1 ಕೊರಿಂಥದವರಿಗೆ 15:4 - ಪರಿಶುದ್ದ ಬೈಬಲ್4 ಹೂಳಲ್ಪಟ್ಟು ಮೂರನೆಯ ದಿನದಲ್ಲಿ ಜೀವಂತವಾಗಿ ಎದ್ದುಬಂದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಶಾಸ್ತ್ರದ ಪ್ರಕಾರವೇ ಮೂರನೆಯ ದಿನದಲ್ಲಿ ಎಬ್ಬಿಸಲ್ಪಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ಅವರನ್ನು ಭೂಸ್ಥಾಪನೆ ಮಾಡಲಾಯಿತು. ಅದೇ ಗ್ರಂಥದ ಪ್ರಕಾರ ಮೂರನೆಯ ದಿನ ಅವರು ಪುನರುತ್ಥಾನ ಹೊಂದಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ಶಾಸ್ತ್ರದ ಪ್ರಕಾರವೇ ಮೂರನೆಯ ದಿನದಲ್ಲಿ ಎಬ್ಬಿಸಲ್ಪಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ಹೂಣಿಡಲಾದರು, ಪವಿತ್ರ ವೇದದ ಪ್ರಕಾರವೇ ಮೂರನೆಯ ದಿನದಲ್ಲಿ ಎದ್ದು ಬಂದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್4 ತೆಕಾ ಮಾಟಿ ದಿವ್ನ್ ಹೊಲಿ, ಅನಿ ಪವಿತ್ರ್ ಪುಸ್ತಕಾತ್ ಸಾಂಗಲ್ಲ್ಯಾ ಸಾರ್ಕೆ ತಿನ್ವ್ಯಾ ದಿಸಿ ತೊ ಅನಿಪರ್ತುನ್ ಝಿತ್ತೊ ಹೊವ್ನ್ ಉಟ್ಲೊ. ಅಧ್ಯಾಯವನ್ನು ನೋಡಿ |
ಶಾಂತಿಸ್ವರೂಪನಾದ ದೇವರು ನಿಮಗೆ ಬೇಕಾದ ತನ್ನ ವರದಾನಗಳನ್ನು ದಯಪಾಲಿಸಲಿ ಎಂದು ನಾನು ಆತನಲ್ಲಿ ಪ್ರಾರ್ಥಿಸುತ್ತೇನೆ. ಏಕೆಂದರೆ ಆಗ ನೀವು ಆತನ ಇಷ್ಟಕ್ಕನುಸಾರವಾದವುಗಳನ್ನೆಲ್ಲಾ ಮಾಡಲು ಸಾಧ್ಯವಾಗುವುದು. ತನ್ನ ರಕ್ತವನ್ನು ಸುರಿಸಿ ಸಭೆಯೆಂಬ ಹಿಂಡಿಗೆ ಮಹಾಕುರುಬನಾಗಿರುವ ನಮ್ಮ ಪ್ರಭುವಾದ ಯೇಸುವನ್ನು ಸತ್ತವರೊಳಗಿಂದ ಮೇಲಕ್ಕೆ ಎಬ್ಬಿಸಿದವನು ದೇವರೇ. ಆತನ ರಕ್ತವು ಶಾಶ್ವತವಾದ ಹೊಸ ಒಡಂಬಡಿಕೆಯನ್ನಾರಂಭಿಸಿತು. ದೇವರು ತನಗೆ ಸಂತೋಷವನ್ನು ಉಂಟುಮಾಡುವ ಕಾರ್ಯಗಳನ್ನು ಯೇಸು ಕ್ರಿಸ್ತನ ಮೂಲಕ ನಮ್ಮಲ್ಲಿ ನಡೆಸಲಿ. ಯೇಸುವಿಗೆ ಎಂದೆಂದಿಗೂ ಮಹಿಮೆಯಾಗಲಿ. ಆಮೆನ್.
ಕ್ರಿಸ್ತನ ಆತ್ಮನು ಅವರಲ್ಲಿದ್ದನು. ಆ ಆತ್ಮನು ಕ್ರಿಸ್ತನಿಗೆ ಸಂಭವಿಸಬಹುದಾದ ಸಂಕಟವನ್ನು ಮತ್ತು ಆ ಸಂಕಟಗಳ ನಂತರ ಬರಲಿದ್ದ ಮಹಿಮೆಯನ್ನು ಕುರಿತು ತಿಳಿಸುತ್ತಿದ್ದನು. ಆ ಪ್ರವಾದಿಗಳು ತಮಗೆ ಆತ್ಮನು ತೋರಿಸುತ್ತಿದ್ದುದನ್ನು ತಿಳಿದುಕೊಳ್ಳಲು ಪ್ರಯತ್ನಿಸಿದರು. ಆ ಸಂಗತಿಗಳು ಯಾವಾಗ ಸಂಭವಿಸುತ್ತವೆ ಹಾಗೂ ಆ ಕಾಲದಲ್ಲಿ ಈ ಲೋಕವು ಹೇಗಿರುತ್ತದೆ ಎಂಬುದನ್ನು ತಿಳಿದುಕೊಳ್ಳಲು ಪ್ರಯತ್ನಿಸಿದರು.
ತರುವಾಯ, ಅರಿಮಥಾಯ ಊರಿನ ಯೋಸೇಫ ಎಂಬವನು ಯೇಸುವಿನ ದೇಹವನ್ನು ತನಗೆ ಕೊಡಬೇಕೆಂದು ಪಿಲಾತನನ್ನು ಕೇಳಿಕೊಂಡನು. (ಯೋಸೇಫನು ಯೇಸುವಿನ ಒಬ್ಬ ಅನುಯಾಯಿ ಆಗಿದ್ದನು. ಆದರೆ ಅವನು ಯೆಹೂದ್ಯರಿಗೆ ಹೆದರಿಕೊಂಡಿದ್ದರಿಂದ ಅದರ ಬಗ್ಗೆ ಜನರಿಗೆ ಹೇಳಿಕೊಳ್ಳಲಿಲ್ಲ.) ಯೇಸುವಿನ ದೇಹವನ್ನು ತೆಗೆದುಕೊಂಡು ಹೋಗಲು ಪಿಲಾತನು ಅವನಿಗೆ ಅಪ್ಪಣೆಕೊಟ್ಟನು. ಆದ್ದರಿಂದ ಅವನು ಬಂದು ಯೇಸುವಿನ ದೇಹವನ್ನು ತೆಗೆದುಕೊಂಡು ಹೋದನು.