Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 15:45 - ಪರಿಶುದ್ದ ಬೈಬಲ್‌

45 “ಮೊದಲನೆ ಮನುಷ್ಯನಾದ ಆದಾಮನು ಜೀವಿಸುವ ವ್ಯಕ್ತಿಯಾದನು” ಎಂದು ಪವಿತ್ರ ಗ್ರಂಥದಲ್ಲಿ ಬರೆಯಲಾಗಿದೆ. ಆದರೆ ಕೊನೆಯ ಆದಾಮನು (ಕ್ರಿಸ್ತನು) ಜೀವಕೊಡುವ ಜೀವಾತ್ಮನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

45 “ಮೊದಲನೆಯ ಮನುಷ್ಯನಾದ ಆದಾಮನು ಜೀವ ಪಡೆದ ವ್ಯಕ್ತಿ” ಎಂಬುದಾಗಿ ಪವಿತ್ರ ಗ್ರಂಥದಲ್ಲಿ ಬರೆದದೆಯಲ್ಲಾ. ಕಡೆ ಆದಾಮನಾದರೋ ಜೀವ ಕೊಡುವ ಆತ್ಮನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

45 ಪವಿತ್ರಗ್ರಂಥದಲ್ಲಿ ಲಿಖಿತವಾಗಿರುವಂತೆ ಮೊದಲ ಮಾನವನಾದ ಆದಾಮನು ಜೀವ ಪಡೆದ ವ್ಯಕ್ತಿ; ಕಡೆಯ ಆದಾಮನಾದರೋ ಜೀವ ಕೊಡುವ ಆತ್ಮ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

45 ಮೊದಲನೆಯ ಮನುಷ್ಯನಾದ ಆದಾಮನು ಬದುಕುವ ಪ್ರಾಣಿಯಾದನೆಂದು ಬರೆದದೆಯಲ್ಲಾ. ಕಡೇ ಆದಾಮನೋ ಬದುಕಿಸುವ ಆತ್ಮನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

45 “ಮೊದಲನೆಯ ಮನುಷ್ಯನಾದ ಆದಾಮನು ಜೀವಿಸುವ ವ್ಯಕ್ತಿಯಾದನು,” ಎಂದು ಬರೆದಿದೆಯಲ್ಲವೇ? ಕಡೇ ಆದಾಮನು ಜೀವಕೊಡುವ ಆತ್ಮನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

45 ಪವಿತ್ರ್ ಪುಸ್ತಕ್ ಮನ್ತಾ, ಪಯ್ಲೆಚೊ ಮಾನುಸ್ ಆದಾಮ್ ಎಕ್ ಜಿವಿ ಹೊಲೊ, ಖರೆ ಆಕ್ರಿಚೊ ಆದಾಮ್ ಜಿವ್ ದಿತಲೊ ಆತ್ಮೊ ಹೊಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 15:45
35 ತಿಳಿವುಗಳ ಹೋಲಿಕೆ  

ತಂದೆಯು ಸತ್ತವರನ್ನು ಎಬ್ಬಿಸಿ ಅವರಿಗೆ ಜೀವ ಕೊಡುತ್ತಾನೆ. ಅದೇ ರೀತಿಯಲ್ಲಿ ಮಗನು ತಾನು ಬಯಸಿದವರಿಗೆ ಜೀವವನ್ನು ಕೊಡುತ್ತಾನೆ.


ಹೀಗಿರಲು ದೇವರಾದ ಯೆಹೋವನು ನೆಲದಿಂದ ಮಣ್ಣನ್ನು ತೆಗೆದುಕೊಂಡು ಮನುಷ್ಯನನ್ನು ರೂಪಿಸಿ ಮೂಗಿನಲ್ಲಿ ಜೀವಶ್ವಾಸವನ್ನು ಊದಿದನು. ಆಗ ಮನುಷ್ಯನು ಸಜೀವಿಯಾದನು.


ನನಗೆ ಅಪರಾಧಿಯೆಂದು ತೀರ್ಪಾಗದಿರುವುದೇಕೆ? ಏಕೆಂದರೆ ಕ್ರಿಸ್ತ ಯೇಸುವಿನಲ್ಲಿರುವ ಜನರಿಗೆ ಜೀವವನ್ನು ತರುವ ಪವಿತ್ರಾತ್ಮನ ನಿಯಮವು ನನ್ನನ್ನು ಪಾಪ ಮತ್ತು ಮರಣಗಳನ್ನು ತರುವ ನಿಯಮದಿಂದ ಬಿಡುಗಡೆ ಮಾಡಿತು.


ಒಬ್ಬನಿಗೆ ಜೀವವನ್ನು ಕೊಡುವಂಥದ್ದು ದೈಹಿಕ ಸಂಗತಿಗಳಲ್ಲ. ಜೀವವನ್ನು ಕೊಡುವಂಥದ್ದು ದೇವರಾತ್ಮ. ನಾನು ನಿಮಗೆ ಹೇಳಿದ ಸಂಗತಿಗಳು ಆತ್ಮಿಕ ಸಂಗತಿಗಳಾಗಿವೆ. ಆದ್ದರಿಂದ ಈ ಸಂಗತಿಗಳೇ ಜೀವವನ್ನು ಕೊಡುತ್ತವೆ.


ಯೇಸು, “ನಾನೇ ಮಾರ್ಗವೂ ಸತ್ಯವೂ ಜೀವವೂ ಆಗಿದ್ದೇನೆ. ತಂದೆಯ ಬಳಿಗೆ ಹೋಗಲು ನಾನೇ ಏಕೈಕ ಮಾರ್ಗ.


“ತಂದೆಯೇ ನನ್ನನ್ನು ಕಳುಹಿಸಿದನು. ತಂದೆಯು ಜೀವಸ್ವರೂಪನಾಗಿದ್ದಾನೆ. ನಾನು ತಂದೆಯಿಂದಲೇ ಜೀವಿಸುತ್ತೇನೆ. ಆದ್ದರಿಂದ ನನ್ನನ್ನು ತಿನ್ನುವವನು ನನ್ನಿಂದಲೇ ಜೀವಿಸುವನು.


ದೇವರ ರೊಟ್ಟಿ ಯಾವುದು? ಪರಲೋಕದಿಂದ ಇಳಿದುಬಂದು ಈ ಲೋಕಕ್ಕಾಗಿ ಜೀವವನ್ನು ಕೊಡುವಾತನೇ ದೇವರು ಕೊಡುವ ರೊಟ್ಟಿ” ಎಂದು ಹೇಳಿದನು.


ನನ್ನ ದೇಹವನ್ನು ತಿಂದು ನನ್ನ ರಕ್ತವನ್ನು ಕುಡಿಯುವವನು ನಿತ್ಯಜೀವವನ್ನು ಹೊಂದಿದ್ದಾನೆ. ಅಂತಿಮ ದಿನದಂದು ನಾನು ಆ ವ್ಯಕ್ತಿಯನ್ನು ಜೀವಂತವಾಗಿ ಎಬ್ಬಿಸುವೆನು.


ಆತ್ಮನೂ ಮದುಮಗಳೂ, “ಬಾ!” ಎನ್ನುತ್ತಾರೆ. ಇದನ್ನು ಕೇಳುವ ಪ್ರತಿಯೊಬ್ಬ ವ್ಯಕ್ತಿಯೂ, “ಬಾ!” ಎಂದು ಹೇಳಬೇಕು. ಬಾಯಾರಿದವನು ನನ್ನ ಬಳಿಗೆ ಬರಲಿ; ಅವನಿಗೆ ಇಷ್ಟವಿದ್ದರೆ ಜೀವಜಲವನ್ನು ಉಚಿತವಾಗಿ ಪಡೆದುಕೊಳ್ಳಲಿ.


ಆಗ ದೇವದೂತನು ನನಗೆ ಜೀವಜಲದ ನದಿಯನ್ನು ತೋರಿಸಿದನು. ಆ ನದಿಯು ಸ್ಫಟಿಕದಂತೆ ಪ್ರಕಾಶಮಾನವಾಗಿತ್ತು. ಆ ನದಿಯು ದೇವರ ಮತ್ತು ಕುರಿಮರಿಯಾದಾತನ ಸಿಂಹಾಸನದಿಂದ ಆಗಮಿಸಿ,


ಸಿಂಹಾಸನದ ಮೇಲೆ ಕುಳಿತಿದ್ದಾತನು ನನಗೆ ಹೀಗೆ ಹೇಳಿದನು: “ಎಲ್ಲವೂ ನೆರವೇರಿತು! ನಾನೇ ಆದಿಯೂ ಅಂತ್ಯವೂ ಆಗಿದ್ದೇನೆ. ನಾನೇ ಪ್ರಾರಂಭವೂ ಸಮಾಪ್ತಿಯೂ ಆಗಿದ್ದೇನೆ. ಬಾಯಾರಿದವರಿಗೆ ನಾನು ಜೀವಜಲದ ಬುಗ್ಗೆಯಿಂದ ನೀರನ್ನು ಉಚಿತವಾಗಿ ಕೊಡುತ್ತೇನೆ.


ಕ್ರಿಸ್ತನೇ ನಿಮ್ಮ ಜೀವ, ಆತನು ಮರಳಿ ಪ್ರತ್ಯಕ್ಷನಾದಾಗ, ನೀವೂ ಆತನ ಪ್ರಭಾವದೊಂದಿಗೆ ಪ್ರತ್ಯಕ್ಷರಾಗುವಿರಿ.


ಆತನು ತನ್ನ ಶಕ್ತಿಯಿಂದ ಸಮಸ್ತವನ್ನು ಆಳುತ್ತಾನೆ ಮತ್ತು ನಮ್ಮ ದೀನಾವಸ್ಥೆಯ ಈ ಶರೀರವನ್ನು ರೂಪಾಂತರಪಡಿಸಿ ತನ್ನ ಸ್ವಂತ ಮಹಿಮಾಶರೀರದಂತೆ ಮಾಡುತ್ತಾನೆ.


ಒಂದು ಕಾಲದಲ್ಲಿ ಪಾಪವು ಮರಣದ ಮೂಲಕ ನಮ್ಮ ಮೇಲೆ ಆಳ್ವಿಕೆ ನಡೆಸಿತು. ಆದರೆ ದೇವರು ಜನರನ್ನು ನೀತಿವಂತರನ್ನಾಗಿ ಮಾಡಬೇಕೆಂದು ತನ್ನ ಕೃಪೆಯನ್ನು ಹೆಚ್ಚಾಗಿ ಅನುಗ್ರಹಿಸಿದನು. ಈ ಕೃಪೆಯು ನಮ್ಮ ಪ್ರಭುವಾದ ಯೇಸು ಕ್ರಿಸ್ತನ ಮೂಲಕ ನಮಗೆ ನಿತ್ಯಜೀವವನ್ನು ತರುತ್ತದೆ.


ಒಬ್ಬನು ಪಾಪ ಮಾಡಿದನು, ಆ ಒಬ್ಬನ ದೆಸೆಯಿಂದ ಮರಣವು ಎಲ್ಲಾ ಜನರ ಮೇಲೆ ಆಳ್ವಿಕೆ ನಡೆಸಿತು. ಆದರೆ ಈಗ ಕೆಲವು ಜನರು ದೇವರ ಪೂರ್ಣ ಕೃಪೆಯನ್ನು ಮತ್ತು ನೀತಿವಂತರನ್ನಾಗಿ ಮಾಡುವ ಆತನ ಉಚಿತವಾದ ಮಹಾ ಕೊಡುಗೆಯನ್ನು ಸ್ವೀಕರಿಸಿಕೊಳ್ಳುವರು. ನಿಶ್ಚಯವಾಗಿಯು ಅವರು ಯೇಸು ಕ್ರಿಸ್ತನೆಂಬ ಆ ಒಬ್ಬ ಪುರುಷನ ಮೂಲಕ, ನಿಜವಾದ ಜೀವವನ್ನು ಹೊಂದಿಕೊಳ್ಳುವರು ಮತ್ತು ಆಳುವರು.


ಹೀಗೆ ನೀವು ಜೀವದಾಯಕನನ್ನೇ ಕೊಂದುಹಾಕಿದಿರಿ! ಆದರೆ ದೇವರು ಆತನನ್ನು ಸತ್ತವರೊಳಗಿಂದ ಜೀವಂತವಾಗಿ ಎಬ್ಬಿಸಿದನು. ಇದಕ್ಕೆ ನಾವೇ ಸಾಕ್ಷಿಗಳು. ಇದನ್ನು ನಾವು ಕಣ್ಣಾರೆ ಕಂಡಿದ್ದೇವೆ.


ಇನ್ನು ಸ್ವಲ್ಪ ಕಾಲವಾದ ಮೇಲೆ ಈ ಲೋಕದ ಜನರು ನನ್ನನ್ನು ಇನ್ನೆಂದಿಗೂ ಕಾಣುವುದಿಲ್ಲ. ಆದರೆ ನೀವು ನನ್ನನ್ನು ನೋಡುವಿರಿ. ನಾನು ಜೀವಿಸುವುದರಿಂದ ನೀವೂ ಜೀವಿಸುವಿರಿ.


ನನ್ನ ಕುರಿಗಳಿಗೆ ನಾನು ನಿತ್ಯಜೀವವನ್ನು ಕೊಡುತ್ತೇನೆ. ಅವು ಎಂದಿಗೂ ಸಾಯುವುದಿಲ್ಲ, ಮತ್ತು ಅವುಗಳನ್ನು ಯಾರೂ ನನ್ನಿಂದ ಕಸಿದುಕೊಳ್ಳಲಾರರು.


ಕಳ್ಳನು ಕದಿಯುವುದಕ್ಕೂ ಕೊಲ್ಲುವುದಕ್ಕೂ ನಾಶಮಾಡುವುದಕ್ಕೂ ಬರುತ್ತಾನೆ. ನಾನಾದರೋ ಸಮೃದ್ಧಿಕರವಾದ ಜೀವವನ್ನು ಕೊಡಲು ಬಂದೆನು.


ಸೀಮೋನ್ ಪೇತ್ರನು ಯೇಸುವಿಗೆ, “ಪ್ರಭುವೇ, ನಾವೆಲ್ಲಿಗೆ ಹೋಗೋಣ? ನಿತ್ಯಜೀವವನ್ನು ಕೊಡುವ ಸಂಗತಿಗಳು ನಿನ್ನಲ್ಲಿವೆ.


ಆದರೆ ನಾನು ಕೊಡುವ ನೀರನ್ನು ಕುಡಿಯುವವನಿಗೆ ದಾಹವಾಗುವುದೇ ಇಲ್ಲ. ನಾನು ಅವನಿಗೆ ಕೊಡುವ ನೀರು ಅವನೊಳಗೆ ಉಕ್ಕಿಹರಿಯುವ ನೀರಿನ ಬುಗ್ಗೆಯಾಗುವುದು. ಆ ನೀರು ಅವನಿಗೆ ನಿತ್ಯಜೀವವನ್ನು ತರುತ್ತದೆ” ಎಂದು ಉತ್ತರಕೊಟ್ಟನು.


ಯೇಸು ಆಕೆಗೆ, “ದೇವರು ಏನು ಕೊಡುತ್ತಾನೆಂಬುದು ನಿನಗೆ ಗೊತ್ತಿಲ್ಲ ಮತ್ತು ಕುಡಿಯಲು ನೀರನ್ನು ಕೇಳಿದ ನಾನು ಯಾರೆಂಬುದೂ ನಿನಗೆ ಗೊತ್ತಿಲ್ಲ. ನಿನಗೆ ಈ ಸಂಗತಿಗಳು ಗೊತ್ತಿದ್ದರೆ, ನೀನು ನನ್ನನ್ನು ಕೇಳಿಕೊಳ್ಳುತ್ತಿದ್ದೆ, ಮತ್ತು ನಾನು ನಿನಗೆ ಜೀವಜಲವನ್ನು ಕೊಡುತ್ತಿದ್ದೆ” ಎಂದನು.


ಆತನಲ್ಲಿ ಜೀವವಿತ್ತು. ಆ ಜೀವವು ಮನುಷ್ಯರಿಗೆ ಬೆಳಕಾಗಿತ್ತು.


ಎರಡನೆಯ ದೇವದೂತನು ತನ್ನ ಪಾತ್ರೆಯಲ್ಲಿದ್ದುದನ್ನು ಸಮುದ್ರದ ಮೇಲೆ ಸುರಿದನು. ಆಗ ಸಮುದ್ರವು ಸತ್ತ ಮನುಷ್ಯನ ರಕ್ತದಂತಾಯಿತು. ಸಮುದ್ರದಲ್ಲಿದ್ದ ಜೀವಜಂತುಗಳೆಲ್ಲ ಸತ್ತುಹೋದವು.


ಮೊದಲು ಬಂದವನು ಆತ್ಮಿಕ ಮನುಷ್ಯನಲ್ಲ, ಅವನು ಪ್ರಾಕೃತ ಮನುಷ್ಯ. ಅನಂತರ ಆತ್ಮಿಕ ಮನುಷ್ಯನು ಬಂದನು.


ಆದ್ದರಿಂದ ಆತನ ರಕ್ತವು ಖಚಿತವಾಗಿ ಅದಕ್ಕಿಂತಲೂ ಹೆಚ್ಚಿನದನ್ನು ಸಾಧಿಸುತ್ತದೆ. ಆತನು ನಿತ್ಯಾತ್ಮನ ಮೂಲಕ ತನ್ನನ್ನು ತಾನೇ ದೇವರಿಗೆ ನಿಷ್ಕಳಂಕವಾದ ಯಜ್ಞವನ್ನಾಗಿ ಅರ್ಪಿಸಿಕೊಂಡನು. ಆತನ ರಕ್ತವು ನಮ್ಮನ್ನು ನಮ್ಮ ಕೆಟ್ಟಕಾರ್ಯಗಳಿಂದ ಪರಿಪೂರ್ಣವಾಗಿ ಬಿಡಿಸಿ ನಾವು ಜೀವಸ್ವರೂಪನಾದ ದೇವರನ್ನು ಆರಾಧಿಸಲು ಸಾಧ್ಯವಾಗುವಂತೆ ನಮ್ಮ ಹೃದಯವನ್ನೂ ಪರಿಶುದ್ಧಗೊಳಿಸುತ್ತದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು