Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 15:33 - ಪರಿಶುದ್ದ ಬೈಬಲ್‌

33 ಮೋಸ ಹೋಗಬೇಡಿರಿ. “ದುರ್ಜನರ ಸಹವಾಸ ಸದಾಚಾರದ ಭಂಗ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

33 ಮೋಸಹೋಗಬೇಡಿರಿ; “ಕೆಟ್ಟ ಸಹವಾಸವು ಸದಾಚಾರವನ್ನು ಕೆಡಿಸುತ್ತವೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

33 ಮೋಸಹೋಗದಿರಿ. ಏಕೆಂದರೆ, “ದುರ್ಜನರ ಸಂಗ ಸದಾಚಾರದ ಭಂಗ,”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

33 ಮೋಸ ಹೋಗಬೇಡಿರಿ; ದುಸ್ಸಹವಾಸವು ಸದಾಚಾರವನ್ನು ಕೆಡಿಸುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

33 ಮೋಸಹೋಗಬೇಡಿರಿ. ಏಕೆಂದರೆ, “ದುಸ್ಸಹವಾಸವು ಸದಾಚಾರವನ್ನು ಕೆಡಿಸುತ್ತದೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

33 ಪಸುನ್ ಪಡುನಕಾಶಿ; “ಬುರ್ಶ್ಯಾ ವಾಂಗ್ಡಿಯಾಂಚ್ಯಾ ವೈನಾ ಬರಿ ಚಾಲ್ ಬುರ್ಶಿ ಹೊತಾ.”

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 15:33
17 ತಿಳಿವುಗಳ ಹೋಲಿಕೆ  

ಜ್ಞಾನಿಗಳೊಂದಿಗೆ ಸ್ನೇಹದಿಂದಿರಿ. ಆಗ ನೀವೂ ಜ್ಞಾನಿಗಳಾಗುವಿರಿ. ಆದರೆ ನೀವು ಜ್ಞಾನಹೀನರನ್ನು ನಿಮ್ಮ ಸ್ನೇಹಿತರನ್ನಾಗಿ ಆಯ್ದುಕೊಂಡರೆ, ನಿಮಗೆ ತೊಂದರೆ ಉಂಟಾಗುವುದು.


ಯೇಸು ಅವರಿಗೆ ಕೊಟ್ಟ ಉತ್ತರವಿದು: “ಎಚ್ಚರವಾಗಿರಿ! ನಿಮ್ಮನ್ನು ಮೋಸಗೊಳಿಸಲು ಯಾರಿಗೂ ಅವಕಾಶ ಕೊಡಬೇಡಿ.


ನೀವು ಅಹಂಕಾರಪಡುವುದು ಒಳ್ಳೆಯದಲ್ಲ. “ಒಂದಿಷ್ಟು ಹುಳಿಯು ಹಿಟ್ಟನ್ನೆಲ್ಲಾ ಉಬ್ಬಿಸುತ್ತದೆ” ಎಂಬ ನುಡಿಯು ನಿಮಗೆ ಗೊತ್ತೇ ಇದೆ.


ನಿಮ್ಮ ಮೂರ್ಖ ಮಾರ್ಗಗಳನ್ನು ತೊರೆದುಬಿಡಿ. ಆಗ ನಿಮಗೆ ಜೀವವು ದೊರೆಯುವುದು. ವಿವೇಕಮಾರ್ಗದಲ್ಲಿ ಮುಂದೆ ಸಾಗಿರಿ” ಎಂದು ಆಕೆ ಹೇಳಿದಳು.


ಅಸತ್ಯವಾದ ಸಂಗತಿಗಳನ್ನು ಹೇಳಿ ನಿಮ್ಮನ್ನು ಮೋಸಪಡಿಸಲು ಯಾರಿಗೂ ಅವಕಾಶ ಕೊಡಬೇಡಿ. ಆ ಕೆಟ್ಟಸಂಗತಿಗಳ ನಿಮಿತ್ತ ದೇವರ ಕೋಪವು ಆತನಿಗೆ ವಿಧೇಯರಾಗದ ಜನರ ಮೇಲೆ ಬರುತ್ತದೆ.


ಮೋಸಹೋಗಬೇಡಿರಿ! ನೀವು ದೇವರನ್ನು ವಂಚಿಸಲು ಸಾಧ್ಯವಿಲ್ಲ. ಒಬ್ಬನು ತಾನು ಏನು ಬಿತ್ತುತ್ತಾನೋ ಅದನ್ನೇ ಕೊಯ್ಯುತ್ತಾನೆ.


ಅಧರ್ಮಿಗಳು ದೇವರ ರಾಜ್ಯವನ್ನು ಪಡೆಯುವುದಿಲ್ಲವೆಂದು ನಿಮಗೆ ಖಂಡಿತವಾಗಿ ತಿಳಿದಿದೆ. ನಿಮ್ಮನ್ನು ನೀವೇ ಮೋಸಪಡಿಸಿಕೊಳ್ಳಬೇಡಿ. ದೇವರ ರಾಜ್ಯಕ್ಕೆ ಸೇರದ ಜನರು ಯಾರ್ಯಾರೆಂದರೆ: ಲೈಂಗಿಕ ಪಾಪ ಮಾಡುವವರು, ವಿಗ್ರಹಗಳನ್ನು ಪೂಜಿಸುವವರು, ವ್ಯಭಿಚಾರ ಮಾಡುವವರು, ಸಲಿಂಗಕಾಮಿಗಳು, ಕದಿಯುವವರು, ಸ್ವಾರ್ಥಿಗಳು, ಕುಡುಕರು, ಬೈಯುವವರು ಮತ್ತು ಮೋಸಗಾರರು.


ಸುಳ್ಳುಕ್ರಿಸ್ತರು ಮತ್ತು ಸುಳ್ಳುಪ್ರವಾದಿಗಳು ಬಂದು ದೇವರು ಆರಿಸಿಕೊಂಡಿರುವ ಜನರನ್ನು ಮೋಸಗೊಳಿಸುವುದಕ್ಕಾಗಿ ಮಹತ್ಕಾರ್ಯಗಳನ್ನು ಮತ್ತು ಅದ್ಭುತಕಾರ್ಯಗಳನ್ನು ಮಾಡುವರು.


ಅವರು ಮಾಡುವ ಕೆಟ್ಟಕಾರ್ಯಗಳನ್ನು ಅನೇಕ ಜನರು ಅನುಸರಿಸುತ್ತಾರೆ. ಆ ಜನರ ದೆಸೆಯಿಂದ ಸತ್ಯಮಾರ್ಗದ ಕುರಿತಾಗಿ ಇತರರು ಕೆಟ್ಟಮಾತುಗಳನ್ನು ಆಡುತ್ತಾರೆ.


ನಿಮ್ಮಲ್ಲಿ ಯಾರೂ ದೇವರ ಕೃಪೆಯನ್ನು ಕಳೆದುಕೊಳ್ಳದಂತೆ ಎಚ್ಚರದಿಂದಿರಿ. ನಿಮ್ಮಲ್ಲಿ ಯಾವನೂ ಚಿಗುರಿ ಬೆಳೆಯುವ ವಿಷದ ಬೇರಿನಂತಾಗದಂತೆ ಎಚ್ಚರಿಕೆಯಿಂದಿರಿ. ಅಂಥವನಿಂದ ನಿಮ್ಮ ಇಡೀ ಗುಂಪೇ ಹಾಳಾಗುವುದು.


ಅನೇಕ ಸುಳ್ಳುಪ್ರವಾದಿಗಳು ಬಂದು ಎಷ್ಟೋ ಜನರನ್ನು ವಂಚಿಸುವರು.


ಸತ್ಯವನ್ನು ಪ್ರೀತಿಸದೆ ತಪ್ಪಿಹೋಗಿರುವ ಜನರನ್ನು ಮೋಸಗೊಳಿಸಲು, ಅವನು ಎಲ್ಲಾ ವಿಧವಾದ ತಂತ್ರಗಳನ್ನು ಮಾಡುವನು. (ಅವರು ಸತ್ಯವನ್ನು ಪ್ರೀತಿಸಿದ್ದರೆ, ರಕ್ಷಣೆ ಹೊಂದುತ್ತಿದ್ದರು.)


ಆ ಘಟಸರ್ಪವನ್ನು ಪರಲೋಕದಿಂದ (ಆ ಘಟಸರ್ಪಕ್ಕೆ ಸೈತಾನನೆಂತಲೂ ಪಿಶಾಚನೆಂತಲೂ ಹೆಸರಿದೆ. ಅದು ಲೋಕವನ್ನೆಲ್ಲಾ ತಪ್ಪು ಮಾರ್ಗಕ್ಕೆ ಎಳೆಯುತ್ತಿತ್ತು.) ಅದರ ದೂತರೊಂದಿಗೆ ಭೂಮಿಯ ಮೇಲೆ ಎಸೆಯಲಾಯಿತು.


ಇಲ್ಲವಾದರೆ, ನೀನೂ ಅವನಂತಾಗುವೆ. ಆಗ ಅವನಿಗಿರುವ ತೊಂದರೆಗಳು ನಿನಗೂ ಬರುತ್ತವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು