತನಿಗೆ ತಾನೇ ಅಧೀನನಾಗುವನು; ಹೀಗೆ ದೇವರು ಸಮಸ್ತರಲ್ಲಿಯೂ ಸಮಸ್ತವೂ ಆಗುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)28 ಎಲ್ಲವೂ ಕ್ರಿಸ್ತಯೇಸುವಿಗೆ ಅಧೀನವಾದಾಗ ಪುತ್ರನಾದ ಅವರೇ, ಎಲ್ಲವನ್ನು ತನಗೆ ಅಧೀನಪಡಿಸಿದ ದೇವರಿಗೆ ಅಧೀನರಾಗುತ್ತಾರೆ. ಆಗ ದೇವರು ಸರ್ವರಿಗೆ ಸರ್ವಸ್ವವೂ ಆಗುತ್ತಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)28 ಸಮಸ್ತವೂ ಆತನಿಗೆ ಅಧೀನವಾದ ಮೇಲೆ ಮಗನು ಸಮಸ್ತವನ್ನೂ ತನಗೆ ಅಧೀನಮಾಡಿಕೊಟ್ಟಾತನಿಗೆ ತಾನೇ ಅಧೀನನಾಗುವನು; ಹೀಗೆ ದೇವರು ಸಮಸ್ತರಲ್ಲಿಯೂ ಸಮಸ್ತವೂ ಆಗುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ28 ಸಮಸ್ತವೂ ಅವರಿಗೆ ಅಧೀನವಾದ ಮೇಲೆ, ಮಗನೂ ಸಹ ಸಮಸ್ತವನ್ನೂ ತನಗೆ ಅಧೀನಮಾಡಿಕೊಟ್ಟ ದೇವರಿಗೆ ತಾವೇ ಅಧೀನರಾಗುವರು. ಹೀಗೆ ದೇವರು ಸಮಸ್ತರಲ್ಲಿಯೂ ಸಮಸ್ತವೂ ಆಗಿದ್ದಾರೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್28 ಹೆಚ್ಯಾ ಬದ್ಲಾಕ್, ಸಗ್ಳಿ ಜಿನ್ಸಾ ಕ್ರಿಸ್ತಾಕ್ ಖಾಲ್ತಿ ಹೊಯ್ ಸರ್ಕೆ ಕರುನ್ ಹೊಲ್ಲ್ಯಾಚ್ಯಾ ಮಾನಾ ಲೆಕುಚ್ ಸಗ್ಳಿ ಜಿನ್ಸಾ ಅಪ್ನಾಚ್ಯಾ ಹಾತಾ ಖಾಲ್ತಿ ದಿಲ್ಲ್ಯಾ ದೆವಾಕ್ ಖಾಲ್ತಿ ಹೊತಾ; ಅಶೆ ದೆವುಚ್ ಸಗ್ಳ್ಯಾಂಚ್ಯಾ ವರ್‍ತಿ ಅಪ್ನಾಚಿ ಸಗ್ಳಿ ಪದ್ವಿ ಚಾಲ್ವುತಾ. ಅಧ್ಯಾಯವನ್ನು ನೋಡಿ |