Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 15:43 - ಪರಿಶುದ್ದ ಬೈಬಲ್‌

43 ದೇಹವು ಹೀನಾವಸ್ಥೆಯಲ್ಲಿ ಬಿತ್ತಲ್ಪಡುವುದು, ಆದರೆ ಮಹಿಮೆಯೊಡನೆ ಎದ್ದುಬರುವುದು. ದೇಹವು ಬಿತ್ತಲ್ಪಟ್ಟಾಗ, ಅದು ಬಲಹೀನವಾಗಿರುತ್ತದೆ. ಆದರೆ ಅದು ಎದ್ದುಬಂದಾಗ ಅದಕ್ಕೆ ಶಕ್ತಿಯಿರುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

43 ಹೀನಾವಸ್ಥೆಯಲ್ಲಿ ಬಿತ್ತಲ್ಪಡುತ್ತದೆ, ಮಹಿಮೆಯಲ್ಲಿ ಪುನರುತ್ಥಾನಹೊಂದುವುದು; ನಿರ್ಬಲಾವಸ್ಥೆಯಲ್ಲಿ ಬಿತ್ತಲ್ಪಡುತ್ತದೆ, ಬಲಹೊಂದಿ ಪುನರುತ್ಥಾನಹೊಂದುವುದು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

43 ಬಿತ್ತಿದ್ದು ಕುರೂಪಿಯಾದುದು; ಪುನರುತ್ಥಾನಹೊಂದುವುದು ಕೋಮಲವಾದುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

43 ಹೀನಾವಸ್ಥೆಯಲ್ಲಿ ಬಿತ್ತಲ್ಪಡುತ್ತದೆ, ಮಹಿಮೆಯಲ್ಲಿ ಎದ್ದು ಬರುವದು; ನಿರ್ಬಲಾವಸ್ಥೆಯಲ್ಲಿ ಬಿತ್ತಲ್ಪಡುತ್ತದೆ, ಬಲಾವಸ್ಥೆಯಲ್ಲಿ ಎದ್ದು ಬರುವದು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

43 ದೇಹವು ಹೀನಾವಸ್ಥೆಯಲ್ಲಿ ಬಿತ್ತಲಾಗುತ್ತದೆ. ಮಹಿಮೆಯಲ್ಲಿ ಎದ್ದು ಬರುವುದು. ಬಲಹೀನತೆಯಲ್ಲಿ ಬಿತ್ತಲಾಗುತ್ತದೆ, ಶಕ್ತಿಯಲ್ಲಿ ಎದ್ದು ಬರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

43 ಮಾಟಿ ದಿತಾನಾ ತೆ ಬುರ್ಶೆ ಅನಿ ಬಳ್ ನಸಲ್ಲೆ, ಖರೆ ಉಟ್ವುನ್ ಹೊಲ್ಲ್ಯಾ ತನ್ನಾ ತೆ ಸುಂದರ್ ಅನಿ ಘಟ್ಮುಟ್ ಹೊತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 15:43
13 ತಿಳಿವುಗಳ ಹೋಲಿಕೆ  

ಕ್ರಿಸ್ತನೇ ನಿಮ್ಮ ಜೀವ, ಆತನು ಮರಳಿ ಪ್ರತ್ಯಕ್ಷನಾದಾಗ, ನೀವೂ ಆತನ ಪ್ರಭಾವದೊಂದಿಗೆ ಪ್ರತ್ಯಕ್ಷರಾಗುವಿರಿ.


ಕ್ರಿಸ್ತನನ್ನೂ ಪುನರುತ್ಥಾನದ ಶಕ್ತಿಯನ್ನೂ ತಿಳಿದುಕೊಂಡು ಆತನ ಸಂಕಟದಲ್ಲಿ ಪಾಲುಗಾರನಾಗಿ ಆತನ ಮರಣದಲ್ಲಿ ಆತನಂತಾಗಬೇಕೆಂಬುದೇ ನನ್ನ ಅಪೇಕ್ಷೆ.


ಕ್ರಿಸ್ತನು ಶಿಲುಬೆಯ ಮೇಲೆ ಕೊಲ್ಲಲ್ಪಟ್ಟಾಗ ಬಲಹೀನನಾಗಿದ್ದನು ಎಂಬುದೇನೊ ನಿಜ. ಆದರೆ ಈಗ ಆತನು ದೇವರ ಶಕ್ತಿಯಿಂದ ಜೀವಿಸುತ್ತಿದ್ದಾನೆ. ಅಲ್ಲದೆ ನಾವು ಕ್ರಿಸ್ತನಲ್ಲಿ ಬಲಹೀನರೆಂಬುದೂ ನಿಜ. ಆದರೆ ನಾವು ನಿಮಗೋಸ್ಕರವಾಗಿ ಕ್ರಿಸ್ತನಲ್ಲಿ ದೇವರ ಶಕ್ತಿಯಿಂದ ಜೀವಿಸುತ್ತೇವೆ.


“ದರ್ಶನದಲ್ಲಿ ಕಾಣಿಸಿಕೊಂಡ ಮನುಷ್ಯನು, ದಾನಿಯೇಲನೇ, ಆಗ ದೇವದೂತನಾದ ಮಿಕಾಯೇಲನು ಏಳುವನು. ಮಿಕಾಯೇಲನು ಯೆಹೂದ್ಯರಾದ ನಿಮ್ಮ ಹಿತಾಸಕ್ತಿಗಳನ್ನು ನೋಡಿಕೊಳ್ಳುವನು. ಮಹಾಸಂಕಟದ ಕಾಲ ಬರುವದು. ಭೂಮಿಯ ಮೇಲೆ ರಾಷ್ಟ್ರಗಳು ಹುಟ್ಟಿದಂದಿನಿಂದ ಸಂಭವಿಸದಂತಹ ಸಂಕಟಗಳು ಸಂಭವಿಸುವವು. ಆದರೆ ದಾನಿಯೇಲನೇ, ನಿಮ್ಮ ಜನಗಳಲ್ಲಿ ಯಾರ ಹೆಸರುಗಳು ‘ಜೀವಬಾಧ್ಯರ ಗ್ರಂಥದಲ್ಲಿ’ ಬರೆಯಲ್ಪಟ್ಟಿದೆಯೋ ಅವರೆಲ್ಲರನ್ನು ರಕ್ಷಿಸಲಾಗುವುದು.


ದೇವರು ತನ್ನ ಶಕ್ತಿಯಿಂದ ಪ್ರಭು ಯೇಸುವನ್ನು ಸತ್ತವರೊಳಗಿಂದ ಜೀವಂತವಾಗಿ ಎಬ್ಬಿಸಿದನು. ದೇವರು ನಮ್ಮನ್ನು ಸಹ ಜೀವಂತವಾಗಿ ಎಬ್ಬಿಸುವನು.


ಒಳ್ಳೆಯವರಾದರೋ ಸೂರ್ಯನಂತೆ ಪ್ರಕಾಶಿಸುತ್ತಾ ತಮ್ಮ ತಂದೆಯ ರಾಜ್ಯದಲ್ಲಿರುವರು. ನನಗೆ ಕಿವಿಗೊಡುವ ಜನರೇ, ಆಲಿಸಿರಿ!


ನನ್ನ ಬಲವು ಕುಂದಿಹೋಯಿತು. ನನ್ನ ಆಯುಷ್ಕಾಲವು ಕಡಿಮೆಯಾಯಿತು.


ಮನುಷ್ಯನಾದರೋ ಸತ್ತು ಕೊನೆಗೊಳ್ಳುವನು. ಪ್ರಾಣ ಹೋದಾಗ ಇಲ್ಲವಾಗುವನು.


ಯೇಸು, “ನನ್ನೊಳಗೆ ದೆವ್ವವಿಲ್ಲ. ನನ್ನ ತಂದೆಗೆ ನಾನು ಗೌರವ ಕೊಡುತ್ತೇನೆ, ಆದರೆ ನೀವು ನನಗೆ ಗೌರವ ಕೊಡುವುದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು